Site icon Vistara News

One Natiion One Election : ಅಮಿತ್​ ಶಾ ಇರುವ ಸಮಿತಿಯ ಸದಸ್ಯನಾಗಲಾರೆ ಎಂದ ಕಾಂಗ್ರೆಸ್​ ನಾಯಕ ಅಧೀರ್ ರಂಜನ್

Adhir Ranjan

ನವದೆಹಲಿ: ಕೇಂದ್ರ ಕಾನೂನು ಆಯೋಗದ ಆದೇಶದಂತೆ ದೇಶದಲ್ಲಿ ಏಕಕಾಲದಲ್ಲಿ ಚುನಾವಣೆಗಳನ್ನು ಜಾರಿಗೆ ತರುವ ಅವಕಾಶಗಳನ್ನು ಶಿಫಾರಸು ಮಾಡುವ ಒನ್ ನೇಷನ್ ಒನ್ ಎಲೆಕ್ಷನ್ ಸಮಿತಿಯ ಸದಸ್ಯರಾಗಲು ಕಾಂಗ್ರೆಸ್ ಲೋಕಸಭಾ ನಾಯಕ ಅಧೀರ್ ರಂಜನ್ ಚೌಧರಿ ನಿರಾಕರಿಸಿದ್ದಾರೆ. ಎಂಟು ಸದಸ್ಯರ ಸಮಿತಿಗೆ ಶನಿವಾರ ಅಧಿಸೂಚನೆ ಹೊರಡಿಸಲಾಗಿದ್ದು, ಏಕಕಾಲದಲ್ಲಿ ಚುನಾವಣೆ ನಡೆದರೆ ಆಗುವ ಲಾಭ ಹಾಗೂ ಇನ್ನಿತರ ಅಂಶಗಳು ಸೇರಿದಂತೆ ಪ್ರತಿಯೊಂದು ವಿಷಯವನ್ನು ಪರಿಶೀಲಿಸುವ ಕಾರ್ಯವನ್ನು ಈ ಸಮಿತಿಗೆ ನೀಡಲಾಗಿತ್ತು. ಆದರೆ, ಈ ಸಮಿತಿಯಲ್ಲಿ ನಾನು ಇರುವುದಿಲ್ಲ ಎಂದು ಕಾಂಗ್ರೆಸ್​ ನಾಯಕ ಪ್ರತಿಕ್ರಿಯಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಅಧೀರ್ ರಂಜನ್ ಚೌಧರಿ, ಸಮಿತಿಯಲ್ಲಿ ಸೇವೆ ಸಲ್ಲಿಸಲು ನಿರಾಕರಿಸಲು ಯಾವುದೇ ಹಿಂಜರಿಕೆ ಇಲ್ಲ ಎಂದು ಹೇಳಿದ್ದಾರೆ. ಆದರೆ, ತೀರ್ಮಾನವನ್ನು ದೃಢೀಕರಿಸುವ ರೀತಿಯಲ್ಲಿ ನಿಯಮಗಳನ್ನು ಸಿದ್ಧಪಡಿಸಲಾಗಿದೆ ಎಂದು ಹೇಳಿದ್ದಾರೆ. ತೀರ್ಮಾನಗಳನ್ನು ಅನಿವಾರ್ಯವಾಗಿ ಒಪ್ಪುವ ರೀತಿಯಲ್ಲಿ ನಿಯಮಗಳನ್ನು ಸಿದ್ಧಪಡಿಸಿರುವ ಸಮಿತಿಯಲ್ಲಿ ಸೇವೆ ಸಲ್ಲಿಸಲು ನಿರಾಕರಿಸಲು ನನಗೆ ಯಾವುದೇ ಹಿಂಜರಿಕೆ ಇಲ್ಲ. ಇದು ಸಂಪೂರ್ಣ ಕಣ್ಣೊರೆಸುವ ತಂತರ ಎಂದು ನಾನು ಭಾವಿಸುತ್ತೇನೆ ಎಂದು ಅಧೀರ್ ಬರೆದಿದ್ದಾರೆ.

