Terrorists Killed | ಜಮ್ಮುವಿನಲ್ಲಿ ನಾಲ್ವರು ಉಗ್ರರ ಹತ್ಯೆ; ಭದ್ರತಾ ಪಡೆ ಗುಂಡಿನ ದಾಳಿಗೆ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟ್ರಕ್​ - Vistara News

ದೇಶ

Terrorists Killed | ಜಮ್ಮುವಿನಲ್ಲಿ ನಾಲ್ವರು ಉಗ್ರರ ಹತ್ಯೆ; ಭದ್ರತಾ ಪಡೆ ಗುಂಡಿನ ದಾಳಿಗೆ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟ್ರಕ್​

ಈ ಎನ್​​ಕೌಂಟರ್​ಗೆ ಸಂಬಂಧಪಟ್ಟಂತೆ ಸ್ಥಳೀಯರು ಕೆಲವು ವಿಡಿಯೊಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದು, ಅದರಲ್ಲಿ ಗ್ರೆನೇಡ್​ ಸ್ಫೋಟ ಮತ್ತು ಫೈರಿಂಗ್​​ನ ದೊಡ್ಡ ಶಬ್ದ ಕೇಳುತ್ತದೆ.

VISTARANEWS.COM


on

Terrorists Attack In Jammu Kashmir
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶ್ರೀನಗರ: ಇಂದು ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆ ಸಿಬ್ಬಂದಿ ಭರ್ಜರಿ ಬೇಟೆಯಾಡಿದ್ದಾರೆ. ಜಮ್ಮು ಹೊರವಲಯದಲ್ಲಿ ಸಾಗುತ್ತಿದ್ದ ಟ್ರಕ್​​​ನಲ್ಲಿ ಅಡಗಿದ್ದ ನಾಲ್ವರು ಭಯೋತ್ಪಾದಕರನ್ನು ಕೊಂದು ಹಾಕಿದ್ದಾರೆ. ಭದ್ರತಾ ಪಡೆ ಸಿಬ್ಬಂದಿ ಟ್ರಕ್​ ಮೇಲೆ ಒಂದೇ ಸಮ ಗುಂಡಿನ ದಾಳಿ ನಡೆಸಿದ್ದರಿಂದ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿತ್ತು. ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಬೆಂಕಿ ಆರಿಸಿದ್ದಾರೆ.

ಇಂದು ಮುಂಜಾನೆ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ತಾವಿ ಸೇತುವೆ ಬಳಿ ಈ ಎನ್​​ಕೌಂಟರ್​ ನಡೆದಿದೆ. ಉಗ್ರರು ಟ್ರಕ್​​ನಲ್ಲಿ ಕಾಶ್ಮೀರದ ಕಡೆಗೆ ಹೋಗುತ್ತಿದ್ದರು. ಅದ್ಯಾಕೋ ಟ್ರಕ್​ ಅನುಮಾನಾಸ್ಪದವಾಗಿ ಚಲಿಸುತ್ತಿದೆ ಎಂಬುದನ್ನು ಗಮನಿಸಿದ ಸ್ಥಳೀಯ ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿಯಾಗಿ ಅದರ ಬೆನ್ನತ್ತಿದ್ದವು. ಸಿದ್ರಾ ಚೆಕ್​ಪಾಯಿಂಟ್​​ನಲ್ಲಿರುವ ಪೊಲೀಸ್​ ಸಿಬ್ಬಂದಿಗೆ ಮೊದಲೇ ಮಾಹಿತಿ ಕೊಟ್ಟಿದ್ದರಿಂದ ಅವರು ಅಲ್ಲಿ ಟ್ರಕ್​ ತಡೆದಿದ್ದಾರೆ. ಹೀಗೆ ವಾಹನವನ್ನು ತಡೆದು, ಪರಿಶೀಲನೆ ಶುರು ಮಾಡುತ್ತಿದ್ದಂತೆ ಅದರೊಳಗೆ ಅಡಗಿದ್ದ ಉಗ್ರರು ಭದ್ರತಾ ಸಿಬ್ಬಂದಿ ಮೇಲೆ ಫೈರಿಂಗ್​ ಮಾಡಲು ಶುರು ಮಾಡಿದರು. ಈ ವೇಳೆ ಸ್ಥಳದಲ್ಲಿ ಗ್ರೆನೇಡ್​​ ಕೂಡ ಸ್ಫೋಟಗೊಂಡಿದೆ. ಅಂತಿಮವಾಗಿ ಟ್ರಕ್​​​ನಲ್ಲಿದ್ದ ನಾಲ್ವರು ಭಯೋತ್ಪಾದಕರೂ ಹತ್ಯೆಗೀಡಾಗಿದ್ದಾಗಿ ಜಮ್ಮು ಎಡಿಜಿಪಿ ಮುಕೇಶ್​ ಸಿಂಗ್ ತಿಳಿಸಿದ್ದಾರೆ.

ಹೆದ್ದಾರಿಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾಪಡೆಗಳ ಮಧ್ಯೆ ಸುಮಾರು 45 ನಿಮಿಷಗಳ ಕಾಲ ಗುಂಡಿನ ಕಾಳಗ ನಡೆದಿದೆ. ಸ್ಥಳೀಯರು ಕೆಲವು ವಿಡಿಯೊಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದು, ಅದರಲ್ಲಿ ಗ್ರೆನೇಡ್​ ಸ್ಫೋಟ ಮತ್ತು ಫೈರಿಂಗ್​​ನ ದೊಡ್ಡ ಶಬ್ದ ಕೇಳುತ್ತದೆ. ಹಾಗೇ, ಹೊಗೆ ಏಳುವುದೂ ಕಾಣುತ್ತದೆ. ಟ್ರಕ್​​ನಲ್ಲಿ ಅದೇನೋ ಹೊಟ್ಟಿನಂತ ವಸ್ತುವನ್ನು ತುಂಬಲಾಗಿತ್ತು. ಅದೆಲ್ಲವೂ ಸುಟ್ಟುಭಸ್ಮವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಹಾಗೇ, ಈ ಉಗ್ರರು ಯಾವ ಸಂಘಟನೆಗೆ ಸೇರಿದವರು, ಅವರು ಈ ಪ್ರದೇಶಕ್ಕೆ ಪ್ರವೇಶಿಸಿದ್ದು ಹೇಗೆ ಎಂಬಿತ್ಯಾದಿ ವಿಷಯಗಳ ಬಗ್ಗೆ ತನಿಖೆ ಪ್ರಾರಂಭಿಸಲಾಗಿದೆ. ಹಾಗೇ, ನಾಪತ್ತೆಯಾಗಿರುವ ಟ್ರಕ್​ ಚಾಲಕನ ಪತ್ತೆ ಕಾರ್ಯವೂ ಪ್ರಾರಂಭವಾಗಿದೆ. ಈ ಉಗ್ರರು ದೊಡ್ಡಮಟ್ಟದ ದಾಳಿಗೆ ಸಂಚು ರೂಪಿಸಿದ್ದರು ಎಂಬ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಟ್ರಕ್​​​ನಲ್ಲಿ ಅಡಗಿ ಹೊರಟಿದ್ದ ಉಗ್ರರ ಮೇಲೆ ಭದ್ರತಾ ಪಡೆಯಿಂದ ಫೈರಿಂಗ್​​; 3 ಭಯೋತ್ಪಾದಕರ ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Accident: ಬಾಲಕ ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಡಿಕ್ಕಿ; ಮಹಿಳೆ ಬಲಿ; ಭೀಕರ ದೃಶ್ಯ ವೈರಲ್‌

