Axis My India Survey: ದೇಶದಲ್ಲಿ ಮೋದಿಯೇ ಅತ್ಯಂತ ಪ್ರಭಾವಶಾಲಿ, ಸಮೀಕ್ಷೆಯಲ್ಲಿ ಶೇ.72ರಷ್ಟು ಜನ ಪ್ರಧಾನಿ ಪರ - Vistara News

ದೇಶ

Axis My India Survey: ದೇಶದಲ್ಲಿ ಮೋದಿಯೇ ಅತ್ಯಂತ ಪ್ರಭಾವಶಾಲಿ, ಸಮೀಕ್ಷೆಯಲ್ಲಿ ಶೇ.72ರಷ್ಟು ಜನ ಪ್ರಧಾನಿ ಪರ

Axis My India Survey: ಕೊರೊನಾ ನಿರ್ವಹಣೆ, ಜನಪರ ಯೋಜನೆ ಸೇರಿ ಹಲವು ಕಾರಣಗಳಿಂದಾಗಿ ಜನ ಕೇಂದ್ರದ ಬಿಜೆಪಿ ಸರ್ಕಾರದ ಪರ ಇದ್ದಾರೆ ಎಂಬುದಾಗಿ ಸಮೀಕ್ಷೆಯಿಂದ ತಿಳಿದುಬಂದಿದೆ. ಆರ್ಥಿಕ ಏಳಿಗೆ ಬಗ್ಗೆಯೂ ಜನ ಸಕಾರಾತ್ಮಕ ಭಾವನೆ ಹೊಂದಿದ್ದಾರೆ ಎಂದು ಸಮೀಕ್ಷೆ ತಿಳಸಿದೆ.

VISTARANEWS.COM


on

Narendra Modi World's Most Popular Leader
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜನಪ್ರಿಯತೆಯಲ್ಲಿ ಜಾಗತಿಕವಾಗಿ ನಂಬರ್‌ ಒನ್‌ ಸ್ಥಾನದಲ್ಲಿದ್ದಾರೆ. ಅಮೆರಿಕ ಅಧ್ಯಕ್ಷ, ಬ್ರಿಟನ್‌ ಪ್ರಧಾನಿ ಸೇರಿ ವಿಶ್ವದ ನಾಯಕರ ಮಧ್ಯೆಯೂ ಮೋದಿ ಅಗ್ರ ಸ್ಥಾನದಲ್ಲಿದ್ದಾರೆ. ಮೋದಿ ಅವರು ಜಾಗತಿಕವಾಗಿ ಜನಪ್ರಿಯ ನಾಯಕ ಎನಿಸಿದರೆ, ಭಾರತದಲ್ಲಿ ಶೇ.72ರಷ್ಟು ಜನ ನರೇಂದ್ರ ಮೋದಿ ಅವರೇ ಅತ್ಯಂತ ಪ್ರಭಾವಶಾಲಿ ನಾಯಕ ಎಂಬುದಾಗಿ ನಂಬುತ್ತಾರೆ ಎಂದು ಸಮೀಕ್ಷಾ (Axis My India Survey) ವರದಿಯೊಂದು ತಿಳಿಸಿದೆ.

ದೇಶದ ಪ್ರಮುಖ ಕನ್ಸುಮರ್ ಡೇಟಾ ಇಂಟೆಲಿಜೆನ್ಸ್‌ ಕಂಪನಿಯಾದ ಆ್ಯಕ್ಸಿಸ್‌ ಮೈ ಇಂಡಿಯಾ ಬಿಡುಗಡೆ ಮಾಡಿರುವ ಇಂಡಿಯಾ ಕನ್ಸುಮರ್‌ ಸೆಂಟಿಮೆಂಟ್‌ ಇಂಡೆಕ್ಸ್‌ (CSI) ವರದಿಯಲ್ಲಿ ಮೋದಿ ಅವರೇ ದೇಶದ ಪ್ರಭಾವಶಾಲಿ ವ್ಯಕ್ತಿ ಎಂಬುದಾಗಿ ಜನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದೇಶಾದ್ಯಂತ ಒಟ್ಟು 10,124 ಜನರನ್ನು ಸಂಪರ್ಕಿಸಿ ಸಮೀಕ್ಷೆ ನಡೆಸಲಾಗಿದೆ. ಇವರಲ್ಲಿ ಶೇ.65ರಷ್ಟು ಜನ ಗ್ರಾಮೀಣ ಪ್ರದೇಶದವರು ಹಾಗೂ ಶೇ.35ರಷ್ಟು ಮಂದಿ ನಗರ ಪ್ರದೇಶದವರಾಗಿದ್ದಾರೆ.

ಕೊರೊನಾ ನಿರ್ವಹಣೆ, ಮೂಲ ಸೌಕರ್ಯ ಅಭಿವೃದ್ಧಿ, ಸಮಾಜ ಕಲ್ಯಾಣ ಯೋಜನೆಗಳು ಸೇರಿ ಹಲವು ಯೋಜನೆಗಳು ಕೇಂದ್ರದ ಬಿಜೆಪಿ ಸರ್ಕಾರದ ಪ್ರಮುಖ ಸಾಧನೆಗಳಾಗಿವೆ ಎಂಬುದು ಜನರ ಅಭಿಪ್ರಾಯವಾಗಿದೆ. ಇನ್ನು ಶೇ.52ರಷ್ಟು ಜನ ಇತ್ತೀಚೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಸಮಾಧಾನಕರವಾಗಿದೆ ಎಂಬುದಾಗಿ ತಿಳಿಸಿದ್ದಾರೆ. ಹಾಗೆಯೇ, ಶೇ.72ರಷ್ಟು ಮಂದಿ 2023ರಲ್ಲಿ ಭಾರತದ ಆರ್ಥಿಕ ಬೆಳವಣಿಗೆ ಹೊಂದುತ್ತದೆ ಎಂಬ ಆಶಾಭಾವನೆ ಹೊಂದಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.

