Operation Kaveri: ವೇಗ ಪಡೆದುಕೊಂಡ ಆಪರೇಶನ್ ಕಾವೇರಿ; ಸುಡಾನ್​​ನಿಂದ ಹೊರಟ ಭಾರತೀಯರ 10ನೇ ಬ್ಯಾಚ್​ - Vistara News

ದೇಶ

Operation Kaveri: ವೇಗ ಪಡೆದುಕೊಂಡ ಆಪರೇಶನ್ ಕಾವೇರಿ; ಸುಡಾನ್​​ನಿಂದ ಹೊರಟ ಭಾರತೀಯರ 10ನೇ ಬ್ಯಾಚ್​

ಸುಡಾನ್​ನಲ್ಲಿ 3000ಕ್ಕೂ ಹೆಚ್ಚು ಭಾರತೀಯರು ಇದ್ದಾರೆ. ಅವರನ್ನೆಲ್ಲ ಸುರಕ್ಷಿತವಾಗಿ ತಾಯ್ನಾಡಿಗೆ ಕರೆದುಕೊಂಡು ಬರುವ ಹೊಣೆ ನಮ್ಮದು ಎಂದು ಕೇಂದ್ರ ಸರ್ಕಾರ ಹೇಳಿದೆ. ಅದಕ್ಕಾಗಿಯೇ ಆಪರೇಶನ್​ ಕಾವೇರಿಯನ್ನು ಅದು ಪ್ರಾರಂಭಿಸಿದೆ.

VISTARANEWS.COM


on

135 Indians departs from Sudan to Jedda
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಯುದ್ಧಭೂಮಿ ಸುಡಾನ್​​ನಿಂದ ಭಾರತೀಯರನ್ನು ರಕ್ಷಣೆ ಮಾಡಲು ಕೇಂದ್ರ ಸರ್ಕಾರ ಪ್ರಾರಂಭ ಮಾಡಿರುವ ಆಪರೇಶನ್ ಕಾವೇರಿ (Operation Kaveri) ವೇಗ ಪಡೆದುಕೊಂಡಿದೆ. 135 ಭಾರತೀಯರನ್ನು ಒಳಗೊಂಡ 10ನೇ ಬ್ಯಾಚ್,​ ಪೋರ್ಟ್​ ಸುಡಾನ್​ನಿಂದ ಹೊರಟಿದ್ದು, ಶೀಘ್ರದಲ್ಲಿಯೇ ಸೌದಿ ಅರೇಬಿಯಾದ ಜೆಡ್ಡಾದಲ್ಲಿ ಲ್ಯಾಂಡ್ ಆಗಲಿದೆ. ಐಎಎಫ್​ ಸಿ 130ಜೆ ವಿಮಾನದಲ್ಲಿ ಪೋರ್ಟ್​ ಸುಡಾನ್​​ನಿಂದ ಹೊರಟಿದ್ದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್​ ಅವರು ಟ್ವೀಟ್ ಮಾಡಿ ತಿಳಿಸಿದ್ದಾರೆ. ಸುಡಾನ್​ನಲ್ಲಿ ಏಪ್ರಿಲ್​ 15ರಿಂದ ಸೇನೆ ಮತ್ತು ಅರೆಸೇನಾ ಪಡೆಗಳ ನಡುವೆ ಸಂಘರ್ಷ ಏರ್ಪಟ್ಟಿದೆ. ದೇಶವನ್ನು ರಕ್ಷಿಸಬೇಕಾದವರೇ ಪರಸ್ಪರ ಹೊಡೆದಾಡಿಕಕೊಳ್ಳುತ್ತಿದ್ದಾರೆ. ಇವರಿಬ್ಬರ ಯುದ್ಧದ ಪರಿಣಾಮ ಇದುವರೆಗೆ 500ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ಸುಡಾನ್​ನಲ್ಲಿ 3000ಕ್ಕೂ ಹೆಚ್ಚು ಭಾರತೀಯರು ಇದ್ದಾರೆ. ಅವರನ್ನೆಲ್ಲ ಸುರಕ್ಷಿತವಾಗಿ ತಾಯ್ನಾಡಿಗೆ ಕರೆದುಕೊಂಡು ಬರುವ ಹೊಣೆ ನಮ್ಮದು ಎಂದು ಕೇಂದ್ರ ಸರ್ಕಾರ ಹೇಳಿದೆ. ಅದಕ್ಕಾಗಿಯೇ ಆಪರೇಶನ್​ ಕಾವೇರಿಯನ್ನು ಅದು ಪ್ರಾರಂಭಿಸಿದೆ. ಪೋರ್ಟ್ ಸುಡಾನ್​​ನಿಂದ ಸೌದಿ ಅರೇಬಿಯಾದ ಜೆಡ್ಡಾಕ್ಕೆ ಕರೆತಂದು, ಅಲ್ಲಿಂದ ವಿಮಾನದ ಮೂಲಕ ದೆಹಲಿ/ಮುಂಬಯಿಗೆ ಭಾರತೀಯರನ್ನು ಕಳಿಸಲಾಗುತ್ತಿದೆ. ಪೋರ್ಟ್​ ಸುಡಾನ್​ನಿಂದ ಭಾರತೀಯರನ್ನು ಜೆಡ್ಡಾಕ್ಕೆ ಕರೆದೊಯ್ಯಲು ಐಎನ್​ಎಸ್ ಸುಮೇಧಾ, ಐಎನ್​ಎಸ್ ತೇಜ್, ಐಎನ್​ಎಸ್​ ತರ್ಕಾಶ್​​ ನೌಕೆಗಳು ಮತ್ತು ಐಎಎಫ್​ ಸಿ 130ಜೆ ವಿಮಾನಗಳನ್ನು ನಿಯೋಜಿಸಲಾಗಿದೆ. 9ನೇ ಬ್ಯಾಚ್​​ನಲ್ಲಿ ಐಎನ್​ಎಸ್​ ತರ್ಕಾಶ್​ ಹಡಗಿನಲ್ಲಿ 326 ಭಾರತೀಯರನ್ನು ಮತ್ತು ಐಎಎಫ್​ ಸಿ 130 ಜೆ ವಿಮಾನದಲ್ಲಿ 135 ಜನರನ್ನು ಜೆಡ್ಡಾಕ್ಕೆ ಕರೆತರಲಾಗಿದೆ. 8ನೇ ಬ್ಯಾಚ್​​ನಲ್ಲಿ 121 ಭಾರತೀಯರು ಸುಡಾನ್​​ನಿಂದ ಹೊರಟಿದ್ದಾರೆ.

