ದೇಶ
ಒಂದೇ ಕುಟುಂಬದ 6 ಮಂದಿಯ ಪ್ರಾಣ ತೆಗೆದ ಸೊಳ್ಳೆ ಬತ್ತಿ; ಹಾಸಿಗೆ ಮೇಲೆ ಬಿದ್ದು ಭುಗಿಲೆದ್ದ ಹೊಗೆ, ಬೆಂಕಿ
ಮುಂಜಾನೆ ಹೊತ್ತಿಗೆ ಆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ನೆರೆಯವರು ಪೊಲೀಸರಿಗೆ ಕರೆ ಮಾಡಿದ್ದರು. ಅಲ್ಲಿಗೆ ಧಾವಿಸಿದ ಪೊಲೀಸರು, ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಮೃತದೇಹಗಳನ್ನು ಹೊರಗೆ ತೆಗೆಯಲಾಗಿದೆ.
ನವ ದೆಹಲಿ: ಸೊಳ್ಳೆಬತ್ತಿ ಹಾಸಿಗೆ (mosquito coil) ಮೇಲೆ ಬಿದ್ದು, ಅದರಿಂದ ಹೊಮ್ಮಿದ ವಿಷಪೂರಿತ ಹೊಗೆಯಿಂದ ಉಸಿರುಕಟ್ಟಿ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿದ್ದಾರೆ. ಈ ಘಟನೆ ವರದಿಯಾಗಿದ್ದು ದೆಹಲಿಯ ಈಶಾನ್ಯ ಭಾಗದಲ್ಲಿರುವ (New Delhi) ಶಾಸ್ತ್ರಿಪಾರ್ಕ್ ಏರಿಯಾದಿಂದ. ಸೊಳ್ಳೆಯಿಂದ ಪಾರಾಗಲು ಈ ಮನೆಯಲ್ಲಿ ಸೊಳ್ಳೆ ಬತ್ತಿ ಹಾಕಿಕೊಂಡು ಎಲ್ಲರೂ ಮಲಗಿದ್ದರು. ರಾತ್ರಿ ಯಾವಾಗಲೋ ಆ ಬತ್ತಿ ಹಾಸಿಗೆ ಮೇಲೆ ಬಿದ್ದಿದೆ. ಸಾಮಾನ್ಯವಾಗಿ ಸೊಳ್ಳೆ ಬತ್ತಿಯ ಹೊಗೆಯೇ ಘಾಟಾಗಿ ಇರುತ್ತದೆ. ಅದು ಹಾಸಿಗೆ ಮೇಲೆ ಬಿದ್ದು, ಹಾಸಿಗೆಯ ಬಟ್ಟೆಯ ಹೊಗೆಯೂ ಜತೆಗೆ ಸೇರಿ, ಆರೂ ಮಂದಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ.
ಮುಂಜಾನೆ ಹೊತ್ತಿಗೆ ಆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ನೆರೆಯವರು ಪೊಲೀಸರಿಗೆ ಕರೆ ಮಾಡಿದ್ದರು. ಅಲ್ಲಿಗೆ ಧಾವಿಸಿದ ಪೊಲೀಸರು, ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಮೃತದೇಹಗಳನ್ನು ಹೊರಗೆ ತೆಗೆಯಲಾಗಿದೆ. ಈಶಾನ್ಯ ದೆಹಲಿ ಜಿಲ್ಲೆಯ ಡಿಸಿಪಿ ಜಾಯ್ ಟಿರ್ಕಿ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿ ‘ಮಚ್ಚಿ ಮಾರ್ಕೆಟ್ ಬಳಿಯಿರುವ ಮಾಜಾರ್ ವಾಲಾ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದಾಗಿ ಬೆಳಗ್ಗೆ ಹೊತ್ತಿಗೆ ಶಾಸ್ತ್ರಿಪಾರ್ಕ್ ಪೊಲೀಸ್ ಸ್ಟೇಶನ್ಗೆ ಕರೆಬಂತು. ಪೊಲೀಸರು ಮತ್ತು ಅಗ್ನಿಶಾಮಕದಳದ ಸಿಬ್ಬಂದಿ ತಕ್ಷಣವೇ ಅಲ್ಲಿಗೆ ತೆರಳಿದರು. ಮೃತದೇಹಗಳನ್ನೆಲ್ಲ ಜಗ್ ಪ್ರವೇಶ್ ಚಂದ್ರ ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: Family suicide : ಮಂಗಳೂರಿನ ಲಾಡ್ಜ್‌ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಮೃತರು ಮೈಸೂರಿನವರು