ಇದನ್ನೂ ಓದಿ: Global Leader Approval Rating: ಜನಪ್ರಿಯತೆಯಲ್ಲಿ ಅಮೆರಿಕ ಅಧ್ಯಕ್ಷ, ಬ್ರಿಟನ್ ಪ್ರಧಾನಿಯನ್ನು ಹಿಂದಿಕ್ಕಿದ ಭಾರತದ ಪಿಎಂ ಮೋದಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

West Bengal Governor: ರಾಜ್ಯಪಾಲರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ; TMC ಆಕ್ರೋಶ

West Bengal Governor: ಮಹಿಳೆಯೊಬ್ಬರು ರಾಜ್ಯಪಾಲ ಆನಂದ ಬೋಸ್‌ ವಿರುದ್ಧ ಕೋಲ್ಕತಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ದಿನೇ ದಿನೇ ರಾಜಭವನದಲ್ಲಿ ಹೆಚ್ಚು ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದೆ ಎಂಬುದನ್ನು ಸಂತ್ರಸ್ತೆ ತನ್ನ ದೂರಿನಲ್ಲಿ ಹೇಳಿದ್ದಾಳೆ.

VISTARANEWS.COM


on

West Bengal Governor
Koo

ಕೋಲ್ಕತಾ: ಪಶ್ಚಿಮ ಬಂಗಾಳದ ರಾಜ್ಯಪಾಲ(West Bengal Governor)ರ ವಿರುದ್ಧ ಲೈಂಗಿಕ ಕಿರುಕುಳ(Sexual Harassment)ದ ಆರೋಪ ಕೇಳಿಬಂದಿದೆ. ರಾಜ್ಯಪಾಲ ಸಿ.ವಿ. ಆನಂದ ಬೋಸ್‌(C V Anand Bose) ರಾಜಭವನದಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್‌(TMC) ಮುಖಂಡರು ಆರೋಪಿಸಿದ್ದಾರೆ. ಈ ಸುದ್ದಿ ರಾಜ್ಯಾದ್ಯಂತ ಬಹಳ ಸುದ್ದಿಯಾಗುತ್ತಿದ್ದು, ಇದೊಂದು ತೇಜೋವಧೆ ಮಾಡುವ ಉದ್ದೇಶದಿಂದ ಮಾಡಿರುವ ಆರೋಪ ಎಂದು ಸಿ.ವಿ. ಆನಂದ್‌ ಬೋಸ್‌ ಹೇಳಿದ್ದಾರೆ.

TMC ಆರೋಪ ಏನು?

ಟಿಎಂಸಿ ಮುಖಂಡರ ಆರೋಪದ ಪ್ರಕಾರ, ಮಹಿಳೆಯೊಬ್ಬರು ರಾಜ್ಯಪಾಲ ಆನಂದ ಬೋಸ್‌ ವಿರುದ್ಧ ಕೋಲ್ಕತಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ರಾಜಭವನದಲ್ಲೇ ಲೈಂಗಿಕ ಕಿರುಕುಳದ ಆರೋಪ ಕೇಳಿ ಬರುತ್ತಿದೆ. ದಿನೇ ದಿನೇ ರಾಜಭವನದಲ್ಲಿ ಹೆಚ್ಚು ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದೆ ಎಂಬುದನ್ನು ಸಂತ್ರಸ್ತೆ ತನ್ನ ದೂರಿನಲ್ಲಿ ಹೇಳಿದ್ದಾಳೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಈ ಬಗ್ಗೆ ಗಮನ ಹರಿಸಬೇಕಾಗಿದೆ. ನಾರಿಯರಿಗೆ ಗೌರವ ಎಂಬ ಪರಿಕಲ್ಪನೆ ಮೇಲೆ ನಿಜವಾಗಿಯೂ ನಂಬಿಕೆ ಇದ್ದರೆ ಸಂತ್ರಸ್ತರಿಗೆ ಸೂಕ್ತ ನ್ಯಾಯ ಒದಗಿಸಿಕೊಡಬೇಕು. ಹಾಗೂ ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಟಿಎಂಸಿ ತನ್ನ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿದೆ.