ಇದನ್ನೂ ಓದಿ: Operation Kaveri: ಸುಡಾನ್‌ನಲ್ಲಿ 68 ಕನ್ನಡಿಗರು ಅತಂತ್ರ; ನೆರವಿಗೆ ಬಾರದ ಆಪರೇಷನ್ ಕಾವೇರಿ ಟೀಂ

ಮತ್ತೊಂದು ಹಂತದಲ್ಲಿ ಭಾರತೀಯರನ್ನು ಜೆಡ್ಡಾದಿಂದ ತಾಯ್ನೆಲಕ್ಕೆ ಕರೆತರುವ ಕಾರ್ಯಾಚರಣೆಯೂ ನಡೆಯುತ್ತಿದೆ. ಈಗಾಗಲೇ ಎರಡು ಬ್ಯಾಚ್​ಗಳು ಭಾರತಕ್ಕೆ ಬಂದಿದ್ದು, ಮೊದಲ ವಿಮಾನ ದೆಹಲಿಯಲ್ಲಿ, ಮತ್ತೊಂದು ವಿಮಾನ ಮುಂಬಯಿಯಲ್ಲಿ ಲ್ಯಾಂಡ್​ ಆಗಿದೆ. ಅಲ್ಲಿಂದ ಬಂದವರು ಭಾರತ ಸರ್ಕಾರಕ್ಕೆ ಧನ್ಯವಾದ ಸಲ್ಲಿಸುತ್ತಿದ್ದಾರೆ. ಅಲ್ಲಿ ತಮ್ಮ ಸ್ಥಿತಿ ಹೇಗಿತ್ತು ಎಂಬುದನ್ನೂ ವಿವರಿಸಿದ್ದಾರೆ. ಜೆಡ್ಡಾದಿಂದ ದೆಹಲಿಗೆ ಬಂದಿಳಿದ ಹರಿಯಾಣ ಮೂಲದ ಸುಖ್ವಿಂದರ್ ಸಿಂಗ್​ ಎಂಬುವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ‘ಯುದ್ಧ ಪೀಡಿತ ಸುಡಾನ್​​ನಲ್ಲಿ ನಮ್ಮ ಪರಿಸ್ಥಿತಿ ಭೀಕರವಾಗಿತ್ತು. ನಾವು ಮರಣಶಯ್ಯೆಯಲ್ಲಿದ್ದೇವೆ ಎಂಬ ಭಾವನೆ ಹುಟ್ಟಿತ್ತು’ ಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Adhir Ranjan: ಟಿಎಂಸಿ ಬದಲು ಬಿಜೆಪಿಗೆ ಮತ ಹಾಕೋದೇ ಬೆಸ್ಟ್‌ ಎಂದ ಕಾಂಗ್ರೆಸ್‌ ನಾಯಕ!

Adhir Ranjan: ಪಶ್ಚಿಮ ಬಂಗಾಳದಲ್ಲಿ ಜನರು ಟಿಎಂಸಿಗೆ ಮತ ನೀಡುವುದಕ್ಕಿಂತ ಬಿಜೆಪಿಗೆ ಮತ ಹಾಕುವುದೇ ಲೇಸು ಎಂಬುದಾಗಿ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ಹೇಳಿದ್ದಾರೆ. ಈ ವಿಡಿಯೊ ವೈರಲ್‌ ಆಗುತ್ತಲೇ ಬಿಜೆಪಿ ನಾಯಕರು ಪ್ರತಿಕ್ರಿಯಿಸಿದ್ದಾರೆ. ಇದರ ಮಧ್ಯೆಯೇ ಕಾಂಗ್ರೆಸ್‌ ಸ್ಪಷ್ಟನೆ ನೀಡಿದೆ.

VISTARANEWS.COM


on

Adhir Ranjan
Koo

ಕೋಲ್ಕೊತಾ: ಬೇಸಿಗೆಯ ರಣಬಿಸಿಲಿಗಿಂತ ಲೋಕಸಭೆ ಚುನಾವಣೆ (Lok Sabha Election 2024) ಕಾವು ದಿನೇದಿನೆ ಜಾಸ್ತಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಸೇರಿ ನೂರಾರು ಗಣ್ಯರು ಚುನಾವಣೆ ಪ್ರಚಾರದಲ್ಲಿ ತೊಡಗಿದ್ದಾರೆ. ಅಬ್ಬರದ ಪ್ರಚಾರದ ಜತೆಗೆ ಭಾರಿ ಭಾಷಣವನ್ನೂ ಮಾಡುತ್ತಿದ್ದಾರೆ. ಒಂದು ಪಕ್ಷದ ಅಭ್ಯರ್ಥಿಗಳು, ನಾಯಕರು ಪ್ರತಿಸ್ಪರ್ಧಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ, “ಟಿಎಂಸಿಗೆ ಮತ ಹಾಕುವುದಕ್ಕಿಂತ ಬಿಜೆಪಿಗೆ ಮತ ನೀಡುವುದೇ ವಾಸಿ” ಎಂಬುದಾಗಿ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ (Adhir Ranjan) ಅವರು ಹೇಳಿರುವುದು ಅಚ್ಚರಿ ಮೂಡಿಸಿದೆ. ಹಾಗೆಯೇ, ಅವರು ಹೇಳಿದ ವಿಡಿಯೊ (Viral Video) ಭಾರಿ ವೈರಲ್‌ ಆಗಿದೆ.

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಆಯೋಜಿಸಿದ್ದ ಚುನಾವಣೆ ರ‍್ಯಾಲಿಯಲ್ಲಿ ಅಧೀರ್‌ ರಂಜನ್‌ ಚೌಧರಿ ಮಾತನಾಡಿದ್ದಾರೆ. “ಲೋಕಸಭೆ ಚುನಾವಣೆಯಲ್ಲಿ 400ಕ್ಕಿಂತ ಅತಿ ಹೆಚ್ಚು ಸ್ಥಾನ ಗೆಲ್ಲಬೇಕು ಎಂಬ ಪ್ರಧಾನಿಯವರ ಕನಸು ನನಸಾಗುವುದಿಲ್ಲ. ಈಗಾಗಲೇ ಮೋದಿ ಅವರ ಕೈಯಿಂದ 100 ಕ್ಷೇತ್ರಗಳು ಹಾರಿ ಹೋಗಿವೆ. ಕಾಂಗ್ರೆಸ್‌ ಹಾಗೂ ಸಿಪಿಎಂ ಅಭ್ಯರ್ಥಿಗಳ ಗೆಲುವು ಮುಖ್ಯವಾಗಿದೆ. ಹಾಗೊಂದು ವೇಳೆ ನೀವು ಗೆಲ್ಲಿಸುವುದೇ ಆದರೆ, ಟಿಎಂಸಿಗಿಂತ ಬಿಜೆಪಿಗೇ ಮತ ಹಾಕುವುದು ಒಳಿತು” ಎಂದು ಹೇಳಿದ್ದಾರೆ.

