ಶ್ರೀನಗರ: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯ ರಾಮಮಂದಿರದ ಬಳಿ ಉಗ್ರರು ದಾಳಿ (Terror Attack In Kashmir) ನಡೆಸಿದ್ದು, ಮೂವರು ನಾಗರಿಕರು ಮೃತಪಟ್ಟಿದ್ದಾರೆ. ಹಾಗೆಯೇ, ದಾಳಿಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ.
ರಾಜೌರಿ ಜಿಲ್ಲೆ ಧಾಂಗ್ರಿ ಗ್ರಾಮದಲ್ಲಿರುವ (Dhangri Village) ರಾಮಮಂದಿರದ ಬಳಿ ಬಂದ ಅಪರಿಚಿತರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಹಾಗಾಗಿ, ಇದು ಉಗ್ರರ ಕೃತ್ಯವೇ ಇರಬಹುದು ಎಂದು ಶಂಕಿಸಲಾಗಿದೆ.
ಕೂಡಲೇ ಸ್ಥಳಕ್ಕೆ ಭದ್ರತಾ ಸಿಬ್ಬಂದಿಯು ಸ್ಥಳಕ್ಕೆ ಧಾವಿಸಿದ್ದು, ದಾಳಿ ನಡೆದ ಪ್ರದೇಶದ ಸುತ್ತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಗರಿಕರನ್ನು ಗುರಿಯಾಗಿಸಿಯೇ ದಾಳಿ ನಡೆಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
ಇದನ್ನೂ ಓದಿ | Terrorists Attack In JK | ಕಾಶ್ಮೀರದಲ್ಲಿ ಕಾರ್ಮಿಕರನ್ನು ಗುರಿಯಾಗಿಸಿ ಉಗ್ರರ ದಾಳಿ, ಇಬ್ಬರಿಗೆ ಗಾಯ