Accident: ಉತ್ತರ ಪ್ರದೇಶದ ಕಾನ್ಪುರದ ಜನನಿಬಿಡ ರಸ್ತೆಯಲ್ಲಿ 17 ವರ್ಷದ ಬಾಲಕ ಕಾರನ್ನು ಓಡಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ವಾಹನದ ಮೇಲೆ ಚಾಲಕನ ನಿಯಂತ್ರಣ ತಪ್ಪಿದ ನಂತರ ವೇಗವಾಗಿ ಬಂದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಆಗ ಸ್ಕೂಟರ್‌ನಲ್ಲಿದ್ದ ಮಹಿಳೆ ಮತ್ತು ಮಗಳು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ತಕ್ಷಣ ಸ್ಥಳೀಯರು ಧಾವಿಸಿ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದರು.

VISTARANEWS.COM


on

Koo

ಕಾನ್ಪುರ: ಅಪ್ರಾಪ್ತನೋರ್ವ ಪುಣೆಯಲ್ಲಿ ಕಾರು ಚಲಾಯಿಸಿ ಇಬ್ಬರು ಟೆಕ್ಕಿಗಳನ್ನು ಬಲಿ ಪಡೆದ ಪ್ರಕರಣ ಮಾಸುವ ಮುನ್ನವೇ ಕಾನ್ಪುರ(Kanpur)ದಲ್ಲೂ ಇಂತಹದ್ದೇ ಒಂದು ಘಟನೆ ವರದಿಯಾಗಿದೆ. 17ವರ್ಷದ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದು(Accident), ಮಹಿಳೆ ಸಾವನ್ನಪ್ಪಿದ್ದಾಳೆ. ಸ್ಕೂಟರ್‌ನಲ್ಲಿದ್ದ ಮಹಿಳೆಯ ಮಗಳಿಗೆ ಗಂಭೀರ ಗಾಯಗಳಾಗಿವೆ. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣ(Social Media)ದಲ್ಲಿ ವೈರಲ್‌(Viral Video) ಆಗಿದೆ.

ಉತ್ತರ ಪ್ರದೇಶದ ಕಾನ್ಪುರದ ಜನನಿಬಿಡ ರಸ್ತೆಯಲ್ಲಿ 17 ವರ್ಷದ ಬಾಲಕ ಕಾರನ್ನು ಓಡಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ವಾಹನದ ಮೇಲೆ ಚಾಲಕನ ನಿಯಂತ್ರಣ ತಪ್ಪಿದ ನಂತರ ವೇಗವಾಗಿ ಬಂದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಆಗ ಸ್ಕೂಟರ್‌ನಲ್ಲಿದ್ದ ಮಹಿಳೆ ಮತ್ತು ಮಗಳು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ತಕ್ಷಣ ಸ್ಥಳೀಯರು ಧಾವಿಸಿ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದರು.

ಇನ್ನು ಚಿಕಿತ್ಸೆ ವೇಳೆ ಮಹಿಳೆ ಸಾವನ್ನಪ್ಪಿದ್ದಾಳೆ. ಆಕೆಯ ಮಗಳು ಬಹು ಮೂಳೆ ಮುರಿತಕ್ಕೆ ಒಳಗಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಇಂತಹದ್ದೇ ಘಟನೆ ಪುಣೆಯಲ್ಲೂ ನಡೆದಿತ್ತು.ಮೇ 19ರಂದು ಪುಣೆಯಲ್ಲಿ ಅಪಘಾತ ಸಂಭವಿಸಿದೆ. ಕಲ್ಯಾಣಿ ನಗರದಲ್ಲಿ ಕುಡಿದು ವೇಗವಾಗಿ ಕಾರು ಚಲಾಯಿಸಿದ ಕಾರಣ ಮಧ್ಯಪ್ರದೇಶದ ಅಶ್ವಿನಿ ಕೋಷ್ಟ ಹಾಗೂ ಅನೀಶ್‌ ಅವಾಧಿಯಾ ಎಂಬ ಇಬ್ಬರು ಟೆಕ್ಕಿಗಳು ಮೃತಪಟ್ಟಿದ್ದಾರೆ. ವಿಶಾಲ್‌ ಅಗರ್ವಾಲ್‌ ರಿಯಲ್‌ ಎಸ್ಟೇಟ್‌ ಉದ್ಯಮಿಯಾಗಿದ್ದು, ಅವರು ಪ್ರಭಾವ ಬೀರಲು ಯತ್ನಿಸಿದ್ದರು. ಅಪಘಾತಕ್ಕೆ ಕಾರಣವಾದ 17 ವರ್ಷದ ಬಾಲಕನಿಗೆ ಪೊಲೀಸ್‌ ಠಾಣೆಯಲ್ಲಿ ಪಿಜ್ಜಾ ಕೂಡ ಪೂರೈಸಲಾಗಿತ್ತು ಎಂದು ವರದಿಗಳು ತಿಳಿಸಿವೆ. ಶ್ರೀಮಂತ ಕುಟುಂಬದ 17 ವರ್ಷದ ಬಾಲಕನಿಗೆ ಆತನ ತಾತನು ಹುಟ್ಟುಹಬ್ಬದ ಉಡುಗೊರೆಯಾಗಿ ಪೋರ್ಶೆ ಟೇಕ್ಯಾನ್‌ (ಸುಮಾರು 2 ಕೋಟಿ ರೂ.) ಕಾರು ಉಡುಗೊರೆಯಾಗಿ ನೀಡಿದ್ದರು ಎನ್ನಲಾಗಿದೆ.

