Site icon Vistara News

ವಿವಾಹದ ‘ಅರಿಶಿನ’ ಕಾರ್ಯಕ್ರಮದ ವೇಳೆ ಗೋಡೆ ಕುಸಿದು 8 ಸಾವು

8 killed in wall collapse during wedding haldi function

ಮವು, ಉತ್ತರ ಪ್ರದೇಶ: ಶುಕ್ರವಾರ ಇಲ್ಲಿನ ಘೋಸಿ ಪ್ರದೇಶದಲ್ಲಿ ನಡೆದ ವಿವಾಹ ಪೂರ್ವ ಕಾರ್ಯಕ್ರಮದ (Pre-Wedding Function) ವೇಳೆ ಹಠಾತ್ ಗೋಡೆ ಕುಸಿದು (Wall Collapses) ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿ ಒಟ್ಟು 8 ಜನರು ಮೃತಪಟ್ಟಿದ್ದು, 16 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ಅರುಣ್ ಕುಮಾರ್ ಮಾತನಾಡಿ, ವಿವಾಹ ಪೂರ್ವ ‘ಹಲ್ದಿ’ ಕಾರ್ಯಕ್ರಮದ (haldi function) ವೇಳೆ ಇದ್ದಕ್ಕಿದ್ದಂತೆ 20 ಜನರ ಮೇಲೆ ಗೋಡೆ ಕುಸಿದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋಡೆ ಕುಸಿತದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ(viral Video).

ಪೊಲೀಸರು ಹೇಳುವ ಪ್ರಕಾರ, ಹಠಾತ್ ಕುಸಿದಿರುವ ಗೋಡೆಯನ್ನು ಇತ್ತೀಚೆಗಷ್ಟೇ ನಿರ್ಮಾಣ ಮಾಡಲಾಗಿತ್ತು. ಈ ಗೋಡೆ ನಿರ್ಮಾಣ ಮಾಡಿದ ಇಬ್ಬರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ ಮತ್ತು ಅವರಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅರುಣ್ ಕುಮಾರ್ ಅವರು ತಿಳಿಸಿದ್ದಾರೆ. ಶುಕ್ರವಾರ ವಿವಾಹ ಪೂರ್ವ ಕಾರ್ಯಕ್ರಮದ ವೇಳೆ ಪಕ್ಕದ ಗೋಡೆ ಕುಸಿದು ಬಿದ್ದಿದೆ ಎಂದು ಜಿಲ್ಲಾಧಿಕಾರಿ ಅರುಣ್ ಕುಮಾರ್ ತಿಳಿಸಿದ್ದಾರೆ. ಘಟನೆಯಲ್ಲಿ ಆರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, 20 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಮತ್ತು ಎಲ್ಲಾ ಗಾಯಾಳುಗಳಿಗೆ 50,000 ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ ಮತ್ತು ಎಲ್ಲಾ ಗಾಯಾಳುಗಳಿಗೆ ಉಚಿತ ವೈದ್ಯಕೀಯ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Road Accident: ಮೂವರ ಪ್ರಾಣ ತೆಗೆದ ಅಪಘಾತಗಳು!

Exit mobile version