ಅಧೀರ್‌ ರಂಜನ್‌ ಚೌಧರಿ ಅವರು ನೀಡಿದ ಹೇಳಿಕೆಯ ವಿಡಿಯೊ ವೈರಲ್‌ ಆಗುತ್ತಲೇ ಬಿಜೆಪಿ ನಾಯಕರು ವಿಡಿಯೊವನ್ನು ಹಂಚಿಕೊಂಡಿದ್ದಾರೆ. “ಪ್ರತಿಪಕ್ಷಗಳಿಗೆ ಗುರಿಯೂ ಇಲ್ಲ, ಉದ್ದೇಶವೂ ಇಲ್ಲ. ಇನ್ನು, ಇಂಡಿಯಾ ಒಕ್ಕೂಟಕ್ಕೆ ಜನರನ್ನು ಇಬ್ಭಾಗ ಮಾಡುವುದು, ಭ್ರಷ್ಟಾಚಾರ ಎಸಗುವುದು ಹಾಗೂ ಜನರಲ್ಲಿ ಗೊಂದಲ ಮೂಡಿಸುವುದೇ ಕಾಯಕವಾಗಿದೆ. ಇವರ ಮಧ್ಯೆಯೇ, ಬಿಜೆಪಿಗೆ ಮತ ನೀಡಿ ಎಂಬುದಾಗಿ ಕಾಂಗ್ರೆಸ್‌ ನಾಯಕ ತಿಳಿಸಿದ್ದಾರೆ. ಟಿಎಂಸಿಗೆ ಮತ ನೀಡುವ ಬದಲು ಬಿಜೆಪಿಯೇ ಬೆಸ್ಟ್‌ ಎಂಬುದಾಗಿ ಅವರು ಹೇಳಿದ್ದಾರೆ” ಎಂದು ಬಿಜೆಪಿ ನಾಯಕ ಶೆಹಜಾದ್‌ ಜೈ ಹಿಂದ್‌ ಪೋಸ್ಟ್‌ ಮಾಡಿದ್ದಾರೆ.

ಸ್ಪಷ್ಟನೆ ಕೊಟ್ಟ ಕಾಂಗ್ರೆಸ್‌

ಅಧೀರ್‌ ರಂಜನ್‌ ಚೌಧರಿ ನೀಡಿದ ಹೇಳಿಕೆ ಕುರಿತು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಸ್ಪಷ್ಟನೆ ನೀಡಿದರು. “ಅಧೀರ್‌ ರಂಜನ್‌ ಚೌಧರಿ ಅವರು ಯಾವ ಅರ್ಥದಲ್ಲಿ ಹಾಗೆ ಹೇಳಿದ್ದಾರೋ ಗೊತ್ತಿಲ್ಲ ಹಾಗೂ ನಾನು ಆ ವಿಡಿಯೊವನ್ನು ನೋಡಿಲ್ಲ. ಆದರೆ, 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗಳಿಸಿದ ಸ್ಥಾನಗಳ ಸಂಖ್ಯೆಯು ಈ ಬಾರಿ ಗಣನೀಯವಾಗಿ ಕುಸಿಯುವಂತೆ ಮಾಡುವುದು ಕಾಂಗ್ರೆಸ್‌ನ ಗುರಿಯಾಗಿದೆ” ಎಂದು ಹೇಳಿದರು. ಪಶ್ಚಿಮ ಬಂಗಾಳದಲ್ಲಿ ಇಂಡಿಯಾ ಒಕ್ಕೂಟದ ಮೈತ್ರಿಯು ಫಲಿಸಿಲ್ಲ. ಟಿಎಂಸಿ ಏಕಾಂಗಿಯಾಗಿ ಸ್ಪರ್ಧಿಸಿದೆ.

ಇದನ್ನೂ ಓದಿ: Shyam Rangeela: ಮೋದಿಯನ್ನು ಮಿಮಿಕ್ರಿ ಮಾಡಿ ಖ್ಯಾತಿಯಾದ ಕಲಾವಿದ ಈಗ ಪ್ರಧಾನಿ ವಿರುದ್ಧವೇ ಕಣಕ್ಕೆ!

Continue Reading

ದೇಶ

Shyam Rangeela: ಮೋದಿಯನ್ನು ಮಿಮಿಕ್ರಿ ಮಾಡಿ ಖ್ಯಾತಿಯಾದ ಕಲಾವಿದ ಈಗ ಪ್ರಧಾನಿ ವಿರುದ್ಧವೇ ಕಣಕ್ಕೆ!

Shyam Rangeela: ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಂತೆ ತನ್ನದೇ ಶೈಲಿಯಲ್ಲಿ ಮಿಮಿಕ್ರಿ ಮಾಡುತ್ತಿದ್ದ ಹಾಸ್ಯ ಕಲಾವಿದ ಶ್ಯಾಮ್‌ ರಂಗೀಲಾ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ. ಅವರು ನರೇಂದ್ರ ಮೋದಿ ವಿರುದ್ಧವೇ ಕಣಕ್ಕಿಳಿದಿದ್ದು, ಈಗ ಚುನಾವಣೆ ಸ್ಪರ್ಧೆಯು ರಂಗೇರಿದೆ.

VISTARANEWS.COM


on

shyam rangeela
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಶೈಲಿಯಲ್ಲೇ ಮಾತನಾಡುತ್ತ, ಜೋಕ್‌ಗಳನ್ನು ಮಾಡುತ್ತ ಖ್ಯಾತಿ ಗಳಿಸಿದ ಹಾಸ್ಯ ಕಲಾವಿದ ಶ್ಯಾಮ್‌ ರಂಗೀಲಾ (Shyam Rangeela) ಅವರೀಗ ವಾರಾಣಸಿ (Varanasi) ಲೋಕಸಭೆ ಕ್ಷೇತ್ರದಲ್ಲಿ ನರೇಂದ್ರ ಮೋದಿ (Narendra Modi) ಅವರ ವಿರುದ್ಧವೇ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ. ಹಾಗಾಗಿ, ವಾರಾಣಸಿ ಲೋಕಸಭೆ ಕ್ಷೇತ್ರವೀಗ ಮತ್ತಷ್ಟು ರಂಗೇರಿದಂತಾಗಿದೆ. ಈಗಾಗಲೇ ಪ್ರಮುಖ ಪಕ್ಷಗಳು ವಾರಾಣಸಿಯಲ್ಲಿ ಅಭ್ಯರ್ಥಿಗಳನ್ನು ಘೋಷಿಸಿವೆ. ಹಾಗಾಗಿ, ಶ್ಯಾಮ್‌ ರಂಗೀಲಾ ಅವರು ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆ ಎಂದು ತಿಳಿದುಬಂದಿದೆ.

