Stray Dogs: ಒಂಟಿ ಮಹಿಳೆ ಮೇಲೆ ದಾಳಿ ನಡೆಸಿ, ಕಚ್ಚಿ ಕೊಂದ 20 ಬೀದಿ ನಾಯಿಗಳು! - Vistara News

ದೇಶ

Stray Dogs: ಒಂಟಿ ಮಹಿಳೆ ಮೇಲೆ ದಾಳಿ ನಡೆಸಿ, ಕಚ್ಚಿ ಕೊಂದ 20 ಬೀದಿ ನಾಯಿಗಳು!

Stray Dogs: ಹಸು ಮೇಯಿಸಲು ಜಮೀನಿಗೆ ಹೋದ ಮಹಿಳೆ ಮೇಲೆ ಸುಮಾರು 20 ಬೀದಿ ನಾಯಿಗಳು ದಾಳಿ ನಡೆಸಿವೆ. ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Stray Dogs
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂಡೀಗಢ: ಸಾಕು ನಾಯಿಗಳು ಎಷ್ಟು ಮನುಷ್ಯನಿಗೆ ಹತ್ತಿರವೋ, ಬೀದಿ ನಾಯಿಗಳು (Stray Dogs) ಅಷ್ಟೇ ಅಪಾಯಕಾರಿಯಾಗಿವೆ. ದೇಶದ ನೂರಾರು ಪ್ರದೇಶಗಳಲ್ಲಿ ಬೀದಿ ನಾಯಿಗಳ ಹಾವಳಿ, ಜನರ ಮೇಲೆ ದಾಳಿ ನಡೆಸಿದ ಸುದ್ದಿಗಳು ವರದಿಯಾಗುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಪಂಜಾಬ್‌ನ (Punjab) ಕಪುರ್ತಲಾ (Kapurthala) ಜಿಲ್ಲೆಯಲ್ಲಿ ಒಂಟಿ ಮಹಿಳೆ ಮೇಲೆ ಸುಮಾರು 20 ಬೀದಿ ನಾಯಿಗಳು ದಾಳಿ ನಡೆಸಿವೆ. ಮಹಿಳೆಯನ್ನು ಮನಸೋ ಇಚ್ಛೆ ಕಚ್ಚಿದ ಕಾರಣ ಆಕೆ ಮೃತಪಟ್ಟಿದ್ದಾರೆ.

ಸುಲ್ತಾನ್‌ಪುರ ಲೋಧಿ ಪಟ್ಟಣ ವ್ಯಾಪ್ತಿಯ ಪಸ್ಸಾನ್‌ ಕದಿಮ್‌ ಗ್ರಾಮದ ನಿವಾಸಿಯಾದ ಪರಿ ದೇವಿ (32) ಎಂಬ ಮಹಿಳೆಯು ಬೀದಿ ನಾಯಿಗಳ ದಾಳಿಗೆ ಬಲಿಯಾಗಿದ್ದಾರೆ. ಕಳೆದ ಮಂಗಳವಾರ (ಫೆಬ್ರವರಿ 6) ಸಂಜೆ ಹಸುಗಳನ್ನು ಮೇಯಿಸಿಕೊಂಡು ಮನಗೆ ಹಿಂತಿರುಗುವ ವೇಳೆ 20 ಬೀದಿ ನಾಯಿಗಳು ದಾಳಿ ನಡೆಸಿವೆ. ರಾತ್ರಿ 10 ಗಂಟೆಯಾದರೂ ಮಹಿಳೆ ಮನೆಗೆ ವಾಪಸಾಗದ ಕಾರಣ ಕುಟುಂಬಸ್ಥರು ಜಮೀನಿಗೆ ಹೋಗಿ ಪರಿಶೀಲಿಸಿದ್ದಾರೆ. ಆಗ, ಮಹಿಳೆಯ ಶವ ಪತ್ತೆಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

2 children Killed By stray dogs In Delhi

ಪಸ್ಸಾನ್‌ ಕದಿಮ್‌ ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಜಾಸ್ತಿಯಾಗಿದೆ. ಇತ್ತೀಚೆಗಷ್ಟೇ, ಇದೇ ಗ್ರಾಮದ ಮಹಿಳೆಯೊಬ್ಬರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದವು. ಗಾಯಗೊಂಡಿರುವ ಮಹಿಳೆ ಈಗಲೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೀದಿ ನಾಯಿಗಳ ಹಾವಳಿ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ ಕಾರಣ ಡೆಪ್ಯುಟಿ ಕಮಿಷನರ್‌ ಅಮಿತ್‌ ಕುಮಾರ್‌ ಪಂಚಾಲ್‌ ಅವರು ಅಧಿಕಾರಿಗಳ ಸಭೆ ನಡೆಸಿದ್ದಾರೆ. ಶೀಘ್ರದಲ್ಲೇ ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟಲಾಗುವುದು ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಕಾರ್ಯಕರ್ತನಿಗೆ ನಾಯಿ ಬಿಸ್ಕೆಟ್! ರಾಹುಲ್ ಗಾಂಧಿ ಕೊಟ್ಟ ಸ್ಪಷ್ಟೀಕರಣ ಹೀಗಿದೆ

