Madhya Pradesh: ಮಧ್ಯಪ್ರದೇಶದಲ್ಲಿ 28 ಶಾಸಕರಿಗೆ ಮಂತ್ರಿಗಿರಿ; ಒಬಿಸಿಯವರಿಗೆಷ್ಟು ಖಾತೆ? - Vistara News

ದೇಶ

Madhya Pradesh: ಮಧ್ಯಪ್ರದೇಶದಲ್ಲಿ 28 ಶಾಸಕರಿಗೆ ಮಂತ್ರಿಗಿರಿ; ಒಬಿಸಿಯವರಿಗೆಷ್ಟು ಖಾತೆ?

Madhya Pradesh: ಮಧ್ಯಪ್ರದೇಶ ಸಚಿವ ಸಂಪುಟದಲ್ಲಿ ಒಬಿಸಿ ಜತೆಗೆ ಮಹಿಳೆಯರಿಗೂ ಆದ್ಯತೆ ನೀಡಲಾಗಿದೆ. ನೂತನ ಸಚಿವರಿಗೆ ಮುಖ್ಯಮಂತ್ರಿ ಮೋಹನ್‌ ಯಾದವ್‌ ಅವರು ಅಭಿನಂದನೆ ಸಲ್ಲಿಸಿದ್ದಾರೆ.

VISTARANEWS.COM


on

Madhya Pradesh Cabinet Expansion
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭೋಪಾಲ್‌: ಮಧ್ಯಪ್ರದೇಶ (Madhya Pradesh) ಮುಖ್ಯಮಂತ್ರಿಯಾಗಿ ಮೋಹನ್‌ ಯಾದವ್‌ (Mohan Yadav) ಅವರು ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಸಚಿವ ಸಂಪುಟ ರಚನೆ ಮಾಡಿದ್ದಾರೆ. ಮೋಹನ್‌ ಯಾದವ್‌ ಕ್ಯಾಬಿನೆಟ್‌ಗೆ 28 ಶಾಸಕರು ಸೇರ್ಪಡೆಯಾಗಿದ್ದು, ಭೋಪಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಮಂಗುಭಾ ಸಿ ಪಟೇಲ್‌ (Mangubha C Patel) ಅವರು ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಿದರು. ಎಲ್ಲ ಸಮುದಾಯದವರನ್ನು ಒಳಗೊಂಡ ನೂತನ ಸಚಿವ ಸಂಪುಟ ರಚನೆಯಾಗಿದ್ದು, ನಿರೀಕ್ಷೆ ಹೆಚ್ಚಾಗಿದೆ.

ಕೇಂದ್ರದ ಮಾಜಿ ಸಚಿವ ಪ್ರಹ್ಲಾದ್‌ ಪಟೇಲ್‌, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್‌ ವಿಜಯವರ್ಗೀಯ ಸೇರಿ 28 ಶಾಸಕರು ಪ್ರಮಾಣವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕರಿಸಿದ 28 ಸಚಿವರಲ್ಲಿ 18 ಶಾಸಕರಿಗೆ ಸಂಪುಟ ದರ್ಜೆ ಹಾಗೂ 10 ಶಾಸಕರಿಗೆ ಸ್ವತಂತ್ರ ನಿರ್ವಹಣೆಯ ಹೊಣೆಯನ್ನು ನೀಡಲಾಗಿದೆ. “ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಎಲ್ಲರಿಗೂ ಅಭಿನಂದನೆಗಳು. ಎಲ್ಲರ ಸಹಕಾರ, ಬದ್ಧತೆಯಿಂದ ರಾಜ್ಯವನ್ನು ಅಭಿವೃದ್ಧಿಗೊಳಿಸುವುದೇ ಗುರಿಯಾಗಿದೆ” ಎಂದು ಪ್ರಮಾಣವಚನ ಕಾರ್ಯಕ್ರಮದ ಬಳಿಕ ಮುಖ್ಯಮಂತ್ರಿ ಮೋಹನ್‌ ಯಾದವ್‌ ತಿಳಿಸಿದರು.

ಪ್ರಮಾಣವಚನ ಸ್ವೀಕರಿಸಿದ 28 ಶಾಸಕರಲ್ಲಿ 9 ಮಂದಿ ಸಾಮಾನ್ಯ ವರ್ಗಕ್ಕೆ ಸೇರಿದ್ದಾರೆ. ಇನ್ನು 11 ಶಾಸಕರು ಒಬಿಸಿ, 5 ಶಾಸಕರು ಪರಿಶಿಷ್ಟ ಜಾತಿ ಹಾಗೂ ಮೂವರು ಶಾಸಕರು ಪರಿಶಿಷ್ಟ ಪಂಗಡಕ್ಕೆ ಸೇರಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯನ್ನೂ ಗಮನದಲ್ಲಿಟ್ಟುಕೊಂಡು ಸಚಿವ ಸಂಪುಟ ರಚಿಸಲಾಗಿದೆ ಎಂದೇ ಹೇಳಲಾಗುತ್ತಿದೆ. ಇನ್ನು ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದ ಲಾಡ್ಲಿ ಬೆಹೆನಾ ಯೋಜನೆಯು ಹೆಣ್ಣುಮಕ್ಕಳ ಮತಗಳನ್ನು ಸೆಳೆಯಲು ಕಾರಣವಾದ ಕಾರಣ ಸಚಿವ ಸಂಪುಟದಲ್ಲಿ ಐವರು ಮಹಿಳೆಯರಿಗೆ ಆದ್ಯತೆ ನೀಡಿರುವುದು ವಿಶೇಷವಾಗಿದೆ.

