Andhra Pradesh Stampede | ಚಂದ್ರಬಾಬು ನಾಯ್ಡು ರ‍್ಯಾಲಿ ವೇಳೆ ಮತ್ತೆ ಕಾಲ್ತುಳಿತ, ಮೂವರ ಸಾವು, ಹಲವರಿಗೆ ಗಾಯ - Vistara News

ದೇಶ

Andhra Pradesh Stampede | ಚಂದ್ರಬಾಬು ನಾಯ್ಡು ರ‍್ಯಾಲಿ ವೇಳೆ ಮತ್ತೆ ಕಾಲ್ತುಳಿತ, ಮೂವರ ಸಾವು, ಹಲವರಿಗೆ ಗಾಯ

ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಚಂದ್ರಬಾಬು ನಾಯ್ಡು ಅವರು ಡಿಸೆಂಬರ್‌ 28ರಂದು ರೋಡ್‌ ಶೋ ನಡೆಸುವ ವೇಳೆ ಕಾಲ್ತುಳಿತ (Andhra Pradesh Stampede) ಉಂಟಾಗಿತ್ತು. ಇದರ ಬೆನ್ನಲ್ಲೇ ನಾಯ್ಡು ಅವರ ಸಮಾವೇಶದಲ್ಲಿಯೇ ಮತ್ತೊಮ್ಮೆ ಕಾಲ್ತುಳಿತ ಸಂಭವಿಸಿದೆ.

VISTARANEWS.COM


on

Stampede In Andhra Pradesh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್:‌ ತೆಲುಗು ದೇಶಂ ಪಕ್ಷದ (TDP) ಪಕ್ಷದ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ಅವರು ಕೈಗೊಂಡ ಸಮಾವೇಶದಲ್ಲಿ ಮತ್ತೆ ಕಾಲ್ತುಳಿತ (Andhra Pradesh Stampede) ಉಂಟಾಗಿದ್ದು, ಮೂವರು ಮೃತಪಟ್ಟಿದ್ದಾರೆ. ಹಾಗೆಯೇ, ಹಲವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೇವಲ ನಾಲ್ಕೇ ದಿನದ ಅಂತರದಲ್ಲಿ ಚಂದ್ರಬಾಬು ನಾಯ್ಡು ಅವರು ಕೈಗೊಂಡ ಸಮಾವೇಶದ ವೇಳೆ ಎರಡನೇ ಕಾಲ್ತುಳಿತ ಸಂಭವಿಸಿದೆ. ಡಿಸೆಂಬರ್‌ 28ರಂದು ನೆಲ್ಲೂರು ಜಿಲ್ಲೆಯಲ್ಲಿ ರೋಡ್‌ ಶೋ ಕೈಗೊಳ್ಳುವ ವೇಳೆ ಕಾಲ್ತುಳಿತ ಉಂಟಾಗಿ ಎಂಟು ಜನ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಮತ್ತೊಂದು ಕಾಲ್ತುಳಿತ ಉಂಟಾಗಿದೆ.

ಗುಂಟೂರು ಜಿಲ್ಲೆಯಲ್ಲಿ ಭಾನುವಾರ ಚಂದ್ರಬಾಬು ನಾಯ್ಡು ಅವರು ರಾಜಕೀಯ ಸಮಾವೇಶ ಆಯೋಜಿಸಿದ್ದರು. ಸಮಾವೇಶದಲ್ಲಿ ಅಪಾರ ಸಂಖ್ಯೆಯ ಜನ ಭಾಗವಹಿಸಿದ್ದು, ಇದೇ ವೇಳೆ ಕಾಲ್ತುಳಿತ ಉಂಟಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಕಲ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ | Andhra Pradesh Stampede | ಚಂದ್ರಬಾಬು ನಾಯ್ಡು ರೋಡ್‌ ಶೋ ವೇಳೆ ಕಾಲ್ತುಳಿತ, 8 ಜನರ ಸಾವು, 7 ಮಂದಿಗೆ ಗಾಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Yogi Adityanath: ನೀರು ಎರಚಿ ಮಹಿಳೆಗೆ ಕಿರುಕುಳ ಕೇಸ್‌; ಇಡೀ ಪೊಲೀಸ್‌ ಚೌಕಿಯೇ ಅಮಾನತು; ಇನ್ಮುಂದೆ ʼಬುಲೆಟ್‌ ರೈಲ್‌ʼ ಓಡಿಸಲಾಗುತ್ತೆ ಎಂದು ವಾರ್ನಿಂಗ್‌

Yogi Adityanath: ಪ್ರಕರಣದ ಆರೋಪಿಗಳನ್ನು ಅರೆಸ್ಟ್‌ ಮಾಡಲಾಗಿದ್ದು, ಅವರನ್ನು ಪವನ್‌ ಯಾದವ್‌ ಮತ್ತು ಮೊಹಮ್ಮದ್‌ ಅರ್ಬಾಜ್‌ ಎಂದು ಗುರುತಿಸಲಾಗಿದೆ. ಇವರಾ ನಿಮ್ಮ ಸದ್ಭಾವನೆಯ ವ್ಯಕ್ತಿಗಳು? ಇವರಿಗೆ ಸದ್ಭಾವನೆ ರೈಲು ಓಡಿಸಬೇಕೆ? ಚಿಂತಿಸಬೇಡಿ ಇಂತವರಿಗೆ ಇನ್ನು ಮುಂದೆ ಬುಲೆಟ್‌ ರೈಲು ಓಡಿಸಲಾಗುವುದು ಎಂದು ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ.

