ಪತಿ ಮಾಡಿದ್ದನ್ನೆಲ್ಲ ಹೆಂಡತಿ ಅನುಸರಿಸಲೇಬೇಕಾ?; ಪ್ರಣೀತ್​ ಕೌರ್ ಬಗ್ಗೆ ಕೇಳಿದ್ದಕ್ಕೆ ಕ್ಯಾಪ್ಟನ್​ ಸಿಡಿಮಿಡಿ - Vistara News

ದೇಶ

ಪತಿ ಮಾಡಿದ್ದನ್ನೆಲ್ಲ ಹೆಂಡತಿ ಅನುಸರಿಸಲೇಬೇಕಾ?; ಪ್ರಣೀತ್​ ಕೌರ್ ಬಗ್ಗೆ ಕೇಳಿದ್ದಕ್ಕೆ ಕ್ಯಾಪ್ಟನ್​ ಸಿಡಿಮಿಡಿ

ಕ್ಯಾಪ್ಟನ್​ ಅಮರಿಂದರ್​ ಸಿಂಗ್ ಬಿಜೆಪಿ ಸೇರಿದ್ದಕ್ಕೆ ಕಾಂಗ್ರೆಸ್​ ಬೇರೆಯದ್ದೇ ಆಯಾಮ ಕೊಟ್ಟಿದೆ. ಅವರ ಕುಟುಂಬದ ವಿರುದ್ಧ ಇರುವ ವಿವಿಧ ಕೇಸ್​​ಗಳಿಂದ ತಪ್ಪಿಸಿಕೊಳ್ಳಲು ಅವರು ಬಿಜೆಪಿಗೆ ಹೋಗಿದ್ದಾರೆ ಎನ್ನುತ್ತಿದ್ದಾರೆ.

VISTARANEWS.COM


on

Amarinder Singh reacts to Question Wife Not Joining BJP
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಕಾಂಗ್ರೆಸ್​​ ವಿರುದ್ಧ ಅಸಮಾಧಾನಗೊಂಡು, ಆ ಪಕ್ಷವನ್ನು ಬಿಟ್ಟು ಪಂಜಾಬ್​ ಲೋಕ್​ ಕಾಂಗ್ರೆಸ್​ ಪಕ್ಷ ಕಟ್ಟಿದ್ದ ಕ್ಯಾಪ್ಟನ್​ ಅಮರಿಂದರ್​ ಸಿಂಗ್​ ತಮ್ಮ ಪಿಎಲ್​​ಸಿ ಪಕ್ಷವನ್ನೀಗ ಬಿಜೆಪಿಯೊಂದಿಗೆ ವಿಲೀನಗೊಳಿಸಿದ್ದಾರೆ. ಹಾಗೇ, ತಮ್ಮ ಪುತ್ರ ರಣೀಂದರ್​ ಸಿಂಗ್​, ಪುತ್ರಿ ಜೈ ಇಂದರ್ ಕೌರ್​, ಮೊಮ್ಮಗ ನಿರ್ವಣ್​ ಸಿಂಗ್​ ಜತೆ ಬಿಜೆಪಿ ಸೇರ್ಪಡೆಯಾಗಿ, ಪ್ರಾಥಮಿಕ ಸದಸ್ಯತ್ವ ಪಡೆದಿದ್ದಾರೆ. ಇಷ್ಟಾದ ಬಳಿಕ ಅಮರಿಂದರ್​ ಸಿಂಗ್​​ಗೆ ಪ್ರಶ್ನೆಯೊಂದು ಎದುರಾಗಿದೆ. ‘ನೀವೆಲ್ಲರೂ ಬಿಜೆಪಿಗೆ ಬಂದರೂ ನಿಮ್ಮ ಪತ್ನಿ ಪ್ರಣೀತ್ ಕೌರ್​ ಕಾಂಗ್ರೆಸ್​ನಲ್ಲೇ ಉಳಿಯುತ್ತಾರಾ?’-ಈ ಪ್ರಶ್ನೆಯನ್ನು ಮಾಧ್ಯಮದವರು, ರಾಜಕೀಯ ವಲಯದಲ್ಲೇ ಹಲವರು ಅಮರಿಂದರ್ ಸಿಂಗ್​ಗೆ ಕೇಳಿದ್ದಾರೆ. ಇದಕ್ಕೆ ಅಮರಿಂದರ್​ ಸಿಂಗ್​ ತುಸು ಕಟುವಾಗಿಯೇ ಉತ್ತರ ನೀಡಿದ್ದು, ‘ಪತಿ ಏನೆಲ್ಲ ಮಾಡುತ್ತಾನೋ ಅದನ್ನು ಹೆಂಡತಿಯೂ ಅನುಸರಿಸಲೇಬೇಕೆಂಬ ನಿಯಮ ಎಲ್ಲಿಯೂ ಇಲ್ಲ’ ಎಂದಿದ್ದಾರೆ.