ಅಪಘಾತದ ಒಂದು ತಿಂಗಳ ನಂತರ, ನ್ಯಾಯಮೂರ್ತಿಗಳಾದ ಭಾರತಿ ಡಾಂಗ್ರೆ ಮತ್ತು ಮಂಜುಷಾ ದೇಶಪಾಂಡೆ ಅವರ ನ್ಯಾಯಪೀಠವು ಬಾಲಾಪರಾಧಿ ನ್ಯಾಯ ಮಂಡಳಿಯ ನಿರ್ಧಾರ ಸರಿಯಲ್ಲ ಎಂದಿದೆ. ಅಪಘಾತವು ದುರದೃಷ್ಟಕರವಾಗಿದ್ದರೂ, ಅಪ್ರಾಪ್ತ ವಯಸ್ಸಿನ ಬಾಲಕನನ್ನು ವೀಕ್ಷಣಾ ಗೃಹದಲ್ಲಿ ಇರಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಹದಿಹರೆಯದವನನ್ನು ಬಿಡುಗಡೆ ಮಾಡುವಂತೆ ನ್ಯಾಯಾಲಯವು ಬಾಲಾಪರಾಧಿ ನ್ಯಾಯ ಮಂಡಳಿಗೆ ಆದೇಶಿಸಿತ್ತು.

ಇದನ್ನೂ ಓದಿ: Hit and Run Case: ಶಿವಸೇನೆ ಮುಖಂಡನ ಪುತ್ರನಿಂದ ಡ್ರಂಕ್‌ ಆ್ಯಂಡ್‌ ಡ್ರೈವ್‌; ಸ್ಕೂಟರ್‌ಗೆ BMW ಕಾರು ಡಿಕ್ಕಿ ಹೊಡೆದು ಮಹಿಳೆ ಸಾವು

Continue Reading

ದೇಶ

Wayanad Landslide: ವಯನಾಡು ಭೂಕುಸಿತ; ಎಲ್‌ಐಸಿ ಸೇರಿ ವಿಮಾ ಕಂಪನಿಗಳಿಗೆ ಕೇಂದ್ರ ಪ್ರಮುಖ ಸೂಚನೆ!

Wayanad Landslide: ವಯನಾಡು ಸೇರಿ ಹಲವು ಜಿಲ್ಲೆಗಳ ವಿಮಾ ಪಾಲಿಸಿದಾರರನ್ನು ಗುರುತಿಸಿ, ಅವರಿಗೆ ಕ್ಲೇಮ್‌ಗಳ ಮೂಲಕ ನೆರವಾಗಿ ಎಂದು ಎಲ್‌ಐಸಿ ಸೇರಿ ಹಲವು ಸಾರ್ವಜನಿಕ ವಲಯದ ವಿಮಾ ಕಂಪನಿಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

VISTARANEWS.COM


on

Wayanad Landslide
Koo

ತಿರುವನಂತಪುರಂ: ದೇವರ ನಾಡು ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತವು 358 ಜನರನ್ನು ಬಲಿಪಡೆದಿದೆ. ಇನ್ನೂ 300 ಜನ ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ದಿನೇದಿನೆ ಏರಿಕೆಯಾಗುತ್ತಿದೆ. ಇದರ ಬೆನ್ನಲ್ಲೇ, ಕೇಂದ್ರ ಸರ್ಕಾರವು ಭಾರತೀಯ ಜೀವ ವಿಮಾ ನಿಗಮ (LIC) ಸೇರಿ ಹಲವು ಸಾರ್ವಜನಿಕ ವಲಯದ ವಿಮಾ ಕಂಪನಿಗಳಿಗೆ ಮಹತ್ವದ ಸೂಚನೆ ನೀಡಿದೆ. “ಮೃತರು ಹಾಗೂ ಗಾಯಾಳುಗಳು ವಿಮೆ ಮಾಡಿಸಿದ್ದರೆ, ಅವರ ಕ್ಲೇಮ್‌ಅನ್ನು ಶೀಘ್ರದಲ್ಲೇ ನೀಡುವ ಮೂಲಕ ನೆರವಾಗಿ” ಎಂದು ಸೂಚಿಸಿದೆ.

ದೇಶದ ಸಾರ್ವಜನಿಕ ವಲಯದ ವಿಮಾ ಸಂಸ್ಥೆಗಳಾದ ಎಲ್‌ಐಸಿ, ನ್ಯೂ ಇಂಡಿಯಾ ಇನ್ಶುರೆನ್ಸ್‌, ಓರಿಯಂಟಲ್‌ ಇನ್ಶುರೆನ್ಸ್‌ ಹಾಗೂ ಯುನೈಟೆಡ್‌ ಇಂಡಿಯಾ ಕಂಪನಿಗಳಿಗೆ ಕೇಂದ್ರ ಹಣಕಾಸು ಸಚಿವಾಲಯವು ಸೂಚನೆ ನೀಡಿದೆ. ಸಂತ್ರಸ್ತ ಕುಟುಂಬಗಳಿಗೆ ಎಷ್ಟು ಸಾಧ್ಯವೋ ಅಷ್ಟು ನೆರವಾಗಿ ಎಂದು ಸೂಚಿಸಿದೆ. ಈಗಾಗಲೇ ವಿಮಾ ಕಂಪನಿಗಳು ಸ್ಥಳೀಯ ಪತ್ರಿಕೆಗಳು, ಸಾಮಾಜಿಕ ಜಾಲತಾಣ, ಕಂಪನಿ ವೆಬ್‌ಸೈಟ್‌ ಹಾಗೂ ಎಸ್‌ಎಂಎಸ್‌ ಮೂಲಕ ಪಾಲಿಸಿ ಹೋಲ್ಡರ್‌ಗಳನ್ನು ಸಂಪರ್ಕಿಸಲು ಯತ್ನಿಸುತ್ತಿವೆ ಎಂದು ಕೂಡ ಕೇಂದ್ರ ಸರ್ಕಾರ ತಿಳಿಸಿದೆ.