ರಾಜಸ್ಥಾನದವರಾದ 29 ವರ್ಷದ ಶ್ಯಾಮ್‌ ರಂಗೀಲಾ ಅವರು ನರೇಂದ್ರ ಮೋದಿ ಹಾಗೂ ರಾಹುಲ್‌ ಗಾಂಧಿ ಅವರನ್ನು ಮಿಮಿಕ್ರಿ ಮಾಡುತ್ತ ಖ್ಯಾತಿ ಗಳಿಸಿದ್ದಾರೆ. ಇವರ ಹಾಸ್ಯಪ್ರಜ್ಞೆಯನ್ನೂ ಜನ ಮೆಚ್ಚಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಜನರಿಗೆ ಪರಿಚಿತರಾಗಿದ್ದಾರೆ. “ದೇಶದಲ್ಲಿ ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿದೆ ಎಂಬುದನ್ನು ಸಾಬೀತುಪಡಿಸಲು ನಾನು ವಾರಾಣಸಿ ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ. ಮುಂದಿನ ವಾರ ನಾನು ವಾರಾಣಸಿಗೆ ತೆರಳಿ ನಾಮಪತ್ರ ಸಲ್ಲಿಸುತ್ತೇನೆ” ಎಂದು ಹೇಳಿದರು.

“ದೇಶದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಬೇಕಾಗಿದೆ. ಪ್ರಜಾಪ್ರಭುತ್ವವನ್ನು ಉಳಿಸಲು ನಾವು ನಿಮ್ಮ ಜತೆ ಇದ್ದೇವೆ ಎಂಬ ಸಂದೇಶವನ್ನು ರವಾನಿಸಲಾದರೂ, ಪ್ರಜಾಪ್ರಭುತ್ವವನ್ನು ಅಪಾಯದ ಅಂಚಿಗೆ ತೆಗೆದುಕೊಂಡು ಹೋಗಲು ಬಿಡುವುದಿಲ್ಲ ಎಂಬುದನ್ನು ಮನವರಿಕೆ ಮಾಡಲಿಕ್ಕಾದರೂ ನಾನು ಸ್ಪರ್ಧಿಸುತ್ತೇನೆ. ಕನಿಷ್ಠ ಪಕ್ಷ, ಇಂದೋರ್‌ ಹಾಗೂ ಸೂರತ್‌ನಲ್ಲಿ (ಕಾಂಗ್ರೆಸ್‌ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದು ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಕಾರಣರಾಗಿರುವುದು) ಎದುರಾದ ಪರಿಸ್ಥಿತಿ ಇಲ್ಲಿ ಉಂಟಾಗದಂತೆ ಮಾಡಲು, ಜನ ಕನಿಷ್ಠಪಕ್ಷ ಮತದಾನವನ್ನಾದರೂ ಮಾಡಲಿ ಎಂಬುದಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ” ಎಂದು ತಿಳಿಸಿದರು.

ಮೋದಿ ವಿರುದ್ಧ ಕಣಕ್ಕಿಳಿದ ನಾಯಕರಿವರು

ನರೇಂದ್ರ ಮೋದಿ ಅವರು 2014ರಿಂದಲೂ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಇವರ ವಿರುದ್ಧ ಈ ಬಾರಿ ಕಾಂಗ್ರೆಸ್‌ ಅಜಯ್‌ ರಾಯ್‌ ಅವರನ್ನು ಕಣಕ್ಕಿಳಿಸಿದೆ. ಅಖಿಲ ಭಾರತ ಹಿಂದು ಮಹಾಸಭಾ (ABHM) ಪಕ್ಷದಿಂದ ಮಂಗಳಮುಖಿಯಾಗಿರುವ ಕಿನ್ನಾರ್‌ ಮಹಾಮಂಡಲೇಶ್ವರ್‌ ಹೇಮಾಂಗಿ ಸಖಿ ಅವರು ಕೂಡ ಸ್ಪರ್ಧಿಸುತ್ತಿದ್ದಾರೆ. ಈಗ ಬಿಎಸ್‌ಪಿಯು ಅಥರ್‌ ಜಮಾಲ್‌ ಲರಿ ಅವರಿಗೆ ಟಿಕೆಟ್‌ ನೀಡಿದೆ. ಕ್ಷೇತ್ರದಲ್ಲಿ ಜೂನ್‌ 1ರಂದು ಮತದಾನ ನಡೆಯಲಿದೆ. ವಾರಾಣಸಿ ಲೋಕಸಭೆ ಕ್ಷೇತ್ರದಲ್ಲಿ 19.62 ಲಕ್ಷ ಮತದಾರರಿದ್ದಾರೆ. ಇವರಲ್ಲಿ 10.65 ಲಕ್ಷ ಪುರುಷರಿದ್ದರೆ, 8.97 ಲಕ್ಷ ಮಹಿಳೆಯರಿದ್ದಾರೆ. 135 ಮಂಗಳಮುಖಿಯರೂ ಮತದಾನ ಮಾಡಲಿದ್ದಾರೆ.

ಗ್ಯಾಂಗ್‌ಸ್ಟರ್‌ ಪತ್ನಿಗೆ ಟಿಕೆಟ್‌

ಉತ್ತರ ಪ್ರದೇಶದ ಜೌನ್‌ಪುರ ಲೋಕಸಭೆ ಕ್ಷೇತ್ರದಲ್ಲಿ ಬಿಎಸ್‌ಪಿಯು ಗ್ಯಾಂಗ್‌ಸ್ಟರ್‌ ಧನಂಜಯ್‌ ಸಿಂಗ್‌ ಪತ್ನಿ ಶ್ರೀಕಲಾ ಸಿಂಗ್‌ ಅವರಿಗೆ ಟಿಕೆಟ್‌ ನೀಡಿದೆ. ಇದು ಈಗ ಭಾರಿ ಚರ್ಚೆಗೂ ಗ್ರಾಸವಾಗಿದೆ. ಇನ್ನು, ಮೈನ್‌ಪುರಿಯಲ್ಲಿ ಅಭ್ಯರ್ಥಿಯನ್ನು ಬದಲಾಯಿಸಿರುವ ಬಿಎಸ್‌ಪಿಯು, ಶಿವಪ್ರಸಾದ್‌ ಯಾದವ್‌ ಅವರಿಗೆ ಮಣೆ ಹಾಕಿದೆ. ಬರೇಲಿಯಲ್ಲಿ ಛೋಟಾಲಾಲ್‌ ಗಂಗ್ವಾರ್‌, ಬಂಡಾದಲ್ಲಿ ಮಯಾಂಕ್‌ ದ್ವಿವೇದಿ, ಘಾಜಿಪುರದಲ್ಲಿ ಉಮೇಶ್‌ ಕುಮಾರ್‌ ಸಿಂಗ್‌ ಸೇರಿ 11 ಕ್ಷೇತ್ರಗಳಲ್ಲಿ ಬಿಎಸ್‌ಪಿಯು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ

ಇದನ್ನೂ ಓದಿ: BSP List: ವಾರಾಣಸಿಯಲ್ಲಿ ಮೋದಿ ವಿರುದ್ಧ ಬಿಎಸ್‌ಪಿ ಅಭ್ಯರ್ಥಿ ಯಾರು? ಗ್ಯಾಂಗ್‌ಸ್ಟರ್‌ ಪತ್ನಿಗೂ ಟಿಕೆಟ್!

Continue Reading

ದೇಶ

Bomb Threat: ದೆಹಲಿ ಶಾಲೆಗಳಿಗೆ ಬಾಂಬ್‌ ಬೆದರಿಕೆ; ಇ-ಮೇಲ್‌ ಮಾಡಿದವ 16 ವರ್ಷದ ಪೋರ?

Bomb Threat: ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವ್ಯಾಪ್ತಿಯ 100ಕ್ಕೂ ಅಧಿಕ ಪ್ರತಿಷ್ಠಿತ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇಮೇಲ್‌ ಬಂದಿತ್ತು. ಕೂಡಲೇ ಮಕ್ಕಳನ್ನು ತೆರವುಗೊಳಿಸಿ ಮನೆಗೆ ಕಳಿಸಲಾಗಿತ್ತು. ಆತಂಕಿತರಾದ ಇತರ ಶಾಲೆಗಳವರೂ ಮಕ್ಕಳನ್ನು ತರಗತಿಗಳಿಂದ ಮರಳಿ ಕಳಿಸಿದ್ದರು. ಇದರ ಬೆನ್ನಲ್ಲೇ, 16 ವರ್ಷದ ಬಾಲಕನು ತಮಾಷೆಗಾಗಿ ಹುಸಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಾನೆ ಎಂದು ತಿಳಿದುಬಂದಿದೆ.

VISTARANEWS.COM


on

Bomb threat
Koo

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ (New Delhi) ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದ (NCR) ಸುಮಾರು 100 ಶಾಲೆಗಳಿಗೆ (Schools) ಇ-ಮೇಲ್‌ ಮೂಲಕ ಒಡ್ಡಲಾದ ಬಾಂಬ್ ಬೆದರಿಕೆ (Bomb Threat) ಪ್ರಕರಣವು ದೇಶಾದ್ಯಂತ ಸುದ್ದಿಯಾಗಿದೆ. ಶಾಲೆಗಳು ಬಾಂಬ್‌ ಬೆದರಿಕೆಯ ಹಿನ್ನೆಲೆಯಲ್ಲಿ ಮಕ್ಕಳನ್ನು ಮರಳಿ ಮನೆಗೆ ಕಳುಹಿಸಿವೆ. ಇದಾದ ಬಳಿಕ ಪೊಲೀಸರು ಇದು ಹುಸಿ ಬಾಂಬ್‌ ಕರೆ ಎಂಬುದಾಗಿ ಸ್ಪಷ್ಟನೆ ನೀಡಿದ್ದಾರೆ. ಇದರ ಬೆನ್ನಲ್ಲೇ, ಇ-ಮೇಲ್‌ ಮೂಲಕ ಹುಸಿ ಬಾಂಬ್ ಬೆದರಿಕೆ ಒಡ್ಡಿದವ 16 ವರ್ಷದ ಪೋರ ಎಂದು ತಿಳಿದುಬಂದಿದೆ.

ಹೌದು, ದೆಹಲಿಯ ಪ್ರತಿಷ್ಠಿತ ಶಾಲೆಯಲ್ಲಿ ಓದುತ್ತಿರುವ 16 ವರ್ಷದ ಬಾಲಕನು, ತಮಾಷೆಗಾಗಿ ಶಾಲೆಗಳಿಗೆ ಬಾಂಬ್‌ ದಾಳಿ ಕುರಿತು ಇ-ಮೇಲ್‌ ಮಾಡಿದ್ದಾನೆ. 16 ವರ್ಷದ ಬಾಲಕನು ತಮಾಷೆಗಾಗಿ ಮೇಲ್‌ ಮಾಡಿದ್ದು, ಇದರಿಂದ ಆತ ಖುಷಿ ಅನುಭವಿಸಿದ್ದಾನೆ. ಪ್ರಾಂಕ್‌ ಮಾಡಲು ಹೋಗಿ ಇಂತಹ ಅಚಾತುರ್ಯ ಎಸಗಿದ್ದಾನೆ. ಕೊನೆಗೆ ಪೊಲೀಸರು ಆತನಿಗೆ ಬುದ್ಧಿವಾದ ಹೇಳಿ ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇನ್ನೊಂದಿಷ್ಟು ಪೊಲೀಸ್‌ ಮೂಲಗಳ ಪ್ರಕಾರ, ಬಾಲಕನು ಮೇಲ್‌ ಮಾಡಿಲ್ಲ ಎಂದು ಹೇಳಲಾಗುತ್ತಿದೆ.