ಇದನ್ನೂ ಓದಿ: Congress Party: ಸೋಲಿಗೆ ಮಧ್ಯಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಕಮಲ್‌ನಾಥ್‌ ತಲೆದಂಡ; ಛತ್ತೀಸ್​ಗಢದಲ್ಲೂ ಬದಲಾವಣೆ

ಭಾರಿ ಆಡಳಿತ ವಿರೋಧಿ ಅಲೆಯ ನಡುವೆಯೂ ಮಧ್ಯಪ್ರದೇಶದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಒಟ್ಟು 230 ಸ್ಥಾನಗಳ ಪೈಕಿ 163 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯ ಸಾಧಿಸಿತ್ತು. ಕಾಂಗ್ರೆಸ್ ಪಕ್ಷವು ಕೇವಲ 65 ಸ್ಥಾನಗಳಿಗೆ ತೃಪ್ತಿ ಪಡಬೇಕಾಗಿದೆ. ಶಿವರಾಜ್‌ ಸಿಂಗ್‌ ಚೌಹಾಣ್‌ ಅವರ ಬದಲಿಗೆ ಮೋಹನ್‌ ಯಾದವ್‌ ಅವರನ್ನು ಸಿಎಂ ಎಂದು ಘೋಷಿಸುವ ಮೂಲಕ ಬಿಜೆಪಿಯು ಬದಲಾವಣೆಗೆ ನಾಂದಿ ಹಾಡಿದೆ. ಈಗ ಸಚಿವ ಸಂಪುಟ ರಚನೆಯಲ್ಲೂ ಹಲವು ಪ್ರಯೋಗ ನಡೆಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Rahul Gandhi: ರಾಯ್‌ಬರೇಲಿಯಲ್ಲಿ ಜನ ಜೈ ಶ್ರೀರಾಮ್‌ ಎನ್ನುತ್ತಲೇ ಕಾಲ್ಕಿತ್ತ ರಾಹುಲ್‌ ಗಾಂಧಿ! Video ಇದೆ

Rahul Gandhi: ಇದಕ್ಕೆ ನಿದರ್ಶನ ಎಂಬಂತೆ, ರಾಯ್‌ಬರೇಲಿಯ ಗ್ರಾಮವೊಂದರಲ್ಲಿ ಜನರು ರಾಹುಲ್‌ ಗಾಂಧಿ ಅವರ ಎದುರು ಜೈ ಶ್ರೀರಾಮ್‌ ಎಂಬುದಾಗಿ ಘೋಷಣೆ ಕೂಗಿದ್ದಾರೆ. ಇದನ್ನು ಕೇಳುತ್ತಲೇ ರಾಹುಲ್‌ ಗಾಂಧಿ ಅವರು ಕೈ ಮುಗಿದು ಗ್ರಾಮದಿಂದ ತೆರಳಿದ್ದಾರೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್‌ ಆಗಿದೆ.

VISTARANEWS.COM


on

Rahul Gandhi
Koo

ರಾಯ್‌ಬರೇಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಕೇರಳದ ವಯನಾಡು ಜತೆಗೆ ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲೂ ಕಣಕ್ಕಿಳಿದಿದ್ದಾರೆ. ಸೋನಿಯಾ ಗಾಂಧಿ ಅವರು ಸ್ಪರ್ಧಿಸುತ್ತಿದ್ದ ಕ್ಷೇತ್ರದಲ್ಲಿ ಈ ಬಾರಿ ರಾಹುಲ್‌ ಗಾಂಧಿ ಸ್ಪರ್ಧಿಸುತ್ತಿದ್ದಾರೆ. ಇನ್ನು ರಾಹುಲ್‌ ಗಾಂಧಿ ಅವರು ರಾಯ್‌ಬರೇಲಿಯಲ್ಲಿ ಅಬ್ಬರದ ಪ್ರಚಾರ ಕೈಗೊಳ್ಳುತ್ತಿದ್ದಾರೆ. ಇದರ ಬೆನ್ನಲ್ಲೇ, ರಾಹುಲ್‌ ಗಾಂಧಿ ಅವರಿಗೆ ಹಲವೆಡೆ ಜನ ಜೈ ಶ್ರೀರಾಮ್‌ (Jai Shri Ram) ಎಂದು ಘೋಷಣೆ ಕೂಗಿ ಸ್ವಾಗತಿಸುತ್ತಿದ್ದಾರೆ.

ಇದಕ್ಕೆ ನಿದರ್ಶನ ಎಂಬಂತೆ, ರಾಯ್‌ಬರೇಲಿಯ ಗ್ರಾಮವೊಂದರಲ್ಲಿ ಜನರು ರಾಹುಲ್‌ ಗಾಂಧಿ ಅವರ ಎದುರು ಜೈ ಶ್ರೀರಾಮ್‌ ಎಂಬುದಾಗಿ ಘೋಷಣೆ ಕೂಗಿದ್ದಾರೆ. ಇದನ್ನು ಕೇಳುತ್ತಲೇ ರಾಹುಲ್‌ ಗಾಂಧಿ ಅವರು ಕೈ ಮುಗಿದು ಗ್ರಾಮದಿಂದ ತೆರಳಿದ್ದಾರೆ. ರಾಯ್‌ಬರೇಲಿಯ ಮತ್ತೊಂದು ಕಡೆಯೂ ರಾಹುಲ್‌ ಗಾಂಧಿ ಅವರಿಗೆ ಜೈ ಶ್ರೀ ರಾಮ್‌ ಎಂದು ಘೋಷಣೆ ಕೂಗಿ ಜನ ಸ್ವಾಗತಿಸಿದ್ದಾರೆ. ಈ ಎರಡೂ ವಿಡಿಯೊಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