ಕಳೆದ ವರ್ಷದ ಡಿಸೆಂಬರ್‌ನಲ್ಲಿ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ದೇವಿಹಾಳ‌ ಗ್ರಾಮದಲ್ಲಿ ಬೀದಿ ನಾಯಿಗಳು ಹಸುಗೂಸನ್ನು ತಿಂದುಹಾಕಿದ್ದವು. ಡಿ.21ರ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ದೇವಿಹಾಳ ಗ್ರಾಮದ ರತ್ನಮ್ಮ ಬಡ್ನಿ ಎಂಬುವವರ ದುರಸ್ತಿ ಮನೆಯ ಹತ್ತಿರ ನವಜಾತ ಶಿಶುವನ್ನು ಎಸೆದು ಹೋಗಿದ್ದರು. ಅನೈತಿಕ ಸಂಬಂಧದಿಂದ ಜನಿಸಿದ ಮಗು ಎಂದು ಹೇಳಲಾಗಿತ್ತು. ಅನೈತಿಕ ಸಂಬಂಧಕ್ಕೆ ಈ ಮಗು ಜನಿಸಿದ್ದು, ತಮ್ಮ ಸಂಬಂಧವನ್ನು ಮುಚ್ಚಿಡಲು ಸಲುವಾಗಿ ಹುಟ್ಟಿದ ಮಗುವನ್ನು ಎಸೆದು ಹೋಗಿದ್ದಾರೆ ಎಂದು ದೂರು ನೀಡಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Atal Setu: “ಅಟಲ್‌ ಸೇತು ಸುಭದ್ರವಾಗಿದೆ..ಯಾವುದೇ ಬಿರುಕಿಲ್ಲ”- ಕಾಂಗ್ರೆಸ್‌ ಆರೋಪಕ್ಕೆ MMRDA ಸ್ಪಷ್ಟನೆ

Atal Setu:ಎಕ್ಸ್‌ನಲ್ಲಿ ವಿಡಿಯೋ ಸಮೇತ ಸ್ಪಷ್ಟನೆ ನೀಡಿರುವ MMRDA ಕಾಂಗ್ರೆಸ್‌ ಮಾಡಿರುವ ಆರೋಪಕ್ಕೂ ಅಟಲ್‌ ಸೇತುವೆಗೆ ಯಾವುದೇ ಸಂಬಂಧ ಇಲ್ಲ. ಅವರ ವಿಡಿಯೋದಲ್ಲಿ ತೋರಿಸಿರುವುದು ಉಲ್ವೇಯಿಂದ ಮುಂಬೈಗೆ ಸಂಪರ್ಕಿಸುವ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ (MTHL) ರಸ್ತೆಯಾಗಿದೆ. ಬಿರುಕು ಬಿಟ್ಟಿರುವುದು ಆ ರಸ್ತೆಯಲ್ಲೇ ಹೊರತು ಅಟಲ್‌ ಸೇತುವೆಯಲ್ಲಿ ಅಲ್ಲ‌. MTHL ಅನ್ನು ಕೂಡ ಅಟಲ್‌ ಸೇತು ಎಂದೇ ಕರೆಯಲಾಗುತ್ತದೆ ಎಂದು ಸ್ಪಷ್ಟನೆ ಕೊಟ್ಟಿದೆ.

VISTARANEWS.COM


on

Atal Setu
Koo

ಮುಂಬೈ: ದೇಶದ ಅತಿ ಉದ್ದದ ಸಮುದ್ರ ಸೇತುವೆ ಅಟಲ್‌ ಸೇತು (Atal Setu) ಎಂದು ಕರೆಯಲಾಗುವ ‘ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್’ಗೆ (Mumbai Trans Harbour Link-MTHL) ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ ಐದೇ ತಿಂಗಳಲ್ಲಿ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂಬ ಕಾಂಗ್ರೆಸ್‌ ಆರೋಪದ ಬೆನ್ನಲ್ಲೇ ಮುಂಬೈ ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ(MMRDA) ಈ ಬಗ್ಗೆ ಸ್ಪಷ್ಟನೆ ನೀಡಿದೆ.

ಎಕ್ಸ್‌ನಲ್ಲಿ ವಿಡಿಯೋ ಸಮೇತ ಸ್ಪಷ್ಟನೆ ನೀಡಿರುವ MMRDA, ಕಾಂಗ್ರೆಸ್‌ ಮಾಡಿರುವ ಆರೋಪಕ್ಕೂ ಅಟಲ್‌ ಸೇತುವೆಗೆ ಯಾವುದೇ ಸಂಬಂಧ ಇಲ್ಲ. ಅವರ ವಿಡಿಯೋದಲ್ಲಿ ತೋರಿಸಿರುವುದು ಉಲ್ವೇಯಿಂದ ಮುಂಬೈಗೆ ಸಂಪರ್ಕಿಸುವ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ (MTHL) ರಸ್ತೆಯಾಗಿದೆ. ಬಿರುಕು ಬಿಟ್ಟಿರುವುದು ಆ ರಸ್ತೆಯಲ್ಲೇ ಹೊರತು ಅಟಲ್‌ ಸೇತುವೆಯಲ್ಲಿ ಅಲ್ಲ‌. MTHL ಅನ್ನು ಕೂಡ ಅಟಲ್‌ ಸೇತು ಎಂದೇ ಕರೆಯಲಾಗುತ್ತದೆ ಎಂದು ಸ್ಪಷ್ಟನೆ ಕೊಟ್ಟಿದೆ.