ಈ ಮನೆಯಲ್ಲಿ ಒಟ್ಟು ಒಂಭತ್ತು ಮಂದಿ ಇದ್ದರು. ಅದರಲ್ಲಿ ಮೂವರು ಅಪಾಯದಿಂದ ಪಾರಾಗಿದ್ದಾರೆ. ಆದರೆ ಅವರೂ ಕೂಡ ಎಚ್ಚರ ತಪ್ಪಿದ್ದರು. ಆ ಮೂವರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅದರಲ್ಲಿ ಒಬ್ಬರು ಪ್ರಾಥಮಿಕ ಚಿಕಿತ್ಸೆಗೇ ಚೇತರಿಸಿಕೊಂಡು, ಡಿಸ್ಚಾರ್ಜ್ ಆಗಿದ್ದಾರೆ. ಇನ್ನಿಬ್ಬರಿಗೆ ಸುಟ್ಟಗಾಯಗಳೂ ಆಗಿದ್ದು ಅವರಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ಜಾಯ್ ಟಿರ್ಕಿ ತಿಳಿಸಿದ್ದಾರೆ. ಮೃತಪಟ್ಟವರಲ್ಲಿ ಒಂದು ಮಗು, ನಾಲ್ವರು ಪುರುಷರು, ಒಬ್ಬಳು ಮಹಿಳೆ ಸೇರಿದ್ದಾರೆ.
ದೇಶ
New Parliament Building: ನೂತನ ಸಂಸತ್ ಭವನದ ಉದ್ಘಾಟನೆ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಹೊಸ ಸಂಸತ್ ಭವನದ ಉದ್ಘಾಟನೆ ನಿಮಿತ್ತ ಕಾರ್ಯಕ್ರಮಗಳು ಇಂದು ಮುಂಜಾನೆ 7.30ರಿಂದಲೇ ಪ್ರಾರಂಭಗೊಂಡಿವೆ. ಎರಡನೇ ಹಂತದ ಕಾರ್ಯಕ್ರಮಗಳು ಕೆಲವೇ ಹೊತ್ತಲ್ಲಿ ಶುರುವಾಗಲಿದ್ದು, ನಾವಿಲ್ಲಿ ಕೆಳಗೆ ಕೊಟ್ಟಿರುವ ಲಿಂಕ್ ಮೂಲಕ ನೇರಪ್ರಸಾರ ವೀಕ್ಷಿಸಬಹುದು.
ಇಂದು ದೆಹಲಿಯಲ್ಲಿ ನೂತನ ಸಂಸತ್ ಭವನ (New Parliament Building)ದ ಉದ್ಘಾಟನೆ ಕಾರ್ಯಕ್ರಮ ನಡೆಯುತ್ತಿದೆ (New Parliament Building Inauguration). ಬೆಳಗ್ಗೆ 7.30ರಿಂದಲೇ ಧಾರ್ಮಿಕ ಕಾರ್ಯಕ್ರಮಗಳು ಪ್ರಾರಂಭವಾಗಿವೆ. ಪ್ರಧಾನಿ ನರೇಂದ್ರ ಮೋದಿಯವರು ಸೆಂಗೋಲ್ ಪ್ರತಿಷ್ಠಾಪನೆ ಮಾಡಿದ್ದಾರೆ. ಇಂದು ಮಧ್ಯಾಹ್ನ 2.30ರವರೆಗೂ ಸಂಸತ್ ಭವನದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ನೀವು ಈ ಕೆಳಗಿನ ಲಿಂಕ್ ಮೂಲಕ ನೇರಪ್ರಸಾರ ವೀಕ್ಷಿಸಬಹುದಾಗಿದೆ.
ದೇಶ
New Parliament Building: ಕಾರ್ಮಿಕರಿಗೆ ಸನ್ಮಾನಿಸಿದ ಪ್ರಧಾನಿ ಮೋದಿ; ಸರ್ವ ಧರ್ಮ ಪ್ರಾರ್ಥನೆ
ಸರ್ವ ಧರ್ಮ ಪ್ರಾರ್ಥನೆ ವೇಳೆ ಗೃಹ ಸಚಿವ ಅಮಿತ್ ಶಾ, ಇನ್ನಿತರ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಅನುರಾಗ್ ಠಾಕೂರ್, ರಾಜನಾಥ್ ಸಿಂಗ್, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮತ್ತಿತರ ಹಲವು ಗಣ್ಯರು ಇದ್ದರು.