VISTARANEWS.COM


on

Yogi Adityanath
Koo

ಲಖನೌ: ಎರಡು ದಿನಗಳ ಹಿಂದೆಯಷ್ಟೇ ನಡುರಸ್ತೆಯಲ್ಲಿ ಯುಕವರ ಗುಂಪೊಂದು ನೀರು ಎರಚಿ ಕಿರುಕುಳ ಕೊಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಉತ್ತರಪ್ರದೇಶ ಮುಖ್ಯಮಂತ್ರಿ(Uttar Pradesh Chief Minister) ಯೋಗಿ ಆದಿತ್ಯಾನಾಥ್‌(Yogi Adityanath) ಘಟನಾ ಸ್ಥಳ ವ್ಯಾಪ್ತಿಗೆ ಬರುವ ಪೊಲೀಸ್‌ ಠಾಣೆಯ ಎಲ್ಲಾ ಪೊಲೀಸರನ್ನು ಅಮಾನತುಗೊಳಿಸಿದ್ದಾರೆ. ಲಖನೌದಲ್ಲಿ ನಡೆದ ಈ ಘಟನೆ ಬಗ್ಗೆ ಅಸೆಂಬ್ಲಿಯಲ್ಲಿ ಮಾತನಾಡಿದ ಯೋಗಿ, ಇನ್ನು ಮುಂದೆ ʼಬುಲೆಟ್‌ ರೈಲುʼ ಶುರುವಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರಕರಣದ ಆರೋಪಿಗಳನ್ನು ಅರೆಸ್ಟ್‌ ಮಾಡಲಾಗಿದ್ದು, ಅವರನ್ನು ಪವನ್‌ ಯಾದವ್‌ ಮತ್ತು ಮೊಹಮ್ಮದ್‌ ಅರ್ಬಾಜ್‌ ಎಂದು ಗುರುತಿಸಲಾಗಿದೆ. ಇವರಾ ನಿಮ್ಮ ಸದ್ಭಾವನೆಯ ವ್ಯಕ್ತಿಗಳು? ಇವರಿಗೆ ಸದ್ಭಾವನೆ ರೈಲು ಓಡಿಸಬೇಕೆ? ಚಿಂತಿಸಬೇಡಿ ಇಂತವರಿಗೆ ಇನ್ನು ಮುಂದೆ ಬುಲೆಟ್‌ ರೈಲು ಓಡಿಸಲಾಗುವುದು ಎಂದು ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ.

ಮಹಿಳೆಯರಿಗೆ ಕಿರುಕುಳ ನೀಡುವವರನ್ನು ಬಿಡುವುದಿಲ್ಲ ಎಂದು ಹೇಳಿದ ಸಿಎಂ ಯೋಗಿ, ಮಹಿಳೆಯರ ರಕ್ಷಣೆಯಲ್ಲಿ ವಿಫಲರಾಗಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ. “ಮಹಿಳೆಯರ ಸುರಕ್ಷತೆಯು ನಮಗೆ ಪ್ರಮುಖ ಸಮಸ್ಯೆಯಾಗಿದೆ ಮತ್ತು ನಾವು ಇದನ್ನು ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ನಾವು ಪ್ರತಿಯೊಬ್ಬ ಸಹೋದರಿ ಮತ್ತು ಮಗಳಿಗೆ ಭರವಸೆ ನೀಡಿದ್ದೇವೆ. ನಾವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಮತ್ತು ಗಂಭೀರವಾಗಿ ತೆಗೆದುಕೊಂಡ ಪರಿಣಾಮ ಇಡೀ ಚೌಕಿಯನ್ನು ಅಮಾನತುಗೊಳಿಸಲಾಗಿದೆ, ಇನ್ಸ್‌ಪೆಕ್ಟರ್ ಅಮಾನತು ಮಾಡಲಾಗಿದೆ, ಎಎಸ್ಪಿ, ಡಿಸಿಪಿ, ಎಲ್ಲರನ್ನೂ ತೆಗೆದುಹಾಕಲಾಗಿದೆ ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಏನಿದು ಘಟನೆ?

ಉತ್ತರ ಪ್ರದೇಶದ ಲಕ್ನೋದ ತಾಜ್ ಹೋಟೆಲ್ ಸೇತುವೆಯ ಬಳಿ ಈ ಘಟನೆ ನಡೆದಿದ್ದು, ಮೊಣಕಾಲು ಆಳದ ನೀರಿನಲ್ಲಿ ಮಳೆಯ ನೀರಿನಲ್ಲಿ ಎಂಜಾಯ್ ಮಾಡುತ್ತಿದ್ದ ಪುರುಷರ ಗುಂಪೊಂದು ಅದೇ ಮಾರ್ಗದಲ್ಲಿ ಬಂದ ಬೈಕ್​ನಲ್ಲಿ ಕುಳಿತಿದ್ದ ಪುರುಷ ಮತ್ತು ಯುವತಿಗೆ ಆ ಮಳೆನೀರನ್ನು ಎರಚಿ ಕಿರುಕುಳ ನೀಡಿದ್ದಾರೆ. ಆ ಇಬ್ಬರ ಮೈ ಪೂರ್ತಿ ಒದ್ದೆಯಾಗಿ ಅವರು ತಮ್ಮನ್ನು ಬಿಡುವಂತೆ ಮನವಿ ಮಾಡಿದರೂ ಬಿಡದೆ ಕಿಚಾಯಿಸಿದ್ದಾರೆ. ಇನ್ನೂ ವಿಪರ್ಯಾಸವೆಂದರೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ಮನೆಯ ಸಮೀಪದಲ್ಲೇ ಈ ಘಟನೆ ನಡೆದಿದೆ.