ವಯನಾಡು, ಪಾಲಕ್ಕಾಡ್‌, ಕಲ್ಲಿಕೋಟೆ, ಮಲಪ್ಪುರಂ ಹಾಗೂ ತ್ರಶ್ಶೂರ್‌ನಲ್ಲಿರುವ ಪಾಲಿಸಿದಾರರನ್ನು ಸಂಪರ್ಕಿಸುವ, ಅವರ ಸಂಪರ್ಕ ಸಂಖ್ಯೆಯನ್ನು ಪತ್ತೆ ಹಚ್ಚುವ ಪ್ರಯತ್ನ ಮಾಡಲಾಗುತ್ತದೆ. ಆ ಮೂಲಕ ವಿಮಾ ಸೌಲಭ್ಯದ ಮೂಲಕವಾದರೂ ಸಂತ್ರಸ್ತರಿಗೆ ನೆರವಾಗಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.

ಕರ್ನಾಟಕದಲ್ಲೂ ಕಟ್ಟೆಚ್ಚರ

ವಯನಾಡು ದುರಂತವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರವು ಕರ್ನಾಟಕದ ಯಾವುದೇ ಮೂಲೆಯಲ್ಲಿ ಪ್ರವಾಹ, ಭೂಕುಸಿತ ಅಥವಾ ಇತರೇ ಯಾವುದೇ ನೈಸರ್ಗಿಕ ವಿಕೋಪಗಳು ಸಂಭವಿಸಿದರೆ ಅದನ್ನು ಸಮರ್ಥವಾಗಿ ಎದುರಿಸಲು ಸನ್ನದ್ಧ ಸ್ಥಿತಿಯಲ್ಲಿರಲು ಜಿಲ್ಲಾಡಳಿತಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ನಿನ್ನೆ ಮುಖ್ಯಮಂತ್ರಿಗಳು ಕೊಡಗಿನಲ್ಲಿ ಭೂಕುಸಿತ ಸಂಭವಿಸಿದ ಜಾಗಕ್ಕೆ ಭೇಟಿ ನೀಡಿದ್ದರು.

“ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ನಿಲುವಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜೊತೆ ಮತ್ತೊಮ್ಮೆ ಚರ್ಚಿಸಿ ಅಂತಿಮ ತೀರ್ಮಾನ ಮಾಡಲಾಗುವುದು” ಎಂದು ಭೇಟಿಯ ಬಳಿಕ ಹೇಳಿದ್ದರು. “ಜಿಲ್ಲೆಯಲ್ಲಿ 20 ಕಡೆ ಭೂ ಕುಸಿತ ಆಗಿದೆ, ಬಹುತೇಕ ಕಡೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಭೂಮಿ ಜಾರಿದೆ. ಅದೃಷ್ಟವಶಾತ್ ಪ್ರಾಣ ಹಾನಿ ಆಗಿಲ್ಲ. ಹಲವರು ಗಾಯಗೊಂಡಿದ್ದಾರೆ.‌ 67 ಮನೆಗಳು ಪೂರ್ಣಹಾನಿ ಆಗಿವೆ. 176 ಮನೆಗಳು ಭಾಗಶಃ ಹಾನಿ ಆಗಿವೆ. 24 ಗಂಟೆಗಳ ಒಳಗೆ ಪೂರ್ಣ ಮತ್ತು ಭಾಗಶಃ ಹಾನಿ ಆಗಿರುವ ಘಟನೆಗಳೂ ನಡೆದಿವೆ. ಒಂದು ಲಕ್ಷದ 20 ಸಾವಿರ ರೂಪಾಯಿ ಜೊತೆಗೆ ಮನೆ ಕಟ್ಟಿ ಕೊಡಲಾಗುವುದು. ಭಾಗಶಃ ಹಾನಿ ಆಗಿರುವ ಮನೆಗಳಿಗೆ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು.‌ ಇದರಲ್ಲಿ 43 ಸಾವಿರ ರಾಜ್ಯ ಸರ್ಕಾರದ ಹಣ. ಈಗಾಗಲೇ ಸಂತ್ರಸ್ಥರ ಖಾತೆಗೆ ಹಣ ವರ್ಗಾವಣೆ ಆಗಿದೆ. 16 ಜಾನುವಾರು ಸತ್ತಿವೆ. ತಲಾ 35 ಸಾವಿರ ಪರಿಹಾರ ನೀಡಿದ್ದೇನೆ. 14 ಪರಿಹಾರ ಕ್ಯಾಂಪ್ ಗಳನ್ನು ತೆರೆಯಲಾಗಿದೆ. 10 ಕ್ಯಾಂಪ್ ಗಳಲ್ಲಿ 186 ಮಂದಿ ಇದ್ದಾರೆ. ತೋರಾ ಕ್ಯಾಂಪ್ ನಲ್ಲಿ ಇರುವವರ ಜೊತೆ ನಾನೇ ನೇರವಾಗಿ ಮಾತನಾಡಿದ್ದೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: Wayanad Landslide: ವಯನಾಡು ಭೂಕುಸಿತಕ್ಕೆ ಗೋಹತ್ಯೆಯೇ ಕಾರಣ ಎಂದ ಬಿಜೆಪಿ ನಾಯಕ; ಅವರ ವಿವರಣೆ ಹೀಗಿದೆ!

Continue Reading

ದೇಶ

Cloudburst: ಮೇಘಸ್ಫೋಟದಿಂದ ಉತ್ತರ ಭಾರತದಲ್ಲಿ ಅಲ್ಲೋಲ ಕಲ್ಲೋಲ; ಏನಿದು ವಿದ್ಯಮಾನ? ಹೇಗೆ ಸಂಭವಿಸುತ್ತದೆ? ಇಲ್ಲಿದೆ ವಿವರ

Cloudburst: ಇತ್ತೀಚೆಗಷ್ಟೇ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಮೇಘಸ್ಫೋಟ ಸಂಭವಿಸಿ ಧಾರಾಕಾರ ಮಳೆ ಸುರಿದು ಭಾರಿ ಅನಾಹುತ ಸಂಭವಿಸಿದೆ. ಒಂದು ಗ್ರಾಮವಂತೂ ನಾಮಾವಶೇಷವಾಗಿದೆ. ಹಾಗಾದರೆ ಮೇಘಸ್ಫೋಟ ಎಂದರೇನು? ಇದು ಹೇಗೆ ಸಂಭವಿಸುತ್ತದೆ? ಇದು ಯಾಕೆ ಅಪಾಯಕಾರಿ ಎನ್ನುವುದನ್ನು ನೋಡೋಣ.