ಕಾಂಗ್ರೆಸ್‌ ಆರೋಪ ಏನು?

ದೇಶದ ಅತಿ ಉದ್ದದ ಸಮುದ್ರ ಸೇತುವೆ ಅಟಲ್‌ ಸೇತು (Atal Setu) ಎಂದು ಕರೆಯಲಾಗುವ ‘ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್’ಗೆ (Mumbai Trans Harbour Link-MTHL) ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ ಐದೇ ತಿಂಗಳಲ್ಲಿ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂಬುದಾಗಿ ಕಾಂಗ್ರೆಸ್‌ ಆರೋಪಿಸಿತ್ತು. ಮಹಾರಾಷ್ಟ್ರ ಕಾಂಗ್ರೆಸ್‌ ಅಧ್ಯಕ್ಷ ನಾನಾ ಪಟೋಳೆ (Nana Patole) ಅವರು ರಸ್ತೆ ಮೇಲೆ ಸಂಚರಿಸಿ, ಬಿರುಕು ಬಿಟ್ಟ ಜಾಗವನ್ನು ಜನರಿಗೆ ತೋರಿಸಿ ರಸ್ತೆ ಸುರಕ್ಷತೆಯನ್ನು ಪರಿಶೀಲಿಸಿದ್ದಾರೆ. ಹಾಗೆಯೇ, ಭಾರಿ ಭ್ರಷ್ಟಾಚಾರ ನಡೆದಿದೆ ಎಂಬುದಾಗಿ ಆರೋಪಿಸಿದ್ದಾರೆ.

ನವಿ ಮುಂಬೈನ ಉಲ್ವೆ ಕಡೆ ಹೋಗುವ ಸೇತುವೆ ಮಾರ್ಗದಲ್ಲಿ ಬಿರುಕು ಕಾಣಿಸಿಕೊಂಡಿವೆ. “ನಾನು ಬರೀ ಆರೋಪ ಮಾಡುವ ಬದಲು ನಿಜವಾಗಿಯೂ ಏನಾಗಿದೆ ಎಂಬುದನ್ನು ಜನರಿಗೆ ತೋರಿಸಲು ಬಂದಿದ್ದೇನೆ. ಸರ್ಕಾರವು ಜನರ ಪರವಾಗಿ ಕೆಲಸ ಮಾಡುತ್ತೇನೆ ಎಂದು ಹೇಳುತ್ತದೆ. ಆದರೆ, ಇಲ್ಲಿ ಎಷ್ಟರಮಟ್ಟಿಗೆ ಭ್ರಷ್ಟಾಚಾರ ನಡೆದಿದೆ ಎಂಬುದನ್ನು ನೋಡಿ. ಸೇತುವೆ ಮೇಲಿನ ರಸ್ತೆ ಬಿರುಕು ಬಿಟ್ಟಿದೆ. ಸರ್ಕಾರವು ಜನರ ದುಡ್ಡನ್ನು ಜೇಬಿಗೆ ಇಳಿಸಿಕೊಂಡು, ಜನರ ಪ್ರಾಣವನ್ನು ಅಪಾಯಕ್ಕೆ ತಳ್ಳುತ್ತಿದೆ. ಇಂತಹ ಭ್ರಷ್ಟ ಸರ್ಕಾರವನ್ನು ಜನ ಕಿತ್ತೆಸೆಯಬೇಕು. ಸೇತುವೆಗೆ ಅಟಲ್‌ ಬಿಹಾರಿ ವಾಜಪೇಯಿ ಅವರ ಹೆಸರಿಟ್ಟಿದ್ದಾರೆ. ನಮಗೆ ಅವರ ಬಗ್ಗೆ ಗೌರವ ಇದೆ. ಆದರೆ, ಅವರ ಹೆಸರಿನ ಸೇತುವೆ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ. ಮೋದಿ ಅವರು ಈ ಕುರಿತು ಗಮನಿಸಬೇಕು” ಎಂದು ನಾನಾ ಪಟೋಳೆ ಆರೋಪಿಸಿದ್ದಾರೆ. 2024ರ ಜನವರಿಯಲ್ಲಿ ನರೇಂದ್ರ ಮೋದಿ ಅವರು ಅಟಲ್‌ ಸೇತುಗೆ ಚಾಲನೆ ನೀಡಿದ್ದರು.

