Site icon Vistara News

ಮಧ್ಯಪ್ರದೇಶದಲ್ಲಿ ಮತ್ತೊಂದು ‘ಹೊಲಸು’ ಕೃತ್ಯ; ಇಬ್ಬರು ದಲಿತರಿಗೆ ಮಲ ತಿನ್ನುವಂತೆ ಒತ್ತಾಯಿಸಿದ ಮುಸ್ಲಿಮರು

2 Dalit Men Forced to Eat human excreta

2 Youths Forced to Eat Human Excreta in Madhya Pradesh, 7 Arrested

ಭೋಪಾಲ್‌: ಮಧ್ಯಪ್ರದೇಶದಲ್ಲಿ ದಿನೇದಿನೆ ಹೀನ ಕೃತ್ಯಗಳು ಹೆಚ್ಚಾಗುತ್ತಿವೆ. ಕೆಲವು ದಿನಗಳ ಹಿಂದಷ್ಟೇ ಆದಿವಾಸಿ ಕಾರ್ಮಿಕರೊಬ್ಬರ ಮೇಲೆ ಪ್ರವೇಶ್‌ ಶುಕ್ಲಾ ಎಂಬ ದುರುಳನು ಮೂತ್ರ ವಿಸರ್ಜನೆ ಮಾಡಿದ ಪ್ರಕರಣ ದೇಶಾದ್ಯಂತ ಸುದ್ದಿಯಾದ ಬೆನ್ನಲ್ಲೇ ಇಂತಹದ್ದೇ ಕೃತ್ಯವೊಂದು ಬೆಳಕಿಗೆ ಬಂದಿದೆ. ಶಿವಪುರ ಜಿಲ್ಲೆಯಲ್ಲಿ ಇಬ್ಬರು ದಲಿತರಿಗೆ ಒಂದಷ್ಟು ಜನ ಮನುಷ್ಯರ ಮಲ ತಿನ್ನುವಂತೆ ಒಂದಷ್ಟು ಮುಸ್ಲಿಮರು ಒತ್ತಾಯ ಮಾಡಿದ ಪ್ರಕರಣ ತಡವಾಗಿ ಸುದ್ದಿಯಾಗಿದೆ.

ಹೌದು, ಶಿವಪುರ ಜಿಲ್ಲೆಯ ವರ್ಖಡಿ ಎಂಬ ಗ್ರಾಮದಲ್ಲಿ ಇಬ್ಬರು ದಲಿತರು ಮುಸ್ಲಿಂ ಸಮುದಾಯದ ಯುವತಿಯರ ಜತೆ ಮಾತನಾಡಿದರು ಎಂಬ ಕಾರಣಕ್ಕಾಗಿ ಮುಸ್ಲಿಂ ಸಮುದಾಯದ ಗುಂಪೊಂದು ಇಬ್ಬರು ದಲಿತರ ಮೇಲೆ ದಾಳಿ ಮಾಡಿದೆ. ಅವರ ಮೇಲೆ ಹಲ್ಲೆ ನಡೆಸುವ ಜತೆಗೆ ಮಲ ತಿನ್ನುವಂತೆ ಒತ್ತಾಯ ಮಾಡಿದ್ದಾರೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ವೈರಲ್‌ ವಿಡಿಯೊ ಇಲ್ಲಿದೆ

7 ಮುಸ್ಲಿಮರ ಬಂಧನ, ಮನೆಗಳು ನೆಲಸಮ

ದಲಿತರಿಗೆ ಮಲ ತಿನ್ನುವಂತೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಅಜ್ಮತ್‌ ಖಾನ್‌, ಆರಿಫ್‌ ಖಾನ್‌, ಶಾಹಿದ್‌ ಖಾನ್‌, ಇಸ್ಲಾಮ್‌ ಖಾನ್‌, ರಯೀಸಾ ಬಾನಿ, ಸೈನಾ ಬಾನೊ ಸೇರಿ ಏಳು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಹೀನ ಕೃತ್ಯ ಎಸಗಿದ ಅವರ ಮನೆಗಳನ್ನು ಧ್ವಂಸಗೊಳಿಸಲಾಗಿದೆ. ಅಲ್ಲದೆ, ಪ್ರಕರಣವನ್ನು ತನಿಖೆಗೆ ಆದೇಶಿಸಿರುವ ರಾಜ್ಯ ಗೃಹ ಸಚಿವ ನರೋತ್ತಮ್‌ ಮಿಶ್ರಾ ಅವರು, ಆರೋಪಿಗಳ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಅಡಿಯಲ್ಲಿ ಪ್ರಕರಣ ದಾಖಲಿಸಿ ಎಂದು ಆದೇಶಿಸಿದ್ದಾರೆ.

ಇದನ್ನೂ ಓದಿ: MP Urinating Case: ಮೂತ್ರ ವಿಸರ್ಜನೆ ಕೇಸ್;‌ ಆದಿವಾಸಿ ವ್ಯಕ್ತಿಯ ಕಾಲು ತೊಳೆದ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್;‌ ವಿಡಿಯೊ ವೈರಲ್

ಪ್ರಕರಣವು ಜೂನ್‌ 30ರಂದು ನಡೆದಿದೆ ಎಂದು ತಿಳಿದುಬಂದಿದೆ. ಘಟನೆಯು ತಡವಾಗಿ ಬೆಳಕಿಗೆ ಬಂದರೂ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಕೆಲ ದಿನಗಳ ಹಿಂದಷ್ಟೇ ಪ್ರವೇಶ್‌ ಶುಕ್ಲಾ ಎಂಬಾತ ಆದಿವಾಸಿ ಕಾರ್ಮಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆತನ ವಿರುದ್ಧವೂ ಎನ್‌ಎಸ್‌ಎ ಅಡಿ ಪ್ರಕರಣ ದಾಖಲಿಸುವಂತೆ ಸೂಚಿಸಿದ್ದರು. ಅಲ್ಲದೆ, ಅಕ್ರಮವಾಗಿ ನಿರ್ಮಿಸಿದ್ದ ಆತನ ಮನೆಯನ್ನೂ ಧ್ವಂಸಗೊಳಿಸಲಾಗಿದೆ.

Exit mobile version