VISTARANEWS.COM


on

Cloudburst
Koo

ಬೆಂಗಳೂರು: ಇತ್ತೀಚೆಗಷ್ಟೇ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಮೇಘಸ್ಫೋಟ (Cloudburst) ಸಂಭವಿಸಿ ಧಾರಾಕಾರ ಮಳೆ ಸುರಿದು ಭಾರಿ ಅನಾಹುತ ಸಂಭವಿಸಿದೆ. ನದಿ ಅಪಾಯ ಮಟ್ಟ ಮೇರೆ ಮೀರಿ ಹರಿಯುತ್ತಿದ್ದು, ಕೆಲವರ ಸಾವಿಗೂ ಕಾರಣವಾಗಿದೆ. ಒಂದು ಗ್ರಾಮವಂತೂ ನಾಮಾವಶೇಷವಾಗಿದೆ. ಮೇಘಸ್ಫೋಟ ಇತ್ತೀಚಿನ ವರ್ಷಗಳಲ್ಲಿ ನಾವು ಪದೇ ಪದೆ ಕೇಳುವ ಶಬ್ದ. ಮೇಘಸ್ಫೋಟದಿಂದ ವ್ಯಾಪಕ ನಷ್ಟ ಎನ್ನುವ ಸುದ್ದಿ ಸಾಮಾನ್ಯ ಎಂಬಂತಾಗಿದೆ. ಹಾಗಾದರೆ ಮೇಘಸ್ಫೋಟ ಎಂದರೇನು? ಇದು ಹೇಗೆ ಸಂಭವಿಸುತ್ತದೆ? ಇದು ಯಾಕೆ ಅಪಾಯಕಾರಿ ? ಎನ್ನುವುದನ್ನು ನೋಡೋಣ.

ವ್ಯಾಪಕ ಮಳೆ

ಮೇಘಸ್ಫೋಟ ಎಂದರೆ ಇದು ಮಳೆಯೇ. ಆದರೆ ಸಾಮಾನ್ಯ ಮಳೆಗಿಂತ ಭಿನ್ನವಾಗಿರುತ್ತದೆ ಮತ್ತು ಶಕ್ತಿಶಾಲಿಯಾಗಿರುತ್ತದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, 20ರಿಂದ 30 ಸ್ಕ್ವೈರ್‌ ಕಿ.ಮೀ.ಯಲ್ಲಿ ಒಂದು ಗಂಟೆಯ ಅವಧಿಯಲ್ಲಿ 100 ಮಿ.ಲೀ. ಅಥವಾ ಅದಕ್ಕಿಂತ ಅಧಿಕ ಮಳೆ ಸುರಿದರೆ ಅದನ್ನು ಮೇಘಸ್ಫೋಟ ಎಂದು ಕರೆಯಲಾಗುತ್ತದೆ. ಅಂದರೆ ಒಂದು ಚಿಕ್ಕ ಪ್ರದೇಶದಲ್ಲಿ ಸ್ವಲ್ಪ ಹೊತ್ತಿನಲ್ಲಿ ಅಧಿಕ ಮಳೆ ಸುರಿಯುವ ವಿದ್ಯಾಮಾನ ಇದಾಗಿದೆ. ಹೀಗಾಗಿ ಇದು ಸುರಿದಾಗ ನಾಶ-ನಷ್ಟ ಅಧಿಕವಾಗಿರುತ್ತದೆ. ಇದು ಹೇಗೆ ಸಂಭವಿಸುತ್ತದೆ ಎನ್ನುವುದನ್ನು ನೋಡುವ ಮುನ್ನ ಮಳೆ ಸುರಿಯುವ ಪ್ರಕ್ರಿಯೆಯನ್ನು ಅರ್ಥ ಮಾಡಿಕೊಳ್ಳಬೇಕು.

ಮಳೆಯಲ್ಲಿ ಎರಡು ವಿಧ

ಭೂಮಿಯಲ್ಲಿನ ನೀರು ಉಷ್ಣತೆಯಿಂದ ನೀರು ಆವಿಯಾಗಿ ಮೇಲೇರುತ್ತದೆ. ಭೂಮಿಯ ಮೇಲ್ಮೈಗೆ ಹೋಗುತ್ತಿದ್ದ ಹಾಗೆ ತಂಪು ಹೆಚ್ಚಾಗುತ್ತ ಹೋಗುತ್ತದೆ. ನೀರಾವಿ ಮೇಲೆ ಹೋಗುತ್ತ ಮೋಡವಾಗಿ ಬದಲಾಗುತ್ತದೆ. ಇದು ಬಳಿಕ ಮಳೆಯಾಗಿ ಸುರಿಯುತ್ತದೆ. ಇದು ಮೊದಲ ವಿಧ.

ಇನ್ನು ಎರಡನೇ ವಿಧದ ಮಳೆ ಬೆಟ್ಟಗಳ ಸಹಾಯದಿಂದ ಸುರಿಯುತ್ತದೆ. ಅದು ಹೇಗೆಂದರೆ, ನೀರಾವಿ ಚಲಿಸುತ್ತಿರುವಾಗ ಬೆಟ್ಟ ಅಡ್ಡ ಬಂದರೆ ಅದು ನೇರ ಮೇಲಕ್ಕೆ ಸಾಗುತ್ತದೆ. ಹೀಗೆ ಮೇಲೇರಿ ಬಳಿಕ ಭೂಮಿಗೆ ಮಳೆಯ ರೂಪದಲ್ಲಿ ಸುರಿಯುತ್ತದೆ. ಸಾಮಾನ್ಯವಾಗಿ ಇಂತಹ ಮಳೆ ಮೇಘಸ್ಫೋಟವಾಗಿ ಬದಲಾಗುತ್ತದೆ (ಅಪರೂಪಕ್ಕೆ ಸಮತಲ ಭೂ ಭಾಗದಲ್ಲಿ ಮೇಘಸ್ಫೋಟ ನಡೆದರೂ ಹೆಚ್ಚಿನ ಹಾನಿ ಸಂಭವಿಸುವುದಿಲ್ಲ).

ಹೇಗೆ ಉಂಟಾಗುತ್ತದೆ?