ಹನುಮಾನ್‌ ದೇಗುಲಕ್ಕೆ ಭೇಟಿ

ರಾಯ್‌ಬರೇಲಿಯಲ್ಲಿರುವ ಆಂಜನೇಯ ದೇವಸ್ಥಾನಕ್ಕೆ ತೆರಳಿದ ರಾಹುಲ್‌ ಗಾಂಧಿ ಅವರು ವಿಶೇಷ ಪೂಜೆ ಸಲ್ಲಿಸಿದರು. ಈ ವಿಡಿಯೊ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇನ್ನೂ ಕೆಲವೊಬ್ಬರು, ಅವಸರ ಅವಸರದಲ್ಲಿ ಪೂಜೆ ಮಾಡುವುದು, ದೇವರ ಮೇಲೆ ಪೂಜಾ ಸಾಮಗ್ರಿಗಳನ್ನು ಎಸೆಯುವುದು ನೋಡಿದರೆ ಇವರು ಎಂತಹ ಹಿಂದು ಎಂಬುದು ಗೊತ್ತಾಗುತ್ತದೆ ಎಂಬುದಾಗಿ ಟೀಕಿಸಿದ್ದಾರೆ.

ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮವನ್ನು ಕಾಂಗ್ರೆಸ್‌ ಬಹಿಷ್ಕರಿಸಿದ ಕಾರಣ ಕಾಂಗ್ರೆಸ್‌ ನಾಯಕರ ಎದುರು ಸಾರ್ವಜನಿಕರು, ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ್‌ ಎಂಬುದಾಗಿ ಘೋಷಣೆ ಕೂಗುತ್ತಾರೆ. ಅದೇ ರೀತಿ, ರಾಹುಲ್‌ ಗಾಂಧಿ ಅವರ ಎದುರು ಕೂಡ ಜನ ಜೈ ಶ್ರೀರಾಮ್‌ ಎಂಬುದಾಗಿ ಕೂಗಿದ್ದಾರೆ. 2004ರಿಂದ ಸೋನಿಯಾ ಗಾಂಧಿ ಅವರು ರಾಯ್‌ಬರೇಲಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದರು. ಅವರೀಗ ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಕಾರಣ ಅವರ ಪುತ್ರ ರಾಹುಲ್‌ ಗಾಂಧಿ ಸ್ಪರ್ಧಿಸುತ್ತಿದ್ದಾರೆ. ಈಗಾಗಲೇ ರಾಹುಲ್‌ ಗಾಂಧಿ ಅವರು ರಾಯ್‌ಬರೇಲಿಯಲ್ಲಿ ನಾಮಪತ್ರ ಕೂಡ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಪ್ರಚಾರದ ವೇಳೆ ರಾಹುಲ್‌ ಗಾಂಧಿಯಿಂದ ಚೀನಾ ಸಂವಿಧಾನ ಪ್ರತಿ ಪ್ರದರ್ಶನ; ಹಿಮಂತ ಬಿಸ್ವಾ ಗಂಭೀರ ಆರೋಪ

Continue Reading

ದೇಶ

AAP Funds: ನಿಯಮ ಉಲ್ಲಂಘಿಸಿ ಬೇರೆ ದೇಶಗಳಿಂದ ಆಪ್‌ 7 ಕೋಟಿ ರೂ. ದೇಣಿಗೆ ಸ್ವೀಕಾರ; ಇ.ಡಿ ಸ್ಫೋಟಕ ಮಾಹಿತಿ!

AAP Funds: 2014ರಿಂದ 2022ರ ಅವಧಿಯಲ್ಲಿ ಆಮ್‌ ಆದ್ಮಿ ಪಕ್ಷಕ್ಕೆ ಬೇರೆ ದೇಶಗಳಿಂದ 7.08 ಕೋಟಿ ರೂ. ದೇಣಿಗೆ ಹರಿದುಬಂದಿದೆ. ಆದರೆ, ಇಷ್ಟು ಹಣ ಸ್ವೀಕರಿಸಲು ಆಪ್‌ ಎಫ್‌ಸಿಆರ್‌ಎ ನಿಯಮಗಳನ್ನು ಪಾಲಿಸಿಲ್ಲ. ಪಕ್ಷಕ್ಕೆ ಅಮೆರಿಕ, ಕೆನಡಾ, ಆಸ್ಟ್ರೇಲಿಯಾ ಸೇರಿ ಹಲವು ದೇಶಗಳಿಂದ ನಿಯಮಗಳನ್ನು ಪಾಲಿಸದೆಯೇ ದೇಣಿಗೆ ಪಡೆಯಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯಕ್ಕೆ ಇ.ಡಿ ಮಾಹಿತಿ ನೀಡಿದೆ.

VISTARANEWS.COM


on

AAP Funds
Koo

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ದೆಹಲಿಯಲ್ಲಿರುವ ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಾರ್ಟಿಗೆ (AAP) 2014ರಿಂದ 2022ರ ಅವಧಿಯಲ್ಲಿ ಬೇರೆ ಬೇರೆ ದೇಶಗಳಿಂದ 7.08 ಕೋಟಿ ರೂ. ದೇಣಿಗೆ (AAP Funds) ಹರಿದುಬಂದಿದೆ. ಆದರೆ, ದೇಣಿಗೆ ಸ್ವೀಕರಿಸುವಾಗ ಆಮ್‌ ಆದ್ಮಿ ಪಕ್ಷವು ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (FCRA) ನಿಯಮಗಳನ್ನು ಉಲ್ಲಂಘಿಸಿದೆ” ಎಂದು ಜಾರಿ ನಿರ್ದೇಶನಾಲಯವು (E.D) ಮಾಹಿತಿ ನೀಡಿದೆ. ಇದು ಈಗ ಪಕ್ಷ ಹಾಗೂ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಹೊಸ ಸಂಕಷ್ಟ ತಂದಿದೆ.

