ಹೈದರಾಬಾದ್: ನಗರದಲ್ಲಿರುವ ಕಸ್ತೂರಬಾ ಕಾಲೇಜಿನ ಪ್ರಯೋಗಾಲಯದಲ್ಲಿ ರಾಸಾಯನಿಕ (Gas Leak In College) ಸೋರಿಕೆಯುಂಟಾಗಿದ್ದು, 50ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡಿರುವ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
“ಕಾಲೇಜಿನ ಎರಡನೇ ಮಹಡಿಯಲ್ಲಿರುವ ಲ್ಯಾಬ್‌ನಲ್ಲಿ ವಿದ್ಯಾರ್ಥಿಗಳಿಗೆ ವಾಂತಿ ಬರುವ ಅನುಭವವಾಗಿದ್ದು, ಒಂದಷ್ಟು ಜನರಿಗೆ ಉಸಿರಾಟದ ತೊಂದರೆಯಾಗಿದೆ. ಕೂಡಲೇ 50ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗಾಗಲೇ 19 ವಿದ್ಯಾರ್ಥಿಗಳನ್ನು ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಮಾಡಲಾಗಿದೆ. ರಾಸಾಯನಿಕ ಸೋರಿಕೆಯಿಂದ ಹೀಗಾಗಿರಬಹುದು” ಎಂದು ಪೊಲೀಸರು ತಿಳಿಸಿದ್ದಾರೆ.
ಕಾಲೇಜಿನ ಲ್ಯಾಬ್‌ಗೆ ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಭೇಟಿ ನೀಡಿದ್ದು, ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದಾರೆ. ಆದಾಗ್ಯೂ, ಗಾಯಗೊಂಡಿರುವ ವಿದ್ಯಾರ್ಥಿಗಳ ಪರಿಸ್ಥಿತಿ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂಬುದಾಗಿ ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ | Health problem | ಉಪಾಹಾರ ಸೇವನೆ ಬಳಿಕ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ, ಆಸ್ಪತ್ರೆಗೆ ದಾಖಲು