ಬೈಕ್​ನಲ್ಲಿ ಬಂದ ಇಬ್ಬರ ಮೇಲೆ ಮಳೆ ನೀರು ಎರಚಿದ ಪುರುಷರು ಆ ಬೈಕ್ ಅನ್ನು ಹಿಂಬದಿಯಿಂದ ಎಳೆಯಲು ಆರಂಭಿಸಿದರು. ಇದರಿಂದ ಆ ವ್ಯಕ್ತಿ ಬೈಕ್ ನಿಲ್ಲಿಸಿ ಕೀ ತೆಗೆಯುತ್ತಿದ್ದಂತೆ ಬ್ಯಾಲೆನ್ಸ್ ತಪ್ಪಿ ಹಿಂದೆ ಕುಳಿತಿದ್ದ ಯುವತಿ ನೀರಿಗೆ ಬಿದ್ದಿದ್ದಾಳೆ. ಇನ್ನು ಈ ವಿಡಿಯೋಗೆ ಸಾಮಾಜಿಕ ಜಾಲತಾಣದಲ್ಲಿ ವೈರಲಾಗುತ್ತಿದ್ದಂತೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: Uttar Pradesh Politics: ಉತ್ತರಪ್ರದೇಶದಲ್ಲಿ ಬಿಜೆಪಿ ಹೀನಾಯ ಸೋಲಿಗೆ ಇತ್ತು ಆ 6 ಪ್ರಮುಖ ಕಾರಣಗಳು

Continue Reading

ದೇಶ

Rahul Gandhi: ರಾಹುಲ್‌ ಗಾಂಧಿ ಹೊಲಿದ ಚಪ್ಪಲಿಗೆ 10 ಲಕ್ಷ ರೂ. ಆಫರ್;‌ ಆದರೂ ಮಾರದ ಚಮ್ಮಾರ!

Rahul Gandhi: ರಾಹುಲ್‌ ಗಾಂಧಿ ಅವರು ಜುಲೈ 26ರಂದು ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಲ್ತಾನ್‌ಪುರ ಕೋರ್ಟ್‌ಗೆ ಹಾಜರಾಗಿದ್ದರು. ಇದಾದ ಬಳಿಕ ಅವರು ಲಖನೌಗೆ ತೆರಳುವ ಮಾರ್ಗದ ಮಧ್ಯೆ ಸುಲ್ತಾನ್‌ಪುರದಲ್ಲಿರುವ ರಾಮ್‌ ಚೇಟ್‌ ಅಂಗಡಿಗೆ ತೆರಳಿದ್ದರು. ಈಗ ರಾಮ್‌ ಚೇಟ್‌ ಅವರ ಜೀವನವೇ ಬದಲಾಗಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿ ಅವರು ಸೆಲೆಬ್ರಿಟಿ ಆಗಿದ್ದಾರೆ.

VISTARANEWS.COM


on

Rahul Gandhi
Koo

ಲಖನೌ: ಕಾಂಗ್ರೆಸ್‌ ನಾಯಕರೂ ಆಗಿರುವ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಜುಲೈ 26ರಂದು ಉತ್ತರ ಪ್ರದೇಶಕ್ಕೆ ತೆರಳಿದ್ದಾಗ ಚಪ್ಪಲಿ ಹೊಲಿಯುವ ರಾಮ್‌ ಚೇಟ್‌ (Ram Chet) ಎಂಬುವರ ಅಂಗಡಿಗೆ ಭೇಟಿ ನೀಡಿದ್ದರು. ಸುಲ್ತಾನ್‌ಪುರದಲ್ಲಿರುವ ಚಪ್ಪಲಿ ಅಂಗಡಿಗೆ (UP Cobbler) ರಾಹುಲ್‌ ಗಾಂಧಿ ಅವರು ಭೇಟಿ ನೀಡಿದ ಬಳಿಕ ರಾಮ್‌ ಚೇಟ್‌ ಅವರ ದಿಸೆಯೇ ಬದಲಾಗಿದೆ. ಜನ ಅವರ ಅಂಗಡಿಗೆ ಬಂದು ಚಪ್ಪಲಿ ಹೊಲಿಸಿಕೊಳ್ಳುವುದು, ಅವರ ಜತೆ ಸೆಲ್ಫಿ ತೆಗೆಸಿಕೊಳ್ಳುವುದು ಮಾಡುತ್ತಿದ್ದಾರೆ. ಇನ್ನು, ರಾಹುಲ್‌ ಗಾಂಧಿ ಅವರು ಭೇಟಿ ವೇಳೆ ಹೊಲಿದ ಚಪ್ಪಲಿಗೆ ಈಗ ಭಾರಿ ಬೇಡಿಕೆ ಉಂಟಾಗಿದೆ. ರಾಹುಲ್‌ ಗಾಂಧಿ ಹೊಲಿದ ಚಪ್ಪಲಿಗೆ ಉದ್ಯಮಿಯೊಬ್ಬರು 10 ಲಕ್ಷ ರೂ. ಆಫರ್‌ ನೀಡಿದ್ದಾರೆ. ಇಷ್ಟಾದರೂ ರಾಮ್‌ ಚೇಟ್‌ ಅವರು ಮಾರಾಟ ಮಾಡಿಲ್ಲ ಎಂಬುದು ಗಮನಾರ್ಹ ಸಂಗತಿಯಾಗಿದೆ.

