ಮುಂಬೈ: ಆಧುನಿಕ ಕಾಲಘಟ್ಟ, ಬದಲಾದ ತಂತ್ರಜ್ಞಾನವು (Technology) ಭಾರತ ಸೇರಿ ಜಗತ್ತು ಏಳಿಗೆ ಹೊಂದಲು ಕಾರಣವಾಗಿದೆ. ಆದರೆ, ಇದೇ ತಂತ್ರಜ್ಞಾನವು ಸಮಾಜ, ಮೌಲ್ಯಗಳ ಅಧಃಪತನಕ್ಕೆ ಕಾರಣವಾಗುತ್ತಿದೆ. ಅದರಲ್ಲೂ, ಸಣ್ಣ ಮಕ್ಕಳಿಂದ ಹಿಡಿದು, ಹಿರಿಯರವರೆಗೆ ಲಭ್ಯ ಇರುವ ಸ್ಮಾರ್ಟ್‌ಫೋನ್‌ಗಳು (Smart Phones) ಅತ್ಯಾಚಾರ, ಲೈಂಗಿಕ ಕಿರುಕುಳ, ಕೊಲೆ, ಸುಲಿಗೆಗೆ ದಾರಿ ಮಾಡಿಕೊಡುತ್ತಿವೆ. ಇದಕ್ಕೆ ನಿದರ್ಶನ ಎಂಬಂತೆ, ಮಹಾರಾಷ್ಟ್ರದಲ್ಲಿ (Maharashtra) 13 ವರ್ಷದ ಬಾಲಕನೊಬ್ಬ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳನ್ನು ನೋಡಿ 15 ವರ್ಷದ ಅಕ್ಕನ ಮೇಲೆಯೇ ಅತ್ಯಾಚಾರ ಎಸಗಿದ್ದಾನೆ.
ಹೌದು, ಬಾಲಕನು ಅಕ್ಕನ ಮೇಲೆಯೇ ಅತ್ಯಾಚಾರ ಎಸಗಿದ ಪರಿಣಾಮ, ಬಾಲಕಿ ಈಗ ಗರ್ಭಿಣಿಯಾಗಿದ್ದಾಳೆ. ಮೂರು ತಿಂಗಳು ಗರ್ಭಿಣಿಯಾಗಿರುವ ಬಾಲಕಿಯನ್ನು ಪೋಷಕರು ಮುಂಬೈನಲ್ಲಿರುವ ವಾಶಿ ಜನರಲ್ ಹಾಸ್ಪಿಟಲ್‌ಗೆ ಕರೆದುಕೊಂಡು ಹೋಗಿ, ಗರ್ಭಪಾತ ಮಾಡಿಸಲು ಮುಂದಾದಾಗ ಪ್ರಕರಣ ಬೆಳಕಿಗೆ ಬಂದಿದೆ. ಇದಾದ ಬಳಿಕ ಪೊಲೀಸರು ಬಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
“ಕಳೆದ ಡಿಸೆಂಬರ್‌ನಲ್ಲಿ ಅಕ್ಕ ಹಾಗೂ ತಮ್ಮ ಒಟ್ಟಿಗೆ ಕುಳಿತು ಮೊಬೈಲ್‌ನಲ್ಲಿ ನೀಲಿ ಚಿತ್ರಗಳನ್ನು ವೀಕ್ಷಿಸಿದ್ದಾರೆ. ಇದಾದ ಬಳಿಕ ಇಬ್ಬರೂ ಸೆಕ್ಸ್ ಮಾಡಲು ಪ್ರಯತ್ನಿಸಿದ್ದಾರೆ. ಇನ್ನು ಜನವರಿಯಲ್ಲಿ ಬಾಲಕನು ಮತ್ತೆ ವಿಡಿಯೊಗಳನ್ನು ನೋಡಿದ್ದು, ಅದಾದ ನಂತರ ಅಕ್ಕ ಬೇಡ ಎಂದರೂ ಕೇಳದೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದ ಬಳಿಕ ಬಾಲಕಿಯ ಋತುಸ್ರಾವ ಆಗಿಲ್ಲ. ಇದರಿಂದ ಗಾಬರಿಗೊಂಡ ಬಾಲಕಿಯು ತನ್ನ ತಾಯಿಗೆ ವಿಷಯ ತಿಳಿಸಿದ್ದಾಳೆ. ನಂತರ ಅವರು ಆಸ್ಪತ್ರೆಗೆ ತೆರಳಿ ಗರ್ಭಪಾತ ಮಾಡಿಸಲು ಮುಂದಾಗಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕನ ವಿರುದ್ಧ ಪೋಕ್ಸೊ, ಐಪಿಸಿಯ ಸೆಕ್ಷನ್ 376 ಸೇರಿ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದಾದ ಬಳಿಕ ಪ್ರಕರಣವನ್ನು ಖಂಡೇಶ್ವರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಮಕ್ಕಳ ಕಲ್ಯಾಣ ಆಯೊಗವು ಮುಂದಿನ ಕ್ರಮ ತೆಗೆದುಕೊಳ್ಳಲಿದೆ ಎಂದು ತಿಳಿದುಬಂದಿದೆ. ಇಂತಹ ಪ್ರಕರಣಗಳು ಬೆಳಕಿಗೆ ಬರುವ ಕಾರಣದಿಂದಾಗಿಯೇ, ಮಕ್ಕಳಿಗೆ ಮೊಬೈಲ್ ಕೊಡಬಾರದು, ಕೊಟ್ಟರೂ ಅವರು ಏನು ಮಾಡುತ್ತಾರೆ ಎಂಬುದರ ಮೇಲೆ ಪೋಷಕರು ಗಮನ ಇಡಬೇಕು ಎಂದು ತಜ್ಞರು ಹೇಳುತ್ತಲೇ ಇರುತ್ತಾರೆ.
ಇದನ್ನೂ ಓದಿ: ಪತ್ನಿಯ ಶೀಲ ಶಂಕಿಸಿ, ಆಕೆಯ ಗುಪ್ತಾಂಗಕ್ಕೆ ಮೊಳೆ ಜಡಿದು, ಬೀಗ ಹಾಕಿದ ದುಷ್ಟ; ಏನು ಮಾಡಬೇಕು ಇಂಥವರಿಗೆ?