Site icon Vistara News

Anand Sharma Quits | ಗುಲಾಂ ನಬಿ ಆಜಾದ್ ಬೆನ್ನಲ್ಲೇ ಕಾಂಗ್ರೆಸ್‌ ಉನ್ನತ ಹುದ್ದೆಗೆ ಆನಂದ್‌ ಶರ್ಮಾ ರಾಜೀನಾಮೆ!

Anand Sharma

ಶಿಮ್ಲಾ: ಕಾಂಗ್ರೆಸ್‌ನ ಆಂತರಿಕ ಬಿಕ್ಕಟ್ಟು ಮುಗಿಯದ ಕತೆಯಾಗಿದೆ. ಒಂದೆಡೆ, ಪಕ್ಷದ ಅಧ್ಯಕ್ಷರಾಗಿ ಮತ್ತೆ ಅಧಿಕಾರ ವಹಿಸಿಕೊಳ್ಳಲು ರಾಹುಲ್‌ ಗಾಂಧಿ ಒಪ್ಪುತ್ತಿಲ್ಲ. ಹಾಗಾಗಿ, ಯಾರಿಗೆ ಪಟ್ಟ ಕಟ್ಟಬೇಕು ಎಂಬ ಪ್ರಶ್ನೆ ಉದ್ಭವವಾಗಿದೆ. ಇನ್ನು ಕೆಲ ದಿನಗಳ ಹಿಂದಷ್ಟೇ ಜಮ್ಮು-ಕಾಶ್ಮೀರ ಪ್ರಚಾರ ಸಮಿತಿ (Steering Committee) ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಾಯಕ ಗುಲಾಂ ನಬಿ ಆಜಾದ್‌ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಹಿಮಾಚಲ ಪ್ರದೇಶದ ಚಾಲನಾ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಆನಂದ್‌ ಶರ್ಮಾ ರಾಜೀನಾಮೆ (Anand Sharma Quits) ನೀಡಿದ್ದಾರೆ.

ಅದರಲ್ಲೂ, ವರ್ಷಾಂತದ ವೇಳೆಗೆ ಹಿಮಾಚಲ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಕಾರಣ ಆನಂದ್‌ ಶರ್ಮಾ ಅವರ ರಾಜೀನಾಮೆಯು ಪಕ್ಷಕ್ಕೆ ಉಂಟಾದ ಹಿನ್ನಡೆ ಎಂದೇ ವಿಶ್ಲೇಷಿಸಲಾಗುತ್ತಿದೆ. ವಿಧಾನಸಭೆ ಚುನಾವಣೆಗೆ ಕೆಲವು ತಿಂಗಳು ಇರುವಾಗಲೇ ನನ್ನನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ. ಆತ್ಮಗೌರವಕ್ಕೆ ಧಕ್ಕೆಯಾದ ಕಾರಣ ರಾಜೀನಾಮೆ ನೀಡುತ್ತಿದ್ದೇನೆ ಎಂಬುದಾಗಿ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.

ಆನಂದ್‌ ಶರ್ಮಾ ಅವರು ಹಿಮಾಚಲ ಪ್ರದೇಶದಲ್ಲಿ ಭಾರಿ ವರ್ಚಸ್ಸು ಹೊಂದಿರುವ ನಾಯಕರಾಗಿದ್ದಾರೆ. ಕೇಂದ್ರದ ಮಾಜಿ ಸಚಿವರಾಗಿ, ರಾಜ್ಯಸಭೆ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ. ಕಳೆದ ಏಪ್ರಿಲ್‌ ೨೬ರಂದು ಅವರನ್ನು ಚಾಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಗುಲಾಂ ನಬಿ ಆಜಾದ್‌ ಹಾಗೂ ಆನಂದ್‌ ಶರ್ಮಾ ಅವರು ಜಿ-೨೩ ಬಂಡಾಯ ಗುಂಪಿನ ಸದಸ್ಯರು ಎಂಬುದೂ ವಿಶೇಷವಾಗಿದೆ.

ಇದನ್ನೂ ಓದಿ | ಪ್ರಮುಖ ಹುದ್ದೆಗೆ ನೇಮಕವಾದ ಒಂದೇ ತಾಸಲ್ಲಿ ರಾಜೀನಾಮೆ ಕೊಟ್ಟ ಕಾಂಗ್ರೆಸ್​ ನಾಯಕ ಗುಲಾಂ ನಬಿ ಆಜಾದ್​

Exit mobile version