ನವದೆಹಲಿ: 200 ಕೋಟಿ ರೂ. ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಅವರಿಗೆ ದೆಹಲಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಹಾಗಾಗಿ, ಪ್ರಕರಣದಲ್ಲಿ ರಕ್ಕಮ್ಮಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ಈಗಾಗಲೇ ಚಾರ್ಜ್‌ಶೀಟ್ ಸಲ್ಲಿಕೆಯಾಗಿದ್ದು, ಹಣದ ಅಕ್ರಮ ವರ್ಗಾವಣೆ ಪ್ರಕರಣದ ಕುರಿತು ತನಿಖೆಯೂ ಮುಕ್ತಾಯಗೊಂಡಿದೆ. ಹಾಗಾಗಿ, ಜಾಮೀನು ಮಂಜೂರು ಮಾಡಬೇಕು ಎಂದು ನಟಿ ಪರ ವಕೀಲರು ಕೋರ್ಟ್‌ಗೆ ಮನವಿ ಮಾಡಿದ್ದರು. ಅದರಂತೆ, ನ್ಯಾಯಾಲಯವು ಜಾಮೀನು ನೀಡಿದೆ.
ಪ್ರಕರಣದಲ್ಲಿ ಸೆಪ್ಟೆಂಬರ್ 26ರಂದು ದೆಹಲಿ ನ್ಯಾಯಾಲಯವು ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಹಾಗೆಯೇ, ಅದನ್ನು ನವೆಂಬರ್ 15ರವರೆಗೆ ವಿಸ್ತರಣೆ ಮಾಡಿತ್ತು. ಈಗ ಜಾಮೀನು ಮಂಜೂರು ಮಾಡಲಾಗಿದೆ. ವಂಚಕ ಸುಕೇಶ್ ಚಂದ್ರಶೇಖರ್ ಸುಮಾರು 200 ಕೋಟಿ ರೂ. ವಂಚಿಸಿದ ಪ್ರಕರಣ ಇದಾಗಿದ್ದು, ಸುಕೇಶ್‌ನಿಂದ ಜಾಕ್ವೆಲಿನ್ 10 ಕೋಟಿ ರೂ. ಬೆಲೆ ಬಾಳುವ ಉಡುಗೊರೆ ಪಡೆದಿದ್ದಾರೆ ಎಂಬ ಆರೋಪವಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಹಲವು ಬಾರಿ ನಟಿಯನ್ನು ವಿಚಾರಣೆ ನಡೆಸಿದ್ದಾರೆ.
ಇದನ್ನೂ ಓದಿ | Jacqueline Boyfriend | ದಿಲ್ಲಿ ಸಚಿವ ಜೈನ್‌ಗೆ ಜಾಕ್ವೆಲಿನ್ ಬಾಯ್‌ಫ್ರೆಂಡ್‌ನಿಂದ 10 ಕೋಟಿ ರೂ. ಪ್ರೊಟೆಕ್ಷನ್ ಮನಿ!