ರಥೋತ್ಸವ ವೇಳೆ ವಿದ್ಯುತ್ ತಗುಲಿ ಮಕ್ಕಳೂ ಸೇರಿ 11 ಮಂದಿ ಸಾವು: ತಂಜಾವೂರಿನಲ್ಲಿ ದುರ್ಘಟನೆ - Vistara News

ದೇಶ

ರಥೋತ್ಸವ ವೇಳೆ ವಿದ್ಯುತ್ ತಗುಲಿ ಮಕ್ಕಳೂ ಸೇರಿ 11 ಮಂದಿ ಸಾವು: ತಂಜಾವೂರಿನಲ್ಲಿ ದುರ್ಘಟನೆ

ಇವರಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟರು ಹಾಗು ಎಂಟು ಮಂದಿ ತಂಜಾವೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಹೆಚ್ಚಿನ ಜನರು ಸಾವನ್ನಪ್ಪುವ ಸಾಧ್ಯತೆಯಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತಂಜಾವೂರು: ಬುಧವಾರ ಮುಂಜಾನೆ ತಮಿಳುನಾಡಿನ ತಂಜಾವೂರು ಜಿಲ್ಲೆಯ ಕಾಳಿಮೇಡು ಪಟ್ಟಣದ ದೇವಸ್ಥಾನದ ಉತ್ಸವದಲ್ಲಿ ಭಕ್ತರು ರಥವನ್ನು ಎಳೆಯುವ ವೇಳೆ ವಿದ್ಯುತ್ ತಂತಿ ತಗುಲಿ ಇಬ್ಬರು ಮಕ್ಕಳು ಸೇರಿ 11 ಮಂದಿ ಸಾವನ್ನಪ್ಪಿದ್ದಾರೆ.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಭಕ್ತರು ದೇವಸ್ಥಾನದ ರಥವನ್ನು ತಿರುಗಿಸುತ್ತಿದ್ದಾಗ ವಿದ್ಯುತ್ ತಂತಿಯು ರಥಕ್ಕೆ ಸಿಲುಕಿತು. ಇದರಿಂದ ಕೂಡಲೆ ಇಬ್ಬರು ಮಕ್ಕಳು ಸೇರಿದಂತೆ ಹತ್ತು ಮಂದಿಗೆ ತಕ್ಷಣ ವಿದ್ಯುತ್ ಸ್ಪರ್ಶವಾಗಿದೆ.

ಹಾನಿಗೀಡಾಗಿರುವ ರಥ

ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ 8 ಜನರನ್ನು ತಂಜಾವೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರ. ಘಟನೆಯಲ್ಲಿ ಗಾಯಗೊಂಡಿರುವ ಇತರ ಹಲವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಅನೇಕರ ಪರಿಸ್ಥಿತಿ ಗಂಭಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಡಿಐಜಿ, ಇದು ವಾರ್ಷಿಕ ಉತ್ಸವವಾಗಿದ್ದು, ಅವರು ರಥವನ್ನು ಎಳೆಯುವಾಗ ಅಪಘಾತ ಸಂಭವಿಸಿದೆ. ರಥವು ಹೈ ಟೆನ್ಷನ್ ವೈರ್‌ಗೆ ತಾಗಿದೆಯೇ ಅಥವಾ ‘ಪ್ರಭಾವದ ಆರ್ಕ್’ ಕಾರಣದಿಂದ ಘಟನೆ ಸಂಭವಿಸಿದೆಯೇ ಎಂಬುದನ್ನು ನಾವು ತನಿಖೆ ನಡೆಸುತ್ತಿದ್ದೇವೆ. ಎಫ್‌ಐಆರ್‌ ದಾಖಲಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಮೃತರ ಕುಟುಂಬಕ್ಕೆ ಪರಿಹಾರ

ಘಟನೆಯಲ್ಲಿ ಮೃತಪಟ್ಟವರ ಸ್ಮರಣಾರ್ಥ ತಮಿಳುನಾಡು ವಿಧಾನಸಭೆಯಲ್ಲಿ ಎರಡು ನಿಮಿಷ ಮೌನ ಆಚರಣೆ ಮಾಡಲಾಯಿತು. ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರವನ್ನು ರಾಜ್ಯ ಸರ್ಕಾರದಿಂದ ನೀಡುವುದಾಗಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಘೋಷಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರೂ ಈ ಕುರಿತು ಸಂತಾಪ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಗಳೊಂದಿಗಿನ ವಿಡಿಯೋ ಕಾನಫರೆನ್ಸ್‌ ಸಭೆಯ ಪ್ರಾರಂಬದಲ್ಲಿ ಈ ಕುರಿತು ಸಂತಾಪ ಸೂಚಿಸಿದರು. ಈ ಬಗ್ಗಡ ಟ್ವೀಟ್‌ ಮಾಡಿರುವ ಮೋದಿ, ದುರ್ಘಟನೆಯಿಂದ ಪ್ರಾಣ ಕಳೆದುಕೊಂಡವರ ಮುಂದಿನ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ತಲಾ ₹2 ಲಕ್ಷ ನೀಡಲಾಗುವುದು ಹಾಗೂ ಗಾಯಾಳುಗಳಿಗೆ ತಲಾ ₹50,000 ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | ಬೆಂಗಳೂರಿನಲ್ಲಿ ಭಾರೀ ಮಳೆಯಿಂದ ಅವಾಂತರ: ವಿದ್ಯುತ್ ವೈರ್ ತಗುಲಿ ಯುವಕ ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Bomb Threat: ಸಾಲು ಸಾಲು ಬಾಂಬ್‌ ಥ್ರೆಟ್‌ ಪ್ರಕರಣ; ತಾಜ್‌ ಹೊಟೇಲ್‌ ಬೆನ್ನಲ್ಲೇ ಇಂಡಿಗೋ ವಿಮಾನಕ್ಕೂ ಬೆದರಿಕೆ