ವಿದೇಶಿ ದೇಣಿಗೆ ನಿಯಮಗಳನ್ನು ಆಪ್‌ ಪಾಲಿಸದ ಕುರಿತು ಕೇಂದ್ರ ಗೃಹ ಸಚಿವಾಲಯಕ್ಕೆ ಇ.ಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. “2014ರಿಂದ 2022ರ ಅವಧಿಯಲ್ಲಿ ಆಮ್‌ ಆದ್ಮಿ ಪಕ್ಷಕ್ಕೆ ಬೇರೆ ದೇಶಗಳಿಂದ 7.08 ಕೋಟಿ ರೂ. ದೇಣಿಗೆ ಹರಿದುಬಂದಿದೆ. ಆದರೆ, ಇಷ್ಟು ಹಣ ಸ್ವೀಕರಿಸಲು ಆಪ್‌ ಎಫ್‌ಸಿಆರ್‌ಎ ನಿಯಮಗಳನ್ನು ಪಾಲಿಸಿಲ್ಲ. ಪಕ್ಷಕ್ಕೆ ಅಮೆರಿಕ, ಕೆನಡಾ, ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್‌, ಸೌದಿ ಅರೇಬಿಯಾ, ಕುವೈತ್‌, ಒಮಾನ್‌ ಸೇರಿ ಹಲವು ದೇಶಗಳಿಂದ ಆಪ್‌ ನಿಯಮ ಉಲ್ಲಂಘಿಸಿ ದೇಣಿಗೆ ಸ್ವೀಕರಿಸಿದೆ” ಎಂದು ತಿಳಿಸಿದ್ದಾರೆ.

2021ರಲ್ಲೇ ವಿಚಾರಣೆ ನಡೆದಿತ್ತು

ವಿದೇಶಗಳಿಂದ ದೇಣಿಗೆ ಪಡೆಯುವಾಗ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆಯೇ 2021ರ ಸೆಪ್ಟೆಂಬರ್‌ನಲ್ಲಿ ಆಪ್‌ ನಾಯಕ ಪಂಕಜ್‌ ಕುಮಾರ್‌ ಅವರ ವಿಚಾರಣೆ ನಡೆಸಲಾಗಿತ್ತು. ಈಗ, ಆಪ್‌ಗೆ ದೇಣಿಗೆ ನೀಡಿದವರ ಕುರಿತು ತಪ್ಪು ಮಾಹಿತಿ ನೀಡಲಾಗಿದೆ. ದೇಣಿಗೆ ನೀಡಿದವರ ಮಾಹಿತಿಯನ್ನು ಮರೆಮಾಚಲಾಗಿದೆ ಎಂಬುದು ಸೇರಿ ಹಲವು ಆರೋಪಗಳನ್ನು ಇ.ಡಿ ಮಾಡಿದೆ. ಇದರ ಕುರಿತು ಕೇಂದ್ರ ಗೃಹ ಸಚಿವಾಲಯವು ಯಾವ ತೀರ್ಮಾನ ತೆಗೆದುಕೊಳ್ಳಲಿದೆಯೋ ಕಾದು ನೋಡಬೇಕಿದೆ.

ದೆಹಲಿ ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂ. ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಜೈಲುಪಾಲಾಗಿದ್ದರು. ಅವರೀಗ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ಜೂನ್‌ 2ರಂದು ಮತ್ತೆ ಜೈಲು ಸೇರಲಿದ್ದಾರೆ. ಆಪ್‌ನ ಹಲವು ಸಚಿವರು ಈಗಾಗಲೇ ಜೈಲಿನಲ್ಲಿದ್ದಾರೆ. ಇನ್ನು ರಾಜ್ಯಸಭೆಯ ಆಪ್‌ ಸದಸ್ಯೆ ಸ್ವಾತಿ ಮಾಲಿವಾಲ್‌ ಅವರ ಮೇಲೆ ಹಲ್ಲೆ ನಡೆಸಿದ ಕಾರಣ ಅರವಿಂದ್‌ ಕೇಜ್ರಿವಾಲ್‌ ಅವರ ಆಪ್ತ ಕಾರ್ಯದರ್ಶಿ ಬಿಭವ್‌ ಕುಮಾರ್‌ ಅವರನ್ನು ಬಂಧಿಸಲಾಗಿದೆ. ಇದರ ಬೆನ್ನಲ್ಲೇ, ಆಪ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಉದ್ಯಮಿಗಳಿಂದ 200 ಕೋಟಿ ರೂ. ಸುಲಿಗೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಜೈಲಿನಲ್ಲಿರುವ ಸುಕೇಶ್‌ ಚಂದ್ರಶೇಖರ್‌, ಆಮ್‌ ಆದ್ಮಿ ಪಕ್ಷಕ್ಕೆ 60 ಕೋಟಿ ರೂ.ಗಳನ್ನು ದೇಣಿಗೆ ನೀಡಿರುವುದಾಗಿ 2022ರಲ್ಲಿ ಹೇಳಿದ್ದ. ಸುಕೇಶ್‌ ಚಂದ್ರಶೇಖರ್‌ ಬಿಜೆಪಿಯ ವಕ್ತಾರನಂತೆ ಮಾತನಾಡುತ್ತಿದ್ದು, ಜೈಲಿನಿಂದ ಬಿಡುಗಡೆಯಾದ ಬಳಿಕ ಆ ಪಕ್ಷ ಸೇರಬಹುದು ಎಂದು ಆಮ್‌ ಆದ್ಮಿ ಈ ಹಿಂದೆ ಟೀಕಿಸಿತ್ತು.

ಇದನ್ನೂ ಓದಿ: Arvind Kejriwal: “ತಾಕತ್‌ ಇದ್ರೆ ಅರೆಸ್ಟ್‌ ಮಾಡಿ…”; ಪ್ರಧಾನಿ ಮೋದಿಗೆ ಕೇಜ್ರಿವಾಲ್‌ ಓಪನ್‌ ಚಾಲೆಂಜ್‌

Continue Reading

ದೇಶ

Postal Ballot: ಅನಾರೋಗ್ಯದ ಕಾರಣ ಅಂಚೆ ಮತದಾನ ಕೋರಿ 78ರ ಅಜ್ಜಿ ಅರ್ಜಿ; ಬೇಡವೆಂದ ಸುಪ್ರೀಂ!