ಪ್ರಣೀತ್​ ಕೌರ್​​ ಸದ್ಯ ಪಟಿಯಾಲಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಸಂಸದೆ. ಇವರು 2009ರಿಂದ 2014ರವರೆಗೆ ಮನಮೋಹನ್​ ಸಿಂಗ್​ ಪ್ರಧಾನಮಂತ್ರಿಯಾಗಿದ್ದಾಗ ಕೇಂದ್ರದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಿರಿಯ ಸಚಿವರಾಗಿಯೂ ಕೆಲಸ ಮಾಡಿದ್ದಾರೆ. ಅಮರಿಂದರ್​ ಸಿಂಗ್​ ಕಾಂಗ್ರೆಸ್​ ಬಿಟ್ಟಾಗಿನಿಂದಲೂ ಅವರ ಪತ್ನಿ ಪ್ರಣೀತ್​ ಕೌರ್​ ಮೇಲೆ ಒಂದು ಕಣ್ಣು ನೆಟ್ಟಿದೆ. ಅವರು ಪಕ್ಷ ಬಿಡುತ್ತಾರಾ? ಪತಿಯ ದಾರಿಯನ್ನೇ ತುಳಿಯುತ್ತಾರಾ? ಎಂಬ ಕುತೂಹಲ ಇದ್ದೇಇದೆ. ಈಗ ಅಮರಿಂದರ್​ ಸಿಂಗ್​ ಕುಟುಂಬವೇ ಬಿಜೆಪಿ ಸೇರ್ಪಡೆಯಾದ ಮೇಲೆ ಅನುಮಾನ ಇನ್ನಷ್ಟು ಹೆಚ್ಚಾಗಿದೆ. ಹಾಗಂತ ಪ್ರಣೀತ್​ ಕೌರ್​ ಕಾಂಗ್ರೆಸ್​​ಗೆ ರಾಜೀನಾಮೆ ನೀಡುವ ಯಾವ ಮಾತನ್ನೂ ಆಡಿಲ್ಲ.

ಕಾಂಗ್ರೆಸ್​ ಬಿಟ್ಟು ಅದರ ರಾಜಕೀಯ ಸ್ಪರ್ಧಿ ಬಿಜೆಪಿ ಸೇರಿದ ಕ್ಯಾಪ್ಟನ್​ ಅಮರಿಂದರ್ ಸಿಂಗ್​ರನ್ನು ಇತ್ತೀಚೆಗೆ ಕಾಂಗ್ರೆಸ್​ ಹಿರಿಯ ನಾಯಕಿ ಮಾರ್ಗರೆಟ್ ಆಳ್ವಾ ಟೀಕಿಸಿದ್ದರು. ಕ್ಯಾಪ್ಟನ್​​ಗಿಂತ ಅವರ ಪತ್ರನಿ ಕೌರ್​ ತುಂಬ ಸಂವೇದನೆ ಇರುವ ವ್ಯಕ್ತಿ ಎಂದು ಹೇಳಿದ್ದರು. ಮೊದಲು ಶಿರೋಮಣಿ ಅಕಾಲಿ ದಳದಲ್ಲಿದ್ದ ಅಮರಿಂದರ್​ ಸಿಂಗ್​ 1998ರಲ್ಲಿ ಕಾಂಗ್ರೆಸ್ ಸೇರಿದರು. ಅವರಿಗೆ ಪಂಜಾಬ್​ ಸಿಎಂ ಪಟ್ಟವೂ ದೊರೆಯಿತು. ಅದಾದ ಮೇಲೆ ಅಲ್ಲಿನ ಕಾಂಗ್ರೆಸ್​ ಅಧ್ಯಕ್ಷ ನವಜೋತ್​ ಸಿಂಗ್​ ಸಿಧುವಿನೊಂದಿಗಿನ ಮನಸ್ತಾಪ ದೊಡ್ಡದಾಗಿ ಇವರು ಕಾಂಗ್ರೆಸ್​ನ್ನೇ ತೊರೆದರು.

ಇವರ ಬಿಜೆಪಿ ಸೇರ್ಪಡೆಗೆ ಕಾಂಗ್ರೆಸ್ಸಿಗರು ಬೇರೆಯದ್ದೇ ಆಯಾಮ ಕೊಟ್ಟಿದ್ದಾರೆ. ಅಮರಿಂದರ್​ ಸಿಂಗ್​ ಮತ್ತು ಅವರ ಕುಟುಂಬದ ವಿರುದ್ಧ ವಿವಿಧ ಕೇಸ್​ಗಳು ಇವೆ. ಬಿಜೆಪಿ ಸೇರಿದರೆ ಅವುಗಳಿಂದ ಪಾರಾಗಬಹುದು. ಎಲ್ಲ ಪಾಪಗಳಿಂದಲೂ ಮುಕ್ತರಾಗಬಹುದು ಎಂಬ ಒಂದೇ ಕಾರಣಕ್ಕೆ ಕುಟುಂಬ ಸಮೇತ ಅವರು ಬಿಜೆಪಿ ಸೇರಿದ್ದಾರೆ ಎಂದು ಕಾಂಗ್ರೆಸ್​ ನಾಯಕರು ಟೀಕಿಸಿದ್ದಾರೆ.