ಇದನ್ನೂ ಓದಿ: Heat wave: ಉಷ್ಣ ಮಾರುತಕ್ಕೆ ತತ್ತರಿಸಿದ ಉತ್ತರ ಭಾರತ; ದೇಶಾದ್ಯಂತ 143 ಜನ ಬಲಿ

Continue Reading

ದೇಶ

Communal Violence: ಭಾರೀ ಕೋಮು ಗಲಭೆ… ಕಲ್ಲು ತೂರಾಟ; ಪೊಲೀಸರಿಗೆ ಗಂಭೀರ ಗಾಯ

Communal Violence: ಪೊಲೀಸರು ಸ್ಥಳಕ್ಕೆ ದೌಡಾಯಿಸಿದಾಗ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿತ್ತು. ಎರಡೂ ದುಷ್ಕರ್ಮಿಗಳ ತಂಡ ಪರಸ್ಪರ ಕಲ್ಲು ತೂರಾಟ ನಡೆಸಿದ್ದರು. ಈ ವೇಳೆ ಅಂಗಡಿ, ಮನೆಗಳು ಸಂಪೂರ್ಣವಾಗಿ ಜಖಂಗೊಂಡಿದ್ದು, ಪೊಲೀಸರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಹೆಚ್ಚುವರಿ ಪೊಲೀಸ್‌ ಪಡೆಗಳನ್ನು ನಿಯೋಜಿಸಲಾಗಿದೆ. ಇನ್ನು ಪೊಲೀಸರು ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿದ್ದು, ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ. ಎರಡೂ ಕಡೆಗಳಿಂದ ದೂರು ದಾಖಲಾಗಿದ್ದು, ಎರಡು ಪ್ರತ್ಯೇಕ ಎಫ್‌ಐಆರ್‌ ದಾಖಲಿಸಲಾಗಿದೆ.

VISTARANEWS.COM


on

Communal Violence
Koo

ಜೋಧ್‌ಪುರ: ಸ್ಮಶಾನದ ಗೇಟ್‌ ನಿರ್ಮಾಣ ವಿಚಾರಕ್ಕೆ ಎರಡು ಕೋಮುಗಳ ನಡುವೆ ಮಾರಾಮಾರಿ(Communal Violence) ನಡೆದಿರುವ ಘಟನೆ ರಾಜಸ್ಥಾನದ ಜೋಧ್‌ಪುರ(Jodhpur)ದಲ್ಲಿ ನಡೆದಿದೆ. ಸೂರ್‌ ಸಾಗರ್‌ ಪ್ರದೇಶದಲ್ಲಿರುವ ರಾಜಗ್ರಾಮ್‌ ಸರ್ಕಲ್‌ ಸಮೀಪದಲ್ಲಿ ಈ ಘಟನೆ ನಡೆದಿದ್ದು, ಈದ್ಗಾ ಮಸೀದಿ(Eidgah)ಯ ಹಿಂದೆ ನಿರ್ಮಾಣ ಹಂತದಲ್ಲಿರುವ ಗೋಡೆ ಮತ್ತು ಗೇಟ್‌ ವಿಚಾರವಾಗಿ ಹಿಂದೂ ಮತ್ತು ಮುಸ್ಲಿಂ ಸಮುದಾಯದ ನಡುವೆ ಭಾರೀ ಗಲಾಟೆ ನಡೆದಿತ್ತು. ಘಟನೆಯಲ್ಲಿ ಪೊಲೀಸರು ಸೇರಿದಂತೆ ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇನ್ನು ಗಲಾಟೆ ಬಗ್ಗೆ ವರದಿಯಾಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದಾಗ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿತ್ತು. ಎರಡೂ ದುಷ್ಕರ್ಮಿಗಳ ತಂಡ ಪರಸ್ಪರ ಕಲ್ಲು ತೂರಾಟ ನಡೆಸಿದ್ದರು. ಈ ವೇಳೆ ಅಂಗಡಿ, ಮನೆಗಳು ಸಂಪೂರ್ಣವಾಗಿ ಜಖಂಗೊಂಡಿದ್ದು, ಪೊಲೀಸರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಹೆಚ್ಚುವರಿ ಪೊಲೀಸ್‌ ಪಡೆಗಳನ್ನು ನಿಯೋಜಿಸಲಾಗಿದೆ. ಇನ್ನು ಪೊಲೀಸರು ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿದ್ದು, ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ. ಎರಡೂ ಕಡೆಗಳಿಂದ ದೂರು ದಾಖಲಾಗಿದ್ದು, ಎರಡು ಪ್ರತ್ಯೇಕ ಎಫ್‌ಐಆರ್‌ ದಾಖಲಿಸಲಾಗಿದೆ.

ಇದನ್ನೂ ಓದಿ: Actor Darshan: ಬದುಕು ನಾಯಿ ಪಾಡು ಆಗ್ಬಿಟ್ಟಿದೆ ಎಂದಿದ್ದ ದರ್ಶನ್;‌ ʻದಚ್ಚುʼ ಏಳು ಬೀಳು ಕುರಿತು ಗಣೇಶ್‌ ಕಾಸರಗೋಡು ಹೇಳಿದ್ದು ಹೀಗೆ!

