ಕೋಲ್ಕತ್ತಾ: ಬಿಜೆಪಿ ವಿರುದ್ಧದ ರಾಜಕೀಯ ಶಕ್ತಿಗಳನ್ನು ಒಗ್ಗೂಡಿಸಲು ಪ್ರಯತ್ನಿಸುತ್ತಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಬಿಜೆಪಿಯೇತರ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
ಬಿಜೆಪಿಯೇತರ ಮುಖ್ಯಮಂತ್ರಿಗಳ ಸಭೆ ಕರೆದಿರುವ ಮಮತಾ ಬ್ಯಾನರ್ಜಿ, ʻದೇಶಕ್ಕೆ ಯೋಗ್ಯವಾದ ಸರ್ಕಾರಕ್ಕೆ ದಾರಿ ಮಾಡಿಕೊಡುವ ನಿಟ್ಟಿನಲ್ಲಿ ಒಗ್ಗಟ್ಟಿನ ವಿರೋಧ ಪಕ್ಷದ ಉದ್ದೇಶಕ್ಕಾಗಿ ಬದ್ಧರಾಗಿರೋಣ. ಎಲ್ಲಾ ಪ್ರಗತಿಪರ ಶಕ್ತಿಗಳು ಒಂದಾಗುವುದು ಅಗತ್ಯವಿದೆʼ ಎಂದು ಮಮತಾ ಬ್ಯಾನರ್ಜಿ ಪತ್ರದಲ್ಲಿ ಬರೆದಿದ್ದಾರೆ.
ʻಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಮುಂದಿನ ಹೋರಾಟದ ಬಗ್ಗೆ ನಾವು ಚರ್ಚೆ ನಡೆಸಬೇಕಿದೆʼ ಎಂದು ಬಿಜೆಪಿ ವಿರುದ್ಧ ಒಗ್ಗೂಡುವಂತೆ ದೀದಿ ಕರೆ ನೀಡಿದ್ದಾರೆ.
2024ರ ಲೋಕಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸುತ್ತಿರುವ ಮಮತಾ ಬ್ಯಾನರ್ಜಿ ಬಿಜೆಪಿ ವಿರುದ್ಧದ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದಲ್ಲಿದ್ದಾರೆ. ಕಳೆದ ವರ್ಷ ಬಿಜೆಪಿ ವಿರುದ್ಧ ಜಂಟಿ ಚಳುವಳಿ ನಡೆಸಲು ವಿಪಕ್ಷಗಳ ಗುಂಪು ರಚನೆಗೆ ಮಮತಾ ಬ್ಯಾನರ್ಜಿ ಕರೆ ನೀಡಿದ್ದರು.