Postal Ballot: ಛತ್ತೀಸ್‌ಗಢದ ಬಿಲಾಸ್‌ಪುರ ನಿವಾಸಿಯಾದ ಸರಳ ಶ್ರೀವಾಸ್ತವ ಪರ ಹಿರಿಯ ವಕೀಲ ಗೌರವ್‌ ಅಗರ್ವಾಲ್‌ ವಾದ ಮಂಡಿಸಿದರು. “ಮಹಿಳೆಯು ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. ಚುನಾವಣೆ ಆಯೋಗದ ನಿಯಮಗಳ ಪ್ರಕಾರ ಮಹಿಳೆಯು ಅಂಚೆ ಮತದಾನ ಮಾಡಲು ಅರ್ಹರು” ಎಂದು ಹೇಳಿದರು.

VISTARANEWS.COM


on

Postal Ballot
Koo

ನವದೆಹಲಿ: ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಕಾರಣ ಲೋಕಸಭೆ ಚುನಾವಣೆಯಲ್ಲಿ ಹಕ್ಕು ಚಲಾಯಿಸಲು ಅಂಚೆ ಮತದಾನಕ್ಕೆ (Postal Ballot) ಅವಕಾಶ ಮಾಡಿಕೊಡಬೇಕು ಎಂದು ಛತ್ತೀಸ್‌ಗಢದ 78 ವರ್ಷದ ಮಹಿಳೆಯೊಬ್ಬರು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ (Supreme Court) ನಿರಾಕರಿಸಿದೆ. ಇದರಿಂದಾಗಿ, ಅನಾರೋಗ್ಯವಿದ್ದರೂ ಚುನಾವಣೆಯಲ್ಲಿ ಮತದಾನ ಮಾಡಬೇಕು ಎಂಬ ಹಂಬಲ ಹೊಂದಿದ್ದ ಸರಳ ಶ್ರೀವಾಸ್ತವ ಎಂಬ ಅಜ್ಜಿಗೆ ನಿರಾಸೆಯಾದಂತಾಗಿದೆ.

ಛತ್ತೀಸ್‌ಗಢದ ಬಿಲಾಸ್‌ಪುರ ನಿವಾಸಿಯಾದ ಸರಳ ಶ್ರೀವಾಸ್ತವ ಪರ ಹಿರಿಯ ವಕೀಲ ಗೌರವ್‌ ಅಗರ್ವಾಲ್‌ ವಾದ ಮಂಡಿಸಿದರು. “ಮಹಿಳೆಯು ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. ಚುನಾವಣೆ ಆಯೋಗದ ನಿಯಮಗಳ ಪ್ರಕಾರ ಮಹಿಳೆಯು ಅಂಚೆ ಮತದಾನ ಮಾಡಲು ಅರ್ಹರು” ಎಂದು ಹೇಳಿದರು. ಆದರೆ, ನ್ಯಾಯಮೂರ್ತಿಗಳಾದ ಬೆಲಾ ಎಂ. ತ್ರಿವೇದಿ ಹಾಗೂ ಜಸ್ಟಿಸ್‌ ಪಂಕಜ್‌ ಮಿತ್ತಲ್‌ ಅವರಿದ್ದ ಪೀಠವು ಅರ್ಜಿಯನ್ನು ತಿರಸ್ಕರಿಸಿತು.

“ಬಿಲಾಸ್‌ಪುರದಲ್ಲಿ ಮೇ 7ರಂದೇ ಮತದಾನ ಮುಕ್ತಾಯಗೊಂಡಿದೆ. ಮತದಾನ ಮುಗಿದು ಹಲವು ದಿನಗಳ ನಂತರ ಅಂಚೆ ಮತದಾನಕ್ಕೆ ಅವಕಾಶ ನೀಡಬೇಕು ಎಂದರೆ ಆಗುವುದಿಲ್ಲ. ಇಂತಹ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್‌ಗೆ ಮೊದಲೇ ಅರ್ಜಿ ಸಲ್ಲಿಸಬೇಕು. ಅಂಚೆ ಮತದಾನಕ್ಕೆ ಹಲವು ಪ್ರಕ್ರಿಯೆಗಳಿವೆ. ಅವುಗಳೆಲ್ಲವೂ ಸಮಯಕ್ಕೆ ಅನುಸಾರವಾಗಿ ಆಗಬೇಕು. ಅಷ್ಟಕ್ಕೂ, ಭಾರತದಲ್ಲಿ ಪ್ರತಿಯೊಬ್ಬರಿಗೂ ಮನೆಯಲ್ಲಿ ಕುಳಿತೇ ಮತದಾನ ಮಾಡುವ ಉಮೇದಿ ಇದೆ” ಎಂದು ನ್ಯಾಯಪೀಠವು ಅಸಮಾಧಾನ ವ್ಯಕ್ತಪಡಿಸಿತು.

