ಕಾನ್ಪುರ: ಅಪ್ರಾಪ್ತನೋರ್ವ ಪುಣೆಯಲ್ಲಿ ಕಾರು ಚಲಾಯಿಸಿ ಇಬ್ಬರು ಟೆಕ್ಕಿಗಳನ್ನು ಬಲಿ ಪಡೆದ ಪ್ರಕರಣ ಮಾಸುವ ಮುನ್ನವೇ ಕಾನ್ಪುರ(Kanpur)ದಲ್ಲೂ ಇಂತಹದ್ದೇ ಒಂದು ಘಟನೆ ವರದಿಯಾಗಿದೆ. 17ವರ್ಷದ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದು(Accident), ಮಹಿಳೆ ಸಾವನ್ನಪ್ಪಿದ್ದಾಳೆ. ಸ್ಕೂಟರ್‌ನಲ್ಲಿದ್ದ ಮಹಿಳೆಯ ಮಗಳಿಗೆ ಗಂಭೀರ ಗಾಯಗಳಾಗಿವೆ. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣ(Social Media)ದಲ್ಲಿ ವೈರಲ್(Viral Video) ಆಗಿದೆ.
ಉತ್ತರ ಪ್ರದೇಶದ ಕಾನ್ಪುರದ ಜನನಿಬಿಡ ರಸ್ತೆಯಲ್ಲಿ 17 ವರ್ಷದ ಬಾಲಕ ಕಾರನ್ನು ಓಡಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ವಾಹನದ ಮೇಲೆ ಚಾಲಕನ ನಿಯಂತ್ರಣ ತಪ್ಪಿದ ನಂತರ ವೇಗವಾಗಿ ಬಂದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಆಗ ಸ್ಕೂಟರ್‌ನಲ್ಲಿದ್ದ ಮಹಿಳೆ ಮತ್ತು ಮಗಳು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ತಕ್ಷಣ ಸ್ಥಳೀಯರು ಧಾವಿಸಿ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದರು.
ಇನ್ನು ಚಿಕಿತ್ಸೆ ವೇಳೆ ಮಹಿಳೆ ಸಾವನ್ನಪ್ಪಿದ್ದಾಳೆ. ಆಕೆಯ ಮಗಳು ಬಹು ಮೂಳೆ ಮುರಿತಕ್ಕೆ ಒಳಗಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
कानपुर में कार सवार नाबालिग स्टंटबाज ने स्कूटी को मारी टक्कर, महिला की मौके पर मौत बेटी गंभीर रूप से कोई घाय, किदवई नगर थाना क्षेत्र की घटना का सीसीटीवी वीडियो आया सामने।@dcpskanpur @kanpurnagarpol #Kanpur pic.twitter.com/Tr0PoOTluT
— Shyam Tiwari (@Shyamtiwariknp) August 3, 2024
ಇಂತಹದ್ದೇ ಘಟನೆ ಪುಣೆಯಲ್ಲೂ ನಡೆದಿತ್ತು.ಮೇ 19ರಂದು ಪುಣೆಯಲ್ಲಿ ಅಪಘಾತ ಸಂಭವಿಸಿದೆ. ಕಲ್ಯಾಣಿ ನಗರದಲ್ಲಿ ಕುಡಿದು ವೇಗವಾಗಿ ಕಾರು ಚಲಾಯಿಸಿದ ಕಾರಣ ಮಧ್ಯಪ್ರದೇಶದ ಅಶ್ವಿನಿ ಕೋಷ್ಟ ಹಾಗೂ ಅನೀಶ್ ಅವಾಧಿಯಾ ಎಂಬ ಇಬ್ಬರು ಟೆಕ್ಕಿಗಳು ಮೃತಪಟ್ಟಿದ್ದಾರೆ. ವಿಶಾಲ್ ಅಗರ್ವಾಲ್ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದು, ಅವರು ಪ್ರಭಾವ ಬೀರಲು ಯತ್ನಿಸಿದ್ದರು. ಅಪಘಾತಕ್ಕೆ ಕಾರಣವಾದ 17 ವರ್ಷದ ಬಾಲಕನಿಗೆ ಪೊಲೀಸ್ ಠಾಣೆಯಲ್ಲಿ ಪಿಜ್ಜಾ ಕೂಡ ಪೂರೈಸಲಾಗಿತ್ತು ಎಂದು ವರದಿಗಳು ತಿಳಿಸಿವೆ. ಶ್ರೀಮಂತ ಕುಟುಂಬದ 17 ವರ್ಷದ ಬಾಲಕನಿಗೆ ಆತನ ತಾತನು ಹುಟ್ಟುಹಬ್ಬದ ಉಡುಗೊರೆಯಾಗಿ ಪೋರ್ಶೆ ಟೇಕ್ಯಾನ್ (ಸುಮಾರು 2 ಕೋಟಿ ರೂ.) ಕಾರು ಉಡುಗೊರೆಯಾಗಿ ನೀಡಿದ್ದರು ಎನ್ನಲಾಗಿದೆ.
ಅಪಘಾತದ ಒಂದು ತಿಂಗಳ ನಂತರ, ನ್ಯಾಯಮೂರ್ತಿಗಳಾದ ಭಾರತಿ ಡಾಂಗ್ರೆ ಮತ್ತು ಮಂಜುಷಾ ದೇಶಪಾಂಡೆ ಅವರ ನ್ಯಾಯಪೀಠವು ಬಾಲಾಪರಾಧಿ ನ್ಯಾಯ ಮಂಡಳಿಯ ನಿರ್ಧಾರ ಸರಿಯಲ್ಲ ಎಂದಿದೆ. ಅಪಘಾತವು ದುರದೃಷ್ಟಕರವಾಗಿದ್ದರೂ, ಅಪ್ರಾಪ್ತ ವಯಸ್ಸಿನ ಬಾಲಕನನ್ನು ವೀಕ್ಷಣಾ ಗೃಹದಲ್ಲಿ ಇರಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಹದಿಹರೆಯದವನನ್ನು ಬಿಡುಗಡೆ ಮಾಡುವಂತೆ ನ್ಯಾಯಾಲಯವು ಬಾಲಾಪರಾಧಿ ನ್ಯಾಯ ಮಂಡಳಿಗೆ ಆದೇಶಿಸಿತ್ತು.