ನವದೆಹಲಿ: ದಿ ಕೇರಳ ಸ್ಟೋರಿ (The Kerala Story), ಕಾಶ್ಮೀರ್ ಫೈಲ್ (The Kashmir Files), ದಿ ಡೈರಿ ಆಫ್ ವೆಸ್ಟ್ ಬೆಂಗಾಲ್ ಸಿನಿಮಾ ಬೆನ್ನಲ್ಲೇ ಮತ್ತೊಂದು ವಿವಾದಾತ್ಮಕ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ. ಇಸ್ಲಾಮಿಕ್ ತೀವ್ರವಾದದ ಕತೆಯನ್ನು ಹೊಂದಿರುವ 72 ಹೂರೇ(72 Hoorain) ಚಿತ್ರದ ಟೀಸರ್ ಲಾಂಚ್ ಆಗಿದ್ದು, ತೀವ್ರ ವಿರೋಧ ಕೂಡ ವ್ಯಕ್ತವಾಗಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ಸಂಜಯ್ ಪೂರನ್ ಸಿಂಗ್ ಚೌಹಾಣ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಟೀಸರ್ ಲಾಂಚ್ ಆಗುತ್ತಿದ್ದಂತೆ ನೆಟ್ಟಿಗರು, ಮುಸ್ಲಿಮ್ ಮತ್ತು ಇಸ್ಲಾಮ್‌ಗೆ ಅವಮಾನ ಮಾಡುವ ಪ್ರಾಪಗ್ಯಾಂಡ ಚಿತ್ರ ಎಂದು ಟೀಕಿಸಿದ್ದಾರೆ.
ಇತ್ತೀಚೆಗಷ್ಟೇ 72 ಹೂರೇ ಚಿತ್ರದ ಫಸ್ಟ್ ಲುಕ್ ಅನಾವರಣ ಮಾಡಲಾಗಿತ್ತು. ಆಗಲೂ ಟ್ವಿಟರ್‌ನಲ್ಲಿ ಸಾಕಷ್ಟು ಪರ ಮತ್ತು ವಿರೋಧ ಚರ್ಚೆಗಳು ಶುರುವಾಗಿದ್ದವು. ಭಾರತದ ಕೋಮು ಸೌಹಾರ್ದತೆಯನ್ನು ಹಾಳು ಮಾಡುವ ಪ್ರಯತ್ನಗಳ ನಡೆಯುತ್ತಿವೆ ಎಂದು ಟೀಕೆ ವ್ಯಕ್ತವಾಗಿತ್ತು.
ಚಿತ್ರದ ಟೀಸರ್‌ನಲ್ಲಿ ಒಸಾಮಾ ಬಿನ್ ಲಾಡೆನ್, ಅಜ್ಮಲ್ ಕಸಬ್ ಸೇರಿದಂತೆ ಇತರ ಚಿತ್ರಗಳನ್ನು ಮತ್ತು ಯಾಕೂಬ್ ಮೆಮನ್‌ನ ಮಿಶ್ರಿತ ಫೋಟೋವನ್ನು ತೋರಿಸಲಾಗಿದೆ. ಮೇಲ್ನೋಟಕ್ಕೆ ಟೀಸರ್‌ನಲ್ಲಿ ಕಾಣುವ ಅಂಶಗಳು ಖಂಡಿತವಾಗಿಯೂ, ಈ ಸಿನಿಮಾ ಕೂಡ ಮುಸ್ಲಿಮರು ಸುತ್ತ ಸುತ್ತದೆ ಎಂಬುದು ವೇದ್ಯವಾಗುತ್ತದೆ. ಉಗ್ರರಾದ ಮಸೂದ್ ಅಜರ್ ಮತ್ತು ಹಫೀಜ್ ಸಯೀದ್ ಅವರನ್ನು ಹೋಲುವರವನ್ನು ಹೈಲೆಟ್ ಮಾಡಲಾಗಿರುವುದನ್ನು ಕಾಣಬಹುದಾಗಿದೆ.
ಇದನ್ನೂ ಓದಿ: The Kerala Story : ದಿ ಕೇರಳ ಸ್ಟೋರಿ ಸಿನಿಮಾದ ಬಗ್ಗೆ ಕೆಂಡ ಕಾರಿದ ಹಿರಿಯ ನಟ ನಾಸಿರುದ್ದೀನ್ ಶಾ
72 ಹೂರೇ ಚಿತ್ರದ ಟ್ರೈಲರ್ ಅನ್ನು ಸಹ ನಿರ್ದೇಶಕರಾಗಿರುವ ಅಶೋಕ್ ಪಂಡಿತ್ ಅವರು ಟ್ವಿಟರ್‌ನಲ್ಲಿ ಷೇರ್ ಮಾಡಿದ್ದಾರೆ. ಇವರು ಕಾಶ್ಮೀರ ಪಂಡತ್ ಕೂಡ ಹೌದು. ನಮ್ಮ ಚಿತ್ರ 72 Hoorain ಸಿನಿಮಾದ ಮೊದಲ ನೋಟವನ್ನು ನಿಮಗೆ ಪ್ರಸ್ತುತಪಡಿಸುವ ಭರವಸೆಯಂತೆ. ನೀವು ಅದನ್ನು ಇಷ್ಟಪಡುತ್ತೀರಿ ಎಂದು ನನಗೆ ಖಾತ್ರಿಯಿದೆ. ಭಯೋತ್ಪಾದಕರ ಮಾರ್ಗದರ್ಶಕರು ಭರವಸೆ ನೀಡಿದಂತೆ 72 ಕನ್ಯೆಯರನ್ನು ಭೇಟಿಯಾಗುವ ಬದಲು ನೀವು ಕ್ರೂರವಾಗಿ ಸಾಯುತ್ತಿದ್ದರೆ? ನನ್ನ ಮುಂಬರುವ ಚಿತ್ರ 72 ಹೂರೇ ನ ಮೊದಲ ನೋಟವನ್ನು ಪ್ರಸ್ತುತಪಡಿಸುತ್ತಿದ್ದೇನೆ. ಚಿತ್ರವು 7 ಜುಲೈ 2023 ರಂದು ಬಿಡುಗಡೆಯಾಗಲಿದೆ ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.