ನವ ದೆಹಲಿ: ನೂತನ ಸಂಸತ್ ಭವನ ಉದ್ಘಾಟನೆ (New Parliament Building Inauguration) ನಿಮಿತ್ತ ಮುಂಜಾನೆ 7.30ರಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಪ್ರಧಾನಿ ಮೋದಿ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಎಲ್ಲ ಪೂಜೆಗಳಲ್ಲೂ ಪಾಲ್ಗೊಂಡರು. ಗಣಪತಿ ಹೋಮ ಮುಕ್ತಾಯವಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿಯವರು ಸೆಂಗೋಲ್ನ್ನು ಹಿಡಿದು, ನೂತನ ಸಂಸತ್ ಭವನ ಪ್ರವೇಶಿಸಿ, ಅಲ್ಲಿ ಸ್ಪೀಕರ್ ಕುರ್ಚಿಯ ಬಲಭಾಗದಲ್ಲಿ ಪ್ರತಿಷ್ಠಾಪಿಸಿದರು. ಈ ವೇಳೆ ತಮಿಳುನಾಡಿನ ಅಧೀನಂ ಮಠದ ಪುರೋಹಿತರು, ಸಂತರು, ಮಠಾಧೀಶರು ಇದ್ದರು. ಮಂತ್ರಘೋಷ ಮೊಳಗುತ್ತಿತ್ತು.
ಇಷ್ಟಾದ ಮೇಲೆ ಪ್ರಧಾನಿ ನರೇಂದ್ರ ಮೋದಿಯವರು ಕಾರ್ಮಿಕರನ್ನು ಸನ್ಮಾನಿಸಿದರು. ನೂತನ ಸಂಸತ್ ಭವನ ನಿರ್ಮಾಣ ಮಾಡಿದ ಈ ಕೆಲಸಗಾರರಿಗೆ ಶಾಲು ಹೊದೆಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಅದಕ್ಕೂ ಮೊದಲು ನರೇಂದ್ರ ಮೋದಿಯವರು ಸಂಸತ್ ಭವನದ ಫಲಕ ಅನಾವರಣಗೊಳಿಸಿದರು. ನಂತರ ಅಲ್ಲಿ ಸರ್ವಧರ್ಮಗಳ ಪ್ರಾರ್ಥನೆ ನಡೆಯಿತು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಗೃಹ ಸಚಿವ ಅಮಿತ್ ಶಾ, ಇನ್ನಿತರ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಅನುರಾಗ್ ಠಾಕೂರ್, ರಾಜನಾಥ್ ಸಿಂಗ್ ಮತ್ತಿತರ ಹಲವು ಗಣ್ಯರು ಇದ್ದರು. ಇವರಲ್ಲಿ ಸ್ಪೀಕರ್ ಓಂ ಬಿರ್ಲಾ ಪ್ರತಿ ಕಾರ್ಯದಲ್ಲೂ ಪ್ರಧಾನಿ ಮೋದಿಗೆ ಜತೆಯಾದರು.
ವಿಡಿಯೋಗಳು ಇಲ್ಲಿವೆ:
#WATCH | PM Modi unveils the plaque to mark the inauguration of the new Parliament building pic.twitter.com/quaSAS7xq6
— ANI (@ANI) May 28, 2023
#WATCH | PM Narendra Modi felicitates the workers who helped in the building and development of the new Parliament House. pic.twitter.com/r6TkOQp4PX
— ANI (@ANI) May 28, 2023
Delhi | PM Modi along with Lok Sabha Speaker Om Birla and Cabinet ministers attends a 'Sarv-dharma' prayer ceremony being held at the new Parliament building pic.twitter.com/lfZZpTDMHx
— ANI (@ANI) May 28, 2023
EXPLAINER
ವಿಸ್ತಾರ Explainer: ಹೊಸ ಸಂಸತ್ ಭವನದಲ್ಲಿ ಸ್ಥಾಪಿತಗೊಂಡ ತಮಿಳುನಾಡಿನ ಚಿನ್ನದ ಸೆಂಗೋಲ್; ಏನಿದರ ಮಹತ್ವ?
ಕ್ರಿಸ್ತಪೂರ್ವ 3ನೇ ಶತಮಾನದಲ್ಲಿ ಆಡಳಿತ ನಡೆಸಿದ್ದ ಚೋಳ ರಾಜನ ಅವಧಿಯಲ್ಲಿ (ತಮಿಳು ರಾಜ) ಮಹತ್ವ ಪಡೆದ ರಾಜದಂಡ ಇದಾಗಿತ್ತು ಎಂದು ಅಮಿತ್ ಶಾ ತಿಳಿಸಿದ್ದಾರೆ.
ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಆಚರಿಸಲಾಗುತ್ತಿರುವ ಆಜಾದಿ ಕಾ ಅಮೃತ ಮಹೋತ್ಸವದ ಭಾಗವಾಗಿ ಇಂದು ನೂತನ ಸಂಸತ್ ಭವನವನ್ನು (New Parliament Building) ಪ್ರಧಾನಿ ಮೋದಿ (PM Modi)ಯವರು ಉದ್ಘಾಟನೆ ಮಾಡಿದ್ದಾರೆ. ಹಾಗೇ, ಹೊಸದಾಗಿ ನಿರ್ಮಾಣವಾದ ಸಂಸತ್ ಭವನದಲ್ಲಿ ತಮಿಳುನಾಡಿನ ’ರಾಜದಂಡ’ (ಸೆಂಗೋಲ್)ವನ್ನು ಪ್ರತಿಷ್ಠಾಪಿಸಿದ್ದಾರೆ. ಸ್ಪೀಕರ್ ಕುರ್ಚಿಯ ಪಕ್ಕವೇ ರಾಜದಂಡವೂ ನಿಂತಿದೆ.
ʼ‘ಸೆಂಗೋಲ್ ಅಂದರೆ ರಾಜದಂಡ ಎಂಬುದು ಭಾರತದ ಸ್ವಾತಂತ್ರ್ಯದ ಪ್ರತೀಕವಾಗಿದೆ. ಬ್ರಿಟಿಷರು ಭಾರತಕ್ಕೆ ಆಡಳಿತ/ಅಧಿಕಾರವನ್ನು ಹಸ್ತಾಂತರ ಮಾಡಿ ಹೋದ ನಂತರ ತಮಿಳುನಾಡಿನ ಜನರು, ಅಂದಿನ ಪ್ರಧಾನಿ ಜವಾಹರ್ಲಾಲ್ ನೆಹರೂ ಅವರಿಗೆ ಈ ರಾಜದಂಡ ನೀಡಿದ್ದರು. ಭಾರತದಲ್ಲಿ ಆಡಳಿತ ನಡೆಸುವ ಅಧಿಕಾರ ಭಾರತಕ್ಕೇ ಸಿಕ್ಕಿದ್ದರಿಂದ 1947ರ ಆಗಸ್ಟ್ 14ರಂದು ಬೆಳಗ್ಗೆ 10.45ಕ್ಕೆ ಈ ಸೆಂಗೋಲ್ನ್ನು ನೆಹರೂ ಅವರಿಗೆ ನೀಡಲಾಗಿತ್ತು. ಇದು ಸಂಪೂರ್ಣವಾಗಿ ಚಿನ್ನದ್ದು ʼ’ ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
ಇದು ಎಲ್ಲಿತ್ತು?
ʼ‘ಕ್ರಿಸ್ತಪೂರ್ವ 3ನೇ ಶತಮಾನದಲ್ಲಿ ಆಡಳಿತ ನಡೆಸಿದ್ದ ಚೋಳ ರಾಜನ ಅವಧಿಯಲ್ಲಿ (ತಮಿಳು ರಾಜ) ಮಹತ್ವ ಪಡೆದ ರಾಜದಂಡ ಇದಾಗಿತ್ತು. ಈ ರಾಜದಂಡದ ಬಗ್ಗೆ ಪ್ರಧಾನಿ ಮೋದಿಯವರಿಗೆ ಗೊತ್ತಾಗುತ್ತಿದ್ದಂತೆ, ಅದನ್ನು ಹೊಸ ಸಂಸತ್ ಭವನದಲ್ಲಿ ಇಡಲು ತೀರ್ಮಾನಿಸಿದ್ದಾರೆ. ಸೆಂಗೋಲ್ ಎಂದರೆ ತಮಿಳಿನ ಭಾಷೆಯಲ್ಲಿ ಸಮೃದ್ಧ ಸಂಪತ್ತು ಎಂದರ್ಥ’ʼ ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದರು.
ಇದನ್ನೂ ಓದಿ: Photo Gallery | ಆಕರ್ಷಕ ಹೊಸ ಸಂಸತ್ ಭವನ! ಗಮನ ಸೆಳೆಯುತ್ತಿವೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಚಿತ್ರಗಳು
ಏನೀ ಸೆಂಗೋಲ್‌ನ ಇತಿಹಾಸ?