ಏಕಕಾಲಕ್ಕೆ ನಿರಂತರವಾಗಿ ನೀರಾವಿ ಬೆಟ್ಟಕ್ಕೆ ಡಿಕ್ಕಿ ಹೊಡೆದು ಮೇಲೇರಿ ಮೋಡಗಳ ಸಮೂಹ ರೂಪುಗೊಳ್ಳುತ್ತದೆ. ಈ ಸಂದರ್ಭದಲ್ಲಿ ಕೆಳಗಿನಿಂದ ಬಿಸಿ ಗಾಳಿ ಮೇಲಕ್ಕೆ ಚಲಿಸಿ ಮೋಡಗಳಿಂದ ಉದುರುವ ನೀರ ಹನಿಗಳನ್ನು ಪುನಃ ಮೇಲಕ್ಕೇ ತಳ್ಳುತ್ತದೆ. ಹೀಗೆ ಮತ್ತೆ ಮೇಲಕ್ಕೆ ಮರಳುವ ನೀರ ಹನಿ ಉಳಿದವುಗಳ ಜೊತೆ ಸೇರಿ ದೊಡ್ಡದಾಗುತ್ತ ಹೋಗುತ್ತದೆ. ಕೆಲವು ಸಮಯಗಳ ಬಳಿಕ ಈ ಬಿಸಿ ಗಾಳಿ ಬೀಸುವುದು ನಿಲ್ಲುತ್ತದೆ. ಆಗ ಅದುವರೆಗೆ ಸಂಗ್ರಹವಾಗಿದ್ದ ನೀರ ಹನಿಗಳು ಮೇಲಕ್ಕೆ ತಳ್ಳುವ ಒತ್ತಡ ಇಲ್ಲದ ಕಾರಣ ಒಮ್ಮೆಲೆ ಕೆಳಗೆ ಸುರಿಯುತ್ತವೆ. ಅಧಿಕ ಸಾಂದ್ರತೆಯುಳ್ಳ, ಭಾರವುಳ್ಳ ನೀರ ಹನಿಗಳು ಒಮ್ಮೆಲೆ ಸುರಿಯುವುದರಿಂದ ಆ ಪ್ರತ್ಯೇಕ ಪ್ರದೇಶದಲ್ಲಿ ಸ್ವಲ್ಪ ಹೊತ್ತಿನಲ್ಲೇ ಅಧಿಕ ಮಳೆ ಸುರಿದಂತಾಗುತ್ತದೆ.

ಇನ್ನೊಂದು ವಿಧ

ಮೇಘಸ್ಫೋಟ ಇನ್ನೊಂದು ವಿಧದಲ್ಲೂ ಸಂಭವಿಸುವ ಸಾಧ್ಯತೆ ಇದೆ. ಅತ್ಯಧಿಕ ಉಷ್ಣತೆ, ನೀರಿನಾಂಶ ಹೊಂದಿರುವ ವಾಯು ಮತ್ತು ಕಡಿಮೆ ಉಷ್ಣತೆ ಹೊಂದಿರುವ ವಾಯು ಪರಸ್ಪರ ಡಿಕ್ಕಿ ಹೊಡೆದು ಮೋಡ ರೂಪುಗೊಂಡು ಮೇಘಸ್ಫೋಟ ಸಂಭವಿಸುತ್ತದೆ. ಇದು ಅಪರೂಪಕ್ಕೆ ನಡೆಯುವ ವಿದ್ಯಾಮಾನ ಎನ್ನುತ್ತಾರೆ ತಜ್ಞರು.

ಯಾಕಾಗಿ ಅಪಾಯಕಾರಿ?

ಮೇಘಸ್ಫೋಟದಿಂದ ಇದ್ದಕ್ಕಿದ್ದ ಹಾಗೆ ಲಕ್ಷಗಟ್ಟಲೆ ಲೀಟರ್‌ ನೀರು ಹರಿದು ಪ್ರವಾಹ ಉಂಟಾಗುತ್ತದೆ. ಅನಿರೀಕ್ಷಿತವಾಗಿ ಇದು ಉಂಟಾಗುವುದರಿಂದ ರಕ್ಷಣಾ ಕಾರ್ಯ ನಡೆಸಲೂ ಸಾಧ್ಯವಾಗದೆ ಅಪಾಯ ಅಂಭವಿಸುತ್ತದೆ. ಅದರಲ್ಲೂ ಸೂಕ್ಷ್ಮ ಭೂ ಪ್ರದೇಶಗಳಲ್ಲಿ ಗುಡ್ಡ ಕುಸಿತದಂತಹ ಅವಘಡ ಸಂಭವಿಸುತ್ತದೆ.

ನಿಯಂತ್ರಣ ಸಾಧ್ಯವೆ?

ಮೇಘಸ್ಫೋಟ ಎನ್ನುವುದು ನಿಸರ್ಗದ ಸಾಮಾನ್ಯ ಪ್ರಕ್ರಿಯೆಯಾದರೂ ಇತ್ತೀಚೆಗೆ ಹೆಚ್ಚಾಗಲು ನಮ್ಮ ಅತಿಯಾದ ಚಟುವಟಿಕೆಗಳೇ ಕಾರಣ ಎನ್ನುವುದನ್ನು ಗಮನಿಸಬೇಕು. ಪ್ರಕೃತಿಯಲ್ಲಿನ ಬದಲಾವಣೆ ಇದು ಹೆಚ್ಚಾಗುವಂತೆ ಮಾಡಿದೆ. ವಾತಾವರಣದ ಉಷ್ಣಾಂಶ ಹೆಚ್ಚಾಗಿ ನೀರಾವಿ ಪ್ರಮಾಣ ವೃದ್ಧಿಸಿದೆ. ಇದು ಅಧಿಕ ಪ್ರಮಾಣದ ಮೇಘಸ್ಫೋಟಕ್ಕೆ ಕಾರಣವಾಗಿದೆ ಎನ್ನುತ್ತಾರೆ ಹವಾಮಾನ ತಜ್ಞರು.

ಇದನ್ನೂ ಓದಿ: Wayanad Landslide: ಭೂಕುಸಿತದ ಹಾಟ್‌ಸ್ಪಾಟ್‌ಗಳಲ್ಲಿ ಕಾಮಗಾರಿಗೆ ಅನುಮತಿ ನೀಡಿದ್ದೇಕೆ? ಹಸಿರು ನ್ಯಾಯ ಮಂಡಳಿ ಪ್ರಶ್ನೆ

Continue Reading

ದೇಶ

Wayanad Landslide: ವಯನಾಡು ಭೂಕುಸಿತಕ್ಕೆ ಗೋಹತ್ಯೆಯೇ ಕಾರಣ ಎಂದ ಬಿಜೆಪಿ ನಾಯಕ; ಅವರ ವಿವರಣೆ ಹೀಗಿದೆ!