ಆರೋಪಗಳನ್ನು ತಳ್ಳಿ ಹಾಕಿದ ರಾಜ್ಯಪಾಲ

ರಾಜ್ಯಪಾಲ ಸಿ ವಿ ಆನಂದ್‌ ಬೋಸ್‌ ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪಗಳನ್ನ್ ತಳ್ಳಿ ಹಾಕಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು, ಸತ್ಯ ಎಂದಿಗೂ ಗೆದ್ದೇ ಗೆಲ್ಲುತ್ತದೆ. ಇಂತಹ ಕಟ್ಟು ಕಥೆಗಳನ್ನು ನಿಜ ಎಂದು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ನನ್ನ ಗೌರವಕ್ಕೆ ಚ್ಯುತಿ ತಂದು ತೇಜೋವಧೆ ಮಾಡುವ ಉದ್ದೇಶದಿಂದ ಟಿಎಂಸಿ ಈ ರೀತಿ ಮಾಡುತ್ತಿದೆ. ಬಂಗಾಳದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ನನ್ನ ಹೋರಾಟ ನಿಲ್ಲಿಸಲು ಇದೊಂದು ಪಿತೂರಿ ಅಷ್ಟೇ. ಆದರೆ ನನ್ನ ಈ ಹೋರಾಟ ಎಂದಿಗೂ ನಿಲ್ಲುವುದಿಲ್ಲ. ನನ್ನ‌ ವಿರುದ್ಧ ಆರೋಪ ಮಾಡಿರುವ ಮಹಿಳೆಯರು ಕಾಂಗ್ರೆಸ್‌ನ ಏಜೆಂಟ್‌ಗಳು ಎಂದು ಅವರು ತಿರುಗೇಟು ಕೊಟ್ಟಿದ್ದಾರೆ.

ಪೊಲೀಸರು ಹೇಳೋದೇನು?

ಇನ್ನು ಈ ಪ್ರಕರಣದ ಬಗ್ಗೆ ಕೋಲ್ಕತಾ ಪೊಲೀಸ್‌ ಅಧಿಕಾರಿ ಇಂದಿರಾ ಮುಖರ್ಜಿ ಪ್ರತಿಕ್ರಿಯಿಸಿದ್ದು, ಸಂಜೆ 5ಗಂಟೆ ಹೊತ್ತಿಗೆ ನಮಗೆ ರಾಜ್ಯಪಾಲರ ವಿರುದ್ಧ ಲೈಂಗಿಕ ಕಿರುಕುಳದ ದೂರು ಬಂದಿತ್ತು. ಈ ಬಗ್ಗೆ ನಾವು ತನಿಖೆ ನಡೆಸುತ್ತಿದ್ದೇವೆ. ಈ ಘಟನೆ ರಾಜಭವನದ ಒಳಗೆ ನಡೆದಿದೆ. ಅನೇಕ ಬಾರಿ ಈ ರೀತಿ ಕಿರುಕುಳ ಅನುಭವಿಸಿದ್ದಾಗಿ ಮಹಿಳೆ ತನ್ನ ದೂರಿನಲ್ಲಿ ತಿಳಿಸಿದ್ದಾಳೆ ಎಂದು ಮಾಹಿತಿ ನೀಡಿದರು.

Continue Reading

Lok Sabha Election 2024

Amit Shah: ಅಮಿತ್‌ ಶಾ ವಿಡಿಯೊ ತಿರುಚಿದ ಪ್ರಕರಣ; ಕಾಂಗ್ರೆಸ್ ಐಟಿ ಸೆಲ್‌ನ ಐವರು ಸದಸ್ಯರ ಬಂಧನ

Amit Shah: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಕಲಿ ವಿಡಿಯೊಗೆ ಸಂಬಂಧಿಸಿದಂತೆ ತೆಲಂಗಾಣ ಪೊಲೀಸರು ಗುರುವಾರ ರಾಜ್ಯ ಕಾಂಗ್ರೆಸ್ ಐಟಿ ಸೆಲ್‌ ನ ಐವರು ಸದಸ್ಯರನ್ನು ಬಂಧಿಸಿದ್ದಾರೆ. ಈ ಹಿಂದೆ ಅಮಿತ್ ಶಾ ಅವರ ಭಾಷಣದ ನಕಲಿ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮ ಪ್ಲಾಟ್​ಫಾರ್ಮ್​​ಗಳಲ್ಲಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸೋಮವಾರ ತೆಲಂಗಾಣ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ರೇವಂತ್ ರೆಡ್ಡಿ ಅವರಿಗೆ ಸಮನ್ಸ್ ನೀಡಿದ್ದರು.

VISTARANEWS.COM


on

Amith Shah
Koo

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರ ನಕಲಿ ವಿಡಿಯೊಗೆ ಸಂಬಂಧಿಸಿದಂತೆ ತೆಲಂಗಾಣ ಪೊಲೀಸರು ಗುರುವಾರ ರಾಜ್ಯ ಕಾಂಗ್ರೆಸ್ ಐಟಿ ಸೆಲ್‌ (Congress IT Cell)ನ ಐವರು ಸದಸ್ಯರನ್ನು ಬಂಧಿಸಿದ್ದಾರೆ. ಸದ್ಯ ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರ ತಂಡವೂ ಈ ತೆಲಂಗಾಣದಲ್ಲಿದೆ. ಈ ಹಿಂದೆ ಅಮಿತ್ ಶಾ ಅವರ ಭಾಷಣದ ನಕಲಿ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮ ಪ್ಲಾಟ್​ಫಾರ್ಮ್​​ಗಳಲ್ಲಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸೋಮವಾರ ತೆಲಂಗಾಣ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ರೇವಂತ್ ರೆಡ್ಡಿ (Revanth Reddy) ಅವರಿಗೆ ಸಮನ್ಸ್ ನೀಡಿದ್ದರು.

