Site icon Vistara News

Narendra Modi: ಪ್ರಧಾನಿ ಮೋದಿಗೆ ಅಭಿಷೇಕ್‌ ಅಂಬರೀಶ್‌ ಮದುವೆ ಆಮಂತ್ರಣ; ಪೋಸ್ಟ್‌ ಹಂಚಿಕೊಂಡ  ಸುಮಲತಾ

Abhishek Ambarish wedding invitation to PM Modi; The post was shared by Sumalatha

ಬೆಂಗಳೂರು: ನಟ ಅಂಬರೀಶ್–ಸುಮಲತಾ ಪುತ್ರ, ಯಂಗ್‌ ರೆಬೆಲ್ ಸ್ಟಾರ್‌ ಅಭಿಷೇಕ್ ಅಂಬರೀಶ್ ವಿವಾಹ ಕೆಲವೇ ದಿನಗಳಲ್ಲಿ ನಡೆಯಲಿದೆ. ಈಗಾಗಲೇ ಸಮಲತಾ ಅಂಬರೀಶ್‌ ಅವರು ಮಗನ ವಿವಾಹೋತ್ಸವಕ್ಕೆ ಪ್ರಧಾನಿ ಮೋದಿ (Narendra Modi) ಅವರನ್ನು ಭೇಟಿ ಮಾಡಿ ಆಹ್ವಾನ ನೀಡಿದ್ದಾರೆ. ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪ ನಿಶ್ಚತಾರ್ಥವು ಕೆಲವು ತಿಂಗಳ ಹಿಂದೆ ನಡೆದಿತ್ತು. ಇನ್ನು ಕೆಲವೇ ದಿನಗಳಲ್ಲಿ ಬೆಂಗಳೂರಿನಲ್ಲಿಯೇ ಈ ಜೋಡಿಯ ಅದ್ಧೂರಿ ವಿವಾಹ ನಡೆಯಲಿದ್ದು, ಆಮಂತ್ರಣ ಪತ್ರಿಕೆ ಹಂಚಿಕೆ ಪ್ರಾರಂಭವಾಗಿದೆ.

ಸುಮಲತಾ ಅಂಬರೀಶ್‌ ಫೋಟೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದು ʻʻ ವಿಶ್ವದ ಅತ್ಯಂತ ಜನಪ್ರಿಯ ಮತ್ತು ಗೌರವಾನ್ವಿತ ನಾಯಕರು ಪ್ರಧಾನಿ ಮೋದಿ. ಅಭಿಷೇಕ್‌ ಅಂಬರೀಶ್‌ ಕೂಡ ಇಂದು ಅವರ ಆತ್ಮೀಯ ಆಶೀರ್ವಾದ ಪಡೆಯುವ ಸೌಭಾಗ್ಯವನ್ನು ಪಡೆದಿದ್ದಾರೆ. ಮೋದಿ ಅವರ ಸಮರ್ಥ ನಾಯಕತ್ವದಲ್ಲಿ ಭಾರತವು ಭವಿಷ್ಯದ ಕಡೆಗೆ ಮಹತ್ತರವಾದ ದಾಪುಗಾಲುಗಳನ್ನು ತೆಗೆದುಕೊಳ್ಳುತ್ತದೆ ಎಂದು ನನಗೆ ಸಂಪೂರ್ಣ ವಿಶ್ವಾಸವಿದೆ. ಕರ್ನಾಟಕ ಮತ್ತು ಭಾರತಕ್ಕೆ ನಾವು ಅರ್ಹರಾಗಿರುವ ಭವಿಷ್ಯದಲ್ಲಿ ನ್ಯಾವಿಗೇಟ್ ಮಾಡಲು ಅವರ ನಾಯಕತ್ವದ ಅಗತ್ಯವಿದೆ ಎಂದು ನಾನು ನಂಬುತ್ತೇನೆʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Abhishek Ambareesh | ಇಲ್ಲಿವೆ ಅಭಿಷೇಕ್​ ಅಂಬರೀಷ್‌ ಮತ್ತು ​ಅವಿವಾ ಬಿದ್ದಪ್ಪ ನಿಶ್ಚಿತಾರ್ಥ ಫೋಟೊಗಳು

ಸುಮಲತಾ ಅಂಬರೀಶ್‌ ಪೋಸ್ಟ್‌

ಯಂಗ್‌ ರೆಬಲ್ ಸ್ಟಾರ್‌ ಅಭಿಷೇಕ್‌ ಅಂಬರೀಶ್‌ (Abhishek Ambareesh) ಹಾಗೂ ಅವಿವಾ ಬಿದ್ದಪ್ಪ ನಿಶ್ಚಿತಾರ್ಥ ಡಿಸೆಂಬರ್‌ 11ರಂದು ಬೆಂಗಳೂರಿನ ಫೋರ್ ಸೀಸನ್ಸ್ ಹೋಟೆಲ್‌ನಲ್ಲಿ ಅದ್ಧೂರಿಯಾಗಿ ನಡೆದಿತ್ತು. ನಾಲ್ಕು ವರ್ಷಗಳಿಂದ ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ಪ್ರೀತಿಸುತ್ತಿದ್ದರು. ತಮ್ಮ ಪ್ರೀತಿ ವಿಚಾರವನ್ನು ಕುಟುಂಬಕ್ಕೆ ತಿಳಿಸಿ ಗ್ರೀನ್ ಸಿಗ್ನಲ್ ಪಡೆದು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಅವಿವಾ ಬಿದ್ದಪ್ಪ ಫ್ಯಾಷನ್‌ ಲೋಕದಲ್ಲಿ ತೊಡಗಿಸಿಕೊಂಡಿದ್ದಾರೆ. ತಮ್ಮದೇ ಸ್ವಿಮ್ ಸೂಟ್‌ ಬ್ರ್ಯಾಂಡ್‌ನ ಲಾಂಚ್ ಮಾಡಿದ್ದಾರೆ.

ಈ ನವಜೋಡಿಯ ವಿವಾಹವು ಜೂನ್ ತಿಂಗಳಲ್ಲಿ ನಡೆಯಲಿದ್ದು, ರಾಜ್ಯದ ಪ್ರಮುಖ ರಾಜಕಾರಣಿಗಳು ಸೇರಿದಂತೆ ಕನ್ನಡ, ತೆಲುಗು, ತಮಿಳು ಚಿತ್ರರಂಗದ ಹಲವು ಪ್ರಮುಖ ರಾಜಕಾರಣಿಗಳು ಭಾಗಿಯಾಗಲಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನಲ್ಲಿಯೇ ಅದ್ಧೂರಿಯಾಗಿ ವಿವಾಹ ನಡೆಯಲಿದ್ದು, ಆ ಬಳಿಕ ಮಂಡ್ಯದಲ್ಲಿ ಅದ್ಧೂರಿಯಾಗಿ ರಿಸೆಪ್ಷನ್ ನಡೆಯಲಿದೆ.

Exit mobile version