Site icon Vistara News

ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ 3 ಭಯೋತ್ಪಾದಕರ ಹತ್ಯೆ

encounter

ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಉಗ್ರರು ಹತರಾಗಿದ್ದಾರೆ.

ದಕ್ಷಿಣ ಕಾಶ್ಮೃದ ಪುಲ್ವಾಮಾ ಜಿಲ್ಲೆಯ ಡ್ರಾಬ್‌ಗಾಂವ್‌ ಪ್ರದೇಶದಲ್ಲಿ ಎನ್‌ಕೌಂಟರ್‌ ನಡೆಯಿತು. ಘಟನೆ ನಡೆದ ಸ್ಥಳದಲ್ಲಿ ಉಗ್ರರ ಬಳಿ ಇದ್ದ ಮದ್ದುಗುಂಡುಗಳನ್ನು, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಳೆದ ಕೆಲ ತಿಂಗಳುಗಳಿಂದ ಉಗ್ರರ ದಮನ ಕಾರ್ಯಾಚರಣೆ ತೀವ್ರವಾಗಿದೆ. ಕುಲ್‌ಗಾಂವ್‌ನಲ್ಲಿ ಕಳೆದ ಶನಿವಾರ ಹಿಜ್ಬುಲ್‌ ಮುಜಾಹಿದ್ದಿನ್‌ನ ಭಯೋತ್ಪಾದಕನ ಹತ್ಯೆಯಾಗಿತ್ತು. ಬಹುತೇಕ ಎನ್‌ಕೌಂಟರ್‌ಗಳು ಸೇನೆ ಮತ್ತು ಪೊಲೀಸರ ಜಂಟಿ ಸಹಯೋಗದಲ್ಲಿ ನಡೆಯುತ್ತದೆ. ವಿಶೇಷ ವಿಚಕ್ಷಣ ದಳದ ಗುಪ್ತಚರ ಮಾಹಿತಿಯನ್ನು ಆಧರಿಸಿ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಯುತ್ತದೆ.

ಮೃತಪಟ್ಟಿರುವ ಮೂವರೂ ಸ್ಥಳೀಯ ಭಯೋತ್ಪಾದಕರಾಗಿದ್ದು, ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಪಾಕಿಸ್ತಾನ ಮೂಲದ ಲಷ್ಕರೆ ತೈಬಾ ಜತೆ ಸಂಪರ್ಕ ಹೊಂದಿದ್ದಾರೆ. ಹತರಾದ ಉಗ್ರರಲ್ಲೊಬ್ಬ ಜಮ್ಮು ಕಾಶ್ಮೀರದ ವಿಶೇಷ ಪೊಲೀಸ್‌ ಅಧಿಕಾರಿ ರಿಯಾಜ್‌ ಅಹ್ಮದ್‌ ಥೋಕರ್‌ ಹತ್ಯೆಯಲ್ಲಿ ಭಾಗಿಯಾಗಿದ್ದ.

Exit mobile version