ಶ್ರೀನಗರ: ಜಮ್ಮು ಕಾಶ್ಮೀರದ ಕುಪ್ವಾರಾದಲ್ಲಿ ಲಷ್ಕರೆ ತಯ್ಬಾ ಉಗ್ರರನ್ನು ಪೊಲೀಸರು ಎನ್‌ಕೌಂಟರ್‌ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಕಾಶ್ಮೀರ ವಲಯದ ಪೊಲೀಸರು ಟ್ವೀಟ್ ಮೂಲಕ ಈ ವಿಷಯ ತಿಳಿಸಿದ್ದಾರೆ.
ಕುಪ್ವಾರಾ ಜಿಲ್ಲೆಯ ಚಾಕ್ತರಾಸ್ ಕಾಂಡಿ ಎಂಬಲ್ಲಿ ಪೊಲೀಸರು ಮತ್ತು ಉಗ್ರರ ನಡುವೆ ಮಂಗಳವಾರ ಬೆಳಗಿನ ಜಾವ ಗುಂಡಿನ ಕಾಳಗ ನಡೆಯಿತು. ಸತ್ತಿರುವ ಭಯೋತ್ಪಾದಕರಲ್ಲಿ ಒಬ್ಬ ಪಾಕಿಸ್ತಾನ ಮೂಲದ ತುಫೈಲ್ ಎಂದು ಗುರುತಿಸಲಾಗಿದೆ.
ಬಾರಾಮುಲ್ಲಾ ಜಿಲ್ಲೆಯಲ್ಲಿ ಕೆಲ ದಿನಗಳ ಹಿಂದೆ ಲಷ್ಕರೆ ಉಗ್ರನೊಬ್ಬ ಹತನಾದ ಬೆನ್ನಲ್ಲೇ ಮತ್ತಿಬ್ಬರು ಹತ್ಯೆಯಾದಂತಾಗಿದೆ. ಕಳೆದ ಕೆಲ ವಾರಗಳಿಂದ ಕಾಶ್ಮೀರ ಕಣಿವೆಯಲ್ಲಿ ಉಗ್ರರ ದಾಳಿ ಹೆಚ್ಚುತ್ತಿದೆ. ಜತೆಗೆ ಪೊಲೀಸ್ ಎನ್‌ಕೌಂಟರ್ ಮುಂದುವರಿದಿದ್ದು, ಉಗ್ರರ ಸಂಹಾರ ನಡೆಯುತ್ತಿದೆ.
ಇದನ್ನೂ ಓದಿ:ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ, ಬ್ಯಾಂಕ್ ಮ್ಯಾನೇಜರ್ ಬರ್ಬರ ಹತ್ಯೆ