ಪಣಜಿ: ಗೋವಾದಲ್ಲಿ ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್, ಪ್ರತಿಪಕ್ಷ ನಾಯಕನಾಗಿದ್ದ ಮೈಕೆಲ್ ಲೋಬೋ ಸೇರಿ ಕಾಂಗ್ರೆಸ್ನ ಎಂಟು ಶಾಸಕರು ಇಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಗೋವಾ ಬಿಜೆಪಿ ಮುಖ್ಯಸ್ಥ ಸದಾನಂದ ಶೇಟ್ ತನಾವಡೆ ತಿಳಿಸಿದ್ದಾರೆ. ಹಾಗೊಮ್ಮೆ ಕಾಂಗ್ರೆಸ್ನ ಎಂಟು ಶಾಸಕರು ಬಿಜೆಪಿ ಸೇರಿದ್ದೇ ಆದಲ್ಲಿ, ಆ ರಾಜ್ಯದಲ್ಲಿ ಮೂವರು ಕಾಂಗ್ರೆಸ್ ಶಾಸಕರು ಮಾತ್ರ ಉಳಿಯುತ್ತಾರೆ.
ಗೋವಾದಲ್ಲಿ ಜುಲೈ ತಿಂಗಳಲ್ಲೇ ಒಮ್ಮೆ ಕಾಂಗ್ರೆಸ್ ನಾಯಕರ ಬಂಡಾಯದ ಸುದ್ದಿ ಹರಡಿತ್ತು. ದಿಗಂಬರ್ ಕಾಮತ್ ಮತ್ತು ಮೈಕೆಲ್ ಲೋಬೋ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂದು ಗೋವಾ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಆರೋಪಿಸಿದ್ದರು. ಪ್ರತಿಪಕ್ಷ ನಾಯಕನ ಸ್ಥಾನದಿಂದ ಮೈಕೆಲ್ ಲೋಬೋರನ್ನು ತೆಗೆದುಹಾಕಲಾಗಿತ್ತು. ಅಷ್ಟೇ ಅಲ್ಲ, ಮೈಕೆಲ್ ಲೋಬೋ ಮತ್ತು ದಿಗಂಬರ್ ಕಾಮತ್ರನ್ನು ಅನರ್ಹಗೊಳಿಸಬೇಕು ಎಂದು ವಿಧಾನಸಭೆ ಸ್ಪೀಕರ್ಗೆ ಅರ್ಜಿಯನ್ನೂ ಸಲ್ಲಿಸಿದ್ದರು. ಆಮೇಲೆ ಈ ಬಂಡಾಯದ ವಿಚಾರ ಮತ್ತೆ ಮುನ್ನೆಲೆಗೆ ಬಂದಿರಲಿಲ್ಲ.
ಇದೀಗ ಕಾಂಗ್ರೆಸ್ನ ದಿಗಂಬರ್ ಕಾಮತ್, ಮೈಕೆಲ್ ಲೋಬೋ, ದೆಲಿಲಾ ಲೋಬೊ, ರಾಜೇಶ್ ಫಾಲ್ದೇಸಾಯಿ, ಕೇದಾರ್ ನಾಯಕ್, ಸಂಕಲ್ಪ್ ಅಮೋನ್ಕರ್, ಅಲೆಕ್ಸೊ ಸಿಕ್ವೇರಾ ಮತ್ತು ರುಡಾಲ್ಫ್ ಫರ್ನಾಂಡಿಸ್ ಇಂದು ಬಿಜೆಪಿ ಸೇರ್ಪಡೆಯಾಗುವುದು ಪಕ್ಕಾ ಆಗಿದೆ. ಇವರು ಈಗಾಗಲೇ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಇದನ್ನೂ ಓದಿ: ಗೋವಾ ಕಾಂಗ್ರೆಸ್ ಶಾಸಕರಿಗೆ ಬಿಗ್ ಆಫರ್!: ಸಿ.ಟಿ.ರವಿ ಮಾತು ನಿಜವಾಗುವ ಸಮಯ ಬಂದಿದೆಯಾ?