Site icon Vistara News

Farmers Protest: ಹರಿಯಾಣ ಪೊಲೀಸರ ಏಟಿಗೆ ಪ್ರತಿಭಟನಾನಿರತ ಯುವ ರೈತ ಸಾವು

24 year old farmer died in Farmers Protest Says Reports

ನವದೆಹಲಿ: ಹರಿಯಾಣದ (Haryana Police) ಖನೌರಿ ಗಡಿಯಲ್ಲಿ (Khanauri border) ರೈತರು ಮತ್ತು ಪೊಲೀಸರ ನಡುವಿನ ಸಂಘರ್ಷದಲ್ಲಿ 24 ವರ್ಷದ ಪ್ರತಿಭಟನಾನಿರತ ರೈತ ಮೃತಪಟ್ಟಿದ್ದಾನೆ (Young Farmer Died) ಎಂದು ವರದಿಯಾಗಿದೆ. ಮೃತ ರೈತನನ್ನು ಶುಭ ಕರಣ್ ಸಿಂಗ್ ಎಂದು ಗುರುತಿಸಲಾಗಿದೆ. ಸಂಘರ್ಷದಲ್ಲಿ ಗಾಯಗೊಂಡಿದ್ದ ಶುಭ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದರು ಎಂದು ಮೂಲಗಳು ತಿಳಿಸಿವೆ. ಇದರೊಂದಿಗೆ ರೈತರ ಪ್ರತಿಭಟನೆಯಲ್ಲಿ ಮೊದಲ ಬಲಿಯಾದಂತಾಗಿದೆ(Farmers Protest).

ಪ್ರತಿಭಟನಾಕಾರರ ಸಾವಿನ ಬಗ್ಗೆ ಆಸ್ಪತ್ರೆಯಿಂದ ದೃಢೀಕರಿಸುವ ಮೊದಲು, ಹರ್ಯಾಣ ಪೊಲೀಸರು ಬುಧವಾರ ಮಧ್ಯಾಹ್ನ ಶಂಭು ಗಡಿಯಲ್ಲಿ ನಡೆದ ಘರ್ಷಣೆಯಲ್ಲಿ ಯಾವುದೇ ರೈತ ಮೃತಪಟ್ಟಿಲ್ಲ ಎಂದು ಹೇಳಿದ್ದರು. ಈ ಮಧ್ಯೆ, ಕೇಂದ್ರದ ವಿರುದ್ಧ ರೈತರು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ. ರೈತ ಸಾವು ಎಂಬುದು ಇದು ಕೇವಲ ವದಂತಿಯಾಗಿದೆ. ದಾತಾ ಸಿಂಗ್-ಖನೌರಿ ಗಡಿಯಲ್ಲಿ ಇಬ್ಬರು ಪೊಲೀಸರು ಮತ್ತು ಒಬ್ಬ ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ ಮತ್ತು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹರಿಯಾಣ ಪೊಲೀಸರು ಹೇಳಿದ್ದಾರೆ.

ಕೇಂದ್ರ ನಾಯಕರೊಂದಿಗೆ ಹಲವು ಸುತ್ತಿನ ಮಾತುಕತೆಗಳು ಯಾವುದೇ ಪ್ರಗತಿಯನ್ನು ತಲುಪದ ನಂತರ ಹರಿಯಾಣ ಪೊಲೀಸರು ಹಾಕಿದ್ದ ತಡೆಗೋಡೆಗಳನ್ನು ಒಡೆಯಲು ರೈತರು ನಿರ್ಧರಿಸಿದ್ದರಿಂದ ಬುಧವಾರ ಖಾನೌರಿ ಗಡಿ ಮತ್ತು ಶಂಭು ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿತು. ಪ್ರತಿಭಟನಾಕಾರರನ್ನು ತಡೆಯಲು ಹರಿಯಾಣ ಪೊಲೀಸರು ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಶೆಲ್‌ಗಳನ್ನು ಎಸೆದರು.

