Site icon Vistara News

Kota Students: ಕೋಟಾದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ; ಹಾಸ್ಟೆಲ್‌ಗಳಲ್ಲಿ ಇನ್ನು ಬಲೆಯ ರಕ್ಷಣೆ!

Stop Suicide

BMS Student Commits Suicide In Hostel In Kalaburagi District

ಜೈಪುರ: ರಾಜಸ್ಥಾನದ ಕೋಟಾ ನಗರ ಎಂದರೆ ವಿದ್ಯೆಯ ಕಾಶಿ ಎನ್ನಲಾಗುತ್ತಿತ್ತು. ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET), ಜಂಟಿ ಪ್ರವೇಶ ಪರೀಕ್ಷೆ (JEE) ಸೇರಿ ಹಲವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರ‍್ಯಾಂಕ್‌ ಪಡೆದು, ವೈದ್ಯಕೀಯ, ಎಂಜಿನಿಯರಿಂಗ್‌ ಕೋರ್ಸ್‌ಗಳಿಗೆ ಪ್ರವೇಶ ಗಿಟ್ಟಿಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳುತ್ತಾರೆ ಎಂಬ ಮಾತಿತ್ತು. ಆದರೀಗ, ಕೋಟಾ ನಗರವು ವಿದ್ಯಾರ್ಥಿಗಳ ಆತ್ಮಹತ್ಯೆಯ (Kota Students) ರಾಜಧಾನಿಯಂತಾಗಿದೆ. ಇದಕ್ಕೆ ನಿದರ್ಶನ ಎಂಬಂತೆ ಭಾನುವಾರ (ಆಗಸ್ಟ್‌ 27) ನೀಟ್‌ ಅಭ್ಯರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮತ್ತೊಂದೆಡೆ, ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಗೆ ಕೋಚಿಂಗ್‌ ಸೆಂಟರ್‌ಗಳ ಹಾಸ್ಟೆಲ್‌ಗಳಲ್ಲಿ ಬಲೆಗಳನ್ನು ಅಳವಡಿಸಿಕೊಳ್ಳಲು ಮುಂದಾಗಿವೆ.

ಹೌದು, ಕೋಟಾದಲ್ಲಿರುವ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂದು ಸುತ್ತಲೂ ಬಲೆಗಳನ್ನು ಹಾಕಲಾಗಿದೆ. ಇತ್ತೀಚೆಗೆ ವಿದ್ಯಾರ್ಥಿಗಳು ಹಾಸ್ಟೆಲ್‌ ಮೇಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಕಾರಣ ಇಂತಹ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳು ಮೇಲಿನಿಂದ ಜಿಗಿದರೂ ಅವರ ಪ್ರಾಣಕ್ಕೆ ಯಾವುದೇ ಹಾನಿಯಾಗಬಾರದು ಎಂದು ಬಲೆಗಳನ್ನು ಅಳವಡಿಸಲಾಗುತ್ತಿದೆ.

ಫ್ಯಾನ್‌ಗಳಿಗೆ ಸ್ಪ್ರಿಂಗ್‌ಗಳ ಅಳವಡಿಕೆ

“ಹಾಸ್ಟೆಲ್‌ನ ಸುತ್ತಲೂ ಬಲೆಗಳನ್ನು ಅಳವಡಿಸಲಾಗಿದೆ. ವಿದ್ಯಾರ್ಥಿಗಳು ಯಾವುದೇ ಮಹಡಿಯಿಂದ ಜಿಗಿದರೂ ಅವರು ಬಲೆಯೊಳಗೆ ಬೀಳುತ್ತಾರೆ. ಬಲೆಗಳು ಗರಿಷ್ಠ 150 ಕೆ.ಜಿ ತೂಕದವರು ಬಿದ್ದರೂ ಹರಿಯುವುದಿಲ್ಲ. ಬಲೆಗಳ ಮೇಲೆ ಬಿದ್ದರೂ ವಿದ್ಯಾರ್ಥಿಗಳಿಗೆ ಗಾಯಗಳು ಕೂಡ ಆಗುವುದಿಲ್ಲ” ಎಂದು ಸುಮಾರು 200 ಕೋಣೆಗಳುಳ್ಳ, ಎಂಟು ಅಂತಸ್ತಿನ ಹಾಸ್ಟೆಲ್‌ ಒಡತಿಯಾಗಿರುವ ವಿಶಾಲಾಕ್ಷಿ ತಿಳಿಸಿದ್ದಾರೆ. ಹೀಗೆಯೇ ಹಲವು ಹಾಸ್ಟೆಲ್‌ಗಳಲ್ಲಿ ಬಲೆಗಳನ್ನು ಅಳವಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದಷ್ಟೇ ಹಾಸ್ಟೆಲ್‌ ಕೋಣೆಗಳ ಫ್ಯಾನ್‌ಗಳಿಗೆ ಸ್ಪ್ರಿಂಗ್‌ ಅಳವಡಿಸುವ ಮೂಲಕ ಆತ್ಮಹತ್ಯೆ ತಡೆಗೆ ಕ್ರಮ ತೆಗೆದುಕೊಳ್ಳಲಾಗಿತ್ತು.

ಇದನ್ನೂ ಓದಿ: Karnataka live news: Loan App torture : ಲೋನ್‌ ಆ್ಯಪ್ ಹಿಂಸೆಗೆ ತತ್ತರಿಸಿ ಎಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ

22 ವಿದ್ಯಾರ್ಥಿಗಳ ಆತ್ಮಹತ್ಯೆ

ನೀಟ್‌, ಜೆಇಇ ತೇರ್ಗಡೆಯಾಗದಿರುವುದು, ತೇರ್ಗಡೆಯಾಗದಿರುವ ಭಯ, ಹಲವು ಅನಗತ್ಯ ಒತ್ತಡಗಳಿಂದಾಗಿ ಇದೇ ವರ್ಷದಲ್ಲಿ ಇದುವರೆಗೆ 22 ವಿದ್ಯಾರ್ಥಿಗಳು ಕೋಟಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರಿಂದಾಗಿ ಕೋಚಿಂಗ್‌ ಸೆಂಟರ್‌ಗಳು, ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಮಾಲೀಕರು ಹಿಂಜರಿಯುವಂತಾಗಿದೆ. ಇನ್ನು ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರುವುದು ಶಿಕ್ಷಣ ವ್ಯವಸ್ಥೆಯ ಮೇಲೆಯೇ ದೂರುಗಳು ಕೇಳಿಬರುವಂತೆ ಮಾಡಿವೆ. ಪೋಷಕರು ಕೂಡ ಕೋಟಾಗೆ ಮಕ್ಕಳನ್ನು ಕಳುಹಿಸಲು ಹಿಂಜರಿಯುವಂತಾಗಿದೆ. ಅಂದಹಾಗೆ, 2022ರಲ್ಲ ಕೋಟಾದಲ್ಲಿ 15 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು.

Exit mobile version