ಬೆಂಗಳೂರು: ಹೆಚ್ಐವಿ ಹರಡುವುದನ್ನು ತಡೆಗಟ್ಟಲು ಮತ್ತು ಅದರ ಹರಡುವಿಕೆಯನ್ನು ನಿಯಂತ್ರಿಸಲು ಸ್ಥಾಪಿಸಲಾಗಿರುವ ಸೊಸೈಟಿಯಲ್ಲಿನ (AIDS Control Societies) ಗುತ್ತಿಗೆ ಆಧಾರಿತ ನೌಕರರ ವೇತನವನ್ನು ಕೇಂದ್ರ ಸರ್ಕಾರ ಶೇ.10 ರಷ್ಟು ಹೆಚ್ಚಿಸಿದೆ.
ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ (NACO) ಮತ್ತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಬೆಂಬಲದೊಂದಿಗೆ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸೊಸೈಟಿಗಳ ನೌಕರರಿಗೆ ಈ ಹೆಚ್ಚಳ ಕಳೆದ ಏಪ್ರಿಲ್‌ನಿಂದ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ.
ಜಿಲ್ಲಾ ಸೊಸೈಟಿಗಳಲ್ಲಿನ ಸಹಾಯಕರು, ಡಾಟಾ ಎಂಟ್ರಿ ಆಪರೇಟರ್, ಜೂನಿಯರ್ ಅಕೌಂಟೆಂಟ್‌ಗಳು ಇದರ ಲಾಭ ಪಡೆಯಲಿದ್ದಾರೆ. ಇದುವರೆಗೆ ಇವರು 17,780 ರೂ.ಗಳನ್ನು ವೇತನ ಪಡೆಯುತ್ತಿದ್ದರು. ಇದನ್ನು ಈಗ 18,000 ರೂ.ಗಳಿಗೆ ಹೆಚ್ಚಿಸಲಾಗಿದೆ. ಅಂದರೆ 220 ರೂ. ಹೆಚ್ಚಿದಂತಾಗಲಿದೆ.
ಹೆಚ್.ಐ.ವಿ ಸೋಂಕಿಗೆ ಸಂಬಂಧಿಸಿದ ಕಾಯಿಲೆ ಮತ್ತು ಮರಣ ಪ್ರಮಾಣವನ್ನು ಕಡಿಮೆ ಮಾಡಲು, ಸೋಂಕಿನಿಂದ ಉಂಟಾಗುವ ಸಾಮಾಜಿಕ ಮತ್ತು ಆರ್ಥಿಕ ಪರಣಾಮವನ್ನು ನಿಯಂತ್ರಿಸಲು. ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣದಲ್ಲಿ ತಾಂತ್ರಿಕ ನೆರವು ನೀಡಲು ಈ ಸೊಸೈಟಿಗಳನ್ನು ಸ್ಥಾಪಿಸಲಾಗಿದೆ.
ಇದನ್ನೂ ಓದಿ | ಪುಣ್ಯಕೋಟಿ ದತ್ತು ಯೋಜನೆಗೆ ಸರ್ಕಾರಿ ನೌಕರರ ಒಂದು ದಿನದ ವೇತನ ದೇಣಿಗೆ