14 ಸಾವಿರ ರೈತರು, 12 ಸಾವಿರ ಟ್ರ್ಯಾಕ್ಟರ್;‌ ಇಂದಿನಿಂದ ಮತ್ತೆ ಪ್ರತಿಭಟನೆ

ಕನಿಷ್ಠ ಬೆಂಬಲ ಬೆಲೆಯ ಕಾನೂನು ಜಾರಿ (MSP Law) ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೆಹಲಿ ಗಡಿಯಲ್ಲಿ ಬುಧವಾರದಿಂದ (ಫೆಬ್ರವರಿ 21) ಸಾವಿರಾರು ರೈತರು ಪ್ರತಿಭಟನೆ ಆರಂಭಿಸಲಿದ್ದಾರೆ. ಬುಧವಾರ ಬೆಳಗ್ಗೆ 11 ಗಂಟೆಯಿಂದ ಪ್ರತಿಭಟನೆ ಆರಂಭವಾಗಲಿದ್ದು, ದೆಹಲಿ, ಪಂಜಾಬ್‌ ಹಾಗೂ ಹರಿಯಾಣ ಗಡಿಯಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ. ಬೆಳೆಗಳಿಗೆ ಐದು ವರ್ಷದವರೆಗೆ ಕನಿಷ್ಠ ಬೆಂಬಲ ಬೆಲೆಯ ಖಾತರಿ ನೀಡಲು ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ತಿರಸ್ಕರಿಸಿರುವ ರೈತರು ಮತ್ತೆ ಪ್ರತಿಭಟನೆ ಶುರು ಮಾಡಲಿದ್ದಾರೆ.

ದೆಹಲಿ ಗಡಿಯಲ್ಲಿ ಸುಮಾರು 12 ಸಾವಿರ ಟ್ರ್ಯಾಕ್ಟರ್‌ಗಳು ನಿಂತಿವೆ. ಸುಮಾರು 14 ಸಾವಿರ ರೈತರು ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಇನ್ನೂ ಸಾವಿರಾರು ರೈತರು ಜಮೆಯಾಗಲಿದ್ದಾರೆ ಎಂದು ತಿಳಿದುಬಂದಿದೆ. 300 ಕಾರುಗಳು, 2 ಮಿನಿ ಬಸ್‌ಗಳು, ಜೆಸಿಬಿ ಸೇರಿ ಹಲವು ವಾಹನಗಳನ್ನು ತೆಗೆದುಕೊಂಡು ಬಂದಿರುವ ರೈತರು ಪ್ರತಿಭಟನೆಗೆ ಸಕಲ ರೀತಿಯ ಸಿದ್ಧತೆ ಕೈಗೊಂಡಿದ್ದಾರೆ. ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಅಂಬಾಲ ಸೇರಿ ಹಲವು ಗಡಿಗಳಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿದೆ. ಯಾವುದೇ ರೀತಿಯ ಹಿಂಸಾಚಾರಕ್ಕೆ ಆಸ್ಪದ ನೀಡದಿರಲು ಕ್ರಮ ತೆಗೆದುಕೊಂಡಿದ್ದಾರೆ.

ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಸಚಿವ ಅರ್ಜುನ್‌ ಮುಂಡಾ, ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಷ್‌ ಗೋಯಲ್‌ ಹಾಗೂ ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ನಿತ್ಯಾನಂದ ರೈ ಅವರ ನೇತೃತ್ವದಲ್ಲಿ ಕಳೆದ ಭಾನುವಾರ (ಫೆಬ್ರವರಿ 18) ಚಂಡೀಗಢದಲ್ಲಿ ರೈತ ಮುಖಂಡರೊಂದಿಗೆ ನಾಲ್ಕನೇ ಸುತ್ತಿನ ಮಾತುಕತೆ ನಡೆದಿತ್ತು. ಎಂಎಸ್‌ಪಿ ಕಾನೂನು ಸೇರಿ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ರೈತರು ಆಗ್ರಹಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಎಂಎಸ್‌ಪಿ ಕುರಿತು ಹೊಸ ಯೋಜನೆ ರೂಪಿಸಿದೆ. ಆದರೆ, ಈ ಪ್ರಸ್ತಾಪವನ್ನು ರೈತರು ತಿರಸ್ಕರಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Farmers Protest: ರೈತರ ಪ್ರತಿಭಟನೆ ಹಿನ್ನೆಲೆ; ಫೆ. 24ರವರೆಗೆ ಇಂಟರ್‌ನೆಟ್‌ ಸೇವೆ ಸ್ಥಗಿತ

Exit mobile version