ತಮಿಳುನಾಡು ಮೂಲದ ಚೋಳ ರಾಜವಂಶ ವಾಸ್ತುಶಿಲ್ಪ, ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಗಳಿಗೆ ಅಸಾಧಾರಣ ಕೊಡುಗೆ ನೀಡಿತ್ತು. ಚೋಳರ ಕಾಲದಲ್ಲಿ ಸೆಂಗೋಲ್ ಎಂಬುದು ರಾಜರ ಪಟ್ಟಾಭಿಷೇಕದಲ್ಲಿ ಅಪಾರ ಪ್ರಾಮುಖ್ಯತೆ ಹೊಂದಿತ್ತು. ಇದೊಂದು ಧಾರ್ಮಿಕ ಮಹತ್ವ ಹೊಂದಿರುವ ರಾಜದಂಡ. ಚಂದದ ಕೆತ್ತನೆಗಳು, ಸಂಕೀರ್ಣವಾದ ಅಲಂಕಾರಿಕ ಅಂಶಗಳು ಇದರ ವೈಶಿಷ್ಟ್ಯ. ರಾಜಪರಂಪರೆಯ ಪಾಲಿಗೆ ಇದು ಪವಿತ್ರ ಲಾಂಛನ. ಒಬ್ಬ ಆಡಳಿತಗಾರನಿಂದ ಮುಂದಿನವರಿಗೆ ಅಧಿಕಾರದ ವರ್ಗಾವಣೆಯನ್ನು ಇದು ಪ್ರತಿನಿಧಿಸುತ್ತಿತ್ತು.
ಬ್ರಿಟಿಷರು ಭಾರತೀಯರ ಕೈಗೆ ಅಧಿಕಾರ ಹಸ್ತಾಂತರಿಸಲಿದ್ದ ಸಂದರ್ಭದಲ್ಲಿ, ವೈಸರಾಯ್ ಲಾರ್ಡ್ ಮೌಂಟ್ ಬ್ಯಾಟನ್ ಅವರು ಪಂಡಿತ್ ಜವಾಹರಲಾಲ್ ಮುಂದೆ ಒಂದು ಪ್ರಶ್ನೆಯನ್ನು ಇಟ್ಟರು. ಈ ಮಹತ್ವದ ಘಟನೆಯನ್ನು ಸೂಚಿಸಲು ಸೂಕ್ತವಾದ ಸಮಾರಂಭ ಹೇಗೆ ಮಾಡಬಹುದು ಎಂದು ವಿಚಾರಿಸಿದರು. ನೆಹರೂ ಅವರು ಈ ಪ್ರಶ್ನೆಯನ್ನು ಆ ಕಾಲದ ದೊಡ್ಡ ಮುತ್ಸದ್ಧಿ ಸಿ.ರಾಜಗೋಪಾಲಾಚಾರಿ (ರಾಜಾಜಿ) ಯವರ ಮುಂದಿಟ್ಟರು.
ರಾಜಾಜಿಯವರು ಚೋಳ ರಾಜವಂಶದ ʼರಾಜದಂಡʼದ ಕ್ರಮದಿಂದ ಸ್ಫೂರ್ತಿ ಪಡೆಯುವಂತೆ ನೆಹರೂಗೆ ಸಲಹೆ ನೀಡಿದರು. ರಾಜಾಜಿಯವರ ಪ್ರಕಾರ ಚೋಳ ಮಾದರಿಯ ಅಧಿಕಾರ ಹಸ್ತಾಂತರ ʼಸೆಂಗೋಲ್ʼನ ಸಾಂಕೇತಿಕ ಹಸ್ತಾಂತರವನ್ನು ಒಳಗೊಂಡಿತ್ತು. ಒಬ್ಬ ರಾಜ ತನ್ನ ಉತ್ತರಾಧಿಕಾರಿಗೆ ಅಧಿಕಾರ ಮತ್ತು ಶಕ್ತಿಯ ಸಂಕೇತವಾದ ಸೆಂಗೋಲ್ ಹಸ್ತಾಂತರಿಸುತ್ತಿದ್ದ. ಇದು ʼಧರ್ಮʼವನ್ನು ಪ್ರತಿನಿಧಿಸುತ್ತಿತ್ತು. ಧರ್ಮ ಹಾಗೂ ನ್ಯಾಯಯುತವಾಗಿ ಅಧಿಕಾರವನ್ನು ನಡೆಸುವ ವಚನವನ್ನು ಈ ಮೂಲಕ ತೆಗೆದುಕೊಳ್ಳಲಾಗುತ್ತಿತ್ತು.