ಮಾಧ್ಯಮಗಳೊಂದಿಗೆ ರಾಮ್‌ ಚೇಟ್‌ ಮಾತನಾಡಿದ್ದು, “ರಾಹುಲ್‌ ಗಾಂಧಿ ಅವರು ನನ್ನ ಅಂಗಡಿಗೆ ಬಂದು ಹೋದ ಬಳಿಕ ನನ್ನ ಬದುಕೇ ಬದಲಾಗಿದೆ. ಕಾರು, ಬೈಕುಗಳಲ್ಲಿ ಬರುವ ಜನ ನನ್ನೊಂದಿಗೆ ಮಾತನಾಡುತ್ತಿದ್ದಾರೆ. ಫೋಟೊ ತೆಗೆಸಿಕೊಳ್ಳುತ್ತಿದ್ದಾರೆ. ಇನ್ನು ರಾಹುಲ್‌ ಗಾಂಧಿ ಅವರು ಹೊಲಿದ ಚಪ್ಪಲಿಗೆ ಭಾರಿ ಬೇಡಿಕೆ ಉಂಟಾಗಿದೆ. 5 ಲಕ್ಷ ರೂ. ಕೊಡುತ್ತೇವೆ, 10 ಲಕ್ಷ ರೂ. ಕೊಡುತ್ತೇವೆ ಆ ಚಪ್ಪಲಿ ಕೊಡು ಎನ್ನುತ್ತಿದ್ದಾರೆ. ನಾನು ಆ ಚಪ್ಪಲಿ ಹೊಲಿಯಲು ಬಿಟ್ಟು ಹೋದ ಗ್ರಾಹಕನಿಗೂ ಕೊಡುವುದಿಲ್ಲ. ಚಪ್ಪಲಿಯ ಮೊತ್ತವನ್ನು ಗ್ರಾಹಕನಿಗೆ ನೀಡುತ್ತೇನೆ. ಇದನ್ನು ಮಾರಾಟ ಮಾಡುವುದಿಲ್ಲ” ಎಂದು ಹೇಳುವ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಹೊಲಿಗೆ ಯಂತ್ರ ಕೊಡಿಸಿದ ರಾಹುಲ್‌ ಗಾಂಧಿ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ರಾಮ್‌ ಚೇಟ್‌ ಅವರನ್ನು ಭೇಟಿಯಾಗಿದ್ದು ಮಾತ್ರವಲ್ಲ, ಅವರಿಗೆ ಚಪ್ಪಲಿ, ಬೂಟುಗಳನ್ನು ಹೊಲಿಯುವ ಯಂತ್ರವನ್ನು ಕೊಡಿಸಿದ್ದಾರೆ. ರಾಹುಲ್‌ ಗಾಂಧಿ ಭೇಟಿ ನೀಡಿದ ಮರುದಿನ ಅಂದರೆ ಜುಲೈ 27ರಂದು ರಾಮ್‌ ಚೇಟ್‌ ಅವರಿಗೆ ಹೊಲಿಗೆ ಯಂತ್ರ ತಲುಪಿದೆ. ಇದರಿಂದ ಅವರು ಸುಲಭವಾಗಿ ಚಪ್ಪಲಿ ಹಾಗೂ ಶೂಗಳನ್ನು ಹೊಲಿಯಲು ಸಾಧ್ಯವಾಗುತ್ತಿದೆ. ರಾಹುಲ್‌ ಗಾಂಧಿ ಭೇಟಿ ಬಳಿಕ ಅವರ ವ್ಯಾಪಾರವೂ ಚೆನ್ನಾಗಿ ನಡೆಯುತ್ತಿದೆ.

ರಾಹುಲ್‌ ಗಾಂಧಿ ಅವರು ಜುಲೈ 26ರಂದು ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಲ್ತಾನ್‌ಪುರ ಕೋರ್ಟ್‌ಗೆ ಹಾಜರಾಗಿದ್ದರು. ಇದಾದ ಬಳಿಕ ಅವರು ಲಖನೌಗೆ ತೆರಳುವ ಮಾರ್ಗದ ಮಧ್ಯೆ ಸುಲ್ತಾನ್‌ಪುರದಲ್ಲಿರುವ ರಾಮ್‌ ಚೇಟ್‌ ಅಂಗಡಿಗೆ ತೆರಳಿದ್ದರು. ರಾಮ್‌ ಚೇಟ್‌ ಅವರ ಅಂಗಡಿ ವ್ಯಾಪಾರ ಸೇರಿ ಹಲವು ವಿಷಯಗಳ ಕುರಿತು ಕಾಂಗ್ರೆಸ್‌ ನಾಯಕ ಮಾತನಾಡಿದ್ದರು. ಇದೇ ವೇಳೆ ರಾಹುಲ್‌ ಗಾಂಧಿ ಅವರು ಚಪ್ಪಲಿ ಹೊಲಿದಿದ್ದರು. ಈ ಫೋಟೊ ಹಾಗೂ ವಿಡಿಯೊ ವೈರಲ್‌ ಆಗಿದ್ದವು.

ಇದನ್ನೂ ಓದಿ: Wayanad Landslide: ವಯನಾಡು ಸ್ಥಿತಿ ನೋಡಿ ತಂದೆ ಸಾವು ನೆನಪಾಯ್ತು ಎಂದ ರಾಹುಲ್‌ ಗಾಂಧಿ; ಸಾವಿನ ಸಂಖ್ಯೆ 300ರ ಸನಿಹ

Continue Reading

ದೇಶ

ಕಾಶ್ಮೀರದಲ್ಲಿ ಮುಂಬೈ ದಾಳಿ ರೂವಾರಿ ಹಫೀಜ್‌ ಸಯೀದ್‌ ಆಪ್ತನ ಹತ್ಯೆ; ಈತ ಪಾಕ್‌ ಕಮಾಂಡೋ ಕೂಡ ಹೌದು!