ವಿದೇಶಿ ಸರ್ವರ್‌ಗಳ ಮೂಲಕ ಡೇಟಾವನ್ನು ರೂಟ್ ಮಾಡುವ ಮತ್ತು ದಾರಿ ತಪ್ಪಿಸುವ ವರ್ಚುವಲ್ ಪ್ರೈವೇಟ್ ನೆಟ್‌ವರ್ಕ್ (ವಿಪಿಎನ್) ಅನ್ನು ಬಳಸಿಕೊಂಡು ಇಮೇಲ್‌ನ ಮೂಲವನ್ನು ಪತ್ತೆ ಹಚ್ಚಲು ಪೊಲೀಸರಿಗೆ ಸ್ವಲ್ಪ ಸಮಯ ತೆಗೆದುಕೊಂಡರು. ವಿಪಿಎನ್ ಟ್ರಾಫಿಕ್ ಅನ್ನು ಹಿಂತೆಗೆದುಕೊಂಡ ನಂತರ ಮತ್ತು ಇಮೇಲ್‌ನ ಮೂಲವನ್ನು ಕಂಡುಹಿಡಿದ ನಂತರ ಪೊಲೀಸರು ಇಂಟರ್ನೆಟ್ ಪ್ರೋಟೋಕಾಲ್ (ಐಪಿ) ವಿಳಾಸವನ್ನು- ಅನನ್ಯ ಐಡೆಂಟಿಫೈಯರ್ ಅನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಾಂಬ್‌ ದಾಳಿ ಕುರಿತ ಬೆದರಿಕೆ ಇ-ಮೇಲ್‌ಗಳು ರವಾನೆಯಾಗುತ್ತಲೇ ಪೊಲೀಸರು ಎಚ್ಚೆತ್ತುಕೊಂಡರು. ಕೂಲಂಕಷ ತನಿಖೆ, ಪರಿಶೀಲನೆ ನಡೆಸಿದ ಪೊಲೀಸರು, ಇದೊಂದು ಹುಸಿ ಬಾಂಬ್‌ ಬೆದರಿಕೆ ಎಂಬುದಾಗಿ ಎಕ್ಸ್‌ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿ ಪೋಷಕರು, ಶಾಲೆಗಳ ಆಡಳಿತ ಮಂಡಳಿಯು ನಿಟ್ಟುಸಿರು ಬಿಡುವಂತೆ ಮಾಡಿದರು. “ದೆಹಲಿ ಶಾಲೆಗಳಿಗೆ ಬಾಂಬ್‌ ದಾಳಿ ನಡೆಸುವುದಾಗಿ ರವಾನೆಯಾಗಿರುವ ಬೆದರಿಕೆಯು ಹುಸಿ ಬೆದರಿಕೆ ಎಂಬಂತೆ ಕಾಣುತ್ತಿದೆ. ಹಾಗಾಗಿ, ಯಾರೂ ಕೂಡ ಆತಂಕಕ್ಕೀಡಾಗಬಾರದು” ಎಂಬುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ‌Bomb Threat: ಬಾಂಬ್‌ ಬೆದರಿಕೆ ಇಮೇಲ್ ಮೂಲ ಪತ್ತೆ, ದಿಲ್ಲಿಯ 100ಕ್ಕೂ ಅಧಿಕ ಶಾಲೆ ಕ್ಲೋಸ್

Continue Reading

ಹಾಸನ

Prajwal Revanna Case: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

Prajwal Revanna Case: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಈ ಪಾಸ್‌ಪೋರ್ಟ್‌ ಇರುವವರಿಗೆ ಹಲವು ದೇಶಗಳು ವೀಸಾ ವಿಸ್ತರಿಸುತ್ತವೆ. ವೀಸಾ ಮನ್ನಾ ಸೌಲಭ್ಯವೂ ಸಿಗಬಹುದು. ಅಧಿಕೃತ ಪ್ರವಾಸ ಕಾರ್ಯಕ್ರಮಗಳು ಸುಗಮವಾಗುತ್ತದೆ. ಭಾರತೀಯ ರಾಯಭಾರ ಕಚೇರಿಯ ಸಂಪರ್ಕ ಸೌಲಭ್ಯಗಳು ಸಿಗುತ್ತವೆ. ಒಂದು ವೇಳೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡರೆ ಏನಾಗುತ್ತದೆ? ಇದನ್ನು ಯಾರು ಯಾರು ಪಡೆದುಕೊಳ್ಳಬಹುದು? ಇದರ ಅವಧಿ ಎಷ್ಟು ವರ್ಷ ಇರುತ್ತದೆ? ಇದನ್ನು ಹೇಗೆ ಪಡೆದುಕೊಳ್ಳಬಹುದು? ವಿಶೇಷ ಸೌಲಭ್ಯಗಳು, ಮಾನ್ಯತೆಗಳು ಏನು ಎಂಬ ವಿವರವನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Prajwal Revanna Case What is diplomatic passport
Koo

ಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ (Diplomatic Passport) ಅನ್ನು ರದ್ದು ಮಾಡಲು ಈಗಾಗಲೇ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಈ ಪಾಸ್‌ಪೋರ್ಟ್‌ ರದ್ದು ಮಾಡದೇ ಇದ್ದರೆ ಪ್ರಜ್ವಲ್‌ ಬಂಧನ ಅಸಾಧ್ಯವಾಗಿದ್ದು, ಅವರು ದೇಶದಿಂದ ದೇಶಕ್ಕೆ ಆರಾಮವಾಗಿ ಸಂಚಾರ ಮಾಡಬಹುದಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನ‌ು ಸಂಕಷ್ಟಕ್ಕೆ ದೂಡಲು ಸಿದ್ದರಾಮಯ್ಯ ಪ್ಲ್ಯಾನ್‌ ಮಾಡಿದ್ದು, ಚೆಂಡನ್ನು ಕೇಂದ್ರ ಸರ್ಕಾರದ ಅಂಗಳಕ್ಕೆ ಹಾಕಿದ್ದಾರೆ.

ಒಂದು ವೇಳೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡರೆ ಏನಾಗುತ್ತದೆ? ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಇದನ್ನು ಯಾರು ಯಾರು ಪಡೆದುಕೊಳ್ಳಬಹುದು? ಇದರ ಅವಧಿ ಎಷ್ಟು ವರ್ಷ ಇರುತ್ತದೆ? ಇದನ್ನು ಹೇಗೆ ಪಡೆದುಕೊಳ್ಳಬಹುದು? ವಿಶೇಷ ಸೌಲಭ್ಯಗಳು, ಮಾನ್ಯತೆಗಳು ಏನು ಎಂಬ ವಿವರವನ್ನು ಇಲ್ಲಿ ನೀಡಲಾಗಿದೆ.

ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್?‌ (diplomatic passport)

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ಟೈಪ್‌ ಡಿ (Type D) ಪಾಸ್‌ ಪೋರ್ಟ್‌ ಎಂದೂ ಕರೆಯುತ್ತಾರೆ. ಭಾರತೀಯ ರಾಜತಾಂತ್ರಿಕರು, ಸರ್ಕಾರಿ ಅಧಿಕಾರಿಗಳು ಹಾಗೂ ಭಾರತ ಸರ್ಕಾರದ ಪರ ಪ್ರತಿನಿಧಿಸುವ ವ್ಯಕ್ತಿಗಳಿಗೆ ಇದನ್ನು ನೀಡಲಾಗುತ್ತದೆ. ಭಾರತ ಸರ್ಕಾರದ ಪರ ಅಧಿಕೃತ ವಿದೇಶ ಪ್ರಯಾಣದ ಸಂದರ್ಭ ಬಳಸುತ್ತಾರೆ.