ಸಾರ್ವತ್ರಿಕ ಚುನಾವಣೆಗೆ ಕೆಲವು ತಿಂಗಳುಗಳ ಮೊದಲು, ಸಾಂವಿಧಾನಿಕವಾಗಿ ಅನುಮಾನಾಸ್ಪದ, ಪ್ರಾಯೋಗಿಕವಾಗಿ ಕಾರ್ಯಸಾಧ್ಯವಲ್ಲದ ಮತ್ತು ಕಾರ್ಯಗತಗೊಳಿಸಲು ಕಷ್ಟವಿರುವ ಕಲ್ಪನೆಯನ್ನು ರಾಷ್ಟ್ರದ ಮೇಲೆ ಹೇರುವ ಹಠಾತ್ ಪ್ರಯತ್ನವು ಸರ್ಕಾರದ ದುರುದ್ದೇಶ ಎಂದು ಅಧೀರ್ ಬರೆದಿದ್ದಾರೆ.

ಇದನ್ನೂ ಓದಿ: Parliament Session : ವಿಶೇಷ ಅಧಿವೇಶನಕ್ಕೆ ಗೆಜೆಟ್ ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ

ರಾಜ್ಯಸಭೆಯಲ್ಲಿ ಪ್ರಸ್ತುತ ಎಲ್ಒಪಿಯನ್ನು ಹೊರಗಿಡಲಾಗಿದೆ ಎಂದು ನಾನು ಕಂಡುಕೊಂಡಿದ್ದೇನೆ. ಇದು ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಗೆ ಉದ್ದೇಶಪೂರ್ವಕ ಅಪಮಾನ. ಈ ಪರಿಸ್ಥಿತಿಯಲ್ಲಿ, ನಿಮ್ಮ ಆಹ್ವಾನವನ್ನು ತಿರಸ್ಕರಿಸುವುದನ್ನು ಬಿಟ್ಟು ನನಗೆ ಬೇರೆ ಆಯ್ಕೆಯಿಲ್ಲ” ಎಂದು ಕಾಂಗ್ರೆಸ್ ನಾಯಕ ಬರೆದಿದ್ದಾರೆ.

ಯಾರೆಲ್ಲ ಇದ್ದಾರೆ ಸಮಿತಿಯಲ್ಲಿ?

ನವದೆಹಲಿ: ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಏಕಕಾಲದಲ್ಲಿ ಚುನಾವಣೆ ನಡೆಸುವ (One Nation One Election) ಪ್ರಸ್ತಾಪವನ್ನು ಪರಿಶೀಲಿಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಲು ಕಾನೂನು ಸಚಿವಾಲಯ ಶನಿವಾರ ಅಧಿಸೂಚನೆ ಹೊರಡಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ (Amith Sha), ಕಾಂಗ್ರೆಸ್ ಲೋಕಸಭಾ ನಾಯಕ ಅಧೀರ್ ರಂಜನ್ ಚೌಧರಿ, ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್, 15 ನೇ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎನ್.ಕೆ.ಸಿಂಗ್, ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಸುಭಾಷ್ ಕಶ್ಯಪ್, ಹಿರಿಯ ವಕೀಲ ಹರೀಶ್ ಸಾಳ್ವೆ, ಮಾಜಿ ಮುಖ್ಯ ವಿಚಕ್ಷಣಾ ಆಯುಕ್ತ ಸಂಜಯ್ ಕೊಠಾರಿ ಸಮಿತಿಯ ಸದಸ್ಯರಾಗಿದ್ದಾರೆ. ರಾಜ್ಯ ಸಚಿವ (ಕಾನೂನು) ಅರ್ಜುನ್ ರಾಮ್ ಮೇಘವಾಲ್ ಅವರು ಉನ್ನತ ಮಟ್ಟದ ಸಮಿತಿಯ ಸಭೆಗಳಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.

Exit mobile version