Kupwara Encounter: ಹಫೀಜ್‌ ಸಯೀದ್‌ ಆಪ್ತ, ಪಾಕಿಸ್ತಾನದ ಸೇನೆಯ ಸ್ಪೆಷಲ್‌ ಸರ್ವಿಸ್‌ ಗ್ರೂಪ್‌ (SSG) ಕಮಾಂಡೋ ಕೂಡ ಆಗಿರುವ ನೊಮಾನ್‌ ಜಿಯಾವುಲ್ಲಾನನ್ನು ಭಾರತದ ಯೋಧರು ಹತ್ಯೆಗೈದಿದ್ದಾರೆ. ಕುಪ್ವಾರ ಜಿಲ್ಲೆಯ ಮಚಿಲ್ ಪ್ರದೇಶದ ಗಡಿಯಲ್ಲಿ ಅಕ್ರಮವಾಗಿ ಒಳನುಸುಳಲು ನೊಮಾನ್‌ ಜಿಯಾವುಲ್ಲಾ ಪ್ರಯತ್ನಿಸುತ್ತಿದ್ದ. ಆಗ ಭಾರತದ ಯೋಧರು ಗುಂಡಿನ ದಾಳಿ ಮೂಲಕ ಈತನನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Kupwara Encounter
Koo

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ (Jammu Kashmir) ಉಗ್ರ ಚಟುವಟಿಕೆಗಳು ಹೆಜ್ಜಾಗಿದ್ದು, ಸೈನಿಕರು ಹಾಗೂ ವಲಸಿಗ ಕಾರ್ಮಿಕರನ್ನು ಗುರಿಯಾಗಿಸಿ ನಡೆಸುತ್ತಿರುವ ದಾಳಿಗಳು ಜಾಸ್ತಿಯಾಗಿವೆ. ಭಾರತೀಯ ಸೇನೆಯೂ ಉಗ್ರರನ್ನು ಮಟ್ಟ ಹಾಕಲು ಸತತ ಕಾರ್ಯಾಚರಣೆ ಕೈಗೊಳ್ಳುತ್ತಿದೆ. ಇದರ ಮಧ್ಯೆಯೇ, ಭಾರತೀಯ ಸೇನೆಯು (Indian Army) ಭಾರಿ ಮುನ್ನಡೆ ಸಾಧಿಸಿದೆ. ಮುಂಬೈ ದಾಳಿ ರೂವಾರಿ, ಜಾಗತಿಕ ಉಗ್ರ ಹಫೀಜ್‌ ಸಯೀದ್‌ ಆಪ್ತನನ್ನು ಭಾರತದ ಯೋಧರು ಕುಪ್ವಾರದಲ್ಲಿ (Kupwara Encounter) ಹೊಡೆದುರುಳಿಸಿದ್ದಾರೆ.

ಹೌದು, ಕುಪ್ವಾರದಲ್ಲಿ ಹಫೀಜ್‌ ಸಯೀದ್‌ ಆಪ್ತ, ಪಾಕಿಸ್ತಾನದ ಸೇನೆಯ ಸ್ಪೆಷಲ್‌ ಸರ್ವಿಸ್‌ ಗ್ರೂಪ್‌ (SSG) ಕಮಾಂಡೋ ಕೂಡ ಆಗಿರುವ ನೊಮಾನ್‌ ಜಿಯಾವುಲ್ಲಾನನ್ನು ಭಾರತದ ಯೋಧರು ಹತ್ಯೆಗೈದಿದ್ದಾರೆ. ಕುಪ್ವಾರ ಜಿಲ್ಲೆಯ ಮಚಿಲ್ ಪ್ರದೇಶದ ಗಡಿಯಲ್ಲಿ ಅಕ್ರಮವಾಗಿ ಒಳನುಸುಳಲು ನೊಮಾನ್‌ ಜಿಯಾವುಲ್ಲಾ ಪ್ರಯತ್ನಿಸುತ್ತಿದ್ದ. ಇದರ ಕುರಿತು ನಿಖರ ಮಾಹಿತಿ ಪಡೆದ ಭಾರತದ ಯೋಧರು, ನೊಮಾನ್‌ ಜಿಯಾವುಲ್ಲಾನನ್ನು ಎನ್‌ಕೌಂಟರ್‌ ಮಾಡಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿವೆ.

ಜುಲೈ 27ರಂದೇ ನೊಮಾನ್‌ ಜಿಯಾವುಲ್ಲಾ ಭಾರತದೊಳಗೆ ಅಕ್ರಮವಾಗಿ ನುಸುಳಲು ಪ್ರಯತ್ನಿಸಿದ್ದ. ಅದೇ ದಿನ ಸೈನಿಕರು ಹತ್ಯೆ ಮಾಡಿದ್ದಾರೆ. ನೊಮಾನ್‌ ಜಿಯಾವುಲ್ಲಾನು ಪಾಕಿಸ್ತಾನದ ಎಸ್‌ಎಸ್‌ಜಿ ಕಮಾಂಡೋಗಳು ಧರಿಸುವ ಜಾಕೆಟ್‌ಗಳನ್ನು ಧರಿಸಿ ತೆಗೆಸಿಕೊಂಡ ಫೋಟೊಗಳು ಈಗ ಜಾಲತಾಣಗಳಲ್ಲಿ ವೈರಲ್‌ ಆಗಿವೆ. ಈತನು ಉಗ್ರ ಸಂಘಟನೆಯ ಜತೆ ನಂಟು ಹೊಂದಿರುವುದಲ್ಲದೆ, ಎಸ್‌ಎಸ್‌ಜಿ ಕಮಾಂಡೋ ಕೂಡ ಆಗಿದ್ದ ಎಂದು ತಿಳಿದುಬಂದಿದೆ. ಈತನ ಹತ್ಯೆಯ ಬಳಿಕ ಕಾಶ್ಮೀರದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪಾಕ್‌ನ 600 ಕಮಾಂಡೋಗಳ ಪ್ರವೇಶ?

