Site icon Vistara News

ಉ. ಪ್ರದೇಶದ ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ, ಎಂಟು ಮಂದಿ ಬಲಿ, ‌15 ಮಂದಿಗೆ ಗಾಯ

ನವ ದೆಹಲಿ: ಉತ್ತರ ಪ್ರದೇಶದ ಹಾಪುರ್‌ ಜಿಲ್ಲೆಯ ಕೆಮಿಕಲ್‌ ಫ್ಯಾಕ್ಟರಿ ಒಂದರಲ್ಲಿ ಶನಿವಾರ ಸಂಜೆ ಭಾರಿ ಅಗ್ನಿ ಅನಾಹುತ ಸಂಭವಿಸಿದ್ದು, ಎಂಟು ಮಂದಿ ಮೃತಪಟ್ಟಿದ್ದಾರೆ. 15 ಮಂದಿ ಗಾಯಗೊಂಡಿದ್ದಾರೆ. ಇನ್ನೂ ಹಲವಾರು ಕಾರ್ಮಿಕರು ಕಟ್ಟಡದ ಒಳಗೆ ಸಿಕ್ಕಿಬಿದ್ದಿರುವ ಸಾಧ್ಯತೆ ಇದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಅಪಾಯವಿದೆ.

ಹಾಪುರ್‌ನ ಕೈಗಾರಿಕಾ ಪ್ರದೇಶದಲ್ಲಿರುವ ಎಲೆಕ್ಟ್ರಾನಿಕ್‌ ಸಾಧನಗಳನ್ನು ಉತ್ಪಾದಿಸುವ ಕೇಂದ್ರದಲ್ಲಿ ಬಾಯ್ಲರ್‌ ಸ್ಫೋಟಿಸಿ ಈ ದುರಂತ ಸಂಭವಿಸಿದೆ ಎನ್ನುವುದು ಪ್ರಾಥಮಿಕ ಮೂಲಗಳ ಮಾಹಿತಿ.

ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆ ಸಾಗಿಸುವ ಕೆಲಸ ನಡೆಯುತ್ತಿದೆ. ಪ್ರಾಥಮಿಕ ಮಾಹಿತಿಗಳನ್ನು ಪಡೆದುಕೊಳ್ಳಲಾಗಿದೆ ಎಂದು ಹಾಪುರ್‌ನ ಐಜಿ ಪ್ರವೀಣ್‌ ಕುಮಾರ್‌ ಹೇಳಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಘಟನೆಯ ಬಗ್ಗೆ ತೀವ್ರ ಕಳವಳವನ್ನು ವ್ಯಕ್ತಪಡಿಸಿದ್ದಾರೆ. ಮೃತಪಟ್ಟವರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಜತೆಗೆ ತಕ್ಷಣವೇ ಸ್ಥಳಕ್ಕೆ ಧಾವಿಸಿ ತುರ್ತು ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. ಉತ್ತರ ಪ್ರದೇಶದ ಸಚಿವ ನಂದ ಗೋಪಾಲ್‌ ಗುಪ್ತಾ ಅವರು ಕೂಡಾ ಮೃತರ ಕುಟುಂಬಿಕರಿಗೆ ಸಾಂತ್ವನ ಹೇಳಿದ್ದಾರೆ.

ಇದನ್ನೂ ಓದಿ| ದೆಹಲಿ ಅಗ್ನಿ ದುರಂತ: 4 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ; 27 ಸಾವು, 19 ಜನ ನಾಪತ್ತೆ

Exit mobile version