Bomb Threat: ದಿಲ್ಲಿಯಿಂದ ವಾರಣಾಸಿಗೆ ಪ್ರಯಾಣಿಸಬೇಕಾಗಿದ್ದ ಇಂಡಿಗೋ ಏರ್‌ಲೈನ್ಸ್‌ನ 6E2211 ವಿಮಾನಕ್ಕೆ ಮಂಗಳವಾರ ಬೆಳಗ್ಗೆಬಾಂಬ್‌ ಬೆದರಿಕೆ ಕರೆ ಬಂದಿತ್ತು. ಇನ್ನೇನು ಟೇಕ್‌ ಆಫ್‌ ಆಗಬೇಕಾಗಿದ್ದ ವಿಮಾನವನ್ನು ಪ್ರತ್ಯೇಕ ರನ್‌ ವೇ ಒಯ್ದು ಭದ್ರತಾ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಎಲ್ಲ ಪ್ರಯಾಣಿಕರನ್ನು ಎಮರ್ಜೆನ್ಸಿ ಎಕ್ಸಿಟ್‌ ಬಾಗಿಲಿನಿಂದ ಸುರಕ್ಷಿತವಾಗಿ ಹೊರಗೆ ಕರೆದೊಯ್ಯಲಾಗಿದೆ. ಇನ್ನು ಬೆಳಗ್ಗೆ 5:35ಕ್ಕೆ ಹೊರಡಬೇಕಾಗಿದ್ದ ವಿಮಾನ ಇದಾಗಿತ್ತು ಎನ್ನಲಾಗಿದೆ.

VISTARANEWS.COM


on

Bomb Threat
Koo

ನವದೆಹಲಿ:ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿರುವ ಶಾಲೆಗಳು, ವಿಮಾನ ನಿಲ್ದಾಣಗಳನ್ನು ಬಾಂಬಿಟ್ಟು ಸ್ಫೋಟಿಸುವ ಕುರಿತು ಕೆಲ ತಿಂಗಳಿಂದ ಬೆದರಿಕೆ ಕರೆಗಳು (Bomb Threat) ಬರುತ್ತಲೇ ಇವೆ. ನಿನ್ನೆಯಷ್ಟೇ ಮುಂಬೈನಲ್ಲಿರುವ ತಾಜ್‌ ಹೋಟೆಲ್‌ (Taj Hotel) ಹಾಗೂ ಛತ್ರಪತಿ ಶಿವಾಜಿ ಮಹಾರಾಜ ಇಂಟರ್‌ನ್ಯಾಷನಲ್‌ ವಿಮಾನ ನಿಲ್ದಾಣವನ್ನು (Chhatrapati Shivaji Maharaj International Airport) ಸ್ಫೋಟಿಸುವ ಕುರಿತು ಮುಂಬೈ ಪೊಲೀಸರಿಗೆ ಬೆದರಿಕೆ ಕರೆ ಬಂದಿತ್ತು. ಇದೀಗ ಇಂದು ಬೆಳ್ಳಂ ಬೆಳಗ್ಗೆ ಇಂಡಿಯೋ ವಿಮಾನ(Indigo Flight)ಕ್ಕೆ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದೆ.

ಘಟನೆ ವಿವರ:

ದಿಲ್ಲಿಯಿಂದ ವಾರಣಾಸಿಗೆ ಪ್ರಯಾಣಿಸಬೇಕಾಗಿದ್ದ ಇಂಡಿಗೋ ಏರ್‌ಲೈನ್ಸ್‌ನ 6E2211 ವಿಮಾನಕ್ಕೆ ಮಂಗಳವಾರ ಬೆಳಗ್ಗೆಬಾಂಬ್‌ ಬೆದರಿಕೆ ಕರೆ ಬಂದಿತ್ತು. ಇನ್ನೇನು ಟೇಕ್‌ ಆಫ್‌ ಆಗಬೇಕಾಗಿದ್ದ ವಿಮಾನವನ್ನು ಪ್ರತ್ಯೇಕ ರನ್‌ ವೇ ಒಯ್ದು ಭದ್ರತಾ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಎಲ್ಲ ಪ್ರಯಾಣಿಕರನ್ನು ಎಮರ್ಜೆನ್ಸಿ ಎಕ್ಸಿಟ್‌ ಬಾಗಿಲಿನಿಂದ ಸುರಕ್ಷಿತವಾಗಿ ಹೊರಗೆ ಕರೆದೊಯ್ಯಲಾಗಿದೆ. ಇನ್ನು ಬೆಳಗ್ಗೆ 5:35ಕ್ಕೆ ಹೊರಡಬೇಕಾಗಿದ್ದ ವಿಮಾನ ಇದಾಗಿತ್ತು ಎನ್ನಲಾಗಿದೆ.

ಸದ್ಯ ಏರ್ಪೋರ್ಟ್‌ ಭದ್ರತಾ ಸಿಬ್ಬಂದಿ ದೆಹಲಿ ಪೊಲೀಸರು ಮತ್ತು ಬಾಂಬ್‌ ನಿಷ್ಕ್ರಿಯ ದಳ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸುತ್ತಿದೆ. ಇನ್ನು ವಿಮಾನದಲ್ಲಿ ಎಷ್ಟು ಪ್ರಯಾಣಿಕರಿದ್ದರು ಎಂಬುದರ ಬಗ್ಗೆ ಮಾಹಿತಿ ಸಿಕ್ಕಿಲ್ಲ.

ಇನ್ನು ನಿನ್ನೆಯಷ್ಟೇ ಮುಂಬೈನ ಮುಂಬೈನಲ್ಲಿರುವ ತಾಜ್‌ ಹೋಟೆಲ್‌ ಹಾಗೂ ಛತ್ರಪತಿ ಶಿವಾಜಿ ಮಹಾರಾಜ ಇಂಟರ್‌ನ್ಯಾಷನಲ್‌ ವಿಮಾನ ನಿಲ್ದಾಣವನ್ನು ಸ್ಫೋಟಿಸುವ ಕುರಿತು ಮುಂಬೈ ಪೊಲೀಸರಿಗೆ ಬೆದರಿಕೆ ಕರೆ ಬಂದಿತ್ತು. ಹಾಗಾಗಿ, ಮುಂಬೈ ತಾಜ್‌ ಹೋಟೆಲ್‌ ಹಾಗೂ ವಿಮಾನ ನಿಲ್ದಾಣದ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ತಿಳಿದುಬಂದಿದೆ.