Continue Reading

ದೇಶ

Heat wave: ಉಷ್ಣ ಮಾರುತಕ್ಕೆ ತತ್ತರಿಸಿದ ಉತ್ತರ ಭಾರತ; ದೇಶಾದ್ಯಂತ 143 ಜನ ಬಲಿ

Heat wave: NCDC ಮಾಹಿತಿ ಪ್ರಕಾರ, ಮಾ. 1 ಮತ್ತು ಜೂ. 20ರ ನಡುವೆ ಉಷ್ಣ ಮಾರುತಕ್ಕೆ ಬರೋಬ್ಬರಿ 143 ಬಲಿಯಾಗಿದ್ದಾರೆ. ಉತ್ತರಪ್ರದೇಶದಲ್ಲಿ ಅತಿ ಹೆಚ್ಚು ಜನ ಉಷ್ಣ ಮಾರುತಕ್ಕೆ ಬಲಿಯಾಗಿದ್ದು, ಸಾವಿನ ಸಂಖ್ಯೆ 35ಕ್ಕೆ ಏರಿಕೆ ಆಗಿದೆ. ಇನ್ನು ದೆಹಲಿಯಲ್ಲಿ 21 ಮತ್ತು ಬಿಹಾರ ಹಾಗೂ ರಾಜಸ್ಥಾನಗಳಲ್ಲಿ ತಲಾ 17 ಮಂದಿ ಬಲಿಯಾಗಿದ್ದಾರೆ.

VISTARANEWS.COM


on

Heat wave
Koo

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಅನೇಕ ಉತ್ತರಭಾರತದ ರಾಜ್ಯಗಳಲ್ಲಿ ಉಷ್ಣಮಾರುತವು (Heat wave) ಮಾರಣಾಂತಿಕವಾಗಿ ಪರಿಣಮಿಸಿದ್ದು, ಇದುವರೆಗೆ ದೇಶಾದ್ಯಂತ 143 ಜನ ಬಲಿಯಾಗಿದ್ದಾರೆ. ಇನ್ನು ದೇಶಾದ್ಯಂತ ಸುಮಾರು 41,789 ಉಷ್ಣ ಸಂಬಂಧಿ ಕಾಯಿಲೆಗೆ ತುತ್ತಾಗಿದ್ದಾರೆ. ಈ ಬಗ್ಗೆ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (NCDC) ಮಾಹಿತಿ ನೀಡಿದೆ.

NCDC ಮಾಹಿತಿ ಪ್ರಕಾರ, ಮಾ. 1 ಮತ್ತು ಜೂ. 20ರ ನಡುವೆ ಉಷ್ಣ ಮಾರುತಕ್ಕೆ ಬರೋಬ್ಬರಿ 143 ಬಲಿಯಾಗಿದ್ದಾರೆ. ಉತ್ತರಪ್ರದೇಶದಲ್ಲಿ ಅತಿ ಹೆಚ್ಚು ಜನ ಉಷ್ಣ ಮಾರುತಕ್ಕೆ ಬಲಿಯಾಗಿದ್ದು, ಸಾವಿನ ಸಂಖ್ಯೆ 35ಕ್ಕೆ ಏರಿಕೆ ಆಗಿದೆ. ಇನ್ನು ದೆಹಲಿಯಲ್ಲಿ 21 ಮತ್ತು ಬಿಹಾರ ಹಾಗೂ ರಾಜಸ್ಥಾನಗಳಲ್ಲಿ ತಲಾ 17 ಮಂದಿ ಬಲಿಯಾಗಿದ್ದಾರೆ.

ಹೀಟ್‌ಸ್ಟ್ರೋಕ್‌ನಿಂದಾಗಿ ಹೆಚ್ಚಿನ ಆಸ್ಪತ್ರೆ ಸೇರುತ್ತಿದ್ದು, ಎರಡೇ ದಿನಗಳಲ್ಲಿ 20 ಮಂದಿ ಮೃತಪಟ್ಟಿದ್ದಾರೆ. ಉಷ್ಣ ಸಂಬಂಧಿ ಕಾಯಿಲೆ, ಆಘಾತಗಳಿಂದ ಜನ ತತ್ತರಿಸಿ ಹೋಗಿದ್ದಾರೆ. ಎರಡು ದಿನಗಳಲ್ಲಿಯೇ ರಾಮ್‌ ಮನೋಹರ ಲೋಹಿಯಾ ಆಸ್ಪತ್ರೆಯಲ್ಲಿ 9 ಮಂದಿ ಮೃತಪಟ್ಟಿದ್ದಾರೆ. ಸಫ್ದರ್‌ಜಂಗ್‌ ಆಸ್ಪತ್ರೆಯಲ್ಲಿ 9, ಲೋಕ ನಾಯಕ ಆಸ್ಪತ್ರೆಯಲ್ಲಿ ಒಂದು ವಾರದಲ್ಲಿ ಇಬ್ಬರು ಸೇರಿ ಒಟ್ಟು 20 ಮಂದಿ ಮೃತಪಟ್ಟಿದ್ದಾರೆ. ರಾಮ್‌ ಮನೋಹರ ಲೋಹಿಯಾ ಆಸ್ಪತ್ರೆಯಲ್ಲಿಯೇ ಉಷ್ಣ ಸಂಬಂಧಿ ಕಾಯಿಲೆಗೆ ತುತ್ತಾಗಿರುವ 45 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.