ಸರಳ ಶ್ರೀವಾಸ್ತವ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅವರು ಹಾಸಿಗೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವ ಕಾರಣ ಅಂಚೆ ಮತದಾನದ ಮೂಲಕವಾದರೂ ಹಕ್ಕು ಚಲಾಯಿಸಬೇಕು ಎಂದು ಬಯಸಿದ್ದರು. ಇದೇ ಕಾರಣಕ್ಕಾಗಿ ಅವರು ಏಪ್ರಿಲ್‌ 29ರಂದೇ ಛತ್ತೀಸ್‌ಗಢ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಮೇ 6ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಮಹಿಳೆಯ ಅರ್ಜಿಯನ್ನು ತಿರಸ್ಕರಿಸಿತ್ತು. ಈಗ ಸುಪ್ರೀಂ ಕೋರ್ಟ್‌ ಕೂಡ ಅರ್ಜಿಯನ್ನು ತಿರಸ್ಕರಿಸಿದೆ. ಒಟ್ಟಿನಲ್ಲಿ, ಯುವಕರೇ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡದ, ಜಾಗೃತಿ ಮೂಡಿಸಿದರೂ ಕೇಳದಂತಹ ಸಂದರ್ಭದಲ್ಲಿ, ಮನೆಯಿಂದಲಾದರೂ ಹಕ್ಕು ಚಲಾಯಿಸಬೇಕು ಎಂದು ಸುಪ್ರೀಂ ಕೋರ್ಟ್‌ ಮೊರೆ ಹೋದ ಅಜ್ಜಿಯ ಆಶಯವಂತೂ ಒಳ್ಳೆಯದೇ ಆಗಿತ್ತು ಎಂಬುದರಲ್ಲಿ ಎರಡು ಮಾತಿಲ್ಲ.

ಇದನ್ನೂ ಓದಿ: Legislative Council Election: ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ದಿನಾಂಕ ಫಿಕ್ಸ್;‌ ಜೂನ್‌ 13ಕ್ಕೆ ಮತದಾನ

Continue Reading

ದೇಶ

Driving Licence New Rules: ಡ್ರೈವಿಂಗ್‌ ಲೈಸೆನ್ಸ್‌; ಜೂನ್‌ 1ರಿಂದ ಹೊಸ ರೂಲ್ಸ್‌!

Driving Licence New Rules: ಚಾಲನಾ ಪರವಾನಗಿ ಪಡೆಯಲು ಸರ್ಕಾರ ನಿಯಮಾವಳಿಗಳನ್ನು ಬದಲಾಯಿಸಿದೆ. ಈ ನಿಯಮ ಸಮರ್ಪಕವಾಗಿ ಜಾರಿಗೆ ಬಂದರೆ ಪ್ರಾದೇಶಿಕ ಸಾರಿಗೆ ಕಚೇರಿಗೇ ಹೋಗಿ ಚಾಲನಾ ಪರೀಕ್ಷೆಯನ್ನು ತೆಗೆದುಕೊಳ್ಳುವ ಅಗತ್ಯವಿಲ್ಲ. ಬದಲಾಗಿ ಖಾಸಗಿ ಚಾಲನಾ ತರಬೇತಿ ಸಂಸ್ಥೆಗಳಿಗೆ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಲಾಗಿದೆ. ಅಂತಿಮವಾಗಿ ಪ್ರಮಾಣಪತ್ರ ನೀಡುವ ನಿಯಂತ್ರಣ ಸಾರಿಗೆ ಇಲಾಖೆಗೇ ಇರುತ್ತದೆ.

VISTARANEWS.COM


on

By

Driving Licence New Rules
Koo

ಇನ್ನು ಮುಂದೆ ಚಾಲನಾ ಪರವಾನಗಿ ಪಡೆಯಲು ಸರ್ಕಾರಿ ಪ್ರಾದೇಶಿಕ ಸಾರಿಗೆ ಕಚೇರಿಗೆ (RTO) ಹೋಗಬೇಕಿಲ್ಲ. ಬದಲಾಗಿ ಖಾಸಗಿ ಸಂಸ್ಥೆಗಳಿಂದಲೂ ಚಾಲನಾ ಪರವಾನಗಿ (Driving Licence New Rules) ಪಡೆಯಬಹುದಾಗಿದೆ. ಸರ್ಕಾರವು ಚಾಲನಾ ಪರವಾನಗಿ ಪಡೆಯುವ ನಿಯಮವನ್ನು (New Rules) ಬದಲಾಯಿಸಿದ್ದು, ಜೂನ್ 1ರಿಂದ ಇದು ಜಾರಿಗೆ ಬರಲಿದೆ. ಮೊದಲು ಇದು ಆಯ್ದ ನಗರಗಳಲ್ಲಿ ಮಾತ್ರ ಪ್ರಾಯೋಗಿಕವಾಗಿ ಜಾರಿಯಾಗಲಿದೆ.

ಪರಿಸರ ಮಾಲಿನ್ಯ ತಡೆಯುವ ಉದ್ದೇಶದಿಂದ ಸುಮಾರು 9,00,000 ಹಳೆಯ ಸರ್ಕಾರಿ ವಾಹನಗಳನ್ನು ಹಂತಹಂತವಾಗಿ ತೆಗೆದುಹಾಕುವುದೂ ಹೊಸ ನಿಯಮಾವಳಿಯ ಗುರಿಗಳಲ್ಲಿ ಒಂದಾಗಿದೆ.

ಅತೀ ವೇಗದ ಚಾಲನೆಗೆ ದಂಡ 1000ರಿಂದ 2000 ರೂ. ಏರಿಕೆ, ಅಪ್ರಾಪ್ತರು ವಾಹನ ಚಾಲನೆ ಮಾಡಿ ಸಿಕ್ಕಿಬಿದ್ದರೆ 25,000 ರೂ. ದಂಡ ತೆರಬೇಕಾಗುತ್ತದೆ. ವಾಹನದ ಮಾಲೀಕರ ಡ್ರೈವಿಂಗ್ ನೋಂದಣಿ ಕಾರ್ಡ್ ಅನ್ನು ರದ್ದುಗೊಳಿಸಲಾಗುವುದು ಮತ್ತು ಅಪ್ರಾಪ್ತರು 25 ವರ್ಷ ವಯಸ್ಸಿನವರೆಗೆ ಪರವಾನಗಿ ಪಡೆಯಲು ಸಾಧ್ಯವಾಗುವುದಿಲ್ಲ.