Wayanad Landslide: ಕೇರಳದ ವಯನಾಡು ಭೂಕುಸಿತಕ್ಕೆ ಅಕ್ರಮವಾಗಿ ರೆಸಾರ್ಟ್‌ಗಳನ್ನು ನಿರ್ಮಿಸಿರುವುದು, ಸೂಕ್ಷ್ಮ ಪ್ರದೇಶಗಳಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳುವುದು, ಅರಣ್ಯ ನಾಶಪಡಿಸುವುದು ಸೇರಿ ಹಲವು ಕಾರಣಗಳನ್ನು ನೀಡಲಾಗುತ್ತಿದೆ. ಆದರೆ, ಬಿಜೆಪಿ ನಾಯಕ ಜ್ಞಾನದೇವ್‌ ಅಹುಜಾ ಅವರು ಭೂಕುಸಿತಕ್ಕೆ ಬೇರೆಯದ್ದೇ ಕಾರಣ ನೀಡಿದ್ದಾರೆ. ಮುಂದೆ ಓದಿ…

VISTARANEWS.COM


on

Wayanad Landslide
Koo

ತಿರುವನಂತಪುರಂ/ಜೈಪುರ: ಕೇರಳದ ವಯನಾಡು ಈಗ ಅಕ್ಷರಶಃ ಮಸಣದಂತಾಗಿದೆ. ಭಾರಿ ಮಳೆ, ಭೀಕರ ಭೂಕುಸಿತದಿಂದಾಗಿ (Wayanad Landslide) 350ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಇನ್ನೂ 300 ಜನ ನಾಪತ್ತೆಯಾಗಿದ್ದಾರೆ. ಎಲ್ಲೆಂದರಲ್ಲಿ ಶವಗಳು ಸಿಗುತ್ತಿವೆ. ಸಾವಿರಾರು ಎಕರೆ ಕೃಷಿ ಭೂಮಿ ಹಾಳಾಗಿದೆ. ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ. ಈಗಲೂ ಹಗಲು-ರಾತ್ರಿ ಕಾರ್ಯಾಚರಣೆ ನಡೆಯುತ್ತಿದೆ. ಇನ್ನು, ಭೂಕುಸಿತಕ್ಕೆ ಅರಣ್ಯ ನಾಶ, ರೆಸಾರ್ಟ್‌ಗಳ ನಿರ್ಮಾಣ ಸೇರಿ ಹಲವು ಕಾರಣಗಳನ್ನು ಗುರುತಿಸಲಾಗುತ್ತಿದೆ. ಇದರ ಬೆನ್ನಲ್ಲೇ, “ಕೇರಳದಲ್ಲಿ ಭೂಕುಸಿತ ಉಂಟಾಗಲು ಗೋವುಗಳ ಹತ್ಯೆಯೇ ಕಾರಣ” ಎಂಬುದಾಗಿ ಬಿಜೆಪಿ ನಾಯಕ ಜ್ಞಾನದೇವ್‌ ಅಹುಜಾ ಹೇಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.

ರಾಜಸ್ಥಾನದ ಬಿಜೆಪಿ ನಾಯಕ, ಮಾಜಿ ಶಾಸಕ ಜ್ಞಾನದೇವ್‌ ಅಹುಜಾ ಹೇಳಿಕೆ ಈಗ ಭಾರಿ ಚರ್ಚೆಗೂ ಗ್ರಾಸವಾಗಿದೆ. “ವಯನಾಡಿನಲ್ಲಿ ಭೂಕಂಪ ಸಂಭವಿಸಿರುವುದು ಗೋಹತ್ಯೆಯ ಪರಿಣಾಮವಾಗಿದೆ. ಕೇರಳದಲ್ಲಿ ಗೋಹತ್ಯೆಯನ್ನು ನಿಲ್ಲಿಸದಿದ್ದದರೆ ಇಂತಹ ಹಲವು ದುರಂತಗಳು ಸಂಭವಿಸುತ್ತಲೇ ಇರುತ್ತವೆ. 2018ರಿಂದಲೂ ನಾನು ಇದನ್ನು ಗಮನಿಸುತ್ತಿದ್ದೇನೆ. ಎಲ್ಲೆಲ್ಲಿ ಗೋವುಗಳ ಹತ್ಯೆಯು ಜಾಸ್ತಿಯಾಗಿರುತ್ತದೆಯೋ, ಅಲ್ಲೆಲ್ಲ ಭೂಕುಸಿತ ಸಂಭವಿಸುತ್ತಿರುತ್ತವೆ. ಕೇರಳದ ವಯನಾಡು ಇದಕ್ಕೆ ನಿದರ್ಶನ” ಎಂದು ಮಾಧ್ಯಮವೊಂದರ ಜತೆ ಮಾತನಾಡುವಾಗ ಅಹುಜಾ ಹೇಳಿದ್ದಾರೆ. ಆದರೆ, ಗೋವುಗಳ ಹತ್ಯೆಗೂ, ಭೂಕುಸಿತಕ್ಕೂ ಹೇಗೆ ನಂಟಿದೆ ಎಂಬುದನ್ನು ಅವರು ವಿವರಿಸಿಲ್ಲ.

ಸಹಾಯಹಸ್ತ ಚಾಚಿದ ಕರ್ನಾಟಕ

ವಯನಾಡು ಭೂಕುಸಿತದಿಂದ ಸಾವಿರಾರು ಜನ ನಿರಾಶ್ರಿತರಾಗಿದ್ದು, ಅವರ ನೆರವಿಗೆ ಕರ್ನಾಟಕ ಸರ್ಕಾರ ಧಾವಿಸಿದೆ. “ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ ರಾಜ್ಯ ಸರ್ಕಾರ ನಿಂತಿದೆ. ಭೂಕುಸಿತದಿಂದ ಸೂರು ಕಳೆದುಕೊಂಡ 100 ಕುಟುಂಬಗಳಿಗೆ ನಮ್ಮ ಸರ್ಕಾರ ಮಾನವೀಯ ನೆಲೆಯಲ್ಲಿ ಮತ್ತೆ ಮನೆ ನಿರ್ಮಿಸಿಕೊಡಲಿದೆ ಎಂಬ ಭರವಸೆಯನ್ನು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ನೀಡಿದ್ದೇನೆ. ಸಂಕಷ್ಟದ ಕಾಲದಲ್ಲಿ ಜೊತೆ ನಿಂತು ಭರವಸೆಯನ್ನು ಮರಳಿ ಕಟ್ಟೋಣ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೋಸ್ಟ್‌ ಮಾಡಿದ್ದಾರೆ.