ದೆಹಲಿಯಲ್ಲಿ ಉಷ್ಣ ಗಾಳಿಯಿಂದಾಗಿ 20 ಜನ ಮೃತಪಟ್ಟಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರದ ಅಧೀನದಲ್ಲಿರುವ ಆಸ್ಪತ್ರೆಗಳಿಗೆ ಹಲವು ಸೂಚನೆ ನೀಡಿದೆ. “ಉಷ್ಣ ಗಾಳಿ, ಸನ್‌ಸ್ಟ್ರೋಕ್‌, ಹೀಟ್‌ಸ್ಟ್ರೋಕ್‌ನಿಂದಾಗಿ ಆಸ್ಪತ್ರೆ ಸೇರಿದವರಿಗೆ ಆದ್ಯತೆಯ ಮೇರೆಗೆ ಚಿಕಿತ್ಸೆ ನೀಡಬೇಕು. ಆಸ್ಪತ್ರೆಗಳಲ್ಲಿ ಹೆಚ್ಚುವರಿ ಹಾಸಿಗೆ ಸೇರಿ ಸಕಲ ವೈದ್ಯಕೀಯ ಸೌಕರ್ಯಗಳು ಸಿದ್ಧವಿರುವಂತೆ ನೋಡಿಕೊಳ್ಳಬೇಕು. ಅಧಿಕಾರಿಗಳು ಕೂಡ ಈ ಕುರಿತು ಹೆಚ್ಚಿನ ಗಮನ ಹರಿಸಬೇಕು” ಎಂಬುದಾಗಿ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರು ಕೂಡ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹಲವು ಸೂಚನೆ ನೀಡಿದ್ದಾರೆ. ಬೇಸಗೆಯ ಬಿಸಿ ಹೆಚ್ಚಾಗುತ್ತಿರುವ ಕಾರಣ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರವೂ ಜನರಿಗೆ ಹಲವು ಮಾರ್ಗಸೂಚಿ, ಸಲಹೆಗಳನ್ನು ನೀಡಿದೆ. ಅತಿಯಾದ ಬಿಸಿಲು, ಬಿಸಿ ಗಾಳಿಯಿಂದಾಗಿ ಜನ ಹೊರಗೆ ಕಾಲಿಡಲೂ ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನೀರಿನ ಸಮಸ್ಯೆಯೂ ತಲೆದೂರಿರುವ ಕಾರಣ ಜನ ಪರದಾಡುವಂತಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Deep fake Scam: ಮುಖೇಶ್‌ ಅಂಬಾನಿಯ ಡೀಪ್‌ ಫೇಕ್‌ ವಿಡಿಯೋ; ನಿಜವೆಂದೇ ನಂಬಿದ್ದ ವೈದ್ಯೆಗೆ 7 ಲಕ್ಷ ರೂ ವಂಚನೆ

Continue Reading

ಕ್ರೈಂ

Thane Roof Collapse: ಟಿನ್ ರೂಫ್‌ ಬಿದ್ದು ಫುಟ್ಬಾಲ್​ ಆಡುತ್ತಿದ್ದ 9 ಮಕ್ಕಳಿಗೆ ಗಾಯ; 5 ಮಂದಿ ಗಂಭೀರ

Thane Roof Collapse: ಭಾರೀ ಗಾಳಿ ಮಳೆಯಿಂದ ಮೇಲ್ಛಾವಣಿಗೆ ಅಳವಡಿಸಿದ್ದ ಟಿನ್​​ ರೂಫ್(tin roof falls on football)​ ತುಂಡಾಗಿ ಮೈದಾನದಲ್ಲಿ ಆಡವಾಡುತ್ತಿದ್ದ ಮಕ್ಕಳ ಮೇಲೆ ಬಿದ್ದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

VISTARANEWS.COM


on

Thane Roof Collapse
Koo

ಥಾಣೆ: ಫುಟ್ಬಾಲ್ ಮೈದಾನದ ಮೇಲ್ಛಾವಣಿಗೆ ಅಳವಡಿಸಿದ್ದ ಟಿನ್​​ ರೂಫ್​ ಬಿದ್ದ(Thane Roof Collapse) ಪರಿಣಾಮ ಒಂಬತ್ತು ಮಕ್ಕಳು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಸಂಭವಿಸಿದೆ. ಈ ಪೈಕಿ ಐವರು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಶುಕ್ರವಾರ ರಾತ್ರಿ ಈ ಘಟನೆ ಸಂಭವಿಸಿದೆ. ಭಾರೀ ಗಾಳಿ ಮಳೆಯಿಂದ ಮೇಲ್ಛಾವಣಿಗೆ ಅಳವಡಿಸಿದ್ದ ಟಿನ್​​ ರೂಫ್(tin roof falls on football)​ ತುಂಡಾಗಿ ಮೈದಾನದಲ್ಲಿ ಆಡವಾಡುತ್ತಿದ್ದ ಮಕ್ಕಳ ಮೇಲೆ ಬಿದ್ದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಥಾಣೆಯ ಉಪವನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಗಾಯಗೊಂಡಿರುವ ಮಕ್ಕಳನ್ನು ಸಮೀಪದ ಬೆಥನಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಅಟಲ್‌ ಸೇತುಗೆ ಚಾಲನೆ ಸಿಕ್ಕ ಐದೇ ತಿಂಗಳಲ್ಲಿ ಬಿರುಕು


