Site icon Vistara News

ಆಂಧ್ರ ಸರ್ಕಾರದಲ್ಲಿ ಭಾರಿ ಬದಲಾವಣೆ: ಕುತೂಹಲ ಮೂಡಿಸಿದ ಜಗನ್ ʻ24ʼರ ತಂತ್ರ..!‌

Jagan Mohan Reddy

ಅಮರಾವತಿ: ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್​.ಜಗನ್​ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ಸಚಿವ ಸಂಪುಟ ಪುನಾರಚನೆಗೆ ಮುಂದಾಗಿದ್ದು, ಎಲ್ಲಾ 24 ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಸಚಿವ ಸಂಪುಟ ಸಭೆ ಬಳಿಕ ಸರ್ಕಾರದ ಎಲ್ಲಾ ಮಂತ್ರಿಗಳು ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಜಗನ್ ಅವರಿಗೆ ಸಲ್ಲಿಸಿದ್ದಾರೆ. ಆಂಧ್ರ ಸಿಎಂ ಜಗನ್ ಸಚಿವರ ರಾಜೀನಾಮೆ ಪತ್ರಗಳನ್ನು ರಾಜ್ಯಪಾಲ ಬಿಸ್ವಾಭೂಷಣ ಹರಿಶ್ಚಂದ್ರನ್‌ ಅವರಿಗೆ ರವಾನೆ ಮಾಡುವ ಸಾಧ್ಯತೆ ಇದೆ.

ಹೊಸದಾಗಿ ಸಂಪುಟ ಪುನರಾಚನೆ ಮಾಡುವ ಉದ್ದೇಶದಿಂದ ಎಲ್ಲಾ ಸಚಿವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಏಪ್ರಿಲ್​ 11ರಂದು ನೂತನ ಸಚಿವರು ಜಗನ್ ನೇತೃತ್ವದ ಸಂಪುಟ ಸೇರ್ಪಡೆಗೊಳ್ಳಲಿದ್ದಾರೆ. ಮೂಲಗಳ ಪ್ರಕಾರ ಪ್ರಸ್ತುತ ಜಗನ್​ ಸಂಪುಟದಲ್ಲಿರುವ ನಾಲ್ವರು ಮಾತ್ರ ಮರಳಿ ಮಂತ್ರಿಸ್ಥಾನ ಪಡೆದುಕೊಳ್ಳಲಿದ್ದಾರೆ. ಉಳಿದಂತೆ ಎಲ್ಲ ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆಯಿದೆ.

2024ರಲ್ಲಿ ಆಂಧ್ರಪ್ರದೇಶ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಅದನ್ನ ಗಮನದಲ್ಲಿಟ್ಟುಕೊಂಡು ಸಿಎಂ ಜಗನ್‌ ಮೋಹನ್‌ ರೆಡ್ಡಿ ಸಂಪುಟ ಪುನಾರಚನೆಗೆ ಮುಂದಾಗಿದ್ದಾರೆ.

2019ರಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಜಗನ್ ಇದೀಗ ಎರಡೂವರೆ ವರ್ಷಗಳ ಬಳಿಕ ಸಂಪುಟ ಪುನಾರಚನೆಗೆ ಮುಂದಡಿ ಇಟ್ಟಿದ್ದಾರೆ. ಸಚಿವ ಸಂಪುಟ ಪುನಾರಚನೆ ವೇಳೆ ಜಾತಿ ಲೆಕ್ಕಾಚಾರ ಪ್ರಾಮುಖ್ಯತೆ ಪಡೆದುಕೊಳ್ಳುವ ಸಾಧ್ಯತೆಯಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಕಳೆದ ವರ್ಷವೇ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸಚಿವ ಸಂಪುಟ ಪುನಾರಚನೆ ಆಗಬೇಕಾಗಿತ್ತು. ಆದರೆ, ಕೋವಿಡ್-19 ಕಾರಣದಿಂದಾಗಿ ಸಚಿವ ಸಂಪುಟ ಪುನಾರಚನೆಯನ್ನು ಮುಂದೂಡಲಾಗಿತ್ತು.

Exit mobile version