ರಸ್ತೆಗಳು ಮತ್ತು ಹೆದ್ದಾರಿಗಳ ಸಚಿವಾಲಯವು ಹೊಸ ಚಾಲನಾ ಪರವಾನಗಿಗೆ ಅಗತ್ಯವಿರುವ ದಾಖಲಾತಿಗಳನ್ನು ನವೀಕರಿಸಿದೆ. ಹೊಸ ನಿಯಮಗಳು ದ್ವಿಚಕ್ರ ಮತ್ತು ನಾಲ್ಕು ಚಕ್ರಗಳ ಚಾಲಕರ ಅವಶ್ಯಕತೆಗಳಿಗೆ ಸ್ಪಂದಿಸುವಂತಿದೆ. ಈ ಬದಲಾವಣೆಯು ಆರ್‌ಟಿಒಗಳಲ್ಲಿ ದೈಹಿಕ ಪರೀಕ್ಷೆಗಳ ಅಗತ್ಯವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. ಅಪ್ಲಿಕೇಶನ್ ಪ್ರಕ್ರಿಯೆಯನ್ನು ಸರಳಗೊಳಿಸಲಾಗುತ್ತಿದೆ.

ತರಬೇತಿ ನೀಡುವವರಿಗೆ ಹೊಸ ನಿಯಮಗಳು ಏನೇನು?

ಖಾಸಗಿ ಚಾಲನಾ ತರಬೇತಿ ಕೇಂದ್ರಗಳು ಕನಿಷ್ಠ 1 ಎಕರೆ ಭೂಮಿಯನ್ನು ಹೊಂದಿರಬೇಕು. 4 ಚಕ್ರ ವಾಹನಗಳ ಚಾಲನಾ ಕೇಂದ್ರಗಳಲ್ಲಿ ಹೆಚ್ಚುವರಿ 2 ಎಕರೆ ಭೂಮಿ ಅಗತ್ಯವಿದೆ. ಡ್ರೈವಿಂಗ್ ತರಬೇತಿ ಕೇಂದ್ರವು ಸೂಕ್ತವಾದ ಪರೀಕ್ಷಾ ಸೌಲಭ್ಯಕ್ಕೆ ಪ್ರವೇಶವನ್ನು ಹೊಂದಿರಬೇಕು.

ತರಬೇತುದಾರರು ಕನಿಷ್ಠ ಹೈಸ್ಕೂಲ್ ಡಿಪ್ಲೊಮಾ ಅಥವಾ ತತ್ಸಮಾನ ಶಿಕ್ಷಣವನ್ನು ಹೊಂದಿರಬೇಕು. ಹೆಚ್ಚುವರಿಯಾಗಿ, ಅವರು ಕನಿಷ್ಠ 5 ವರ್ಷಗಳ ಚಾಲನಾ ಅನುಭವವನ್ನು ಹೊಂದಿರಬೇಕು. ತರಬೇತುದಾರರು ಬಯೋಮೆಟ್ರಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ವ್ಯವಸ್ಥೆಗಳ ಮೂಲಭೂತ ಅಂಶಗಳನ್ನು ತಿಳಿದಿರಬೇಕು.

ಕನಿಷ್ಠ 29 ಗಂಟೆಗಳ ತರಬೇತಿಯೊಂದಿಗೆ ಲಘು ವಾಹನ ತರಬೇತಿಯನ್ನು 4 ವಾರಗಳಿಗಿಂತ ಕಡಿಮೆ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಈ ತರಬೇತಿಯನ್ನು ಕನಿಷ್ಠ ಎರಡು ವಿಭಾಗಗಳಾಗಿ ವಿಂಗಡಿಸಬೇಕು: ಥಿಯರಿ ಮತ್ತು ಪ್ರಾಯೋಗಿಕ. ಥಿಯರಿ ಘಟಕವು 8 ಗಂಟೆಗಳನ್ನು ಒಳಗೊಳ್ಳಬೇಕು. ಆದರೆ ಪ್ರಾಯೋಗಿಕ ಘಟಕವು 21 ಗಂಟೆಗಳ ಕಾಲ ವ್ಯಾಪಿಸಬೇಕು.

ಭಾರೀ ಮೋಟಾರು ವಾಹನಗಳಿಗೆ 8 ಗಂಟೆಗಳ ಬೋಧನೆ ಮತ್ತು 31 ಗಂಟೆಗಳ ಪ್ರಾಯೋಗಿಕ ತಯಾರಿಯನ್ನು ಒಳಗೊಂಡ 38 ಗಂಟೆಗಳ ತರಬೇತಿ ಇರುತ್ತದೆ. ಈ ತರಬೇತಿಯನ್ನು 6 ವಾರಗಳಲ್ಲಿ ಪೂರ್ಣಗೊಳಿಸಬೇಕು.

ಈ ನಿಯಮಾವಳಿಗಳು ಖಾಸಗಿ ಚಾಲನಾ ತರಬೇತಿ ಕೇಂದ್ರಗಳು ಲಘು ಮತ್ತು ಭಾರೀ ವಾಹನಗಳ ಚಾಲಕರಿಗೆ ಉನ್ನತ ಗುಣಮಟ್ಟದ ಶಿಕ್ಷಣ ಮತ್ತು ಸೂಕ್ತ ತಯಾರಿಯನ್ನು ನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿವೆ.


ಶುಲ್ಕ ಎಷ್ಟಿದೆ?

ವಿವಿಧ ರೀತಿಯ ಚಾಲನಾ ಪರವಾನಿಗೆಗಳ ಸರ್ಕಾರಿ ಶುಲ್ಕ ಈ ಕೆಳಗಿನಂತಿರುತ್ತದೆ.
ಕಲಿಕಾ ಪರವಾನಿಗೆಗೆ 200 ರೂ., ಕಲಿಕಾ ಪರವಾನಗಿ ನವೀಕರಣಕ್ಕೆ 200 ರೂ., ಅಂತಾರಾಷ್ಟ್ರೀಯ ಪರವಾನಿಗೆಗೆ 1,000 ರೂ., ಶಾಶ್ವತ ಪರವಾನಗಿಗೆ 200 ರೂ.