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ 28 ಪುಟಗಳನ್ನು ಒಳಗೊಂಡಿರುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ ಕಡು ನೀಲಿ ಕವರ್‌ ಅನ್ನು ಹೊಂದಿದ್ದರೆ, ಇದು ಮರೂನ್‌ ಬಣ್ಣದಲ್ಲಿ ಇರುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ ವಯಸ್ಕರಿಗೆ 10 ವರ್ಷ ಹಾಗೂ ಅಪ್ರಾಪ್ತರಿಗೆ 5 ವರ್ಷ ವ್ಯಾಲಿಡಿಟಿಯನ್ನು ಹೊಂದಿರುತ್ತದೆ. ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ 5 ಅಥವಾ ಕಡಿಮೆ ಅವಧಿಗೆ ಬಿಡುಗಡೆಯಾಗುತ್ತದೆ.

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸುವುದು ಹೇಗೆ?

ದಿಲ್ಲಿಯಲ್ಲಿ ವಿದೇಶಾಂಗ ಇಲಾಖೆಯ ಪಾಸ್‌ಪೋರ್ಟ್‌ ಸೇವಾ ಪ್ರೋಗ್ರಾಮ್‌ ವಿಭಾಗದಲ್ಲಿ ಮಾತ್ರ ಡಿಪ್ಲೊಮ್ಯಾಟಿಕ್‌ ಪಾಸ್‌ ಪೋರ್ಟ್‌ ಬಗ್ಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.

ಪ್ರಯೋಜನವೇನು?

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಭಾರತ ಸರ್ಕಾರವನ್ನು ರಾಜತಾಂತ್ರಿಕ ಉದ್ದೇಶಗಳಿಗೆ ವಿದೇಶಗಳಲ್ಲಿ ಪ್ರತಿನಿಧಿಸುವವರಿಗೆ ಅಧಿಕೃತ ಗುರುತಿನ ದೃಢೀಕರಣವಾಗಿ ಬಳಕೆಯಾಗುತ್ತದೆ. ಇದು ಅವರಿಗೆ ಗುರುತು ಮತ್ತು ಅಧಿಕೃತ ಸ್ಥಾನಮಾನವನ್ನು ಒದಗಿಸುತ್ತದೆ.

ಇದನ್ನೂ ಓದಿ: Hassan Pen Drive Case: SIT ತನಿಖೆಗೆ ಸಂತ್ರಸ್ತೆಯರ ಹಿಂದೇಟು; ವಿಚಾರಣೆ ಅಂತ ತೊಂದರೆ ಕೊಟ್ಟರೆ ಸೂಸೈಡ್‌ ಬೆದರಿಕೆ!

ಅರೆಸ್ಟ್‌ ಮಾಡುವುದು ಸಾಧ್ಯವೇ ಇಲ್ಲ

ಈ ಪಾಸ್‌ಪೋರ್ಟ್‌ ಇರುವವರಿಗೆ ಅಂತಾರಾಷ್ಟ್ರೀಯ ಕಾನೂನು ಅಡಿಯಲ್ಲಿ ಕೆಲವು ವಿಶೇಷ ಸೌಲಭ್ಯಗಳು, ಮಾನ್ಯತೆಗಳು ಸಿಗುತ್ತದೆ. ಆತಿಥೇಯ ರಾಷ್ಟ್ರದಲ್ಲಿ ಅರೆಸ್ಟ್‌, ವಶಕ್ಕೆ ತೆಗೆದುಕೊಳ್ಳುವುದು ಸಾಧ್ಯವಾಗುವುದಿಲ್ಲ.

ವೀಸಾ ಸೌಲಭ್ಯ

ಈ ಪಾಸ್‌ಪೋರ್ಟ್‌ ಇರುವವರಿಗೆ ಹಲವು ದೇಶಗಳು ವೀಸಾ ವಿಸ್ತರಿಸುತ್ತವೆ. ವೀಸಾ ಮನ್ನಾ ಸೌಲಭ್ಯವೂ ಸಿಗಬಹುದು. ಅಧಿಕೃತ ಪ್ರವಾಸ ಕಾರ್ಯಕ್ರಮಗಳು ಸುಗಮವಾಗುತ್ತದೆ. ಭಾರತೀಯ ರಾಯಭಾರ ಕಚೇರಿಯ ಸಂಪರ್ಕ ಸೌಲಭ್ಯಗಳು ಸಿಗುತ್ತವೆ.

ಪ್ರಜ್ವಲ್‌ಗೆ ಮತ್ತಷ್ಟು ಸಂಕಷ್ಟ ಶುರು

ಪ್ರಜ್ವಲ್‌ ರೇವಣ್ಣ ವಿಚಾರದಲ್ಲಿ ಪ್ರಕರಣವು ರಾಜಕೀಯವಾಗಿ ಭಾರಿ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತೊಂದು ದಾಳ ಉರುಳಿಸಿದ್ದಾರೆ. ಪ್ರಜ್ವಲ್‌ ವಿದೇಶದಲ್ಲಿ ಇರುವುದರಿಂದ ಅವರನ್ನು ಬಂಧಿಸಿ ಎಸ್ಐಟಿ ತನಿಖೆಗೆ ಒಪ್ಪಿಸಬೇಕಿದೆ. ಹೀಗಾಗಿ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ಕೇಂದ್ರ ರದ್ದು ಮಾಡಬೇಕು ಎಂದು ಕೋರುವ ಮೂಲಕ ಹೊಸ ದಾಳ ಉರುಳಿಸಿದ್ದಾರೆ. ಈಗ ಕೇಂದ್ರ ಸರ್ಕಾರ ಮುಂದಿನ ಕ್ರಮವನ್ನು ಕೈಗೊಳ್ಳದೇ ಇದ್ದಲ್ಲಿ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಅಸ್ತ್ರವನ್ನಾಗಿ ಮಾಡಿಕೊಳ್ಳಲು ತೀರ್ಮಾನಿಸಿದೆ. ಹೀಗಾಗಿ ಕಾಂಗ್ರೆಸ್‌ಗೆ ಅಸ್ತ್ರ ಕೊಡದಿರಲು ಕೇಂದ್ರ ಸರ್ಕಾರವು ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡುವ ಸಂಭವ ಜಾಸ್ತಿ ಇದೆ ಎನ್ನಲಾಗಿದೆ.

