ಭೋಪಾಲ್: ಮಧ್ಯಪ್ರದೇಶದ (Madhya Pradesh)ಖಾರ್ಗೋನ್ನಲ್ಲಿ ಬಸ್ವೊಂದು 50 ಅಡಿ ಎತ್ತರದ ಸೇತುವೆ ಕೆಳಗೆ ಉರುಳಿ (Bus Accident), ಅದರಲ್ಲಿದ್ದ 14 ಪ್ರಯಾಣಿಕರು ಮೃತಪಟ್ಟಿದ್ದರೆ. 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಬಸ್ ಇಂದೋರ್ಗೆ ತೆರಳುತ್ತಿತ್ತು. ಸುಮಾರು 70-80 ಪ್ರಯಾಣಿಕರು ಅದರಲ್ಲಿ ಇದ್ದರು ಎನ್ನಲಾಗಿದೆ. ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ, ಬಸ್ ಆಯತಪ್ಪಿ ಉರುಳಿ ಬೀಳುತ್ತಿದ್ದಂತೆ ಸ್ಥಳೀಯರು ಅಲ್ಲಿಗೆ ದೌಡಾಯಿಸಿದ್ದಾರೆ. ಅನೇಕರನ್ನು ರಕ್ಷಿಸಿದ್ದಾರೆ. ಅಷ್ಟರಲ್ಲಿ ಪೊಲೀಸರು ಕೂಡ ಅಲ್ಲಿಗೆ ಧಾವಿಸಿದ್ದರು. ಗಾಯಾಳುಗಳನ್ನೆಲ್ಲ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾಧಿಕಾರಿ ಶಿವರಾಜ್ ಸಿಂಗ್ ವರ್ಮಾ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉತ್ತರ ಪ್ರದೇಶದಲ್ಲಿ 10 ಮಂದಿ ಸಾವು
ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯ ದಳಪುತ್ಪುರ-ಕಾಶಿಪುರ ಹೈವೇನಲ್ಲಿ ಪಿಕಪ್ ವಾಹನಕ್ಕೆ ಟ್ರಕ್ವೊಂದು ಡಿಕ್ಕಿ ಹೊಡೆದು 10 ಮಂದಿ ಮೃತಪಟ್ಟಿದ್ದಾರೆ. ಈ ಘಟನೆ ಸೋಮವಾರ ನಡೆದಿದೆ. 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರೆಲ್ಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪಿಕ್ಅಪ್ ವಾಹನದಲ್ಲಿ ಒಂದೇ ಕುಟುಂಬದವರು, ಬಂಧು-ಬಳಗದವರೇ ಇದ್ದರು. ಇವರೆಲ್ಲ ಒಂದು ಮದುವೆ ಸಮಾರಂಭಕ್ಕೆ ಹೋಗುತ್ತಿದ್ದರು. ಟ್ರಕ್ ಡಿಕ್ಕಿಯಾಗಿದ್ದಷ್ಟೇ ಅಲ್ಲದೆ, ಆ ಪಿಕ್ಅಪ್ ವಾಹನದ ಮೇಲೆ ಉರುಳಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಇದನ್ನೂ ಓದಿ: Road Accident : ತುಮಕೂರು ಬಳಿ ರಸ್ತೆ ಅಪಘಾತ; ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ದುರ್ಮರಣ