Site icon Vistara News

Accident: ಭೀಕರ ಅಪಘಾತ; ದೇವಸ್ಥಾನಕ್ಕೆ ತೆರಳುತ್ತಿದ್ದ 11 ಜನ ಸ್ಥಳದಲ್ಲೇ ದುರ್ಮರಣ

Accident

ಉತ್ತರಪ್ರದೇಶ: ದೇವಸ್ಥಾನಕ್ಕೆ ತೆರಳುತ್ತಿದ್ದ ಬಸ್‌(Bus)ವೊಂದು ಟ್ರಕ್‌(Truck)ಗೆ ಡಿಕ್ಕಿಯಾಗಿ(Accident) 11 ಜನ ಸ್ಥಳದಲ್ಲೇ ದರ್ಮರಣಕ್ಕೀಡಾಗಿದ್ದು, ಸುಮಾರು 10ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಶನಿವಾರ ರಾತ್ರಿ ಶಹಜಹಾನ್‌ಪುರ ಜಿಲ್ಲೆಯ ಖುತಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಉತ್ತರಾಖಂಡಕ್ಕೆ ತೆರಳುತ್ತಿದ್ದ ಬಸ್‌ಗೆ ಟ್ರಕ್ ಡಿಕ್ಕಿಯಾಗಿದೆ. ಇನ್ನು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ಭಕ್ತರು ಸೀತಾಪುರ ಜಿಲ್ಲೆಯ ಕಮಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜೇಥಾ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.

ಘಟನೆ ವಿವರ:

ಸೀತಾಪುರದಿಂದ ಪೂರ್ಣಗಿರಿಗೆ ತೆರಳುತ್ತಿದ್ದ ಭಕ್ತರು ತುಂಬಿದ್ದ ಬಸ್‌ಗೆ ಡಂಪರ್ ಡಿಕ್ಕಿ ಹೊಡೆದಿದೆ.
ಇದಾದ ಬಳಿಕ ಬಸ್‌ ಮೇಲೆ ಡಂಪರ್ ಪಲ್ಟಿಯಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಸೀತಾಪುರ ಜಿಲ್ಲೆಯ ನಿವಾಸಿಗಳಾಗಿದ್ದು, ಪೂರ್ಣಗಿರಿ ಮಾತೆಯ ದರ್ಶನಕ್ಕೆ ತೆರಳುತ್ತಿದ್ದರು. ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ಶಹಜಹಾನ್‌ಪುರದ ಖುತಾರ್ ಪ್ರದೇಶದ ಗೋಲಾ-ಲಖಿಂಪುರ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಈ ವೇಳೆ ಎದುರಿನಿಂದ ಬರುತ್ತಿದ್ದ ಬ್ಯಾಲೆಸ್ಟ್ ತುಂಬಿದ ಡಂಪರ್ ಖಾಸಗಿ ಬಸ್ ಮೇಲೆ ಉರುಳಿದೆ. ಇದರಿಂದ ಬಸ್‌ನಲ್ಲಿ ಕುಳಿತಿದ್ದವರು ಸಮಾಧಿಯಾದರು ಎಂದು ಎಸ್.ಪಿ. ಅಶೋಕ್ ಕುಮಾರ್ ಮೀನಾ ತಿಳಿಸಿದ್ದಾರೆ.

ಇನ್ನು ಇಂದು ಬೆಳ್ಳಂಬೆಳಗ್ಗೆ ಹಾಸನದಲ್ಲೂ ಭೀಕರ ಅಪಘಾತ ಸಂಭಿಸಿದೆ. ಹಾಸನ ಹೊರವಲಯದ ಈಚನಹಳ್ಳಿ ಬಳಿ ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ (ಮೇ.26) ಸಂಭವಿಸಿದೆ. ಸ್ಥಳದಲ್ಲೇ ಐವರು ಮೃತಪಟ್ಟಿದ್ದಾರೆ. ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜು ಆಗಿದೆ. ಮೃತದೇಹಗಳನ್ನು ಹೊರಗೆ ತೆಗೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:Koratagere News: ಕೊರಟಗೆರೆ ತಾಲೂಕಿನಲ್ಲಿ ಬಿತ್ತನೆ ಬೀಜಕ್ಕೆ ಕೊರತೆ ಇಲ್ಲ: ಸಹಾಯಕ ಕೃಷಿ ನಿರ್ದೇಶಕ ರುದ್ರಪ್ಪ

ಕಾರಿನಲ್ಲಿದ್ದ ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಮೃತಪಟ್ಟಿರುವುದಾಗಿ ತಿಳುದು ಬಂದಿದೆ. ಸ್ಥಳಕ್ಕೆ ಎಸ್ಪಿ ಮಹಮದ್ ಸುಜೇತಾ ಭೇಟಿ ನೀಡಿದ್ದಾರೆ. ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

Exit mobile version