Site icon Vistara News

Rajya Sabha: 2014ರಿಂದ ಹೆಣ್ಣು ಮಕ್ಕಳ ಶಾಲಾ ದಾಖಲಾತಿಯಲ್ಲಿ ಶೇ.31 ಹೆಚ್ಚಳ!

31 percent increase in school enrollment of girls since 2014, Center informed to rajya Sabha

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ನೇತೃತ್ವದ ಕೇಂದ್ರ ಸರ್ಕಾರ ಕೈಗೊಂಡ ಅನೇಕ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ 2014-15ರಿಂದ ಹೆಣ್ಣು ಮಕ್ಕಳ (girl students) ಶಾಲಾ ದಾಖಲಾತಿಯಲ್ಲಿ ಶೇ.31ರಷ್ಟು ಹೆಚ್ಚಳವಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Union Minister Dharmendra Pradhan) ಅವರು ಬುಧವಾರ ರಾಜ್ಯಸಭೆಗೆ (Rajya Sabha) ತಿಳಿಸಿದ್ದಾರೆ.

ಭಾರತದಲ್ಲಿ ಒಟ್ಟು 30 ಕೋಟಿ ವಿದ್ಯಾರ್ಥಿಗಳಿದ್ದು, ಈ ಪೈಕಿ 26 ಕೋಟಿ ಮಕ್ಕಳು 0-12ನೇ ತರಗತಿಯವರೆಗೆ ಕಲಿಯುತ್ತಿದ್ದರು, 4 ಕೋಟಿ ಮಕ್ಕಳು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿದ್ದಾರೆ ಎಂದು ಪ್ರಶ್ನೋತ್ತರ ಅವಧಿಯಲ್ಲಿ ಕೇಳಲಾದ ಪೂರಕ ಪ್ರಶ್ನೆಗೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಉತ್ತರಿಸಿದರು.

ಹಾಗೆಯೇ, ಪ್ರಧಾನಿ ನರೇಂದರ ಮೋದಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಉನ್ನತ ಶಿಕ್ಷಣಕ್ಕೆ ದಾಖಲಾಗುವ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಶೇ.20ರಿಂದ 25ರಷ್ಟು ಹೆಚ್ಚಳವಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇದೇ ವೇಳೆ ರಾಜ್ಯಸಭೆಗೆ ಮಾಹಿತಿ ನೀಡಿದರು.

ಪರಿಶಿಷ್ಟ ಜಾತಿಗೆ (ಎಸ್‌ಸಿ) ಸೇರಿದ ಹುಡುಗಿಯರ ಸಂಖ್ಯೆ 50% ರಷ್ಟಿದೆ. ಎಸ್‌ಸಿ ಮತ್ತು ಪರಿಶಿಷ್ಟ ಪಂಗಡದ (ಎಸ್‌ಟಿ) ವಿದ್ಯಾರ್ಥಿಗಳ ದಾಖಲಾತಿ ಬೆಳವಣಿಗೆ ದರವು ಕ್ರಮವಾಗಿ 44% ಮತ್ತು 65% ಆಗಿದೆ. ಇತರ ಹಿಂದುಳಿದ ವರ್ಗಗಳ (ಒಬಿಸಿ) ವಿದ್ಯಾರ್ಥಿಗಳ ದಾಖಲಾತಿಯಲ್ಲೂ ಬೆಳವಣಿಗೆ ಕಂಡು ಬಂದಿದೆ. ಶಾಲೆಗಳಲ್ಲಿ ಮುಸ್ಲಿಂ ಅಲ್ಪಸಂಖ್ಯಾತರ ವಿದ್ಯಾರ್ಥಿನಿಯರ 45% ಹೆಚ್ಚಳವಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಂಡ ಅನೇಕ ಕಾರ್ಯಕ್ರಮಗಳ ಫಲವಾಗಿ ಮಕ್ಕಳು ಹೆಚ್ಚಿನ ಅಧ್ಯಯನಕ್ಕೆ ಮುಂದಾಗುತ್ತಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ ಭಾರತವನ್ನು ಹೊಸ ಶಿಕ್ಷಣ ನೀತಿಯ ಮತ್ತೊಂದು ಎತ್ತರಕ್ಕೆ ಕೊಂಡೊಯ್ಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಿಳಿಸಿದರು.

ಭಾರತದ ಆತ್ಮವು ಅದರ ಭಾಷೆಗಳ ಮೂಲಕ ಜೀವಂತವಾಗಿದೆ ಮತ್ತು ಅದಕ್ಕಾಗಿಯೇ ಭಾರತೀಯ ಭಾಷೆಗಳ ಬೋಧನೆಯನ್ನು ಹೆಚ್ಚಿಸಲು ಕ್ರಮಗಳನ್ನು ತೆಗೆದುಕೊಳ್ಳಲು ಸರ್ಕಾರ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವರು ಹೇಳಿದರು. ನವೀಕರಿಸಿದ ಪಠ್ಯಕ್ರಮದ ಚೌಕಟ್ಟಿನ ಪ್ರಕಾರ, 11 ಮತ್ತು 12 ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಕನಿಷ್ಠ ಎರಡು ಭಾಷೆಗಳನ್ನು ಅಧ್ಯಯನ ಮಾಡುವುದು ಕಡ್ಡಾಯವಾಗಿದೆ ಮತ್ತು ಅವುಗಳಲ್ಲಿ ಒಂದು ಭಾರತೀಯ ಭಾಷೆಯಾಗಿರುತ್ತದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಿಳಿಸಿದರು.

ಈ ಸುದ್ದಿಯನ್ನೂ ಓದಿ: Education Department: ಶಾಲಾ ಆವರಣದಲ್ಲಿ ಶಿಕ್ಷಣೇತರ ಚಟುವಟಿಕೆಗೆ ಬ್ರೇಕ್‌; ಶಿಕ್ಷಣ ಇಲಾಖೆ ಸುತ್ತೋಲೆ

Exit mobile version