Site icon Vistara News

Rape In Gujarat | ಬಿಜೆಪಿ ಆಡಳಿತದ ಗುಜರಾತ್‌ನಲ್ಲಿ ತಿಂಗಳಿಗೆ ಸರಾಸರಿ 45 ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ

Gang rape by friends

ಗಾಂಧಿನಗರ/ನವದೆಹಲಿ: ಗುಜರಾತ್‌ನಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಮಹಿಳಾ ಸುರಕ್ಷತೆಯ ವಿಷಯವನ್ನೂ ಇಟ್ಟುಕೊಂಡು ಪ್ರಚಾರ ಕೈಗೊಂಡಿತ್ತು. ಆದರೆ, ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಅತ್ಯಾಚಾರದ ಕುರಿತು ಕೇಂದ್ರ ಸರ್ಕಾರ ನೀಡಿರುವ ವರದಿಯು ಗುಜರಾತ್‌ನಲ್ಲಿ ಹೆಣ್ಣುಮಕ್ಕಳ ಸುರಕ್ಷತೆಯ ಕರಾಳ ಮುಖವನ್ನು (Rape In Gujarat) ಅನಾವರಣ ಮಾಡಿದೆ.

“ಗುಜರಾತ್‌ನಲ್ಲಿ ಮಾಸಿಕ 45 ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ನಡೆಯುತ್ತದೆ. ಆರು ಮಹಿಳೆಯರ ಮೇಲೆ ಆ್ಯಸಿಡ್‌ ದಾಳಿಯಾಗುತ್ತದೆ. ಒಂದು ವರ್ಷದಲ್ಲಿ ಸರಾಸರಿ 260 ಮಹಿಳೆಯರ ಹತ್ಯೆಯಾಗುತ್ತದೆ” ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ಹಾಗಾಗಿ, ಬಿಜೆಪಿ ಆಡಳಿತದ ಗುಜರಾತ್‌ನಲ್ಲಿ ಹೆಣ್ಣುಮಕ್ಕಳಿಗೆ ಎಷ್ಟರಮಟ್ಟಿಗೆ ಸುರಕ್ಷತೆ ಇದೆ ಎಂಬ ಪ್ರಶ್ನೆಯು ಸಾರ್ವಜನಿಕ ವಲಯದಲ್ಲಿ ಮೂಡಿದೆ. ಸರ್ಕಾರದ ವಿರುದ್ಧ ಆಕ್ರೋಶವೂ ವ್ಯಕ್ತವಾಗುತ್ತಿದೆ.

ಕೇಂದ್ರ ಸರ್ಕಾರವು ಲೋಕಸಭೆಗೆ ಗುಜರಾತ್‌ನಲ್ಲಿ ಹೆಣ್ಣುಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ಕುರಿತು ಮಾಹಿತಿ ನೀಡಿದೆ. “ಗುಜರಾತ್‌ನಲ್ಲಿ 2018ರಿಂದ 2021ರ ಅವಧಿಯಲ್ಲಿ 2,156 ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ನಡೆಸಲಾಗಿದೆ. ಪ್ರತಿ ವರ್ಷ ಸರಾಸರಿ 550 ರೇಪ್‌ ಕೇಸ್‌ಗಳು ದಾಖಲಾಗಿವೆ. ನಾಲ್ಕು ವರ್ಷದಲ್ಲಿ 3,762 ಮಹಿಳೆಯರ ಮೇಲೆ ಹಲ್ಲೆ ನಡೆದಿದ್ದು, ಇದು ಮಾಸಿಕ ಸರಾಸರಿ 100ರಷ್ಟಿದೆ” ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ | Gang Rape In Palghar | 16 ವರ್ಷದ ಬಾಲಕಿ ಮೇಲೆ 8 ಜನರಿಂದ 12 ಗಂಟೆ ಅತ್ಯಾಚಾರ

Exit mobile version