ನವ ದೆಹಲಿ: ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಮತ ಎಣಿಕೆ ಸಾಗುತ್ತಿದ್ದು, ಇದುವರೆಗೆ ಶೇ.82 ಮತಗಳ ಎಣಿಕೆಯಾಗಿದೆ. ಈ ಸಲ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆಲುವು ಸಾಧಿಸುವ ಎಲ್ಲ ಲಕ್ಷಣಗಳೂ ಗೋಚರಿಸುತ್ತಿವೆ. ಇಲ್ಲಿಯವರೆಗೆ ಆಮ್ ಆದ್ಮಿ ಪಕ್ಷ 80 ವಾರ್ಡ್ಗಳನ್ನು ಗೆದ್ದಿದ್ದು, ಬಿಜೆಪಿ 60 ವಾರ್ಡ್ಗಳಲ್ಲಿ ಜಯ ಸಾಧಿಸಿದೆ ಎಂದು ದೆಹಲಿ ರಾಜ್ಯ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಹಾಗೇ ಕಾಂಗ್ರೆಸ್ 4 ವಾರ್ಡ್ ಗೆದ್ದುಕೊಂಡಿದೆ.
ಕಳೆದ 15 ವರ್ಷಗಳಿಂದಲೂ ದೆಹಲಿ ಮಹಾನಗರ ಪಾಲಿಕೆ ಆಡಳಿತ ಬಿಜೆಪಿ ಕೈಯಲ್ಲಿದೆ. ಈ ಸಲ ಡಿಸೆಂಬರ್ 4ರಂದು ಚುನಾವಣೆ ನಡೆದಿತ್ತು. ಪ್ರಸಕ್ತ ಬಾರಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆಲುವು ಸಾಧಿಸಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿದ್ದವು.
ಸಂಭ್ರಮಾಚರಣೆಗೆ ಸಿದ್ಧತೆ
ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆಗೆ ಸಕಲ ಸಿದ್ಧತೆಗಳನ್ನೂ ಮಾಡಿಕೊಳ್ಳುತ್ತಿದ್ದಾರೆ. ಬೆಳಗ್ಗೆಯಿಂದಲೇ ಅವರು ಆಪ್ ಪಕ್ಷದ ಕಚೇರಿಯನ್ನು ಅಲಂಕರಿಸುತ್ತಿದ್ದಾರೆ. ಕೆಲವು ಪ್ರಮುಖ ನಾಯಕರು ಸಿಎಂ ಅರವಿಂದ್ ಕೇಜ್ರಿವಾಲ್ ಮನೆಗೂ ಭೇಟಿ ಕೊಟ್ಟಿದ್ದಾರೆ.
ಇದನ್ನೂ ಓದಿ: Delhi MCD Election| ದೆಹಲಿ ಮಹಾನಗರ ಪಾಲಿಕೆ ಗದ್ದುಗೆ ಹಿಡಿಯಲು ಬಿಜೆಪಿ-ಆಪ್ ತೀವ್ರ ಪೈಪೋಟಿ; ಸಮಬಲದಲ್ಲಿ ಮುನ್ನಡೆ