Site icon Vistara News

Adesh Gupta Quits | ಎಂಸಿಡಿ ಸೋಲು, ದಿಲ್ಲಿ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಆದೇಶ್ ಗುಪ್ತಾ ರಾಜೀನಾಮೆ

Adesh Gupta @ Delhi BJP

ನವದೆಹಲಿ: ಮುನ್ಸಿಪಲ್ ಕಾರ್ಪೊರೇಷನ್ ಆಫ್ ದಿಲ್ಲಿ(MCD) ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡು, ಆಮ್ ಆದ್ಮಿ ಪಾರ್ಟಿ(AAP) ಗೆಲುವು ಸಾಧಿಸಿತ್ತು. ಬಿಜೆಪಿಯ ಈ ಸೋಲಿನ ಅಡ್ಡ ಪರಿಣಾಮಗಳು ಗೋಚರಿಸುತ್ತಿದ್ದು, ದಿಲ್ಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ (Adesh Gupta Quits) ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿಯ ಉನ್ನತ ನಾಯಕತ್ವವು ಈ ರಾಜೀನಾಮೆಯನ್ನು ಅಂಗೀಕರಿಸಿದೆ ಎಂದು ತಿಳಿದು ಬಂದಿದೆ.

ದಿಲ್ಲಿ ಬಿಜೆಪಿ ಘಟಕದ ಉಪಾಧ್ಯಕ್ಷರಾಗಿದ್ದ ವೀರೇಂದ್ರ ಸಚ್‌ದೇವ್ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ಬಿಜೆಪಿ ವರಿಷ್ಠರು ನೇಮಕ ಮಾಡಿದ್ದಾರೆಂದು ತಿಳಿದು ಬಂದಿದೆ. ಕಾಯಂ ಅಧ್ಯಕ್ಷರನ್ನು ನೇಮಕ ಮಾಡುವವರೆಗೂ ಈಗಿರುವ ವ್ಯವಸ್ಥೆಯು ಮುಂದುವರಿಯಲಿದೆ. ಆದೇಶ್ ಗುಪ್ತಾ ಅವರು ಈ ಹಿಂದೆ ಅಸ್ತಿತ್ವದಲ್ಲಿದ್ದ ನಾರ್ಥ್ ದಿಲ್ಲಿ ಕಾರ್ಪೊರೇಷನ್ ಮೇಯರ್ ಕೂಡ ಆಗಿದ್ದರು.

ದಿಲ್ಲಿ ಕಾರ್ಪೊರೇಷನ್‌ನಲ್ಲಿ ಕಳೆದ 15 ವರ್ಷಗಳಿಂದಲೂ ಬಿಜೆಪಿ ಅಧಿಕಾರದಲ್ಲಿತ್ತು. ಆದರೆ, ಇತ್ತೀಚೆಗೆ ನಡೆದ ಎಲೆಕ್ಷನ್‌ನಲ್ಲಿ ಬಿಜೆಪಿಯನ್ನು ಸೋಲಿಸಿ ಆಪ್ ಅಧಿಕಾರದ ಗದ್ದುಗೆಯನ್ನು ಹಿಡಿದಿದೆ. 250 ವಾರ್ಡ್‌ಗಳ ಪೈಕಿ 134 ವಾರ್ಡ್‌ಗಳಲ್ಲಿ ಆಪ್ ಗೆಲುವು ಸಾಧಿಸಿದರೆ, ಬಿಜೆಪಿ 104 ವಾರ್ಡ್‌ಗಳಲ್ಲಿ ಗೆದ್ದಿದೆ.

ಇದನ್ನೂ ಓದಿ | MCD Exit Poll | ದಿಲ್ಲಿಯಲ್ಲಿ ಬಿಜೆಪಿಗೆ ಮುಖಭಂಗ, ಆಪ್‌ಗೆ ಭರ್ಜರಿ ಜಯ!

Exit mobile version