ಸೆಂಗೋಲ್ ಅನ್ನು ಪಡೆಯಲು ರಾಜಾಜಿಯವರು ತಮಿಳುನಾಡಿನ ತಂಜಾವೂರು ಜಿಲ್ಲೆಯ ʼತಿರುವವಾಡುತುರೈ ಅಧೀನಂʼ ಎಂಬ ಧಾರ್ವಿುಕ ಮಠವನ್ನು ಸಂಪರ್ಕಿಸಿದರು. ಇದು ಶಿವನ ಬೋಧನೆ ಮತ್ತು ಸಂಪ್ರದಾಯ ಅನುಸರಿಸುವ ಬ್ರಾಹ್ಮಣೇತರ ಸನ್ಯಾಸಿಗಳ ಸಂಸ್ಥೆ. 500ಕ್ಕೂ ಹೆಚ್ಚು ವರ್ಷಗಳಿಂದ ಅಸ್ತಿತ್ವದಲ್ಲಿದೆ. ಸೆಂಗೋಲ್ ತಯಾರಿಕೆಯಲ್ಲಿ ಇವರ ನೆರವನ್ನು ರಾಜಾಜಿ ಬಯಸಿದರು.
ತಿರುವವಾಡುತುರೈ ಅಧೀನಂ ಮುಖ್ಯಸ್ಥರು ಸೆಂಗೋಲ್ ಅನ್ನು ರಚಿಸುವ ಹೊಣೆ ಹೊತ್ತರು. ಆಗಿನ ಕಾಲದ ಹೆಸರಾಂತ ಆಭರಣ ತಯಾರಕ ಹಾಗೂ ವ್ಯಾಪಾರಿಗಳಾದ ಚೆನ್ನೈನ ವುಮ್ಮಿಡಿ ಬಂಗಾರು ಚೆಟ್ಟಿ ಎಂಬವರಿಗೆ ಇದನ್ನು ತಯಾರಿಸುವ ಕೆಲಸವನ್ನು ವಹಿಸಲಾಯಿತು. ವುಮ್ಮಿಡಿ ಕುಟುಂಬವು ಸೆಂಗೋಲ್ ತಯಾರಿಕೆಯಲ್ಲಿ ತೊಡಗಿಸಿಕೊಂಡಿತ್ತು. ಅಂದು ಸೆಂಗೋಲ್ ತಯಾರಿಯಲ್ಲಿ ಭಾಗವಹಿಸಿದ್ದ ಇಬ್ಬರು ಕುಶಲಕರ್ಮಿಗಳು ಇಂದಿಗೂ ಜೀವಂತವಿದ್ದಾರೆ. ಅವರೇ ವುಮ್ಮಿಡಿ ಎತ್ತಿರಾಜುಲು (96) ಮತ್ತು ವುಮ್ಮಿಡಿ ಸುಧಾಕರ್ (88).
ನೋಡಲು ಸುಂದರವಾಗಿರುವ ಈ ಸೆಂಗೋಲ್ ಸುಮಾರು ಐದು ಅಡಿ ಉದ್ದವಿದೆ. ನ್ಯಾಯ ಹಾಗೂ ಪರಿಶ್ರಮದ ಸಂಕೇತವಾದ ನಂದಿಯ ಪ್ರತಿಕೃತಿ ಸೆಂಗೋಲ್‌ನ ತುದಿಯಲ್ಲಿದೆ.
ಇದರ ತಯಾರಿಯ ಬಳಿಕ ಇದನ್ನು ತೆಗೆದುಕೊಂಡು, ಐತಿಹಾಸಿಕ ದಿನವಾದ 1947ರ ಆಗಸ್ಟ್ 14ರಂದು ಅಧಿಕಾರ ಹಸ್ತಾಂತರದಲ್ಲಿ ಭಾಗವಹಿಸಲು ತಮಿಳುನಾಡಿನಿಂದ ಮೂವರು ದಿಲ್ಲಿಗೆ ತೆರಳಿದರು. ತಿರುವವಾಡುತುರೈ ಅಧೀನಂನ ಪ್ರಧಾನ ಅರ್ಚಕರು, ನಾದಸ್ವರಂ ವಾದಕ ರಾಜರತ್ನಂ ಪಿಳ್ಳೈ ಮತ್ತು ಓದುವರ್ (ಗಾಯಕ) ತಂಡದಲ್ಲಿದ್ದರು. ಪ್ರಧಾನ ಅರ್ಚಕರು ಸೆಂಗೋಲ್ ಅನ್ನು ಲಾರ್ಡ್ ಮೌಂಟ್ ಬ್ಯಾಟನ್‌ಗೆ ಅರ್ಪಿಸಿದರು. ನಂತರ ವೈಸರಾಯ್ ಕಡೆಯಿಂದ ಅದನ್ನು ಪಡೆದು, ಅದನ್ನು ಪವಿತ್ರ ನೀರಿನಿಂದ ಶುದ್ಧೀಕರಿಸಿ, ಪಂಡಿತ್ ಜವಾಹರಲಾಲ್ ನೆಹರು ಅವರ ನಿವಾಸಕ್ಕೆ ಮೆರವಣಿಗೆ ಮೂಲಕ ಕೊಂಡೊಯ್ಯಲಾಯಿತು. ಅಲ್ಲಿ ಅದನ್ನು ನೆಹರೂ ಅವರಿಗೆ ಹಸ್ತಾಂತರಿಸಲಾಯಿತು.