ಪಾಕಿಸ್ತಾನದ 600 ಕಮಾಂಡೋಗಳು ಅಕ್ರಮವಾಗಿ ಜಮ್ಮು-ಕಾಶ್ಮೀರ ಗಡಿಯ ಮೂಲಕ ಭಾರತವನ್ನು ಪ್ರವೇಶಿಸಿದ್ದಾರೆ ಎಂಬುದಾಗಿ ಪಾಕ್‌ ಆಕ್ರಮಿತ ಕಾಶ್ಮೀರದ (PoK) ಹೋರಾಟಗಾರ ಡಾ.ಅಮ್ಜದ್‌ ಅಯುಬ್‌ ಮಿರ್ಜಾ ಅವರು ಕೆಲ ದಿನಗಳ ಹಿಂದಷ್ಟೇ ಹೇಳಿದ್ದರು. “ಪಾಕಿಸ್ತಾನದ ಎಸ್‌ಎಸ್‌ಜಿ ಜನರಲ್‌ ಆಫಿಸರ್‌ ಕಮಾಂಡಿಂಗ್‌ (ಜಿಒಸಿ) ಮೇಜರ್‌ ಜನರಲ್‌ ಆದಿಲ್‌ ರೆಹಮಾನಿಯು ಜಮ್ಮು ಪ್ರದೇಶದಲ್ಲಿ ದಾಳಿ ನಡೆಸುತ್ತಿದ್ದಾನೆ. ಪಾಕಿಸ್ತಾನದ 600 ಕಮಾಂಡೋಗಳು ಭಾರತಕ್ಕೆ ನುಗ್ಗಿದ್ದು, ಕುಪ್ವಾರದಲ್ಲಿ ಆಶ್ರಯ ಪಡೆದಿದ್ದಾರೆ” ಎಂಬುದಾಗಿ ಡಾ.ಅಮ್ಜದ್‌ ಅಯುಬ್‌ ಮಿರ್ಜಾ ಪೋಸ್ಟ್‌ ಮಾಡಿದ್ದರು. ಇದರ ಬೆನ್ನಲ್ಲೇ ಕಣಿವೆಯಲ್ಲಿ ಪಾಕ್‌ ಕಮಾಂಡೋನನ್ನು ಹೊಡೆದುರುಳಿಸಿರುವುದು ಹಲವು ಅನುಮಾನ ಮೂಡಲು ಕಾರಣವಾಗಿದೆ.

ಇದನ್ನೂ ಓದಿ: ಪಾಕಿಸ್ತಾನದ ಮತ್ತೊಂದು ಕುತಂತ್ರ ಬಯಲು: ಪಿಒಕೆಯಲ್ಲಿ ಸಮವಸ್ತ್ರದ ಬದಲು ಪಠಾಣಿ ಸೂಟ್ ಧರಿಸಿ ಬೇಹುಗಾರಿಕೆಗೆ ಮುಂದಾದ ಪಾಕ್‌ ಸೇನೆ

Continue Reading

ಪ್ರಮುಖ ಸುದ್ದಿ

Kerala Floods : ಬಾನೆಟ್​ ಎತ್ತರಕ್ಕೆ ತುಂಬಿದ್ದ ಪ್ರವಾಹದ ನೀರಿನಲ್ಲಿ ಸಾಗಿ ಕುಟುಂಬವೊಂದನ್ನು ರಕ್ಷಿಸಿದ ಮಹೀಂದ್ರಾ ಬೊಲೆರೊ! video ಇದೆ

Kerala Floods :

VISTARANEWS.COM


on

Kerala Floods
Koo

ಬೆಂಗಳೂರು: ಕೇರಳದಲ್ಲಿ ಮಳೆಯಿಂದ ಎಲ್ಲೆಡೆ ಅನಾಹುತಗಳು ಸಂಭವಿಸುತ್ತಿವೆ. ವಯನಾಡಲ್ಲಿ ಗುಡ್ಡ ಕುಸಿತ ಸಂಭವಿಸಿ ನೂರಾರು ಜೀವಗಳು ಮಣ್ಣು ಪಾಲಾದರೆ, ಇನ್ನೂ ಹಲವು ಕಡೆಗಳಲ್ಲಿ ಜನವಸತಿ ಪ್ರದೇಶಗಳಲ್ಲಿ ನೀರು ತುಂಬಿಕೊಂಡಿವೆ. ಪ್ರವಾಹ ಮತ್ತು ಗುಡ್ಡ ಕುಸಿತದಿಂದಾಗಿ ಕೇರಳದ ಜನರ ಜೀವನವೇ ಅಸ್ತವ್ಯಸ್ತಗೊಂಡಿದೆ. ಏತನ್ಮಧ್ಯೆ, ಪ್ರವಾಹ ಹಾಗೂ ಇನ್ನಿತರ ಪ್ರಾಕೃತಿಕ ವಿಕೋಪಗಳಿಗೆ ಸಿಲುಕಿರುವವರನ್ನು ರಕ್ಷಿಸುವ ಹಲವಾರು ಸಾಹಸಗಾಥೆಗಳು ಕೇಳಿ ಬರುತ್ತಿವೆ. ಅಂತೆಯೇ ಇಲ್ಲ ಮಲಪ್ಪುರಂನಲ್ಲಿ ಬಾನೆಟ್ ಎತ್ತರಕ್ಕೆ ತುಂಬಿದ್ದ ನೀರಿನ ನಡುವೆ ಮಹೀಂದ್ರಾ ಬೊಲೆರೊ ಕಾರೊಂದು ಸಾಗಿ ಕುಟುಂಬವನ್ನು ರಕ್ಷಿಸಿದ ಪ್ರಸಂಗ ನಡೆದಿದೆ. ಇಲ್ಲಿ ಮಹೀಂದ್ರಾ ಬೊಲೆರೊ ಕಾರಿನ ಸಾಮರ್ಥ್ಯ ಹಾಗೂ ಚಾಲಕನ ಸಾಹಕ್ಕೆ ಶಹಬ್ಬಾಸ್​ ದೊರಕಿದೆ.