ಈ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ಘೋಷಣೆ ಮಾಡಿದ್ದರು. ಭೂಕುಸಿತದಿಂದ ಸಂಕಷ್ಟದಲ್ಲಿರುವ ಕನ್ನಡಿಗರ ನೆರವಿಗೆ ಧಾವಿಸಲು ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ನೇಮಿಸಲಾಗಿತ್ತು. ಗಡಿ ಜಿಲ್ಲೆ ಚಾಮರಾಜನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿತ್ತು. ಹೆಚ್.ಡಿ ಕೋಟೆಯಲ್ಲಿ ಗಾಯಾಳುಗಳನ್ನು ಕರೆತಂದು ಅಗತ್ಯ ಚಿಕಿತ್ಸೆ ಕೊಡಿಸಲು ಬಸ್‌ಗಳನ್ನು ಏರ್ಪಡಿಸಲಾಗಿತ್ತು. ಅಗತ್ಯ ಸಲಕರಣೆಗಳನ್ನು ಹೊತ್ತ ಬೆಂಗಳೂರಿನ ಎನ್.ಡಿ.ಆರ್.ಎಫ್ ಹಾಗೂ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ಸೇನಾಪಡೆಯ ತಂಡಗಳು ವಯನಾಡು ತಲುಪಿದ್ದವು.

ಇದನ್ನೂ ಓದಿ: Wayanad Landslide: ವಯನಾಡು ಭೂಕುಸಿತ: ದುರಂತದ ಮಧ್ಯೆಯೂ ಭರವಸೆಯ ಕಿರಣ; ಸಂತ್ರಸ್ತರ ರಕ್ಷಣೆಯೇ ರೋಚಕ

Continue Reading
Advertisement
MS Dhoni
ಪ್ರಮುಖ ಸುದ್ದಿ13 mins ago

MS Dhoni : ವಿರಾಟ್ ಕೊಹ್ಲಿ ಜತೆಗಿನದ ಸಂಬಂಧವನ್ನು ವಿವರಿಸಿದ ಕೂಲ್ ಕ್ಯಾಪ್ಟನ್​ ಮಹೇಂದ್ರ ಸಿಂಗ್ ಧೋನಿ

KCET 2024
ಬೆಂಗಳೂರು31 mins ago

KCET 2024 : ನೀಟ್‌ ಮೊದಲ ಸುತ್ತಿನ ಕೌನ್ಸೆಲಿಂಗ್ ನಂತರವೇ ಕೆಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಶುರು

Shiradi ghat landslide
ಕರ್ನಾಟಕ31 mins ago

Shiradi ghat landslide: ಶಿರಾಡಿ ಘಾಟ್ ಗುಡ್ಡ ಕುಸಿತದ ಭೀಕರತೆಗೆ ಸಿಎಂ‌ ಶಾಕ್; 90 ಡಿಗ್ರಿ ನೇರವಾಗಿ ಗುಡ್ಡ ಸೀಳಿದ್ದಕ್ಕೆ ಅಧಿಕಾರಿಗೆ ತರಾಟೆ

Paris Olympics 2024
ಪ್ರಮುಖ ಸುದ್ದಿ35 mins ago

Paris Olympics 2024 : ಪುರುಷ ಸ್ಪರ್ಧಿಯಿಂದ ಏಟು ತಿಂದ ಇಟಲಿಯ ಮಹಿಳಾ ಬಾಕ್ಸರ್​ಗೆ 41 ಲಕ್ಷ ಬಹುಮಾನ ಘೋಷಿಸಿದ ಬಾಕ್ಸಿಂಗ್​ ಸಂಸ್ಥೆ

ದೇಶ42 mins ago

Accident: ಬಾಲಕ ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಡಿಕ್ಕಿ; ಮಹಿಳೆ ಬಲಿ; ಭೀಕರ ದೃಶ್ಯ ವೈರಲ್‌

Wayanad Landslide
ದೇಶ45 mins ago

Wayanad Landslide: ವಯನಾಡು ಭೂಕುಸಿತ; ಎಲ್‌ಐಸಿ ಸೇರಿ ವಿಮಾ ಕಂಪನಿಗಳಿಗೆ ಕೇಂದ್ರ ಪ್ರಮುಖ ಸೂಚನೆ!

Manu Bhaker
ಕ್ರೀಡೆ45 mins ago

Manu Bhaker: 20 ಲಕ್ಷದಿಂದ 1.5 ಕೋಟಿಗೆ ಏರಿಕೆ ಕಂಡ ಮನು ಭಾಕರ್ ಜಾಹೀರಾತು ಮೌಲ್ಯ; 40ಕ್ಕೂ ಹೆಚ್ಚು ಕಂಪನಿಗಳಿಂದ ಆಫರ್​

Raayan Movie crosses Rs 100 crore
ಕಾಲಿವುಡ್48 mins ago

Raayan Movie: ಎಂಟೇ ದಿನಕ್ಕೆ ‘100 ಕೋಟಿ ಕ್ಲಬ್‌’ ಸೇರಿದ ಧನುಷ್ ನಟನೆಯ’ರಾಯನ್‌’ ಸಿನಿಮಾ!

Paris Olympics 2024
ಪ್ರಮುಖ ಸುದ್ದಿ58 mins ago

Paris Olympics 2024 : ಚಿನ್ನ ಪದಕ ಗೆದ್ದ ಖುಷಿಗೆ ಸಹ ಆಟಗಾರ್ತಿಗೆ ಮದುವೆ ಪ್ರಪೋಸ್ ಮಾಡಿದ ಚೀನಾದ ಷಟ್ಲರ್​!

Cloudburst
ದೇಶ1 hour ago

Cloudburst: ಮೇಘಸ್ಫೋಟದಿಂದ ಉತ್ತರ ಭಾರತದಲ್ಲಿ ಅಲ್ಲೋಲ ಕಲ್ಲೋಲ; ಏನಿದು ವಿದ್ಯಮಾನ? ಹೇಗೆ ಸಂಭವಿಸುತ್ತದೆ? ಇಲ್ಲಿದೆ ವಿವರ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ5 hours ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ4 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ4 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ5 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ5 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