Site icon Vistara News

Chemical Factory: ಕೆಮಿಕಲ್‌ ಕಾರ್ಖಾನೆಯಲ್ಲಿ ಭಾರಿ ಸ್ಫೋಟ; ನಾಲ್ವರ ಸಾವು, 25 ಮಂದಿಗೆ ಗಾಯ

Chemical Factory

4 Killed, 25 Injured In Explosion, Fire At Chemical Factory In Thane

ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಪಟಾಕಿ ಕಾರ್ಖಾನೆಯೊಂದರಲ್ಲಿ (Chemical Factory) ಭೀಕರ ಸ್ಫೋಟ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸುಮಾರು 15 ಮಂದಿ ಗಾಯಗೊಂಡಿದ್ದು, ಇನ್ನೂ ರಕ್ಷಣಾ ಕಾರ್ಯಾಚರಣೆ (Rescue Operation) ಮುಂದುವರಿದಿದೆ ಎಂದು ತಿಳಿದುಬಂದಿದೆ. ದೊಂಬಿವಿಲಿ ಬಳಿಯ ಎಂಐಡಿಸಿ ಫೇಸ್‌ 2ರಲ್ಲಿರುವ ಕಾರ್ಖಾನೆಯಲ್ಲಿ ಕಾರ್ಮಿಕರು ಗುರುವಾರ (ಮೇ 23) ಮಧ್ಯಾಹ್ನ ಕೆಲಸ ಮಾಡುವಾಗಲೇ ಬಾಯ್ಲರ್‌ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದಾದ ಕ್ಷಣಮಾತ್ರದಲ್ಲೇ ಭೀಕರ ಸ್ಫೋಟ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.

ಅಮುದನ್‌ ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟ ಸಂಭವಿಸಿದ ಕೆಲವೇ ನಿಮಿಗಳಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಅಗ್ನಿ ನಂದಿಸುತ್ತಿದ್ದಾರೆ. ಇನ್ನು ಎನ್‌ಡಿಆರ್‌ಎಫ್‌ ಸೇರಿ ಹಲವು ರಕ್ಷಣಾ ಸಿಬ್ಬಂದಿಯನ್ನು ಜನರ ರಕ್ಷಣೆಗೆ ನಿಯೋಜಿಸಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದುವರೆಗೆ 8 ಮಂದಿಯನ್ನು ರಕ್ಷಿಸಲಾಗಿದೆ ಎಂಬುದಾಗಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಮಾಹಿತಿ ನೀಡಿದ್ದಾರೆ. ಜಿಲ್ಲಾಧಿಕಾರಿ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದು, ಅಗತ್ಯ ಕ್ರಮಕ್ಕೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಕೆಲ ತಿಂಗಳ ಹಿಂದಷ್ಟೇ ತಮಿಳುನಾಡಿನ ವಿರುದ್ಧುನಗರ ಜಿಲ್ಲೆಯಲ್ಲಿರುವ ಪಟಾಕಿ ಕಾರ್ಖಾನೆಯೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿ 11 ಜನ ಮೃತಪಟ್ಟಿದ್ದರು. ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿರುದ್ಧುನಗರ ಜಿಲ್ಲೆಯ ವೆಂಬಕೊಟ್ಟಾಯಿ ಪ್ರದೇಶದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ (ಫೆಬ್ರವರಿ 17) ಮಧ್ಯಾಹ್ನ ಭೀಕರ ಸ್ಫೋಟ ಸಂಭವಿಸಿತ್ತು. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರೂ ಅಷ್ಟೊತ್ತಿಗಾಗಲೇ ಹಲವು ಜನ ಮೃತಪಟ್ಟಿದ್ದರು ಎಂದು ತಿಳಿದುಬಂದಿತ್ತು.

ಉತ್ತರ ಪ್ರದೇಶದ ಕೌಶಂಭಿ ಜಿಲ್ಲೆಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲೂ ಸ್ಫೋಟ ಸಂಭವಿಸಿ ನಾಲ್ವರು ಮೃತಪಟ್ಟಿದ್ದರು. ದುರಂತದಲ್ಲಿ 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಸ್ಫೋಟ ಸಂಭವಿಸುತ್ತಲೇ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸಲು ಪ್ರಯತ್ನ ಮಾಡಿದರೂ ಜನರನ್ನು ಸಾವಿನ ದವಡೆಯಿಂದ ಪಾರು ಮಾಡಲು ಆಗಿರಲಿಲ್ಲ. ನೂರಾರು ಮಂದಿ ಕಾರ್ಖಾನೆಯಲ್ಲಿ ಕೆಲಸ ಮಾಡುವಾಗಲೇ ಸ್ಫೋಟ ಸಂಭವಿಸಿತ್ತು.

ಇದನ್ನೂ ಓದಿ: Fireworks Blast : ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 8 ಮಂದಿಯ ದುರ್ಮರಣ

Exit mobile version