“ಮುಂಬೈ ಪೊಲೀಸ್‌ ಕಂಟ್ರೋಲ್‌ ರೂಮ್‌ಗೆ ಅನಾಮಧೇಯ ವ್ಯಕ್ತಿಯಿಂದ ಕರೆ ಬಂದಿದೆ. ತಾಜ್‌ ಹೋಟೆಲ್‌ ಹಾಗೂ ವಿಮಾನ ನಿಲ್ದಾಣದಲ್ಲಿ ಬಾಂಬ್‌ ಇರಿಸಲಾಗಿದೆ. ಯಾವುದೇ ಕ್ಷಣದಲ್ಲಿ ಬೇಕಾದರೂ ಬ್ಲಾಸ್ಟ್‌ ಆಗಬಹುದು” ಎಂದಷ್ಟೇ ಹೇಳಿ ಕರೆ ಕಟ್ ಮಾಡಿದ್ದಾನೆ. ಇದಾದ ಬಳಿಕ ಪೊಲೀಸರು ಅಲರ್ಟ್‌ ಆಗಿದ್ದಾರೆ” ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ತಾಜ್‌ ಹೋಟೆಲ್‌ ಮೇಲೆ 26/11ರ ಮಾದರಿಯಲ್ಲಿ ದಾಳಿ ನಡೆಯುವ ಭೀತಿಯಿಂದ ಪೊಲೀಸರು ಕಟ್ಟೆಚ್ಚರ ವಹಿಸಿದ್ದರು ಎನ್ನಲಾಗಿದೆ.

ಇದನ್ನೂ ಓದಿ:Physical Abuse: ಮಧ್ಯಪ್ರದೇಶದಲ್ಲೂ ಬುಲ್ಡೋಜರ್‌ ಅಸ್ತ್ರ; ವಿದ್ಯಾರ್ಥಿನಿ ಅತ್ಯಾಚಾರ ಆರೋಪಿಯ ಮನೆ ನೆಲಸಮ

ಬಾಂಬ್‌ ಬೆದರಿಕೆ ಕರೆ ಬರುತ್ತಲೇ ಪೊಲೀಸರು ಹಾಗೂ ಬಾಂಬ್‌ ನಿಷ್ಕ್ರಿಯ ದಳದ ಸಿಬ್ಬಂದಿಯು ಹೋಟೆಲ್‌ ಹಾಗೂ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದ್ದಾರೆ. ಆದರೆ, ಎರಡೂ ಕಡೆ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ. ಉತ್ತರ ಪ್ರದೇಶದಿಂದ ಕರೆ ಬಂದಿದೆ ಎಂಬುದು ತಿಳಿದುಬಂದಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ, ದೇಶದ 13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸಲಾಗುವುದು ಎಂದು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ಸಿಬ್ಬಂದಿಗೆ ಬೆದರಿಕೆಯ ಮೇಲ್‌ ಬಂದಿತ್ತು. ಬೆಂಗಳೂರು, ದೆಹಲಿ, ಅಹಮದಾಬಾದ್‌, ಚೆನ್ನೈ ಸೇರಿ ಹಲವು ನಗರಗಳ ಶಾಲೆಗಳನ್ನೂ ಸ್ಫೋಟಿಸುವ ಬೆದರಿಕೆ ಕರೆಗಳು ಬಂದಿದ್ದವು. ಬಳಿಕ ನಕಲಿ ಬಾಂಬ್‌ ಬೆದರಿಕೆ ಎಂಬುದಾಗಿ ತಿಳಿದುಬಂದಿತ್ತು.

Continue Reading

ವೈರಲ್ ನ್ಯೂಸ್

Viral Video: ನಡು ರಸ್ತೆಯಲ್ಲಿ ಪಿಸ್ತೂಲ್‌ ತೋರಿಸಿ ವ್ಯಕ್ತಿ ಮೇಲೆ ಹಲ್ಲೆ; ಅಂತಾರಾಷ್ಟ್ರೀಯ ಮಟ್ಟದ ಶೂಟರ್‌ನಿಂದ ದಾಂಧಲೆ

Viral Video:ಲಕ್ನೋದಲ್ಲಿರುವ ವೆಬ್‌ ಮಾಲ್‌ನಲ್ಲಿ ಈ ಘಟನೆ ನಡೆದಿದ್ದು, ಅಂತಾರಾಷ್ಟ್ರೀಯ ಮಟ್ಟದ ಪಿಸ್ತೂಲ್‌ ಶೂಟರ್‌ ವಿನೋದ್‌ ಮಿಶ್ರಾ ರಂಜೀತ್‌ ಎಂಬ ಕಾರು ಚಾಲಕನ ಶರ್ಟ್‌ನ ಕಾಲರ್‌ ಹಿಡಿದು ಎಳೆದಾಡಿದ್ದಾನೆ. ಅಷ್ಟೇ ಅಲ್ಲದೇ ಪಿಸ್ತೂಲ್‌ನಲ್ಲಿ ಆತನ ಹೊಟ್ಟೆ, ತಲೆಗೆ ಹಲ್ಲೆ ಮಾಡಿದ್ದಾನೆ. ರಂಜೀತ್‌ನನ್ನು ಕಾರಿನತ್ತ ತಳ್ಳಿದ ಮಿಶ್ರಾ ಪಿಸ್ತೂಲ್‌ ಹಿಂಬಾಗದಿಂದ ಆತನ ಭುಜ, ತಲೆ, ಹೊಟ್ಟೆಗೆ ಹೊಡೆಯುತ್ತಿರುವ ದೃಶ್ಯವನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

VISTARANEWS.COM


on

Viral Video
Koo

ಲಕ್ನೋ: ಉತ್ತರಪ್ರದೇಶ(Uttar Pradesh)ದಲ್ಲಿ ಯೋಗಿ ಆದಿತ್ಯಾನಾಥ್‌(Yogi Adityanath) ನೇತೃತ್ವದ ಸರ್ಕಾರ ಬಂದ ಮೇಲೆ ಪುಡಿರೌಡಿಗಳ ಅಟ್ಟಹಾಸಕ್ಕೆ ಬ್ರೇಕ್‌ ಬಿದ್ದಿರೋದಂತೂ ನಿಜ. ಬುಲ್ಡೋಜರ್‌ ಬಾಬಾನ ಭಯದಿಂದ ಮನೆಯಿಂದ ಹೊರ ಬರೋದಿಕ್ಕೂ ಹೆದರುತ್ತಾರೆ ಅನ್ನೋ ಮಾತಿದೆ. ಅಷ್ಟಾಗಿಯೂ ಅಲ್ಲೊಂದು ಇಲ್ಲೊಂದು ಅನ್ನೋ ಹಾಗೆ ರೌಡಿಗಳು ಬಾಲ ಬಿಚ್ಚುತ್ತಲೇ ಇರುತ್ತಾರೆ. ಅಂತಹದ್ದೇ ಒಂದು ಘಟನೆ ಇದೀಗ ವರದಿ ಆಗಿದೆ. ಅಂತಾರಾಷ್ಟ್ರೀಯ ಮಟ್ಟದ ಪಿಸ್ತೂಲ್‌ ಶೂಟರ್‌ ಒಬ್ಬ ಹಾಡಹಗಲೇ ನಡು ರಸ್ತೆಯಲ್ಲಿ ಪಿಸ್ತೂಲ್‌ ಹಿಡಿದು ಮತ್ತೋರ್ವನ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ ವೈರಲ್‌(Viral Video) ಆಗಿದೆ.