ರೇವಂತ್ ರೆಡ್ಡಿ ಪರ ವಕೀಲರು ಬುಧವಾರ ದೆಹಲಿ ಪೊಲೀಸರ ಮುಂದೆ ಹಾಜರಾಗಿ, ಅಮಿತ್ ಶಾ ಅವರ ಭಾಷಣದ ನಕಲಿ ವಿಡಿಯೊ ರಚಿಸುವಲ್ಲಿ ಅಥವಾ ಪೋಸ್ಟ್ ಮಾಡುವುದರ ಹಿಂದೆ ರೇವಂತ್ ರೆಡ್ಡಿ ಅವರ ಯಾವುದೇ ಪಾತ್ರವಿಲ್ಲ ಎಂದು ಹೇಳಿದ್ದರು. ವಿಡಿಯೊವನ್ನು ಹಂಚಿಕೊಂಡ ಆರೋಪದ ಮೇಲೆ ವಿವಿಧ ವಿರೋಧ ಪಕ್ಷಗಳ ಇನ್ನೂ ಐದು ಮಂದಿಗೂ ನೋಟಿಸ್ ನೀಡಲಾಗಿದೆ.

ರೇವಂತ್ ರೆಡ್ಡಿ ಮತ್ತು ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ)ಯ ನಾಲ್ವರು ಸದಸ್ಯರಾದ ಶಿವಕುಮಾರ್ ಅಂಬಾಲಾ, ಅಸ್ಮಾ ತಸ್ಲೀಮ್, ಸತೀಶ್ ಮನ್ನೆ ಮತ್ತು ನವೀನ್ ಪೆಟ್ಟೆಮ್ ಅವರಿಗೆ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 91 ಮತ್ತು 160ರ ಅಡಿಯಲ್ಲಿ ಸಮನ್ಸ್ ನೀಡಲಾಗಿದೆ. ಜಾರ್ಖಂಡ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಅವರಿಗೂ ದೆಹಲಿ ಪೊಲೀಸರು ಮೇ 2ರಂದು ಸಮನ್ಸ್ ಜಾರಿ ಮಾಡಿದ್ದಾರೆ. “ನನಗೆ ಮಂಗಳವಾರ ದೆಹಲಿ ಪೊಲೀಸರಿಂದ ನೋಟಿಸ್ ಬಂದಿದೆ. ಆದರೆ ಏಕೆ ನೋಟಿಸ್ ನೀಡಲಾಯಿತು ಎಂಬುದು ನನಗೆ ಅರ್ಥವಾಗುತ್ತಿಲ್ಲ. ಇದು ಅರಾಜಕತೆಯಲ್ಲದೆ ಬೇರೇನೂ ಅಲ್ಲ” ಎಂದು ಠಾಕೂರ್ ಹೇಳಿದ್ದಾರೆ.

ಏನಿದು ಪ್ರಕರಣ?

ಮುಸ್ಲಿಮರಿಗೆ ನೀಡಲಾದ ಶೇ. 4ರಷ್ಟು ‘ಅಸಾಂವಿಧಾನಿಕ’ ಮೀಸಲಾತಿಯನ್ನು ತೆಗೆದುಹಾಕುವ ಬಗ್ಗೆ ಅಮಿತ್ ಶಾ ತೆಲಂಗಾಣದಲ್ಲಿ ಮಾತನಾಡುತ್ತಿರುವ ಹಳೆಯ ವಿಡಿಯೊವನ್ನು ಬಳಸಿಕೊಂಡು ಅವರು ಎಸ್​ಸಿ ಮತ್ತು ಎಸ್​ಟಿ ಮೀಸಲಾತಿ ತೆಗೆಯಬೇಕು ಎಂದು ಹೇಳಿದ್ದಾರೆ ಎನ್ನುವಂತೆ ಬದಲಾಯಿಸಲಾಗಿತ್ತು. ಇದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹರಿಯಬಿಡಲಾಗಿತ್ತು. ಇದಾದ ಬಳಿಕ ಗೃಹ ಸಚಿವಾಲಯ ಮತ್ತು ಬಿಜೆಪಿ ದೂರು ನೀಡಿತ್ತು.

ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ವಿಭಾಗಗಳು ಮತ್ತು ಐಟಿ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ವಿಶೇಷ ಸೆಲ್ ಎಫ್ಐಆರ್ ದಾಖಲಿಸಿತ್ತು. ಸಮುದಾಯಗಳ ನಡುವೆ ಜಗಳ ಸೃಷ್ಟಿಸುವ ಉದ್ದೇಶದಿಂದ ಕೆಲವು ನಕಲಿ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗುತ್ತಿದೆ. ಇದು ಸಾರ್ವಜನಿಕ ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ʼʼತೆಲಂಗಾಣ ಕಾಂಗ್ರೆಸ್​​​ ಅಧಿಕೃತ ಎಕ್ಸ್ ಹ್ಯಾಂಡಲ್ ಈ ವೀಡಿಯೊವನ್ನು ಹಂಚಿಕೊಂಡಿದೆ. ತರುವಾಯ, ಪಕ್ಷದ ಹಲವಾರು ನಾಯಕರು ಅದನ್ನು ಮರು ಪೋಸ್ಟ್ ಮಾಡಿದ್ದಾರೆʼʼ ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ಇದನ್ನೂ ಓದಿ: Revanth Reddy : ಅಮಿತ್​ ಶಾ ತಿರುಚಿದ ವಿಡಿಯೊ ಪ್ರಕರಣ; ತೆಲಂಗಾಣ ಸಿಎಂಗೆ ಡೆಲ್ಲಿ ಪೊಲೀಸರಿಂದ ಸಮನ್ಸ್​

Continue Reading

ದೇಶ

Lok sabha Election 2024: ರಾಯ್‌ಬರೇಲಿಯಲ್ಲಿ ಕಣಕ್ಕಿಳಿದಿರುವ ದಿನೇಶ್‌ ಪ್ರತಾಪ್‌ ಸಿಂಗ್‌ ಹಿನ್ನೆಲೆ ಏನು?

