Site icon Vistara News

OBC Reservation In UP | ಚುನಾವಣೆಯಲ್ಲಿ ಒಬಿಸಿ ಮೀಸಲಾತಿ ರದ್ದು, ಯೋಗಿ ಆದಿತ್ಯನಾಥ್‌ ಸರ್ಕಾರಕ್ಕೆ ಭಾರಿ ಹಿನ್ನಡೆ

Next Target Kashi and Mathura Masjid Says CM Yogi Adityanath

ಲಖನೌ: ವಿಧಾನಸಭೆ ಚುನಾವಣೆಗೆ ಮುನ್ನ ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿಯನ್ನು ಹೆಚ್ಚಿಸಿ ಕರ್ನಾಟಕ ಸರ್ಕಾರವು ಆದೇಶ ಹೊರಡಿಸಿರುವ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲಾತಿಗೆ (OBC Reservation In UP) ಸಂಬಂಧಿಸಿದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದೆ.

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ವೇಳೆ ಸ್ಪರ್ಧಿಸಲು ಒಬಿಸಿ ಅಭ್ಯರ್ಥಿಗಳಿಗೆ ಶೇ.27ರಷ್ಟು ಮೀಸಲಾತಿ ಕಲ್ಪಿಸಿ ಡಿಸೆಂಬರ್‌ 5ರಂದು ಯೋಗಿ ಆದಿತ್ಯನಾಥ್‌ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿತ್ತು. ಸುಪ್ರೀಂ ಕೋರ್ಟ್‌ನ ತ್ರಿವಳಿ ಸೂತ್ರ ಪಾಲಿಸದೆ ಮೀಸಲಾತಿ ಕಲ್ಪಿಸಲಾಗಿದೆ ಎಂದು ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಅಲಹಾಬಾದ್‌ ಹೈಕೋರ್ಟ್‌ನ ಲಖನೌ ಪೀಠವು ಒಬಿಸಿ ಮೀಸಲಾತಿಯ ಕರಡು ಅಧಿಸೂಚನೆಯನ್ನು ರದ್ದುಪಡಿಸಿದೆ. ಮೀಸಲಾತಿ ಇಲ್ಲದೆಯೇ ಚುನಾವಣೆ ನಡೆಸಲು ಆದೇಶಿಸಿದೆ. ಇದರಿಂದಾಗಿ ಯೋಗಿ ಸರ್ಕಾರಕ್ಕೆ ಹಿನ್ನಡೆಯಾದಂತಾಗಿದೆ.

ಮೂರು ಹಂತದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿದ್ದು, 545 ನಗರ ಪಂಚಾಯಿತಿಗಳ ಅಧ್ಯಕ್ಷರು, 200 ನಗರ ಪಾಲಿಕೆ ಸದಸ್ಯರು ಹಾಗೂ 17 ಮುನ್ಸಿಪಲ್‌ ಕಾರ್ಪೊರೇಷನ್‌ಗಳ ಮೇಯರ್‌ಗಳಿಗೆ ಯೋಗಿ ಸರ್ಕಾರ ಮೀಸಲಾತಿ ಘೋಷಿಸಿತ್ತು. ಆದರೆ, ಒಬಿಸಿಗಳ ರಾಜಕೀಯ ಹಿಂದುಳಿದಿರುವಿಕೆ ಕುರಿತು ಅಧ್ಯಯನ ಮಾಡಲು ಆಯೋಗ ರಚಿಸದೆ ಮೀಸಲಾತಿ ಘೋಷಿಸಲಾಗಿದೆ ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದರು.

ಮೀಸಲಾತಿ ಇಲ್ಲದೆ ಚುನಾವಣೆ ಇಲ್ಲ ಎಂದ ಯೋಗಿ
“ಒಬಿಸಿ ಮೀಸಲಾತಿ ನೀಡದೆಯೇ ಚುನಾವಣೆಯನ್ನೇ ನಡೆಸುವುದಿಲ್ಲ” ಎಂದು ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ. “ಸುಪ್ರೀಂ ಕೋರ್ಟ್‌ನ ಸೂತ್ರದಂತೆಯೇ ಆಯೋಗ ರಚಿಸಿ, ಅಧ್ಯಯನ ನಡೆಸಿದ ಬಳಿಕವೇ ಮೀಸಲಾತಿ ನೀಡಲಾಗುವುದು. ಹಾಗೊಂದು ವೇಳೆ, ಅನಿವಾರ್ಯ ಎಂತಾದರೆ, ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗುತ್ತದೆ. ಒಟ್ಟಿನಲ್ಲಿ ಮೀಸಲಾತಿ ಇಲ್ಲದೆ ಚುನಾವಣೆ ನಡೆಸುವುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿ | ‌SCST Reservation | ದಲಿತ ಮೀಸಲಾತಿ ಹೆಚ್ಚಿಸುವ ಮಸೂದೆಗೆ ವಿಧಾನಸಭೆ ಒಪ್ಪಿಗೆ: ಬಿಜೆಪಿಯೇ ಮೀಸಲಾತಿ ಪರ ಎಂದ ಸರ್ಕಾರ

Exit mobile version