ಲಕ್ನೋದಲ್ಲಿರುವ ವೆಬ್‌ ಮಾಲ್‌ನಲ್ಲಿ ಈ ಘಟನೆ ನಡೆದಿದ್ದು, ಅಂತಾರಾಷ್ಟ್ರೀಯ ಮಟ್ಟದ ಪಿಸ್ತೂಲ್‌ ಶೂಟರ್‌ ವಿನೋದ್‌ ಮಿಶ್ರಾ ರಂಜೀತ್‌ ಎಂಬ ಕಾರು ಚಾಲಕನ ಶರ್ಟ್‌ನ ಕಾಲರ್‌ ಹಿಡಿದು ಎಳೆದಾಡಿದ್ದಾನೆ. ಅಷ್ಟೇ ಅಲ್ಲದೇ ಪಿಸ್ತೂಲ್‌ನಲ್ಲಿ ಆತನ ಹೊಟ್ಟೆ, ತಲೆಗೆ ಹಲ್ಲೆ ಮಾಡಿದ್ದಾನೆ. ರಂಜೀತ್‌ನನ್ನು ಕಾರಿನತ್ತ ತಳ್ಳಿದ ಮಿಶ್ರಾ ಪಿಸ್ತೂಲ್‌ ಹಿಂಬಾಗದಿಂದ ಆತನ ಭುಜ, ತಲೆ, ಹೊಟ್ಟೆಗೆ ಹೊಡೆಯುತ್ತಿರುವ ದೃಶ್ಯವನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಪೊಲೀಸರು ಹೇಳೋದೇನು?

ಘಟನೆ ಬಗ್ಗೆ ಪೊಲೀಸ್‌ ವರಿಷ್ಠಾಧಿಕಾರಿ ಅಮಿತ್‌ ಕುಮಾವತ್‌ ಪ್ರತಿಕ್ರಿಯಿಸಿದ್ದು,ರಂಜೀತ್‌ ತನ್ನ ವ್ಯಾಗನರ್‌ ಕಾರಿನಲ್ಲಿ ಭೂತ್‌ನಾಥ್‌ಗೆ ತೆರಳುತ್ತಿದ್ದರು. ಮಿಶ್ರಾ ಅಲ್ಲಿಂದ ತಮ್ಮ ಟಾಟಾ ಸಫಾರಿ ಕಾರಿನಲ್ಲಿ ವಾಪಾಸಾಗುತ್ತಿದ್ದರು. ಈ ವೇಳೆ ಎರಡೂ ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಇದರಿಂದಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ವೇಳೆ ಮಿಶ್ರಾ ತನ್ನ ಪಿಸ್ತೂಲನ್ನು ತೆಗೆದು ಮೂರು ಬಾರಿ ಹಲ್ಲೆ ನಡೆಸಿದ್ದಾನೆ. ಆಗ ರಂಜೀತ್‌ ಎಷ್ಟೇ ಕ್ಷಮೆ ಕೇಳಿದರೂ ಮಿಶ್ರಾ ಮಾತ್ರ ನಿರಂತರವಾಗಿ ಹಲ್ಲೆ ನಡೆಸಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ.

ಹಿಂಬದಿ ಇದ್ದ ಕಾರಿನಲ್ಲಿದ್ದ ಕ್ಯಾಮೆರಾದಲ್ಲಿ ಘಟನೆ ವಿಡಿಯೋ ರೆಕಾರ್ಡ್‌ ಆಗಿದೆ. ರಂಜಿತ್‌ ಎಫ್‌ಐಆರ್‌ ದಾಖಲಿಸಿದ್ದು, ಮಿಶ್ರಾನನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಆತನಿಂದ ಲೈಸೆನ್ಸ್‌ ಪಿಸ್ತೂಲ್‌ ಅನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸರು ತನಿಖೆ ಶುರು ಮಾಡಿದ್ದಾರೆ. ಇನ್ನು ಮಿಶ್ರಾ ಅಂತಾರಾಷ್ಟ್ರೀಯ ಮಟ್ಟದ ಶೂಟರ್‌ ಆಗಿದ್ದು, ಶೂಟಿಂಗ್‌ ತರಬೇತುದಾರನಾಗಿ ಕಾರ್ಯನಿರ್ಹಿಸುತ್ತಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ:SBI Warning: ನಕಲಿ ಸಂದೇಶಗಳ ಬಗ್ಗೆ ಎಚ್ಚರ‌ ಇರಲಿ; ಗ್ರಾಹಕರಿಗೆ ಎಸ್ ಬಿ ಐ ಸೂಚನೆ

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಕುಡುಕ ಬಾಲಕನಿಂದ ಅಪಘಾತ ಪ್ರಕರಣ; ಪುಣೆ ಪೊಲೀಸರ ದಿಟ್ಟ ಕ್ರಮ ಶ್ಲಾಘನೀಯ

ವಿಸ್ತಾರ ಸಂಪಾದಕೀಯ: ಪೊಲೀಸ್ ವ್ಯವಸ್ಥೆಯನ್ನು ಪ್ರಾಮಾಣಿಕವಾಗಿ ಕೆಲಸ ಮಾಡಲು ಪ್ರಚೋದಿಸಿದಾಗ, ಪ್ರಭಾವ ಬಳಸಿ ಅಥವಾ ಅಧಿಕಾರ ಬಳಸಿ ದಾರಿ ತಪ್ಪಿಸಲು ಪ್ರಯತ್ನಿಸದೆ ಇದ್ದರೆ, ಸರಿಯಾಗಿಯೇ ಕೆಲಸ ಮಾಡುತ್ತಾರೆ. ಅದಕ್ಜೆ ಪುಣೆ ಪ್ರಕರಣವೇ ಉದಾಹರಣೆ.

