ನವದೆಹಲಿ: ಪ್ರಸ್ತುತ ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾಗಿರುವ ಕಾರಣ ಇದೀಗ ಗ್ರಾಹಕರು ₹ 250 ಹೆಚ್ಚುವರಿ ಸೇರಿದಂತೆ ₹ 2,253 ಪಾವತಿಸಬೇಕಾಗಿದೆ. ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ರೀತಿಯ ಏರಿಕೆ ಕಂಡು ಬಂದಿಲ್ಲ.
ಕಳೆದ ಮಾರ್ಚ್ ತಿಂಗಳಲ್ಲಿ ದೆಹಲಿಯಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು ₹ 105 ಹೆಚ್ಚಳ ಮಾಡಲಾಗಿತ್ತು. ಇದರ ಬೆನ್ನಲ್ಲೇ ಇದೀಗ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಮತ್ತೊಮ್ಮೆ ಏರಿಕೆಯಾಗಿದೆ.
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಗಣನೀಯವಾಗಿ ಏರಿಕೆ ಕಂಡಿದ್ದು, ಅನಿಲದ ದರ ಕೂಡ ಹೆಚ್ಚಳವಾಗಿದೆ. ಮುಂಬರುವ ದಿನಗಳಲ್ಲಿ ಅಡುಗೆ ಅನಿಲ ದರದಲ್ಲಿ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.