ಹೀಗೆ ದೇಶದ ಇತಿಹಾಸದ ಮಹತ್ವದ ಮೈಲಿಗಲ್ಲೊಂದನ್ನು ಪ್ರತಿನಿಧಿಸಿದ, ಸ್ವತಂತ್ರ ರಾಷ್ಟ್ರವಾಗಿ ತನ್ನ ಪ್ರಯಾಣವನ್ನು ದೇಶ ಆರಂಭಿಸಿದ ಇತಿಹಾಸಕ್ಕ ಸಾಕ್ಷಿಯಾದ ಸೆಂಗೋಲ್ ಇನ್ನು ಮುಂದೆ ಸಂಸತ್ತಿನಲ್ಲಿಯೇ ಇರಲಿದೆ.
ಇದನ್ನೂ ಓದಿ: New Parliament Building: ನೂತನ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮ ಬಹಿಷ್ಕರಿಸಿದ ಟಿಎಂಸಿ, ಆಪ್; ಕೊಟ್ಟ ಕಾರಣ ಹೀಗಿದೆ
ದೇಶ
ಹೊಸ ಸಂಸತ್ ಭವನದಲ್ಲಿ ಸೆಂಗೋಲ್ ಪ್ರತಿಷ್ಠಾಪನೆ; ಕೈಮುಗಿದುಕೊಂಡು ರಾಜದಂಡ ಹಿಡಿದು ಬಂದ ಪ್ರಧಾನಿ ಮೋದಿ
Sengol Installed: ರಾಜದಂಡವನ್ನು ಸ್ಪೀಕರ್ ಕುರ್ಚಿ ಪಕ್ಕವೇ ಇಟ್ಟ ಪ್ರಧಾನಿ ಮೋದಿ, ಬಳಿಕ ಅಲ್ಲೊಂದು ದೀಪ ಹೊತ್ತಿಸಿದರು. ನಂತರ ಸೆಂಗೋಲ್ಗೆ ಹೂವು ಹಾಕಿ, ಮತ್ತೆ ನಮಿಸಿದರು.
ನವ ದೆಹಲಿ: ನೂತನ ಸಂಸತ್ ಭವನದ (New Parliament Building) ಸ್ಪೀಕರ್ ಕುರ್ಚಿ ಬಳಿ ಪ್ರಧಾನಿ ನರೇಂದ್ರ ಮೋದಿ (PM Modi)ಯವರು ಸೆಂಗೋಲ್ ಪ್ರತಿಷ್ಠಾಪನೆ ಮಾಡಿದರು. ಹವನ ನಡೆದ ಸ್ಥಳದಲ್ಲಿ ರಾಜದಂಡಕ್ಕೆ ಶಿರಸಾಷ್ಟಾಂಗ ನಮಸ್ಕಾರ ಮಾಡಿದ ಅವರು, ಅಲ್ಲಿಂದ ಸಂಸತ್ ಭವನದ ಒಳಗಿನ ಸ್ಪೀಕರ್ ಕುರ್ಚಿಯವರೆಗೂ ರಾಜದಂಡವನ್ನು ಹಿಡಿದುಬಂದರು. ಅವರು ಕೈಮುಗಿದುಕೊಂಡೇ ಬಂದಿದ್ದಾರೆ. ಅವರ ಮುಗಿದ ಕೈಗಳ ಮಧ್ಯೆ ರಾಜದಂಡ ಇತ್ತು.
ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ತಮಿಳುನಾಡಿನ ಅಧೀನಂ ಮಠಗಳ ಸಂತರು, ಪುರೋಹಿತರು, ಲೋಕಸಭಾ ಸ್ಪೀಕರ್ ಓಂಬಿರ್ಲಾ ಹೆಜ್ಜೆ ಹಾಕಿದರು. ರಾಜದಂಡವನ್ನು ಸ್ಪೀಕರ್ ಕುರ್ಚಿ ಪಕ್ಕವೇ ಇಟ್ಟ ಪ್ರಧಾನಿ ಮೋದಿ, ಬಳಿಕ ಅಲ್ಲೊಂದು ದೀಪ ಹೊತ್ತಿಸಿದರು. ನಂತರ ಸೆಂಗೋಲ್ಗೆ ಹೂವು ಹಾಕಿ, ಮತ್ತೆ ನಮಿಸಿದರು. ಸ್ಪೀಕರ್ ಕುರ್ಚಿಯ ಬಳಿಯಿಂದ ಮೆಟ್ಟಿಲಿಳಿದು ಬಂದವರು, ಎಲ್ಲ ಸಾಧು-ಸಂತರು, ಮಠಾಧೀಶರುಗಳಿಗೆ ನಮಿಸುತ್ತ ನಡೆದರು. ಈ ಎಲ್ಲ ಸಮಯದಲ್ಲಿ ತಮಿಳಿನ ಮಂತ್ರ-ಭಜನೆ ಮೊಳಗುತ್ತಿತ್ತು.
#WATCH | PM Modi installs the historic 'Sengol' near the Lok Sabha Speaker's chair in the new Parliament building pic.twitter.com/Tx8aOEMpYv
— ANI (@ANI) May 28, 2023
#WATCH | PM Modi carries the historic 'Sengol' into the Lok Sabha chamber of the new Parliament building pic.twitter.com/wY206r8CUC
— ANI (@ANI) May 28, 2023
-
ಕರ್ನಾಟಕ22 hours ago
ವಿಸ್ತಾರ ಯುಗಾದಿ ಕಥಾ ಸ್ಪರ್ಧೆ ಬಹುಮಾನ: ಚಂದ್ರಶೇಖರ್ ಡಿ.ಆರ್ ಪ್ರಥಮ, ದಾದಾಪೀರ್ ಜೈಮನ್ ದ್ವಿತೀಯ, ಪೂರ್ಣಿಮಾ ಮಾಳಗಿಮನಿ ತೃತೀಯ
-
ಕರ್ನಾಟಕ21 hours ago
Karnataka Cabinet Expansion: ಪ್ರಮಾಣ ವಚನ ಸಮಾರಂಭ ಬಹಿಷ್ಕಾರ; ಊರಿಗೆ ಹೊರಟ ಒಂದೇ ಜಿಲ್ಲೆಯ 5 ಶಾಸಕರು!
-
ಕಿರುತೆರೆ20 hours ago
Deepak Gowda: ‘ಶ್ರೀರಸ್ತು ಶುಭಮಸ್ತು’ಧಾರಾವಾಹಿಯಿಂದ ಹೊರನಡೆದ ದೀಪಕ್ ಗೌಡ; ಪಾತ್ರಕ್ಕೆ ಬಂದವರು ಕಿರುತೆರೆಗೆ ಹೊಸಬರಲ್ಲ!
-
ಕರ್ನಾಟಕ16 hours ago
Karnataka Cabinet: ತಾತನನ್ನು ಮಿನಿಸ್ಟರ್ ಮಾಡಿ ಪ್ಲೀಸ್: ರಾಹುಲ್ ಗಾಂಧಿಗೆ ಪತ್ರ ಬರೆದ ಟಿ.ಬಿ. ಜಯಚಂದ್ರ ಮೊಮ್ಮಗಳು
-
ದೇಶ4 hours ago
New Parliament Building: ಇಂದು ಹೊಸ ಸಂಸತ್ ಭವನ ಉದ್ಘಾಟನೆ; ಹೇಗೆ ನಡೆಯಲಿದೆ ಕಾರ್ಯಕ್ರಮ?
-
ಕ್ರಿಕೆಟ್11 hours ago
World Cup 2023 : ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ವೇಳೆ ವಿಶ್ವಕಪ್ ವೇಳಾಪಟ್ಟಿ ಪ್ರಕಟ
-
ಕರ್ನಾಟಕ12 hours ago
Tumkur News: ಹೆಜ್ಜೇನು ದಾಳಿ; ಮೂವರು ಮಕ್ಕಳು ಸೇರಿ 9 ಮಂದಿಗೆ ಗಾಯ
-
EXPLAINER2 hours ago
ವಿಸ್ತಾರ Explainer: ಹೊಸ ಸಂಸತ್ ಭವನದಲ್ಲಿ ಸ್ಥಾಪಿತಗೊಂಡ ತಮಿಳುನಾಡಿನ ಚಿನ್ನದ ಸೆಂಗೋಲ್; ಏನಿದರ ಮಹತ್ವ?