VISTARANEWS.COM


on

Porsche car accident ವಿಸ್ತಾರ ಸಂಪಾದಕೀಯ
Koo

ಪುಣೆಯಲ್ಲಿ ಕಂಠಮಟ್ಟ ಮದ್ಯಪಾನ (Drink and drive) ಮಾಡಿ, ಅಪ್ಪ ಕೊಡಿಸಿದ ಐಷಾರಾಮಿ ಪೋರ್ಷೆ ಕಾರನ್ನು (Pune Porsche car accident) ಯದ್ವಾತದ್ವಾ ಓಡಿಸಿ ಇಬ್ಬರ ಜೀವ ತೆಗೆದ ಅಪ್ರಾಪ್ತ ವಯಸ್ಕನ (Juvenile) ಪ್ರಕರಣದಲ್ಲಿ ಹಲವು ಬೆಳವಣಿಗೆಗಳು ಆಗಿವೆ. 17 ವರ್ಷದ ವೇದಾಂತ್‌ ಅಗರ್‌ವಾಲ್‌ ಐಷಾರಾಮಿ ಪೋರ್ಷೆ ಕಾರನ್ನು ಗಂಟೆಗೆ 200 ಕಿ.ಮೀ. ವೇಗದಲ್ಲಿ ಓಡಿಸಿ ಬೈಕ್‌ಗೆ ಡಿಕ್ಕಿ ಹೊಡೆಸಿದ್ದ. ಪರಿಣಾಮ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಮಧ್ಯಪ್ರದೇಶದ ಎಂಜಿನಿಯರ್‌ಗಳಾದ (Engineers) 24 ವರ್ಷದ ಅನೀಶ್ ಅವಧಿ ಮತ್ತು ಅಶ್ವಿನಿ ಕೊಶ್ತಾ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಘಟನೆಯ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಅಪಘಾತ ಆಗುತ್ತಿದ್ದಂತೆ ಸ್ಥಳೀಯರೆಲ್ಲ ಒಟ್ಟುಗೂಡಿ ಸೆರೆ ಹಿಡಿದು ಥಳಿಸಿ ಅವನನ್ನು ಪೊಲೀಸರಿಗೆ ಒಪ್ಪಿಸಿದ್ದರು. ದುರಂತ ಎಂದರೆ ವೇದಾಂತ್‌ ಅಗರ್‌ವಾಲ್‌ನ ಬಂಧನವಾದ ಕೇವಲ 15 ಗಂಟೆಗಳಲ್ಲೇ ಬಾಲಾಪರಾಧಿ ನ್ಯಾಯ ಮಂಡಳಿ ಆತನಿಗೆ ಜಾಮೀನು ಮಂಜೂರು ಮಾಡಿತ್ತು. ಜಾಮೀನು ನಿರಾಕರಿಸುವಷ್ಟು ಅಪರಾಧವು ಗಂಭೀರವಾಗಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ, ಅಪಘಾತಗಳ ಬಗ್ಗೆ 300 ಪದಗಳ ಪ್ರಬಂಧ ಬರೆಯಲು ಹೇಳಿತ್ತು. ಈ ಹಾಸ್ಯಾಸ್ಪದ ತೀರ್ಪಿಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು.

ಈ ಪ್ರಕರಣದಲ್ಲಿ ನ್ಯಾಯಾಂಗದ ಬಗ್ಗೆ ಬಂದ ಕಟು ಟೀಕೆಯ ನಂತರ ಪೊಲೀಸರು ಹಾಗೂ ನ್ಯಾಯಾಂಗವೂ ಎಚ್ಚೆತ್ತುಕೊಂಡಂತಿದೆ. ಪೊಲೀಸರು ಚುರುಕಾಗಿ ಕಾರ್ಯಪ್ರವೃತ್ತರಾಗಿದ್ದಾರೆ. ನ್ಯಾಯಾಂಗವೂ ಈ ಜಾಮೀನನ್ನು ರದ್ದುಪಡಿಸಿದ್ದು, ಆರೋಪಿ ಬಾಲಕನನ್ನು ರಿಮ್ಯಾಂಡ್‌ ಹೋಂಗೆ ಕಳುಹಿಸಿದೆ. ಈತನನ್ನು ವಯಸ್ಕನಂತೆ ಪರಿಗಣಿಸಿ ವಿಚಾರಣೆ ಮಾಡಲಾಗುತ್ತದೆ ಎಂದಿದ್ದಾರೆ ಪೊಲೀಸರು. ಈ ಪ್ರಕರಣದಲ್ಲಿ ಲೈಸೆನ್ಸ್‌ ರಹಿತ ಅಪ್ರಾಪ್ತನಿಗೆ ಕಾರನ್ನು ಓಡಿಸಲು ಕೊಟ್ಟ ಅಪ್ಪನೂ ಅಪರಾಧಿ, ಆತ ತಪ್ಪಿಸಿಕೊಳ್ಳಲು ಅವಕಾಶ ಮಾಡಿಕೊಟ್ಟ ಅಜ್ಜನೂ ಅಪರಾಧಿಯಾಗಿದ್ದು, ಇಬ್ಬರನ್ನೂ ಬಂಧಿಸಲಾಗಿದೆ. ಅಪಘಾತವಾದಾಗ ಕಾರನ್ನು ತಾನು ಓಡಿಸುತ್ತಿದ್ದೆ ಎಂದು ಹೇಳಿಕೊಳ್ಳುವಂತೆ ಕಾರು ಚಾಲಕನನ್ನು ಬಲವಂತ ಮಾಡಿದ್ದು ಕೂಡ ಬೆಳಕಿಗೆ ಬಂದಿದ್ದು, ಅದೂ ಕೂಡ ಒಂದು ಅಪರಾಧ. ಅಪಘಾತಕ್ಕೂ ಮುನ್ನ ಅಪ್ರಾಪ್ತ ವಯಸ್ಕ ಮದ್ಯ ಸೇವಿಸಿದ ಎರಡು ಬಾರ್‌ಗಳ ಮಾಲೀಕರು ಮತ್ತು ನೌಕರರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಸರ್ಕಾರಿ ಆಸ್ಪತ್ರೆಯ ವೈದ್ಯರಿಬ್ಬರು ಬಾಲಾಪರಾಧಿಯ ರಕ್ತದ ಮಾದರಿಯನ್ನು ಬದಲಾಯಿಸಿ ಆರೋಪಿಯನ್ನು ಬಚಾವ್‌ ಮಾಡಲು ಯತ್ನಿಸಿರುವುದು ಬೆಳಕಿಗೆ ಬಂದಿದ್ದು, ಇಬ್ಬರನ್ನೂ ಅರೆಸ್ಟ್‌ ಮಾಡಲಾಗಿದೆ. ದುಡ್ಡಿಗಾಗಿ ರಕ್ತದ ಮಾದರಿಯನ್ನು ಡಸ್ಟ್‌ ಬಿನ್‌ಗೆ ಎಸೆದ ಲ್ಯಾಬ್‌ ಗುಮಾಸ್ತನನ್ನೂ ವಶಕ್ಕೆ ಪಡೆಯಲಾಗಿದೆ.