ಆಟೋಜರ್ನಲ್ ಇಂಡಿಯಾ ಇನ್​​ಸ್ಟಾಗ್ರಾಮ್​ ಪೋಸ್ಟ್​​ನಲ್ಲಿ ಇದರ ವಿಡಿಯೊವನ್ನು ಪೋಸ್ಟ್ ಮಾಡಲಾಗಿದೆ. ಕರಿ ಬಣ್ಣದ ಬೊಲೆರೊ ಕಾರಿನ ಚಾಲಕ ರಸ್ತೆಯೇ ಕಾರಣದಿದ್ದರೂ ಸಾಗಿ ಹಲವರನ್ನು ರಕ್ಷಿಸಿಕೊಂಡು ಬಂದಿರುವುದನ್ನು ಕಾಣಬಹುದು.

ಕೇರಳದಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿಕೊಂಡಿದ್ದವರಿಗೆ ಆಪತ್ಬಾಂಧವ ಎನಿಕೊಂಡಿದ್ದ ಮಹೀಂದ್ರಾ ಬೊಲೆರೊ. ಲಕ್ಷಾಂತರ ಜನರನ್ನು ತಮ್ಮ ಗಮ್ಯಸ್ಥಾನಕ್ಕೆ ಸಾಗಿಸಿದ ಮಹೀಂದ್ರಾ ಬೊಲೆರೊ ಎಸ್​​ಯುವಿ ಈಗ ಕೇರಳದ ಮಲಪ್ಪುರಂನಲ್ಲಿ ಅತ್ಯಂತ ಪ್ರಭಾವಿ ಕೆಲಸ ಮಾಡುತ್ತಿದೆ. ಬೊಲೆರೊ ತನ್ನ ಜನರನ್ನು ಉಳಿಸಿದೆ ಮತ್ತು ಸುತ್ತಮುತ್ತಲಿನ ಕುಟುಂಬಗಳನ್ನು ರಕ್ಷಿಸಿದೆ, ಮಹೀಂದ್ರಾ ಬೊಲೆರೊದ ರಕ್ಷಣಾ ಕಾರ್ಯಾಚರಣೆಯನ್ನು ನೀವು ಇಷ್ಟಪಟ್ಟಿದ್ದೀರಾ ಎಂದು ಪೋಸ್ಟ್​​ನಲ್ಲಿ ಬರೆಯಲಾಗಿದೆ.

ಪ್ರಾಣವನ್ನೇ ಒತ್ತೆ ಇಟ್ಟು ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕರೆದೊಯ್ದ ಪತಿ

ದೇವರ ನಾಡು ಕೇರಳ ಈಗ ವರುಣನ (Kerala Floods) ಆರ್ಭಟಕ್ಕೆ ತತ್ತರಿಸಿ ಹೋಗಿದೆ. ವಯನಾಡಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹ ಮತ್ತು ಭೂಕುಸಿತ (Wayanad Floods) ಉಂಟಾಗಿದ್ದು, ಸಾವಿನ ಸಂಖ್ಯೆ 300 ಸಮೀಪಿಸಿದೆ. 200ಕ್ಕೂ ಅಧಿಕ ಜನ ನಾಪತ್ತೆಯಾಗಿದ್ದು, ಕಾರ್ಯಾಚರಣೆ ನಡೆಯುತ್ತಲೇ ಇದೆ. ಇನ್ನು, ವಯನಾಡು ಮಾತ್ರವಲ್ಲ, ಇಡುಕ್ಕಿ ಜಿಲ್ಲೆಯಲ್ಲೂ ಭಾರಿ ಮಳೆಯಾಗುತ್ತಿದ್ದು, ಪ್ರವಾಹದಿಂದ ಜನ ತತ್ತರಿಸಿ ಹೋಗಿದ್ದಾರೆ. ಇನ್ನು, ಇಡುಕ್ಕಿಯಲ್ಲಿ ವ್ಯಕ್ತಿಯೊಬ್ಬರು ಉಕ್ಕಿ ಹರಿಯುತ್ತಿರುವ ನದಿಯ ಸೇತುವೆ ಮೇಲೆಯೇ ಪ್ರಾಣವನ್ನೂ ಲೆಕ್ಕಿಸದೆ ಕಾರಿನಲ್ಲಿ ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಈ ವಿಡಿಯೊ (Viral Video) ಈಗ ಭಾರಿ ವೈರಲ್‌ ಆಗಿದೆ.

ಇದನ್ನೂ ಓದಿ: Wayanad Landslide: ವಯನಾಡು ಸ್ಥಿತಿ ನೋಡಿ ತಂದೆ ಸಾವು ನೆನಪಾಯ್ತು ಎಂದ ರಾಹುಲ್‌ ಗಾಂಧಿ; ಸಾವಿನ ಸಂಖ್ಯೆ 300ರ ಸನಿಹ

ಹೌದು, ಇಡುಕ್ಕಿ ಜಿಲ್ಲೆಯಲ್ಲಿ ನದಿಯೊಂದು ಉಕ್ಕಿ ಹರಿಯುತ್ತಿದೆ. ಸೇತುವೆ ಮೇಲೆಯೂ ನೀರು ರಭಸವಾಗಿ ಹರಿಯುತ್ತಿದೆ. ಆದರೆ, ಗರ್ಭಿಣಿ ಪತ್ನಿಯನ್ನು ತುರ್ತಾಗಿ ಆಸ್ಪತ್ರೆಗೆ ಸೇರಿಸಬೇಕಾದ ಕಾರಣ ವ್ಯಕ್ತಿಯು ಪತ್ನಿಯನ್ನು ಕಾರಿನಲ್ಲಿ ಕೂರಿಸಿಕೊಂಡು ಇಡುಕ್ಕಿ ಆಸ್ಪತ್ರೆಯತ್ತ ಹೊರಟಿದ್ದಾರೆ. ಸೇತುವೆಯ ಮೇಲೆಯೂ ನೀರು ಹರಿಯುವುದನ್ನು ಕಂಡ ಅವರು ಆತಂಕಕ್ಕೀಡಾಗಿದ್ದಾರೆ.

