Site icon Vistara News

7th Pay Commission: ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ, ಮುಂದಿನ ತಿಂಗಳು ಘೋಷಣೆ?

Dearness Allowance

Central Government Hikes 4 pc to 50 pc; new rate effective January 1

ನವದೆಹಲಿ: ಕೇಂದ್ರ ಸರ್ಕಾರದ ನೌಕರರಿಗೆ (Central Government Employees) ಶೀಘ್ರವೇ ಸಿಹಿ ಸುದ್ದಿ ಸಿಗಲಿದೆ. ನೌಕರರ ತುಟ್ಟಿ ಭತ್ಯೆ (dearness allowance – DA) ಹೆಚ್ಚಳ ಕುರಿತು ಸೆಪ್ಟೆಂಬರ್‌ ತಿಂಗಳಲ್ಲಿ (September Month) ಕೇಂದ್ರ ಸರ್ಕಾರವು ಘೋಷಣೆ ಮಾಡುವ ಸಾಧ್ಯತೆಗಳಿವೆ. ಸರ್ಕಾರದಿಂದ ಈ ಕುರಿತು ಯಾವುದೇ ಅಧಿಕೃತ ಮಾಹಿತಿ ಇಲ್ಲವಾದರೂ, ಮಾಧ್ಯಮಗಳ ವರದಿಗಳ ಪ್ರಕಾರ, ಮುಂದಿನ ತಿಂಗಳು ಘೋಷಣೆಯಾಗುವುದು ಪಕ್ಕಾ ಎಂದು ಹೇಳಲಾಗುತ್ತಿದೆ(7th Pay Commission).

ದೇಶದಲ್ಲಿ ಹಣದುಬ್ಬರ ಏರಿಕೆಯು 15 ತಿಂಗಳ ಗರಿಷ್ಠ ಮಟ್ಟಕ್ಕೆ ತಲುಪಿದೆ. ವರದಿಗಳ ಪ್ರಕಾರ ಕೇಂದ್ರ ಸರ್ಕಾರವು ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.3ರಷ್ಟು ಹೆಚ್ಚಿಸುವ ಸಾಧ್ಯತೆಗಳಿವೆ. ಈ ಹೆಚ್ಚಳವು ಪೂರ್ವಾನ್ವಯ ಅಂದರೆ ಜುಲೈ ತಿಂಗಳಿನಿಂದಲೇ ಅನ್ವಯವಾಗಲಿದೆ ಎಂದು ಹೇಳಲಾಗುತ್ತಿದೆ.

ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿ ಭತ್ಯೆಯನ್ನು ಕಾರ್ಮಿಕ ಬ್ಯೂರೋ ಪ್ರತಿ ತಿಂಗಳು ಹೊರತರುವ ಕೈಗಾರಿಕಾ ಕಾರ್ಮಿಕರ ಇತ್ತೀಚಿನ ಗ್ರಾಹಕ ಬೆಲೆ ಸೂಚ್ಯಂಕದ (CPI-IW) ಆಧಾರದ ಮೇಲೆ ಲೆಕ್ಕ ಹಾಕಲಾಗುತ್ತದೆ.

ಈ ಸುದ್ದಿಯನ್ನೂ ಓದಿ: DA Hike News : ಕಳೆದ ಐದು ತಿಂಗಳ ಬಾಕಿ ತುಟ್ಟಿ ಭತ್ಯೆ; ಯಾವ ವೇತನ ಶ್ರೇಣಿಯವರಿಗೆ ಎಷ್ಟು ಹಣ ಲಭ್ಯ?

2023ರ ಜೂನ್ ತಿಂಗಳ CPI-IW ಅನ್ನು 2023ರ ಜುಲೈ 31ರಂದು ಬಿಡುಗಡೆ ಮಾಡಲಾಗಿದೆ. ನಾವು ತುಟ್ಟಿಭತ್ಯೆಯಲ್ಲಿ ನಾಲ್ಕು ಶೇಕಡಾವಾರು ಪಾಯಿಂಟ್‌ಗಳ ಹೆಚ್ಚಳಕ್ಕೆ ಒತ್ತಾಯಿಸುತ್ತಿದ್ದೇವೆ. ಆದರೆ ತುಟ್ಟಿಭತ್ಯೆ ಹೆಚ್ಚಳವು ಮೂರು ಶೇಕಡಾವಾರು ಅಂಕಗಳಿಗಿಂತ ಸ್ವಲ್ಪ ಹೆಚ್ಚಾಗಿರುತ್ತದೆ. ಹೀಗಾಗಿ ಡಿಎ ಮೂರು ಶೇಕಡಾ ಪಾಯಿಂಟ್‌ಗಳಿಂದ ಶೇಕಡಾ 45 ಕ್ಕೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಖಿಲ ಭಾರತ ರೈಲ್ವೇಮೆನ್ ಫೆಡರೇಶನ್ ಪ್ರಧಾನ ಕಾರ್ಯದರ್ಶಿ ಶಿವ ಗೋಪಾಲ್ ಮಿಶ್ರಾ ಇತ್ತೀಚೆಗೆ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Exit mobile version