ಮುಂಬೈ: ದೇಶದ ಅತಿ ಉದ್ದದ ಸಮುದ್ರ ಸೇತುವೆ ಅಟಲ್‌ ಸೇತು (Atal Setu) ಎಂದು ಕರೆಯಲಾಗುವ ‘ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್’ಗೆ (Mumbai Trans Harbour Link-MTHL) ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ ಐದೇ ತಿಂಗಳಲ್ಲಿ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂಬುದಾಗಿ ಕಾಂಗ್ರೆಸ್‌ ಆರೋಪಿಸಿದೆ. ಮಹಾರಾಷ್ಟ್ರ ಕಾಂಗ್ರೆಸ್‌ ಅಧ್ಯಕ್ಷ ನಾನಾ ಪಟೋಳೆ (Nana Patole) ಅವರು ರಸ್ತೆ ಮೇಲೆ ಸಂಚರಿಸಿ, ಬಿರುಕು ಬಿಟ್ಟ ಜಾಗವನ್ನು ಜನರಿಗೆ ತೋರಿಸಿ ರಸ್ತೆ ಸುರಕ್ಷತೆಯನ್ನು ಪರಿಶೀಲಿಸಿದ್ದಾರೆ. ಹಾಗೆಯೇ, ಭಾರಿ ಭ್ರಷ್ಟಾಚಾರ ನಡೆದಿದೆ ಎಂಬುದಾಗಿ ಆರೋಪಿಸಿದ್ದಾರೆ.

ಇದನ್ನೂ ಓದಿ Deep fake Scam: ಮುಖೇಶ್‌ ಅಂಬಾನಿಯ ಡೀಪ್‌ ಫೇಕ್‌ ವಿಡಿಯೋ; ನಿಜವೆಂದೇ ನಂಬಿದ್ದ ವೈದ್ಯೆಗೆ 7 ಲಕ್ಷ ರೂ ವಂಚನೆ

ನವಿ ಮುಂಬೈನ ಉಲ್ವೆ ಕಡೆ ಹೋಗುವ ಸೇತುವೆ ಮಾರ್ಗದಲ್ಲಿ ಬಿರುಕು ಕಾಣಿಸಿಕೊಂಡಿವೆ. “ನಾನು ಬರೀ ಆರೋಪ ಮಾಡುವ ಬದಲು ನಿಜವಾಗಿಯೂ ಏನಾಗಿದೆ ಎಂಬುದನ್ನು ಜನರಿಗೆ ತೋರಿಸಲು ಬಂದಿದ್ದೇನೆ. ಸರ್ಕಾರವು ಜನರ ಪರವಾಗಿ ಕೆಲಸ ಮಾಡುತ್ತೇನೆ ಎಂದು ಹೇಳುತ್ತದೆ. ಆದರೆ, ಇಲ್ಲಿ ಎಷ್ಟರಮಟ್ಟಿಗೆ ಭ್ರಷ್ಟಾಚಾರ ನಡೆದಿದೆ ಎಂಬುದನ್ನು ನೋಡಿ. ಸೇತುವೆ ಮೇಲಿನ ರಸ್ತೆ ಬಿರುಕು ಬಿಟ್ಟಿದೆ. ಸರ್ಕಾರವು ಜನರ ದುಡ್ಡನ್ನು ಜೇಬಿಗೆ ಇಳಿಸಿಕೊಂಡು, ಜನರ ಪ್ರಾಣವನ್ನು ಅಪಾಯಕ್ಕೆ ತಳ್ಳುತ್ತಿದೆ. ಇಂತಹ ಭ್ರಷ್ಟ ಸರ್ಕಾರವನ್ನು ಜನ ಕಿತ್ತೆಸೆಯಬೇಕು. ಸೇತುವೆಗೆ ಅಟಲ್‌ ಬಿಹಾರಿ ವಾಜಪೇಯಿ ಅವರ ಹೆಸರಿಟ್ಟಿದ್ದಾರೆ. ನಮಗೆ ಅವರ ಬಗ್ಗೆ ಗೌರವ ಇದೆ. ಆದರೆ, ಅವರ ಹೆಸರಿನ ಸೇತುವೆ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ. ಮೋದಿ ಅವರು ಈ ಕುರಿತು ಗಮನಿಸಬೇಕು” ಎಂದು ನಾನಾ ಪಟೋಳೆ ಆರೋಪಿಸಿದ್ದಾರೆ. 

ಈ ಸೇತುವೆ ನಿರ್ಮಾಣಕ್ಕೆ ತಗುಲಿದ ವೆಚ್ಚ ಬರೋಬ್ಬರಿ 17,840 ಕೋಟಿ ರೂಪಾಯಿ. ಈ ಪೈಕಿ 15,000 ಕೋಟಿ ರೂ. ಸಾಲ ಪಡೆದುಕೊಳ್ಳಲಾಗಿದೆ. ಇದು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ನವೀ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೇಗದ ಸಂಪರ್ಕವನ್ನು ಒದಗಿಸುತ್ತದೆ ಮತ್ತು ಮುಂಬೈನಿಂದ ಪುಣೆ, ಗೋವಾ ಮತ್ತು ದಕ್ಷಿಣ ಭಾರತಕ್ಕೆ ಇರುವ ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ. ಎಂಟಿಎಚ್ಎಲ್‌ನಲ್ಲಿ ಕಾರು, ಲಘು ವಾಹನಗಳು, ಮಿನಿ ಬಸ್‌ಗಳು ಮತ್ತು ಬಸ್‌ಗಳ ಗರಿಷ್ಠ ವೇಗದ ಮಿತಿ ಗಂಟೆಗೆ 100 ಕಿ.ಮೀ. ಬೈಕ್‌ಗಳು ಸೇರಿದಂತೆ ದ್ವಿಚಕ್ರ ವಾಹನಗಳು, ಆಟೋರಿಕ್ಷಾಗಳು ಮತ್ತು ಟ್ರ್ಯಾಕ್ಟರ್‌ಗಳ ಪ್ರವೇಶ ನಿಷೇಧಿಸಲಾಗಿದೆ.