Lok sabha Election 2024: 2004ರಲ್ಲಿ ಸಮಾಜವಾದಿ ಪಕ್ಷದ ತಾಲೂಕು ಮಟ್ಟದ ನಾಯರಾಗಿದ್ದ ದಿನೇಶ್‌ ಪ್ರತಾಪ್‌ ನಂತರ ದಿನಗಳಲ್ಲಿ ಬಹುಜನ ಸಮಾಜ ಪಾರ್ಟಿ(BSP)ಯಿಂದ ವಿಧಾನಪರಿಷತ್‌ ಚುನಾವಣೆಗೆ ಸ್ಪರ್ಧಿಸಿ ಸೋಲುಂಡಿದ್ದರು. 2019ರಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದು ಅವರ ರಾಜಕೀಯ ಬದುಕಿನ ಬಹುದೊಡ್ಡ ತಿರುವಾಗಿತ್ತು. ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಯ್‌ಬರೇಲಿಯಲ್ಲಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಸ್ಪರ್ಧಿಸಿ ಸೋಲುಂಡಿದ್ದರೂ ಕ್ಷೇತ್ರದಲ್ಲಿ ಅಭೂತಪೂರ್ವ ಬೆಂಬಲ ಗಳಿಸಿದ್ದರು. ಅವರು ಆ ಚುನಾವಣೆಯಲ್ಲಿ ನಾಲ್ಕು ಲಕ್ಷಕ್ಕೂ ಅಧಿಕ ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದರು.

VISTARANEWS.COM


on

Lok sabha Election 2024
Koo

ಉತ್ತರಪ್ರದೇಶ: ದೇಶದಲ್ಲಿ ಲೋಕಸಭೆ ಚುನಾವಣೆ(Lok sabha Election 2024) ರಂಗೇರಿದೆ. ತನ್ನ ಭದ್ರಕೋಟೆಯಾಗಿರುವ ಉತ್ತರಪ್ರದೇಶದ ರಾಯ್‌ಬರೇಲಿ(Rae Bareli)ಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ಘೋಷಿಸುವ ಮುನ್ನವೇ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಸೋನಿಯಾ ಗಾಂಧಿ ಅವರ ವಿರುದ್ಧ ಸೋಲನುಭವಿಸಿದ್ದ ದಿನೇಶ್‌ ಪ್ರತಾಪ್‌ ಸಿಂಗ್‌(Dinesh Pratap Singh) ಅವರಿಗೆ ಬಿಜೆಪಿಯು ಮತ್ತೆ ಟಿಕೆಟ್‌ ನೀಡಿದೆ.

ಯಾರು ಈ ದಿನೇಶ್‌ ಪ್ರತಾಪ್‌?

2004ರಲ್ಲಿ ಸಮಾಜವಾದಿ ಪಕ್ಷದ ತಾಲೂಕು ಮಟ್ಟದ ನಾಯರಾಗಿದ್ದ ದಿನೇಶ್‌ ಪ್ರತಾಪ್‌ ನಂತರ ದಿನಗಳಲ್ಲಿ ಬಹುಜನ ಸಮಾಜ ಪಾರ್ಟಿ(BSP)ಯಿಂದ ವಿಧಾನಪರಿಷತ್‌ ಚುನಾವಣೆಗೆ ಸ್ಪರ್ಧಿಸಿ ಸೋಲುಂಡಿದ್ದರು. 2019ರಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದು ಅವರ ರಾಜಕೀಯ ಬದುಕಿನ ಬಹುದೊಡ್ಡ ತಿರುವಾಗಿತ್ತು. ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಯ್‌ಬರೇಲಿಯಲ್ಲಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಸ್ಪರ್ಧಿಸಿ ಸೋಲುಂಡಿದ್ದರೂ ಕ್ಷೇತ್ರದಲ್ಲಿ ಅಭೂತಪೂರ್ವ ಬೆಂಬಲ ಗಳಿಸಿದ್ದರು. ಅವರು ಆ ಚುನಾವಣೆಯಲ್ಲಿ ನಾಲ್ಕು ಲಕ್ಷಕ್ಕೂ ಅಧಿಕ ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದರು.

ಇನ್ನು ಮತ್ತೊಮ್ಮೆ ಬಿಜೆಪಿಯಿಂದ ಟಿಕೆಟ್‌ ಸಿಕ್ಕಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ದಿನೇಶ್‌ ಪ್ರತಾಪ್‌, ನನ್ನಂತಹ ಸಣ್ಣ ಮಟ್ಟದ ಕಾರ್ಯಕರ್ತನನ್ನು ಗುರುತಿಸಿ, ಮತ್ತೊಮ್ಮೆ ನಂಬಿಕೆ ಇಟ್ಟು ನನಗೆ ಟಿಕೆಟ್‌ ನೀಡಿರುವ ಪಕ್ಷಕ್ಕೆ ನಾನು ಆಭಾರಿಯಾಗಿದ್ದೇನೆ. ಪಕ್ಷದ ನಂಬಿಕೆಯನ್ನು ಯಾವುತ್ತೂ ಕಳೆದುಕೊಳ್ಳುವುದಿಲ್ಲ. ಒಂದು ಕಾಲದಲ್ಲಿ ರಾಯ್‌ಬರೇಲಿ ಕಾಂಗ್ರೆಸ್‌ನ ಭದ್ರಕೋಟೆಯಾಗಿತ್ತು. ಆದರೆ ಪ್ರಧಾನಿ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಇಲ್ಲಿಯೂ ಬದಲಾವಣೆಯ ಗಾಳಿ ಬೀಸಿದೆ. ಇಲ್ಲಿಯ ಒಂದೇ ಒಂದು ಗ್ರಾಮ ಪಂಚಾಯತ್‌ಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲಲು ಸಾಧ್ಯವಾಗಿಲ್ಲ. ಈ ರಾಯ್‌ಬರೇಲಿಯಲ್ಲಿ ಬಿಜೆಪಿ ಬಲಿಷ್ಠವಾಗಿ ಬೆಳೆದಿದೆ. ನಾವು ಅತಿ ಹೆಚ್ಚು ಮತಗಳಿಂದ ಗೆದ್ದೇ ಗೆಲ್ಲುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ರಾಯ್‌ಬರೇಲಿಯಿಂದ ರಾಹುಲ್‌ ಗಾಂಧಿ ಕಣಕ್ಕೆ