ಪತ್ನಿಯನ್ನು ಆಸ್ಪತ್ರೆಗೆ ಸೇರಿಸಲೇಬೇಕಾದ ಕಾರಣ ಅವರು ರಭಸವಾಗಿ ಹರಿಯುತ್ತಿದ್ದ ನೀರನ್ನೂ ಲೆಕ್ಕಿಸದೆ, ವೇಗವಾಗಿ ಕಾರು ಚಲಾಯಿಸಿಕೊಂಡು ಹೋಗಿದ್ದಾರೆ. ಇಬ್ಬರೂ ಸುರಕ್ಷಿತವಾಗಿ ಇಡುಕ್ಕಿ ಆಸ್ಪತ್ರೆ ತಲುಪಿದ್ದಾರೆ. ವ್ಯಕ್ತಿಯ ಪತ್ನಿ ಈಗ ಆರೋಗ್ಯದಿಂದ ಇದ್ದಾರೆ ಎಂದು ತಿಳಿದುಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ವೈರಲ್‌ ಆಗುತ್ತಲೇ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪತ್ನಿಗಾಗಿ ಶೌರ್ಯತನ ಮೆರೆದ ಈತನೇ ನಿಜವಾದ ಪತಿ ಎಂದೆಲ್ಲ ಹೊಗಳಿದ್ದಾರೆ.

Continue Reading
Advertisement
Yogi Adityanath
ದೇಶ5 mins ago

Yogi Adityanath: ನೀರು ಎರಚಿ ಮಹಿಳೆಗೆ ಕಿರುಕುಳ ಕೇಸ್‌; ಇಡೀ ಪೊಲೀಸ್‌ ಚೌಕಿಯೇ ಅಮಾನತು; ಇನ್ಮುಂದೆ ʼಬುಲೆಟ್‌ ರೈಲ್‌ʼ ಓಡಿಸಲಾಗುತ್ತೆ ಎಂದು ವಾರ್ನಿಂಗ್‌

India's National Pension System
ಮನಿ-ಗೈಡ್13 mins ago

National Pension System: ವೃದ್ಧಾಪ್ಯದಲ್ಲಿ ಆರ್ಥಿಕ ಭದ್ರತೆಗಾಗಿ ಎನ್‌ಪಿಎಸ್ ಯೋಜನೆ ಸೂಕ್ತ

Karnataka Rain
ಮಳೆ19 mins ago

Karnataka Rain News: ಮಳೆ ಆರ್ಭಟ, ಇಂದು ಶಾಲೆ ಕಾಲೇಜುಗಳಿಗೆ ರಜೆ

wilma rudolph ರಾಜಮಾರ್ಗ ಅಂಕಣ
ಅಂಕಣ42 mins ago

ರಾಜಮಾರ್ಗ ಅಂಕಣ: ಬಾಲ್ಯದಲ್ಲಿ ಎರಡೂ ಕಾಲು ಪೋಲಿಯೋ ಪೀಡಿತಳಾದ ಹುಡುಗಿ ಮಹೋನ್ನತ ಕ್ರೀಡಾಪಟು ಆದ ಕಥೆ!

Things to Avoid Cleaning with Lemon
ಲೈಫ್‌ಸ್ಟೈಲ್1 hour ago

Things to Avoid Cleaning with Lemon: ಇವುಗಳನ್ನು ಸ್ವಚ್ಛ ಮಾಡಲು ಯಾವ ಕಾರಣಕ್ಕೂ ನಿಂಬೆಹಣ್ಣನ್ನು ಬಳಸಲೇಬೇಡಿ!

LIC New Jeevan Shanti Plan
ಮನಿ-ಗೈಡ್1 hour ago

LIC New Jeevan Shanti Plan: ಒಮ್ಮೆ ಪಾವತಿಸಿದರೆ ಸಾಕು; ಜೀವನ ಪರ್ಯಂತ ಪಿಂಚಣಿ!

Vastu Tips
ಧಾರ್ಮಿಕ2 hours ago

Vastu Tips: ಗಲ್ಲಾ ಪೆಟ್ಟಿಗೆಯಲ್ಲಿ ಇಂಥ ವಸ್ತುಗಳನ್ನು ಇಟ್ಟರೆ ಲಾಸ್‌!

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : ಒಲಿಂಪಿಕ್ಸ್​ನಲ್ಲಿ ಇಂದು ಕಣಕ್ಕೆ ಇಳಿಯಲಿರುವ ಭಾರತದ ಸ್ಪರ್ಧಿಗಳು ಯಾರ್ಯಾರು? ಇಲ್ಲಿದೆ ಎಲ್ಲ ವಿವರ

Tea vs Coffee
ಆರೋಗ್ಯ2 hours ago

Tea vs Coffee: ಟೀ ಒಳ್ಳೆಯದಾ ಕಾಫಿ ಒಳ್ಳೆಯದಾ? ಇಲ್ಲಿದೆ ಉತ್ತರ

karnataka Rain
ಮಳೆ2 hours ago

Karnataka Weather : 7 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ ಕೊಟ್ಟ ಹವಾಮಾನ ತಜ್ಞರು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ18 hours ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ19 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ19 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ3 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ4 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ4 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ4 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ5 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