Continue Reading
Advertisement
Accident Case
ವಿಜಯಪುರ4 mins ago

Accident News : ಕಂಟಕವಾದ ಕಾರ ಹುಣ್ಣಿಮೆ ಕರಿ ದಿನ; ಎತ್ತು ಬೆದರಿಸಲು ಹೋಗಿ ಮುಗ್ಗರಿಸಿ ಬಿದ್ದ ಜನ್ರು

Horse Racing
ಕರ್ನಾಟಕ16 mins ago

Horse Racing: ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ಕುದುರೆ ರೇಸ್‌ಗೆ ತಡೆ ನೀಡಿದ ಹೈಕೋರ್ಟ್

Atal Setu
ದೇಶ17 mins ago

Atal Setu: “ಅಟಲ್‌ ಸೇತು ಸುಭದ್ರವಾಗಿದೆ..ಯಾವುದೇ ಬಿರುಕಿಲ್ಲ”- ಕಾಂಗ್ರೆಸ್‌ ಆರೋಪಕ್ಕೆ MMRDA ಸ್ಪಷ್ಟನೆ

Viral Video
Latest19 mins ago

Viral Video: ಮಕ್ಕಳನ್ನು ಖಾಸಗಿ ವಾಹನದಲ್ಲಿ ಶಾಲೆಗೆ ಕಳುಹಿಸುವ ಪೋಷಕರಲ್ಲಿ ಆತಂಕ ಮೂಡಿಸುವ ವಿಡಿಯೊ ಇದು!

Actor Darshan Ram Gopal Varma says ELEPHANT attacking a DOG
ಸ್ಯಾಂಡಲ್ ವುಡ್31 mins ago

Actor Darshan: ರೇಣುಕಾಸ್ವಾಮಿ ಹತ್ಯೆ ಶ್ವಾನದ ಮೇಲೆ ʻಆನೆʼ ದಾಳಿ ಮಾಡಿದಂತೆ ಎಂದ ರಾಮ್​ ಗೋಪಾಲ್ ವರ್ಮಾ!

Bengaluru News Accident Case Dj Halli
ಬೆಂಗಳೂರು44 mins ago

Bengaluru news : ಸೋಪಿನ ಮೇಲೆ ಕಾಲಿಟ್ಟು ಆಯತಪ್ಪಿ ಕಟ್ಟಡದ ಮೇಲಿಂದ ಹಾರಿ ಬಿದ್ದಳು; ಎದೆ ಝಲ್​ ಎನಿಸುವ ದೃಶ್ಯ ಸೆರೆ

Actor Darshan fans turn against D boss
ಸ್ಯಾಂಡಲ್ ವುಡ್56 mins ago

Actor Darshan: ಕಸ್ಟಡಿಯಲ್ಲಿ ʻಡಿ ಬಾಸ್‌ʼ; ನೆಚ್ಚಿನ ನಟನ ವಿರುದ್ಧ ತಿರುಗಿ ಬಿದ್ರಾ ʻದಚ್ಚುʼ ಫ್ಯಾನ್ಸ್?

IND vs BAN
ಕ್ರೀಡೆ1 hour ago

IND vs BAN: ಇಂದಿನ ಪಂದ್ಯಕ್ಕೆ ಟೀಮ್​ ಇಂಡಿಯಾದಲ್ಲಿ ಒಂದು ಮಹತ್ವದ ಬದಲಾವಣೆ

Actress Ramya
ಕರ್ನಾಟಕ1 hour ago

Actress Ramya: ದರ್ಶನ್, ಪ್ರಜ್ವಲ್‌, ಸೂರಜ್, ಯಡಿಯೂರಪ್ಪ ಹೆಸರು ಉಲ್ಲೇಖಿಸಿ ಮತ್ತೆ ಕಿಡಿ ಕಾರಿದ ರಮ್ಯಾ; ಪೋಸ್ಟ್‌ನಲ್ಲಿ ಏನಿದೆ?

Suraj Revanna Case
ಕರ್ನಾಟಕ1 hour ago

Suraj Revanna Case: ಸೂರಜ್ ರೇವಣ್ಣ ವಿರುದ್ಧ ನಮಗೆ ಇನ್ನೂ ಅಧಿಕೃತ ದೂರು ಬಂದಿಲ್ಲ: ಗೃಹ ಸಚಿವ ಪರಮೇಶ್ವರ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ19 hours ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 day ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ2 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು5 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು5 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ6 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ6 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ6 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