ಶಿಮ್ಲಾ: ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತ(Accident)ದಲ್ಲಿ ಏಳು ಜನರು ಮೃತಪಟ್ಟು, 10 ಜನರು ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ. ಕುಲ್ಲು ಜಿಲ್ಲೆಯ ಬಂಜಾರ್ ಉಪ ವಿಭಾಗದ ಘಿಯಾಘಿ ಬಳಿಯಲ್ಲಿ ಟೆಂಪೋ ಟ್ರಾವೆಲ್ಲರ್ ಕಮರಿಗೆ ಬಿದ್ದು ಈ ಅಪಘಾತ ಸಂಭವಿಸಿದೆ.
ಗಾಯಾಳುಗಳನ್ನು ಸಮೀಪದ ಬಂಜಾರ್ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಅವರನ್ನು ಕುಲ್ಲು ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತು. ಗಾಯಗೊಂಡವರ ಪೈಕಿ ಹೆಚ್ಚಿನವರು ರಾಜಸ್ಥಾನ, ಮಧ್ಯಪ್ರದೇಶ, ಹರ್ಯಾಣ ಮತ್ತು ದಿಲ್ಲಿ ರಾಜ್ಯಗಳಿಗೆ ಸೇರಿದವರಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರನ್ನು ಹಾಗೂ ಗಾಯಾಳುಗಳ್ನು ಗುರುತಿಸಲಾಗಿದ್ದು, ಸಂಬಂಧಿಕರಿಗೆ ವಿಷಯ ಮುಟ್ಟಿಸಲಾಗಿದೆ ಎಂದು ಬಿಜೆಪಿ ಎಂಎಲ್ಎ ಶೌರಿ ಅವರು ತಿಳಿಸಿದ್ದಾರೆ. ಇದೇ ವೇಳೆ, ಅಪಘಾತ ಸಂಭವಿಸುತ್ತಿದ್ದಂತೆ ಗಾಯಾಳುಗಳ ರಕ್ಷಣಾ ಕಾರ್ಯಾಚರಣೆಯನ್ನು ಜಿಲ್ಲಾಡಳಿತವು ತ್ವರಿತವಾಗಿ ಕೈಗೊಂಡಿತು. ಜತೆಗೆ ಸ್ಥಳೀಯರು ನೆರವು ನೀಡಿದ್ದಾರೆ. ಅವರೆಲ್ಲರಿಗೂ ಅಭಿನಂದನೆ ತಿಳಿಸುವ ಎಂದು ಹೇಳಿದ್ದಾರೆ.
ಇದನ್ನೂ ಓದಿ | ಕ್ಯಾಂಟರ್-ಸ್ಕೂಟರ್ ಅಪಘಾತದಲ್ಲಿ ತಂದೆ-ಮಗ ಮೃತ್ಯು, ತುಂಬಿದ ಕೆರೆಗೆ ನುಗ್ಗಿದ ಬಸ್, ಪ್ರಯಾಣಿಕರು ಪಾರು