ಬಹಳ ಕುತೂಹಲಕ್ಕೆ ಕಾರಣವಾಗಿದ್ದ ರಾಯ್‌ ಬರೇಲಿ ಮತ್ತು ಅಮೇಠಿ ಕ್ಷೇತ್ರಗಳಿಗೆ ಕಾಂಗ್ರೆಸ್‌ ಕೊನೆಗೂ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಗಾಂಧಿ ಕುಟುಂಬದ ಭದ್ರಕೋಟೆಯಾಗಿರುವ ರಾಯ್‌ ಬರೇಲಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕಣಕ್ಕಿಳಿಯಲಿದ್ದು, ಇನ್ನು ಅಮೇಠಿ ಕ್ಷೇತ್ರದಲ್ಲಿ ಸೋನಿಯಾ ಗಾಂಧಿ(Sonia Gandhi) ಆಪ್ತ ಕಿಶೋರಿ ಲಾಲ್‌ ಶರ್ಮಾ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿದೆ. ಮೇ 17ರಂದು ನಡೆಯುವ ಐದನೇ ಹಂತದ ಮತದಾನದ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಕೊನೆಯ ಹಂತದಲ್ಲಿ ಕಾಂಗ್ರೆಸ್‌ ಬಾಕಿ ಇರಿಸಿದ್ದ ಅಮೇಠಿ ಮತ್ತು ರಾಯ್‌ ಬರೇಲಿ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಕಾಂಗ್ರೆಸ್‌ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌ ಮಾಡಿದೆ.

ಇದನ್ನೂ ಓದಿ: Lok Sabha Election 2024: ರಾಯ್‌ಬರೇಲಿಯಿಂದ ರಾಹುಲ್‌ ಗಾಂಧಿ ಕಣಕ್ಕೆ, ಅಮೇಠಿಯಿಂದ ಕಿಶೋರಿಲಾಲ್‌ ಸ್ಪರ್ಧೆ

ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ರಾಜ್ಯಸಭೆಗೆ ಆಯ್ಕೆಯಾದ ಬಳಿಕ ಖಾಲಿಯಾಗಿರುವ ರಾಯ್‌ ಬರೇಲಿ ಕ್ಷೇತ್ರದಿಂದ ಮೊದಲಿಗೆ ಪ್ರಿಯಾಂಕಾ ಗಾಂಧಿ ವಾಧ್ರಾ ಹಾಗೂ ಅಮೇಠಿಯಿಂದ ರಾಹುಲ್‌ ಗಾಂಧಿ ಕಣಕ್ಕಿಳಿಯುತ್ತಾರೆ ಎಂಬ ವಿಚಾರ ಬಹಳ ಚರ್ಚೆಯಾಗಿತ್ತು. ರಾಹುಲ್‌ ಗಾಂಧಿ ಈಗಾಗಲೇ ಕೇರಳದ ವಯನಾಡು ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ. ಇದೀಗ ರಾಯ್‌ಬರೇಲಿಯಲ್ಲಿ ಬಿಜೆಪಿಯ ದಿನೇಶ್‌ ಪ್ರತಾಪ್‌ ವಿರುದ್ಧ ಮತಭೇಟೆಗೆ ಇಳಿದಿದ್ದಾರೆ.

Continue Reading

ದೇಶ

Lok Sabha Election 2024: ರಾಯ್‌ಬರೇಲಿಯಿಂದ ರಾಹುಲ್‌ ಗಾಂಧಿ ಕಣಕ್ಕೆ, ಅಮೇಠಿಯಿಂದ ಕಿಶೋರಿಲಾಲ್‌ ಸ್ಪರ್ಧೆ

Lok Sabha Election 2024: ಗಾಂಧಿ ಕುಟುಂಬದ ಭದ್ರಕೋಟೆಯಾಗಿರುವ ರಾಯ್‌ ಬರೇಲಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕಣಕ್ಕಿಳಿಯುವುದು ಖಚಿತವಾಗಿದೆ. ಇನ್ನು ಅಮೇಠಿ ಕ್ಷೇತ್ರದಲ್ಲಿ ಸೋನಿಯಾ ಗಾಂಧಿಆಪ್ತ ಕಿಶೋರಿ ಲಾಲ್‌ ಶರ್ಮಾಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿದೆ. ಮೇ 17ರಂದು ನಡೆಯುವ ಐದನೇ ಹಂತದ ಮತದಾನದ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಕೊನೆಯ ಹಂತದಲ್ಲಿ ಕಾಂಗ್ರೆಸ್‌ ಬಾಕಿ ಇರಿಸಿದ್ದ ಅಮೇಠಿ ಮತ್ತು ರಾಯ್‌ ಬರೇಲಿ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಕಾಂಗ್ರೆಸ್‌ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌ ಮಾಡಿದೆ.

