ಮುಂಬೈ: ಮಹಾರಾಷ್ಟ್ರದ ಬುಲ್ದಾನಾ ಜಿಲ್ಲೆಯಲ್ಲಿ ಶನಿವಾರ ಭೀಕರ ಅಪಘಾತ (Bus Accident) ಸಂಭವಿಸಿದ್ದು, 6 ಜನ ಮೃತಪಟ್ಟಿದ್ದಾರೆ. ಅಲ್ಲದೆ, 25-30 ಮಂದಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಲ್ದಾನಾ ಜಿಲ್ಲೆಯ ಮಲ್ಕಾಪುರ ಪಟ್ಟಣದ ಫ್ಲೈಓವರ್‌ನಲ್ಲಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಎರಡು ಬಸ್‌ಗಳು ಡಿಕ್ಕಿಯಾಗಿದ್ದು, ಇದು ವಾರದಲ್ಲಿ ನಡೆದ ಎರಡನೇ ಅಪಘಾತವಾಗಿದೆ.
ಎರಡೂ ಟ್ರಾವೆಲ್ ಬಸ್‌ಗಳಾಗಿದ್ದು, ಒಂದು ಬಸ್‌ನಲ್ಲಿದ್ದವರು ಅಮರನಾಥ ಯಾತ್ರೆ ಮುಗಿಸಿಕೊಂಡು ಹಂಗೋಲಿಗೆ ತೆರಳುತ್ತಿದ್ದರು. ಮತ್ತೊಂದು ಬಸ್ ನಾಸಿಕ್‌ಗೆ ಹೊರಟಿತ್ತು. ಇದೇ ವೇಳೆ, ನಾಸಿಕ್‌ಗೆ ಹೊರಟಿದ್ದ ಬಸ್ ಚಾಲಕನು ಟ್ರಕ್ ಒಂದನ್ನು ಓವರ್ ಟೇಕ್ ಮಾಡಲು ಯತ್ನಿಸಿದಾಗ ಹಂಗೋಲಿಗೆ ತೆರಳುತ್ತಿದ್ದ ಬಸ್‌ಗೆ ಡಿಕ್ಕಿಯಾಗಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲೂ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
Maharashtra | Six passengers dead, 21 injured in collision between two buses in Buldana early morning today pic.twitter.com/oDj2I6Mc19
— ANI (@ANI) July 29, 2023
ಅಪಘಾತದ ಮಾಹಿತಿ ಲಭ್ಯವಾಗುತ್ತಲೇ ಪೊಲೀಸರು ಹಾಗೂ ಆಂಬುಲೆನ್ಸ್‌ಗಳು ಸ್ಥಳಕ್ಕೆ ಆಗಮಿಸಿ ಜನರನ್ನು ರಕ್ಷಣೆ ಮಾಡಲಾಗಿದೆ. ಅಪಘಾತದಿಂದಾಗಿ ಬೆಳಗ್ಗೆ ಬೆಳಗ್ಗೆಯೇ ಫ್ಲೈಓವರ್‌ನಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗಿತ್ತು. ಪೊಲೀಸರು ಕೆಲವು ಗಂಟೆಗಳ ರಕ್ಷಣಾ ಕಾರ್ಯಾಚರಣೆ ಕೈಗೊಂಡ ಬಳಿಕ ವಾಹನಗಳ ಸಂಚಾರ ಸುಗಮವಾಗಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: Road accident : ಬೈಕ್‌ಗಳ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ಮೃತ್ಯುವಶ
ಕಳೆದ ಒಂದು ವಾರದಲ್ಲಿಯೇ ಬುಲ್ದಾನಾ ಜಿಲ್ಲೆಯಲ್ಲಿ ಸಂಭವಿಸಿದ ಎರಡನೇ ಅಪಘಾತ ಇದಾಗಿದೆ. ಕೆಲ ದಿನಗಳ ಹಿಂದಷ್ಟೇ ಸರ್ಕಾರಿ ಬಸ್ ಅಪಘಾತಕ್ಕೀಡಾಗಿ 10 ಜನ ಗಾಯಗೊಂಡಿದ್ದರು. ಅಷ್ಟೇ ಅಲ್ಲ, ತಿಂಗಳ ಆರಂಭದಲ್ಲಿ ಮಹಾರಾಷ್ಟ್ರದ ಸಮೃದ್ಧಿ ಮಹಾಮಾರ್ಗ ಎಕ್ಸ್‌ಪ್ರೆಸ್‌ವೇನಲ್ಲಿ ಬಸ್ ಸಂಚರಿಸುತ್ತಿದ್ದ ಬಸ್ ಹೊತ್ತಿ ಉರಿದ ಕಾರಣ 26 ಜನ ಮೃತಪಟ್ಟಿದ್ದರು.