ಶ್ರೀನಗರ: ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆ ಸಿಬ್ಬಂದಿ ಭಯೋತ್ಪಾದಕರ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿ, ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಶೋಪಿಯಾನ್ ನ ಮುಂಜ್ ಮಾರ್ಗ್ ಏರಿಯದಲ್ಲಿ ನಡೆದ ಈ ಎನ್ ಕೌಂಟರ್ ನಲ್ಲಿ ಮೃತಪಟ್ಟ ಮೂವರು ಉಗ್ರರು ಲಷ್ಕರೆ ತೊಯ್ಬಾ ಸಂಘಟನೆಗೆ ಸೇರಿದವರು ಎನ್ನಲಾಗಿದ್ದು, ಅವರ ಗುರುತು ಪತ್ತೆ ಪ್ರಕ್ರಿಯೆ ನಡೆಯುತ್ತಿದೆ.
ಮಂಗಳವಾರ ಮುಂಜಾನೆ ಸಮಯದಲ್ಲಿ ಮುಂಜ್ ಮಾರ್ಗ್ ಏರಿಯಾದಲ್ಲಿ ಭಯೋತ್ಪಾದಕ ವಿರೋಧಿ ಕಾರ್ಯಾಚರಣೆ ಪ್ರಾರಂಭ ಆಗಿತ್ತು. ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಪಡೆದೇ ಭದ್ರತಾ ಸಿಬ್ಬಂದಿ ಆ ಪ್ರದೇಶವನ್ನು ಸುತ್ತುವರಿದಿದ್ದರು. ಆದರೆ ಉಗ್ರರು ಗುಂಡಿನ ದಾಳಿ ನಡೆಸಲು ಪ್ರಾರಂಭ ಮಾಡಿದ್ದಾರೆ. ಅದಕ್ಕೆ ಪ್ರತಿಯಾಗಿ ಭದ್ರತಾ ಸಿಬ್ಬಂದಿಯೂ ಫೈರಿಂಗ್ ನಡೆಸಿ, ಮೂವರನ್ನು ಕೊಂದಿದ್ದಾರೆ. ಅಲ್ಲಿ ಇನ್ನೂ ಇಬ್ಬರು ಮೂವರು ಭಯೋತ್ಪಾದಕರು ಇರಬಹುದು ಎಂದು ಅಂದಾಜಿಸಲಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ. ಈ ಬಗ್ಗೆ ಕಾಶ್ಮೀರಿ ವಲಯ ಪೊಲೀಸರು ಟ್ವೀಟ್ ಮಾಡಿ ತಿಳಿಸಿದ್ದಾರೆ.
ಇದನ್ನೂ ಓದಿ: ಪಾಕಿಸ್ತಾನಕ್ಕೆ ನುಗ್ಗಿದ ತಾಲಿಬಾನ್ ಉಗ್ರರು; ಪೊಲೀಸ್ ಸಿಬ್ಬಂದಿಯನ್ನು ಒತ್ತೆಯಾಳಾಗಿಟ್ಟು, ಭಯೋತ್ಪಾದಕರ ಬಿಡುಗಡೆ