ಅರ್ಜಿ ಸಲ್ಲಿಸುವ ವಿಧಾನ

ಚಾಲಕ ಪರವಾನಗಿಗೆ ಅರ್ಜಿ ಸಲ್ಲಿಸಲು https://parivahan.gov.in ಪೋರ್ಟಲ್‌ಗೆ ಭೇಟಿ ನೀಡಿ. ಮುಖಪುಟದಲ್ಲಿ ಒಮ್ಮೆ “ಚಾಲನಾ ಪರವಾನಗಿ ಅನ್ವಯಿಸು” ಆಯ್ಕೆಯನ್ನು ಪತ್ತೆ ಮಾಡಿ ಮತ್ತು ಕ್ಲಿಕ್ ಮಾಡಿ. ಇದು ಅರ್ಜಿ ನಮೂನೆಯನ್ನು ತೆರೆಯುತ್ತದೆ. ಅಗತ್ಯವಿದ್ದರೆ ನೀವು ಅದನ್ನು ಮುದ್ರಿಸಲು ಆಯ್ಕೆ ಮಾಡಬಹುದು.

ಇದನ್ನೂ ಓದಿ: Yamuna Bridge: ಯಮುನಾ ಸೇತುವೆಯ ಅದ್ಭುತ ಚಿತ್ರ ಹಂಚಿಕೊಂಡ ಭಾರತೀಯ ರೈಲ್ವೆ: ವಾವ್‌ ತಾಜ್‌ ಎಂದ ನೆಟ್ಟಿಗರು; ನೀವೂ ನೋಡಿ

Continue Reading
Advertisement
Malaysia Masters
ಕ್ರೀಡೆ18 mins ago

Malaysia Masters: ವಿಶ್ರಾಂತಿ ಬಳಿಕ ಮಲೇಷ್ಯಾ ಮಾಸ್ಟರ್ಸ್​ನಲ್ಲಿ ಕಣಕ್ಕಿಳಿಯಲು ಸಜ್ಜಾದ ಸಿಂಧು

Rahul Gandhi
ದೇಶ26 mins ago

Rahul Gandhi: ರಾಯ್‌ಬರೇಲಿಯಲ್ಲಿ ಜನ ಜೈ ಶ್ರೀರಾಮ್‌ ಎನ್ನುತ್ತಲೇ ಕಾಲ್ಕಿತ್ತ ರಾಹುಲ್‌ ಗಾಂಧಿ! Video ಇದೆ

MS Dhoni Bike Riding
ಕ್ರೀಡೆ1 hour ago

MS Dhoni Bike Riding: ಐಪಿಎಲ್​ ಮುಗಿಸಿ ತವರಿಗೆ ಮರಳಿದ್ದೇ ತಡ, ಬೈಕ್ ರೈಡಿಂಗ್​ ಮಾಡಿದ ಧೋನಿ​

Self Harming
ಕರ್ನಾಟಕ1 hour ago

Self Harming: ಟಿಸಿ ಕೊಟ್ಟಿಲ್ಲವೆಂದು ಬೇಸರಗೊಂಡು ವಿದ್ಯಾರ್ಥಿ ಆತ್ಮಹತ್ಯೆ

AAP Funds
ದೇಶ2 hours ago

AAP Funds: ನಿಯಮ ಉಲ್ಲಂಘಿಸಿ ಬೇರೆ ದೇಶಗಳಿಂದ ಆಪ್‌ 7 ಕೋಟಿ ರೂ. ದೇಣಿಗೆ ಸ್ವೀಕಾರ; ಇ.ಡಿ ಸ್ಫೋಟಕ ಮಾಹಿತಿ!

Karnataka weather Forecast
ಕರ್ನಾಟಕ2 hours ago

Coastal Weather: ದಕ್ಷಿಣ ಕನ್ನಡ, ಉಡುಪಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

KMF Nandini Logo
ಕ್ರೀಡೆ2 hours ago

KMF Nandini Logo: ನಂದಿನಿಗೆ ಸ್ವಾಗತಿಸಿ ಟಿ20 ವಿಶ್ವಕಪ್​ ಜೆರ್ಸಿ ಬಿಡುಗಡೆಗೊಳಿಸಿದ ಐರ್ಲೆಂಡ್ ತಂಡ

Siddaramaiah government performance is zero says BY Vijayendra
ರಾಜಕೀಯ2 hours ago

BY Vijayendra: ಮಹಿಳಾ ಸುರಕ್ಷತೆಯನ್ನೂ ನೀಡದ ಕೊಲೆಗಡುಕ ಸರ್ಕಾರದಿಂದ ಸಾಧನೆ ಶೂನ್ಯ: ಬಿ.ವೈ. ವಿಜಯೇಂದ್ರ ಆಕ್ರೋಶ

Nutrition Alert
ಆರೋಗ್ಯ2 hours ago

Nutrition Alert: ಎಳನೀರು ಕುಡಿಯುವುದರಿಂದಲೂ ನಮ್ಮ ದೇಹಕ್ಕೆ ಸೈಡ್‌ ಎಫೆಕ್ಟ್‌ ಇದೆಯೆ?

Postal Ballot
ದೇಶ2 hours ago

Postal Ballot: ಅನಾರೋಗ್ಯದ ಕಾರಣ ಅಂಚೆ ಮತದಾನ ಕೋರಿ 78ರ ಅಜ್ಜಿ ಅರ್ಜಿ; ಬೇಡವೆಂದ ಸುಪ್ರೀಂ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ10 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