Site icon Vistara News

Lok Sabha Election: 2024ರ ಲೋಕಸಭೆ ಚುನಾವಣೆಯಲ್ಲಿ ಮತದಾನಕ್ಕೆ 97 ಕೋಟಿ ಜನರಿಂದ ನೋಂದಣಿ

97 crore people registered to vote in Lok Sabha Election

ನವದೆಹಲಿ: ಏಪ್ರಿಲ್-ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು(Lok Sabha Election), ಇದಕ್ಕಾಗಿ ಕೇಂದ್ರ ಚುನಾವಣಾ ಆಯೋಗವು (Election Commission) ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಚುನಾವಣಾ ಆಯೋಗದ ಮಾಹಿತಿಯ ಪ್ರಕಾರ ಈ ಲೋಕಸಭೆಯಲ್ಲಿ 96.88 ಕೋಟಿ ಜನರು ಮತದಾನಕ್ಕೆ ಅರ್ಹರಾಗಿದ್ದು(voters), ನೋಂದಣಿ ಮಾಡಿಕೊಂಡಿದ್ದಾರೆ. ಅಂದರೆ, ಆಲ್ಮೋಸ್ಟ್ 97 ಕೋಟಿ ಜನರು ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಲಿದ್ದಾರೆ.

ಈ ಚುನಾವಣೆಯಲ್ಲಿ 18ರಿಂದ 29 ವರ್ಷ ವಯಸ್ಸಿನೊಳಗಿನ ಸುಮಾರು 2 ಕೋಟಿ ಜನರು ಮತ ಚಲಾಯಿಸಲಿದ್ದಾರೆ. 2019ರ ಲೋಕಸಭೆ ಚುನಾವಣೆಗೆ ಹೋಲಿಸಿದರೆ, ವೋಟ್ ಮಾಡಲು ನೋಂದಣಿ ಮಾಡಿಕೊಂಡವರ ಸಂಖ್ಯೆಯಲ್ಲಿ ಶೇ.6ರಷ್ಟು ಹೆಚ್ಚಳವಾಗಿದೆ.

ವಿಶ್ವದ ಅತಿದೊಡ್ಡ ಮತದಾರರು ಇವರು. 96.88 ಕೋಟಿ ಜನರು ಭಾರತದಲ್ಲಿ ಮುಂಬರುವ ಸಾರ್ವತ್ರಿಕ ಚುನಾವಣೆಗಳಿಗೆ ಮತ ಚಲಾಯಿಸಲು ನೋಂದಾಯಿಸಿಕೊಂಡಿದ್ದಾರೆ ಎಂದು ಕೇಂದ್ರ ಚುನಾವಣಾ ಆಯೋಗವು ಹೇಳಿದೆ.

ಲಿಂಗ ಅನುಪಾತದಲ್ಲೂ ಏರಿಕೆಯಾಗಿದೆ. 2023ರಲ್ಲಿ 940 ಲಿಂಗಾನುಪಾತವು 2024 ರಲ್ಲಿ 948ಕ್ಕೆ ಏರಿದೆ ಎಂದು ಚುನಾವಣಾ ಸಮಿತಿ ತಿಳಿಸಿದೆ. ಆಯೋಗವು ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ಬಹಿರಂಗಪಡಿಸುವಿಕೆ ಮತ್ತು ಪಾರದರ್ಶಕತೆಯೊಂದಿಗೆ ಮತದಾರರ ಪಟ್ಟಿಯ ಶುದ್ಧತೆಗೆ ಒತ್ತು ನೀಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಪುಣೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರತಿ ಹಂತದಲ್ಲೂ ರಾಜಕೀಯ ಪಕ್ಷಗಳ ಭಾಗವಹಿಸುವಿಕೆಯೊಂದಿಗೆ ಮತದಾರರ ಪಟ್ಟಿಗಳ ಪರಿಷ್ಕರಣೆ ಒಳಗೊಂಡಿರುವ ವಿವಿಧ ಕಾರ್ಯಗಳನ್ನು ವಿವರಿಸಿದರು.

ಈ ಸುದ್ದಿಯನ್ನೂ ಓದಿ: Voter Data | ಮತದಾರರ ಪಟ್ಟಿ ಅಕ್ರಮ; ಕೇಂದ್ರ ಚುನಾವಣಾ ಆಯೋಗಕ್ಕೆ ರಾಜ್ಯ ಕಾಂಗ್ರೆಸ್‌ ನಾಯಕರಿಂದ ದೂರು

Exit mobile version