ಈ ಪ್ರಕರಣದಲ್ಲಿ ಪೊಲೀಸರು ಕೆಲ ಆರಂಭಿಕ ಜಡತೆಗಳ ನಂತರ, ಸಾಕಷ್ಟು ಚುರುಕಾಗಿ ಹಾಗೂ ಸಮಗ್ರವಾಗಿಯೇ ಕಾರ್ಯ ನಿರ್ವಹಿಸಿದ್ದಾರೆ ಎನ್ನಬೇಕು. ಹೀಗೆ ಒಂದು ಅಪರಾಧದ ಎಲ್ಲ ಮಗ್ಗುಲುಗಳಲ್ಲಿಯೂ ತನಿಖೆ ನಡೆಸಿ, ಸಾಕ್ಷ್ಯಗಳನ್ನು ಸಂಗ್ರಹಿಸಿ, ವಿವರವಾದ ಹಾಗೂ ಗಟ್ಟಿಯಾದ ಚಾರ್ಜ್‌ಶೀಟ್‌ ಸಲ್ಲಿಸಿದಾಗ ಮಾತ್ರ ನಿಜವಾದ ಅಪರಾಧಿಗಳಿಗೆ ಶಿಕ್ಷೆಯಾಗಲು ಸಾಧ್ಯ. ನ್ಯಾಯಾಂಗವೂ ಅಷ್ಟೆ, ಆರಂಭದಲ್ಲಿ ಪ್ರಕರಣದ ಗಂಭೀರತೆಯನ್ನು ಅರ್ಥ ಮಾಡಿಕೊಂಡಿರಲಿಲ್ಲ; ದೇಶಾದ್ಯಂತ ಅಸಮಾಧಾನ ವ್ಯಕ್ತವಾದಾಗ ಅದಕ್ಕೂ ಈ ಪ್ರಕರಣದ ಗಂಭೀರತೆ ಅರ್ಥವಾದಂತಿದೆ. ಶ್ರೀಮಂತರ ಮಕ್ಕಳು ಉದ್ದೇಶರಹಿತ ಹಾಗೂ ನಿರಂಕುಶವಾಗಿ ಬೆಳೆದಾಗ ಇಂಥ ಸನ್ನಿವೇಶ ಸೃಷ್ಟಿಯಾಗುತ್ತದೆ. ಸರಿಯಾದ ಶಿಕ್ಷಣ ಹಾಗೂ ಸಂಸ್ಕಾರ ಕೊಡಿಸದ ಪೋಷಕರೂ ಈ ಘೋರ ಅಪರಾಧದ ಹೊಣೆಯನ್ನು ಹೊರಬೇಕಾಗುತ್ತದೆ. ಇಂಥ ಅಪ್ರಾಪ್ತರನ್ನು ವಯಸ್ಕರೆಂದೇ ಪರಿಗಣಿಸಿ ಶಿಕ್ಷಿಸಬೇಕಾದ ಅಗತ್ಯವಿದೆ. ದಿಲ್ಲಿ ನಿರ್ಭಯಾ ರೇಪ್ ಮತ್ತು ಕಗ್ಗೊಲೆ ಪ್ರಕರಣದಲ್ಲಿ ಅಪ್ರಾಪ್ತ ವಯಸ್ಕ ಆರೋಪಿಯೇ ಅತಿ ಬರ್ಬರವಾಗಿ ನಡೆದುಕೊಂಡಿದ್ದ ಎಂಬುದನ್ನು ನೆನಪಿಸಿಕೊಳ್ಳಬೇಕು.

ಪೊಲೀಸ್ ವ್ಯವಸ್ಥೆಯನ್ನು ಪ್ರಾಮಾಣಿಕವಾಗಿ ಕೆಲಸ ಮಾಡಲು ಪ್ರಚೋದಿಸಿದಾಗ, ಪ್ರಭಾವ ಬಳಸಿ ಅಥವಾ ಅಧಿಕಾರ ಬಳಸಿ ದಾರಿ ತಪ್ಪಿಸಲು ಪ್ರಯತ್ನಿಸದೆ ಇದ್ದರೆ, ಸರಿಯಾಗಿಯೇ ಕೆಲಸ ಮಾಡುತ್ತಾರೆ. ಅದಕ್ಜೆ ಪುಣೆ ಪ್ರಕರಣವೇ ಉದಾಹರಣೆ. ಇನ್ನು ವಿಚಾರಣೆಯ ಹಂತದಲ್ಲಿ ಆರೋಪಿಯ ಅಪರಾಧವನ್ನು ರುಜುವಾತುಪಡಿಸುವ ಸಾಕ್ಷ್ಯಾಧಾರಗಳನ್ನು ನ್ಯಾಯಾಲಯದ ಮುಂದೆ ಸಮರ್ಪಕವಾಗಿ ಮಂಡಿಸಿ, ಪಾತಕಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕಿದೆ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಗುಜರಾತ್ ಬೆಂಕಿ ದುರಂತ ನಮಗೆ ಎಚ್ಚರಿಕೆಯ ಪಾಠವಾಗಲಿ

Continue Reading

ಕ್ರೀಡೆ

Yuvraj Singh : ಅಪಾರ್ಟ್​ಮೆಂಟ್ ವಿತರಣೆಯಲ್ಲಿ ಮೋಸ, ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ನೋಟಿಸ್​ ಕೊಟ್ಟ ಯುವರಾಜ್ ಸಿಂಗ್

Yuvraj Singh : ಈ ಸಂಸ್ಥೆಗಳು ಭರವಸೆ ನೀಡಿದಂತೆ ಸ್ವಾಧೀನದ ದೃಷ್ಟಿಯಿಂದ ಯೋಜನೆಗಳ ವಿತರಣೆಯನ್ನು ಸಹ ಸರಿಯಾದ ಸಮಯದಲ್ಲಿ ಪೂರೈಸಲಾಗಿಲ್ಲ ಎಂದು ಸಿಂಗ್ ಹೇಳಿದ್ದಾರೆ. ವಿಶೇಷವೆಂದರೆ, ಮಾಜಿ ಕ್ರಿಕೆಟ್ ತಾರೆ 2020 ರಲ್ಲಿ ದೆಹಲಿಯ ಹೌಜ್ ಖಾಸ್ ಪ್ರದೇಶದಲ್ಲಿ ವಸತಿ ಘಟಕವನ್ನು ಕಾಯ್ದಿರಿಸಿದ್ದರು.