ಇದನ್ನೂ ಓದಿ: Hassan Pen Drive Case: ವಿಚಾರಣೆಗೆ ಹಾಜರಾಗಲು 7 ದಿನ ಸಮಯ ಕೇಳಿದ ಪ್ರಜ್ವಲ್‌; ಶೀಘ್ರ ಸತ್ಯ ಹೊರಬರಲಿದೆ ಎಂದು ಟ್ವೀಟ್‌!

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದಾದರೆ ಕೂಡಲೇ ಬಂಧನ!

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ಗೆ ಅಂತಾರಾಷ್ಟ್ರೀಯ ಕಾನೂನಿನ ಮಾನ್ಯತೆ ಇರುತ್ತದೆ. ಇದನ್ನು ಹೊಂದಿರುವವರು ಗಣ್ಯ ವ್ಯಕ್ತಿಗಳಾಗಿರುತ್ತಾರೆ. ಹೀಗಾಗಿ ಅವರು ಯಾವ ದೇಶದಲ್ಲಿದ್ದರೂ ಆತಿಥೇಯ ರಾಷ್ಟ್ರಗಳಲ್ಲಿ ಬಂಧನ ಮಾಡುವುದು, ವಶಕ್ಕೆ ತೆಗೆದುಕೊಳ್ಳುವಂತಹ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ಒಂದು ವೇಳೆ ಕೇಂದ್ರ ಸರ್ಕಾರವು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮೂಲಕ ಅಂತಹ ವ್ಯಕ್ತಿಯ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಿ, ಕ್ರಮಕ್ಕೆ ಆ ರಾಷ್ಟ್ರಗಳಿಗೆ ಮನವಿ ಮಾಡಿದಲ್ಲಿ ಬಂಧನ ಸಾಧ್ಯವಿದೆ. ಹೀಗಾಗಿ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಪ್ರಜ್ವಲ್‌ ಭವಿಷ್ಯ ನಿಂತಿದೆ.

Continue Reading
Advertisement
BJP State Spokesperson Hariprakash konemane and leaders Election Campaign for BJP Candidate Vishweshwar Hegde Kageri in Yallapura
ಉತ್ತರ ಕನ್ನಡ8 mins ago

Lok Sabha Election 2024: ಹಿಂದಿನ ಚುನಾವಣೆಗಳಿಗಿಂತ ಈ ಬಾರಿ ಬಿಜೆಪಿಗೆ ಅಧಿಕ ಬಹುಮತ ನಿಶ್ಚಿತ: ಹರಿಪ್ರಕಾಶ್‌ ಕೋಣೆಮನೆ

MLA G Janardan Reddy latest statement in Gangavathi
ಕರ್ನಾಟಕ10 mins ago

Lok Sabha Election 2024: ಕಳೆದ ಚುನಾವಣೆಯಲ್ಲಿ ನನ್ನ ಜತೆ ಸ್ವತಃ ಸಿದ್ದರಾಮಯ್ಯ ಒಳ ಒಪ್ಪಂದ ಮಾಡಿಕೊಂಡಿದ್ದರು: ರೆಡ್ಡಿ ಸ್ಫೋಟಕ ಹೇಳಿಕೆ

Prajwal Revanna Case
ಕರ್ನಾಟಕ18 mins ago

Prajwal Revanna Case: ಸಿಂಗಾಪುರ ಮಾಧ್ಯಮಗಳಲ್ಲೂ ಪ್ರಜ್ವಲ್‌ ರೇವಣ್ಣ ಕೇಸ್‌ ಸದ್ದು!

Prajwal Revanna Case BJP will not be with those who do injustice to women says Amit Shah
ರಾಜಕೀಯ25 mins ago

Prajwal Revanna Case: ಮಹಿಳೆಗೆ ಅನ್ಯಾಯ ಮಾಡಿದ್ರೆ ಅಂಥವರ ಜತೆ ಬಿಜೆಪಿ ಇರಲ್ಲ; ಪ್ರಜ್ವಲ್‌ನನ್ನು ಬಿಟ್ಟಿದ್ದು ಕಾಂಗ್ರೆಸ್‌ ತಪ್ಪು ಎಂದ ಶಾ

Adhir Ranjan
ದೇಶ31 mins ago

Adhir Ranjan: ಟಿಎಂಸಿ ಬದಲು ಬಿಜೆಪಿಗೆ ಮತ ಹಾಕೋದೇ ಬೆಸ್ಟ್‌ ಎಂದ ಕಾಂಗ್ರೆಸ್‌ ನಾಯಕ!

Viral Video
ಕ್ರಿಕೆಟ್33 mins ago

Viral Video: ಕಾಲಿನ ಗಾಯವನ್ನು ಲೆಕ್ಕಿಸದೆ ರೋಲರ್ ಓಡಿಸಿ ಪಿಚ್​ ಸಿದ್ಧಪಡಿಸಿದ ಮೊಹಮ್ಮದ್​ ಶಮಿ

Prajwal Revanna Case Prajwal Congress supported MP Says Ashok
ಕ್ರೈಂ1 hour ago

‌Prajwal Revanna Case: ಪ್ರಜ್ವಲ್ ಕಾಂಗ್ರೆಸ್‌ ಬೆಂಬಲಿತ ಸಂಸದ; ಅಶೋಕ್ ಉಲ್ಟಾ ಹೊಡೆದಿದ್ದೇಕೆ?

shyam rangeela
ದೇಶ1 hour ago

Shyam Rangeela: ಮೋದಿಯನ್ನು ಮಿಮಿಕ್ರಿ ಮಾಡಿ ಖ್ಯಾತಿಯಾದ ಕಲಾವಿದ ಈಗ ಪ್ರಧಾನಿ ವಿರುದ್ಧವೇ ಕಣಕ್ಕೆ!

Prajwal Revanna Case
ಪ್ರಮುಖ ಸುದ್ದಿ1 hour ago

Prajwal Revanna Case: ಪ್ರಜ್ವಲ್ ಗಂಡಾಂತರ; ಜ್ಯೋತಿಷಿ ಮೊರೆ ಹೋದ ದೇವೇಗೌಡ, ರೇವಣ್ಣ!

Chaitra Achar
ಫ್ಯಾಷನ್2 hours ago

Chaitra Achar: ನೋಡುಗರ ಹುಬ್ಬೇರಿಸಿದ ನಟಿ ಚೈತ್ರಾ ಆಚಾರ್‌ ಪಾರದರ್ಶಕ ನಿಟ್‌ವೇರ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