ಮುಂಬೈ: ಮಹಾರಾಷ್ಟ್ರದಲ್ಲಿ ಹೊಸ ವರ್ಷದ ಮೊದಲ ದಿನವೇ ಎರಡು (Nasik Solapur Fire) ಕಾರ್ಖಾನೆಗಳಲ್ಲಿ ಸ್ಫೋಟ ಹಾಗೂ ಅಗ್ನಿ ಅವಘಡ ಸಂಭವಿಸಿದ್ದು, ಒಟ್ಟು ಐವರು ಮೃತಪಟ್ಟಿದ್ದಾರೆ. ನಾಸಿಕ್‌ನ ಮುಂಡೇಗಾಂವ್‌ನಲ್ಲಿರುವ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡು ಇಬ್ಬರು ಮೃತಪಟ್ಟು, 17 ಜನ ಗಾಯಗೊಂಡಿದ್ದಾರೆ. ಇದಾದ ಕೆಲವೇ ಹೊತ್ತಿನಲ್ಲಿ ಸೋಲಾಪುರದ ಶಿರಳೆ ಗ್ರಾಮದಲ್ಲಿರುವ ಪಟಾಕಿ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ.
ನಾಸಿಕ್‌ನ ಕಾರ್ಖಾನೆಯಲ್ಲಿ ಭೀಕರವಾಗಿ ಸ್ಫೋಟ ಸಂಭವಿಸಿದೆ. ಇದಾದ ಕೂಡಲೇ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಯಿತು. ಭಾರತೀಯ ವಾಯುಪಡೆ ಹೆಲಿಕಾಪ್ಟರ್ ಬಳಸಿ ಜನರನ್ನು ರಕ್ಷಿಸಲಾಯಿತು. ದುರಂತದಲ್ಲಿ ಇಬ್ಬರು ಮೃತಪಟ್ಟರೆ, 17 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಮೃತರ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ
ನಾಸಿಕ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಹಾಗೆಯೇ, ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ತೆರಳಿದ ಶಿಂಧೆ, ಅವರ ಆರೋಗ್ಯ ವಿಚಾರಿಸಿದರು.
ಇದನ್ನೂ ಓದಿ | Bihar Fire Accident | ಛಾತ್ ಪೂಜೆ ಸಂಭ್ರಮ ಅಗ್ನಿ ದುರಂತದಲ್ಲಿ ಅಂತ್ಯ; ಪೊಲೀಸರೂ ಸೇರಿ 30 ಮಂದಿಗೆ ಗಾಯ