VISTARANEWS.COM


on

Yuvraj Singh
Koo

ನವದೆಹಲಿ: ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್ ಯುವರಾಜ್ ಸಿಂಗ್ (Yuvraj Singh)​ ಅವರು ದೆಹಲಿ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ಎರಡು ಕಾನೂನು ನೋಟಿಸ್ ನೀಡಿದ್ದಾರೆ. ಈ ಸಂಸ್ಥೆಗಳು ನಡೆಸುವ ಯೋಜನೆಗಳಿಗೆ ಮೋಸದ ಪ್ರಚಾರ ಚಟುವಟಿಕೆಗಳ ಮೂಲಕ ಗೌಪ್ಯತೆ ಹಕ್ಕುಗಳ ಉಲ್ಲಂಘನೆ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಸಂಸ್ಥೆಗಳು ಭರವಸೆ ನೀಡಿದಂತೆ ಸ್ವಾಧೀನದ ದೃಷ್ಟಿಯಿಂದ ಯೋಜನೆಗಳ ವಿತರಣೆಯನ್ನು ಸಹ ಸರಿಯಾದ ಸಮಯದಲ್ಲಿ ಪೂರೈಸಲಾಗಿಲ್ಲ ಎಂದು ಸಿಂಗ್ ಹೇಳಿದ್ದಾರೆ. ವಿಶೇಷವೆಂದರೆ, ಮಾಜಿ ಕ್ರಿಕೆಟ್ ತಾರೆ 2020 ರಲ್ಲಿ ದೆಹಲಿಯ ಹೌಜ್ ಖಾಸ್ ಪ್ರದೇಶದಲ್ಲಿ ವಸತಿ ಘಟಕವನ್ನು ಕಾಯ್ದಿರಿಸಿದ್ದರು. ಯುವರಾಜ್ ಸಿಂಗ್ ಅವರನ್ನು ಪ್ರತಿನಿಧಿಸುವ ರಿಜ್ವಾನ್ ಲಾ ಅಸೋಸಿಯೇಟ್ಸ್ ಎಂಬ ಕಾನೂನು ಸಂಸ್ಥೆಯು ಯೋಜನೆಯ ವಿಳಂಬದಿಂದಾಗಿ ಉಂಟಾದ ಹಾನಿಯ ಕ್ಲೇಮ್​ನೊಂದಿಗೆ ನೋಟಿಸ್ ನೀಡಿದೆ.

ಇದನ್ನೂ ಓದಿ: Kavya Maran : ಸೋತಾಗ ಕಣ್ಣೀರು ಹಾಕಿದ ಕಾವ್ಯಾ ಮಾರನ್​, ​ ಡ್ರೆಸಿಂಗ್​ ರೂಮ್​ಗೆ ತೆರಳಿ ಆಟಗಾರರನ್ನೇ ನಗಿಸಿದರು; ಇಲ್ಲಿದೆ ವಿಡಿಯೊ

ಸಿಂಗ್ ಅವರಿಗೆ ಪ್ರೀಮಿಯಂ ಗುಣಮಟ್ಟದ ಅಪಾರ್ಟ್​ಮೆಂಟ್​ ಕೊಡುವೆ ಭರವಸೆ ನೀಡಲಾಗಿತ್ತು. ಆದರೆ ರಿಯಲ್ ಎಸ್ಟೇಟ್ ಕಡಿಮೆ ಗುಣಮಟ್ಟದ ಅಪಾರ್ಟ್​​ಮೆಂಟ್​ ಮಂಜೂರು ಮಾಡುವ ಮೂಲಕ ಮೋಸ ಮಾಡಿದೆ ಎಂದು ಆರೋಪಿಸಲಾಗಿದೆ. ವಿಶೇಷವೆಂದರೆ, ಈ ಯೋಜನೆ ಮೆಸರ್ಸ್ ಉಪ್ಪಲ್ ಹೌಸಿಂಗ್ ಪ್ರೈವೇಟ್ ಲಿಮಿಟೆಡ್​ ಸೇರಿದೆ. ಬೌದ್ಧಿಕ ಆಸ್ತಿ ಹಕ್ಕುಗಳನ್ನು ಉಲ್ಲಂಘಿಸಿದ್ದಕ್ಕಾಗಿ ಮತ್ತು ಗೌಪ್ಯತೆ ಹಕ್ಕುಗಳ ಉಲ್ಲಂಘನೆಗಾಗಿ ಮೆಸರ್ಸ್ ಬ್ರಿಲಿಯಂಟ್ ಎಟೋಯಿಲ್ ಪ್ರೈವೇಟ್ ಲಿಮಿಟೆಡ್ ಎಂಬ ಮತ್ತೊಂದು ಸಂಸ್ಥೆಗೆ ಎರಡನೇ ನೋಟಿಸ್ ನೀಡಲಾಗಿದೆ.

ಈ ವಿವಾದವು ಮುಖ್ಯವಾಗಿ ವ್ಯಕ್ತಿತ್ವ ಹಕ್ಕುಗಳಿಗೆ ಸಂಬಂಧಿಸಿದಂತೆ ಬೌದ್ಧಿಕ ಆಸ್ತಿ ಹಕ್ಕುಗಳ ಉಲ್ಲಂಘನೆ ಮತ್ತು ಸೆಲೆಬ್ರಿಟಿಯ ಬ್ರಾಂಡ್ ಮೌಲ್ಯದ ದುರುಪಯೋಗಕ್ಕೆ ಸಂಬಂಧಿಸಿದೆ.