VISTARANEWS.COM


on

Lok sabha Election
Koo

ನವದೆಹಲಿ:‌ ಲೋಕಸಭೆ ಚುನಾವಣೆ(Lok Sabha Election 2024)ಯ ಬಹಳ ಕುತೂಹಲಕ್ಕೆ ಕಾರಣವಾಗಿದ್ದ ರಾಯ್‌ ಬರೇಲಿ ಮತ್ತು ಅಮೇಠಿ ಕ್ಷೇತ್ರಗಳಿಗೆ ಕಾಂಗ್ರೆಸ್‌ ಕೊನೆಗೂ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಗಾಂಧಿ ಕುಟುಂಬದ ಭದ್ರಕೋಟೆಯಾಗಿರುವ ರಾಯ್‌ ಬರೇಲಿ(Rae Bareli) ಕ್ಷೇತ್ರದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ(Rahul Gandhi) ಕಣಕ್ಕಿಳಿಯಲಿದ್ದು, ಇನ್ನು ಅಮೇಠಿ ಕ್ಷೇತ್ರದಲ್ಲಿ ಸೋನಿಯಾ ಗಾಂಧಿ(Sonia Gandhi) ಆಪ್ತ ಕಿಶೋರಿ ಲಾಲ್‌ ಶರ್ಮಾ(Kishori Lal Sharma) ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿದೆ. ಮೇ 17ರಂದು ನಡೆಯುವ ಐದನೇ ಹಂತದ ಮತದಾನದ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಕೊನೆಯ ಹಂತದಲ್ಲಿ ಕಾಂಗ್ರೆಸ್‌ ಬಾಕಿ ಇರಿಸಿದ್ದ ಅಮೇಠಿ ಮತ್ತು ರಾಯ್‌ ಬರೇಲಿ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಕಾಂಗ್ರೆಸ್‌ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌ ಮಾಡಿದೆ.

ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ರಾಜ್ಯಸಭೆಗೆ ಆಯ್ಕೆಯಾದ ಬಳಿಕ ಖಾಲಿಯಾಗಿರುವ ರಾಯ್‌ ಬರೇಲಿ ಕ್ಷೇತ್ರದಿಂದ ಮೊದಲಿಗೆ ಪ್ರಿಯಾಂಕಾ ಗಾಂಧಿ ವಾಧ್ರಾ ಹಾಗೂ ಅಮೇಠಿಯಿಂದ ರಾಹುಲ್‌ ಗಾಂಧಿ ಕಣಕ್ಕಿಳಿಯುತ್ತಾರೆ ಎಂಬ ವಿಚಾರ ಬಹಳ ಚರ್ಚೆಯಾಗಿತ್ತು. ರಾಹುಲ್‌ ಗಾಂಧಿ ಈಗಾಗಲೇ ಕೇರಳದ ವಯನಾಡು ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ. ಇದೀಗ ರಾಯ್‌ಬರೇಲಿಯಲ್ಲಿ ಬಿಜೆಪಿಯ ದಿನೇಶ್‌ ಪ್ರತಾಪ್‌ ವಿರುದ್ಧ ಮತಭೇಟೆಗೆ ಇಳಿದಿದ್ದಾರೆ. ಇನ್ನು ದಿನೇಶ್‌ ಪ್ರತಾಪ್‌ ಕಳೆದ ಬಾರೀ ಸೋನಿಯಾ ಗಾಂದಿ ವಿರುದ್ಧ ಸ್ಪರ್ಧಿಸಿ ಸೋಲುಂಡಿದ್ದರು. ಅಮೇಠಿಯಲ್ಲಿ 2004, 2009, 2014ರವರೆಗೆ ರಾಹುಲ್‌ ಗಾಂಧಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರೆ 2019ರಲ್ಲಿ ಬಿಜೆಪಿ ಸ್ಮೃತಿ ಇರಾನಿ ವಿರುದ್ಧ ಸೋಲನ್ನು ಅನುಭವಿಸಿದ್ದರು. ಈ ಬಾರಿ ಗಾಂಧಿ ಕುಟುಂಬದ ಆಪ್ತ ಕಿಶೋರಿ ಲಾಲ್‌ ಅವರನ್ನು ಅಮೇಠಿಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಕಣಕ್ಕಿಳಿಸಿ ಪಕ್ಷ ಅದೃಷ್ಟ ಪರೀಕ್ಷೆಗೆ ಮುಂದಾಗಿದೆ.

ಇಂದೇ ನಾಮಪತ್ರ ಸಲ್ಲಿಕೆ

ಇನ್ನು ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿರುವುದರಿಂದ ಈ ಇಬ್ಬರೂ ನಾಯಕರೂ ಇಂದೇ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಇನ್ನು ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಸೋನಿಯಾ ಗಾಂಧಿ ಸಾಥ್‌ ಕೊಡಲಿದ್ದಾರೆ. ಮತ್ತೊಂದೆಡೆ ಅಮೇಠಿಯಲ್ಲಿ ಕಿಶೋರಿಲಾಲ್‌ ಅವರಿಗೆ ಪ್ರಿಯಾಂಕಾ ಗಾಂಧಿ ವಾಧ್ರಾ ಬೆಂಬಲ ಸೂಚಿಸಲಿದ್ದಾರೆ. ಈಗಾಗಲೇ ರಾಹುಲ್‌ ಮತ್ತು ಪ್ರಿಯಾಂಕಾ ಬೆಂಬಲಿಗರು ನಾಮಪತ್ರ ದಾಖಲೆಗಳನ್ನು ತಯಾರು ಮಾಡಿಟ್ಟಿದ್ದಾರೆ ಎನ್ನಲಾಗಿದೆ. ಬಿಜೆಪಿಯ ಸ್ಮೃತಿ ಇರಾನಿ ಕೂಡ ಇಂದೇ ಅಮೇಠಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪಿ ಬ್ರಿಜ್‌ ಭೂಷಣ್‌ಗಿಲ್ಲ ಟಿಕೆಟ್‌; ಮಗನಿಗೆ ಮಣೆ, ರಾಯ್‌ಬರೇಲಿಗೂ ಅಭ್ಯರ್ಥಿ ಘೋಷಿಸಿದ ಬಿಜೆಪಿ

ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ತೆರಳದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಶ್ರೀರಾಮನ ವಿರೋಧಿ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಇದು ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಲಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ, ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ರಾಮಮಂದಿರಕ್ಕೆ ಭೇಟಿ ನೀಡುವ ಮೂಲಕ ಕಾಂಗ್ರೆಸ್‌ ರಾಮಮಂದಿರ ವಿರೋಧಿ ಅಲ್ಲ ಎಂಬ ಸಂದೇಶ ರವಾನಿಸುವ ಉದ್ದೇಶವೂ ಇತ್ತು. ನಾಮಪತ್ರ ಸಲ್ಲಿಕೆಗೂ ಮುನ್ನ ರಾಮಮಂದಿರಕ್ಕೆ ಭೇಟಿ ನೀಡುವ ಯೋಜನೆ ಇತ್ತು. ಈಗ ಇದರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Continue Reading
Advertisement
woman assault case haveri
ಕ್ರೈಂ6 mins ago

Assault Case: ಇನ್ನೊಂದು ವಂಟಮೂರಿ ಮಾದರಿ ಕೇಸ್‌, ಮಹಿಳೆಯನ್ನು ಕಂಬಕ್ಕೆ ಕಟ್ಟಿ ಥಳಿತ

West Bengal Governor
ದೇಶ14 mins ago

West Bengal Governor: ರಾಜ್ಯಪಾಲರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ; TMC ಆಕ್ರೋಶ

T20 World Cup 2024
ಕ್ರೀಡೆ30 mins ago

T20 World Cup 2024: ಟಿ20 ವಿಶ್ವಕಪ್​ಗೆ ಪಾಕಿಸ್ತಾನ ತಂಡ ಪ್ರಕಟಿಸಲು ಹೆದರುತ್ತಿರುವುದಕ್ಕೆ ಇದುವೇ ಅಸಲಿ ಕಾರಣ

Actor Darshan React about Kaatera 2
ಸ್ಯಾಂಡಲ್ ವುಡ್32 mins ago

Actor Darshan: ಗೆದ್ದ ಎತ್ತಿನ ಬಾಲ ಹಿಡಿಯಬಾರದು ಎಂದ ದರ್ಶನ್‌! ಕಾಟೇರ 2 ಬರತ್ತಾ?

KSET Exam 2023 provisional score list
ಪ್ರಮುಖ ಸುದ್ದಿ51 mins ago

KSET Exam 2023: ಉಪನ್ಯಾಸಕರ ಅರ್ಹತಾ ಪರೀಕ್ಷೆ ಕೆಸೆಟ್‌- 2023ರ ತಾತ್ಕಾಲಿಕ ಅಂಕಪಟ್ಟಿ ಪ್ರಕಟ

Amith Shah
Lok Sabha Election 202455 mins ago

Amit Shah: ಅಮಿತ್‌ ಶಾ ವಿಡಿಯೊ ತಿರುಚಿದ ಪ್ರಕರಣ; ಕಾಂಗ್ರೆಸ್ ಐಟಿ ಸೆಲ್‌ನ ಐವರು ಸದಸ್ಯರ ಬಂಧನ

IPL 2024 Points Table
ಕ್ರೀಡೆ56 mins ago

IPL 2024 Points Table: ರೋಚಕ 1 ರನ್ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಹೈದರಾಬಾದ್​

Lok sabha Election 2024
ದೇಶ58 mins ago

Lok sabha Election 2024: ರಾಯ್‌ಬರೇಲಿಯಲ್ಲಿ ಕಣಕ್ಕಿಳಿದಿರುವ ದಿನೇಶ್‌ ಪ್ರತಾಪ್‌ ಸಿಂಗ್‌ ಹಿನ್ನೆಲೆ ಏನು?

Kaatera  Movie Rockline Venkatesh Gifts Car To Jadesh K Hampi Maasthi And Suraj
ಸ್ಯಾಂಡಲ್ ವುಡ್1 hour ago

Kaatera  Movie:  ಕಾಟೇರ ಗೆಲುವು: ಮೂವರಿಗೆ ಉಡುಗೊರೆಯಾಗಿ ಸಿಕ್ತು ಕಾರುಗಳು!

Lok sabha Election
ದೇಶ1 hour ago

Lok Sabha Election 2024: ರಾಯ್‌ಬರೇಲಿಯಿಂದ ರಾಹುಲ್‌ ಗಾಂಧಿ ಕಣಕ್ಕೆ, ಅಮೇಠಿಯಿಂದ ಕಿಶೋರಿಲಾಲ್‌ ಸ್ಪರ್ಧೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ5 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ15 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