ಒಪ್ಪಂದವು ಕಳೆದ ವರ್ಷ ನವೆಂಬರ ನಲ್ಲಿ ಮುಕ್ತಾಯಗೊಂಡಿತ್ತು

ರಿಯಲ್ ಎಸ್ಟೇಟ್ ಸಂಸ್ಥೆ ಕೈಗೊಂಡ ಯೋಜನೆಗಳ ಪ್ರಚಾರ ಮತ್ತು ಅನುಮೋದನೆಗೆ ಸಂಬಂಧಿಸಿದಂತೆ ಸಂಬಂಧಿತ ಪಕ್ಷಗಳು ತಿಳಿವಳಿಕೆ ಒಪ್ಪಂದಕ್ಕೆ (ತಿಳಿವಳಿಕೆ ಒಪ್ಪಂದ) ಸಹಿ ಹಾಕಿರುವುದು ಅತ್ಯಗತ್ಯ. ಆದಾಗ್ಯೂ, ಈ ತಿಳಿವಳಿಕೆ ಒಪ್ಪಂದವು ಕಳೆದ ವರ್ಷ ನವೆಂಬರ್ 23 ರಂದು ಕೊನೆಗೊಂಡಿತು. ಅದರ ಹೊರತಾಗಿಯೂ, ಸಂಸ್ಥೆಯು ಯುವರಾಜ್ ಸಿಂಗ್ ಅವರ ಹೆಸರನ್ನು ಬಿಲ್ಬೋರ್ಡ್ ಜಾಹೀರಾತುಗಳ ಮೂಲಕ ಮತ್ತು ಯೋಜನಾ ಸ್ಥಳದಲ್ಲಿ ಬಳಸುವುದನ್ನು ಮುಂದುವರಿಸಿತ್ತು.

ಸಂಸ್ಥೆಯು ಸುದ್ದಿ ಲೇಖನಗಳ ಜೊತೆಗೆ ಅವರ ವ್ಯಕ್ತಿತ್ವವನ್ನು ತಮ್ಮ ಸಾಮಾಜಿಕ ಮಾಧ್ಯಮ ಅಭಿಯಾನಗಳಲ್ಲಿ ಬಳಸುವ ಮೂಲಕ ಉಲ್ಲಂಘನೆ ಮುಂದುವರಿಸಿತ್ತು. ಇದರಿಂದಾಗಿ ಕೃತಿಸ್ವಾಮ್ಯ, ಪ್ರಚಾರದ ಹಕ್ಕು ಮತ್ತು ವ್ಯಕ್ತಿತ್ವದ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಯುವರಾಜ್ ಸಿಂಗ್ ಆರೋಪಿಸಿದ್ದಾರೆ.

Continue Reading
Advertisement
kalaburagi cyber crime news fraud
ಕ್ರೈಂ9 mins ago

Cyber Crime: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವೈದ್ಯರಿಗೆ ವಂಚನೆ; 76 ಲಕ್ಷ ರೂ. ಸುಲಿಗೆ!

Rishabh Pant Video Calls
ಕ್ರೀಡೆ12 mins ago

Rishabh Pant Video Calls: ನ್ಯೂಯಾರ್ಕ್​ನಿಂದ ವಿಡಿಯೊ ಕಾಲ್​ ಮಾಡಿ ರಿಂಕು ಸಿಂಗ್​ಗೆ ಅಭಿನಂದಿಸಿದ ಪಂತ್​

Bomb Threat
ದೇಶ16 mins ago

Bomb Threat: ಸಾಲು ಸಾಲು ಬಾಂಬ್‌ ಥ್ರೆಟ್‌ ಪ್ರಕರಣ; ತಾಜ್‌ ಹೊಟೇಲ್‌ ಬೆನ್ನಲ್ಲೇ ಇಂಡಿಗೋ ವಿಮಾನಕ್ಕೂ ಬೆದರಿಕೆ

India Head Coach
ಕ್ರೀಡೆ43 mins ago

India Head Coach: ಗಂಭೀರ್‌ ಕೋಚ್​ ಆಗುವುದು ಬಹುತೇಕ ಖಚಿತ; ಕುತೂಹಲ ಮೂಡಿಸಿದ ಜಯ್‌ ಶಾ ಭೇಟಿ

hindalaga jail assault case
ಕ್ರೈಂ1 hour ago

Assault Case: ಹಿಂಡಲಗಾ ಜೈಲಿನಲ್ಲಿ ಕೈದಿಯಿಂದಲೇ ಮಾರಣಾಂತಿಕ ಹಲ್ಲೆ; ಭಯದಲ್ಲಿ ಬದುಕುತ್ತಿರುವ ಸಿಬ್ಬಂದಿ!

Viral Video
ವೈರಲ್ ನ್ಯೂಸ್1 hour ago

Viral Video: ನಡು ರಸ್ತೆಯಲ್ಲಿ ಪಿಸ್ತೂಲ್‌ ತೋರಿಸಿ ವ್ಯಕ್ತಿ ಮೇಲೆ ಹಲ್ಲೆ; ಅಂತಾರಾಷ್ಟ್ರೀಯ ಮಟ್ಟದ ಶೂಟರ್‌ನಿಂದ ದಾಂಧಲೆ

swagat babu no more
ಸಿನಿಮಾ2 hours ago

Swagat Babu: ಕನ್ನಡ ಚಲನಚಿತ್ರ ನಿರ್ಮಾಪಕ ಸ್ವಾಗತ್ ಬಾಬು ಇನ್ನಿಲ್ಲ

Porsche car accident ವಿಸ್ತಾರ ಸಂಪಾದಕೀಯ
ಪ್ರಮುಖ ಸುದ್ದಿ2 hours ago

ವಿಸ್ತಾರ ಸಂಪಾದಕೀಯ: ಕುಡುಕ ಬಾಲಕನಿಂದ ಅಪಘಾತ ಪ್ರಕರಣ; ಪುಣೆ ಪೊಲೀಸರ ದಿಟ್ಟ ಕ್ರಮ ಶ್ಲಾಘನೀಯ

Cooking In An Iron Pot
ಆರೋಗ್ಯ3 hours ago

Cooking In An Iron Pot: ಕಬ್ಬಿಣದ ಪಾತ್ರೆಯಲ್ಲಿ ಅಡುಗೆ ಮಾಡುವುದು ಒಳ್ಳೆಯದು! ಯಾಕೆ ಗೊತ್ತೇ?

karnataka weather Forecast
ಮಳೆ3 hours ago

Karnataka Weather : ಕರಾವಳಿ, ಮಲೆನಾಡಲ್ಲಿ ಗುಡುಗು, ಮಿಂಚು; ಒಳನಾಡಿನಲ್ಲಿ ಸಾಧಾರಣ ಮಳೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ16 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು7 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು7 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