ಇದನ್ನೂ ಓದಿ: Amarinder Singh | ವಿಲೀನ ಅಮರಿಂದರ್‌ ಸಿಂಗ್‌ಗೆ ಅಸ್ತ್ರ, ಬಿಜೆಪಿಗೆ ಬ್ರಹ್ಮಾಸ್ತ್ರ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Ayushman Bharat Diwas: ಇಂದು ಆಯುಷ್ಮಾನ್ ಭಾರತ್ ದಿನ; ಏನಿದರ ಮಹತ್ವ?

Ayushman Bharat Diwas: ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ ಗುರಿಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಪ್ರತಿ ವರ್ಷ ಏಪ್ರಿಲ್ 30 ರಂದು ಭಾರತವು ಆಯುಷ್ಮಾನ್ ಭಾರತ್ ದಿನವನ್ನು ಆಚರಿಸುತ್ತದೆ. ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆ (PMJAY) ಎಂದೂ ಕರೆಯಲ್ಪಡುವ ಈ ಯೋಜನೆಯಿಂದ ಭಾರತ ಸರ್ಕಾರವು ಸುಮಾರು 50 ಕೋಟಿ ಆರ್ಥಿಕವಾಗಿ ಹಿಂದುಳಿದ ಜನರಿಗೆ ಅಗ್ಗದ ಮತ್ತು ಸುಲಭವಾದ ಆರೋಗ್ಯ ಸೇವೆಯನ್ನು ನೀಡುತ್ತಿದೆ.

VISTARANEWS.COM


on

By

Ayushman Bharat Diwas
Koo

ಕೋಟ್ಯಂತರ ಭಾರತೀಯರಿಗೆ(indians) ಉಚಿತ ಆರೋಗ್ಯ ಸೇವೆ (free health service) ಒದಗಿಸುವ ಉದ್ದೇಶದಿಂದ ಜಾರಿಗೊಳಿಸಿರುವ ಆಯುಷ್ಮಾನ್ ಭಾರತ್ ಯೋಜನೆಯ (Ayushman Bharat Yojana) ಕುರಿತು ಜನರಲ್ಲಿ ಅರಿವು ಮೂಡಿಸಲು ಪ್ರತಿ ವರ್ಷ ಏಪ್ರಿಲ್ ಕೊನೆಯ ದಿನವಾದ ಏಪ್ರಿಲ್ 30ರಂದು ಆಯುಷ್ಮಾನ್ ಭಾರತ್ ದಿನವನ್ನು (Ayushman Bharat Diwas) ಆಚರಿಸಲಾಗುತ್ತದೆ.

ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆ ಮತ್ತು ಅದರ ಗುರಿ ಏನು ಎಂಬುದರ ಕುರಿತು ಜನರಿಗೆ ತಿಳಿಸಲು ಈ ದಿನ ಆಚರಣೆ ನಡೆಸಲು ಕರೆ ನೀಡಿದೆ. ಈ ಯೋಜನೆಯೊಂದಿಗೆ ಭಾರತ ಸರ್ಕಾರವು ಪ್ರತಿಯೊಬ್ಬರೂ ಸರ್ಕಾರದಿಂದ ನಿಭಾಯಿಸಲ್ಪಡುವ ಉತ್ತಮ ಆರೋಗ್ಯವನ್ನು ಪಡೆಯಬಹುದೆಂದು ಖಚಿತಪಡಿಸಿಕೊಳ್ಳಲು ಬಯಸುತ್ತದೆ.

ಬಡವರಿಗೆ ಆರೋಗ್ಯ ರಕ್ಷಣೆ ಒದಗಿಸಲು ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯನ್ನು ಜಾರಿ ಮಾಡಿದ್ದು ಈ ಮೂಲಕ ಸರ್ಕಾರಿ ಆಸ್ಪತ್ರೆ ಮತ್ತು ಚಿಕಿತ್ಸಾಲಯಗಳಲ್ಲಿ ಉಚಿತ ವೈದ್ಯಕೀಯ ಚಿಕಿತ್ಸೆ ನೀಡಲಾಗುವುದು. ಈ ಯೋಜನೆಯು ಲಕ್ಷಾಂತರ ನಾಗರಿಕರಿಗೆ ಗುಣಮಟ್ಟದ ವೈದ್ಯಕೀಯ ಆರೈಕೆಯನ್ನು ಉಚಿತವಾಗಿ ಹೆಚ್ಚು ಸುಲಭವಾಗಿ ಸಿಗುವಂತೆ ಮಾಡುವ ಗುರಿಯನ್ನು ಹೊಂದಿದೆ.

ಇದನ್ನೂ ಓದಿ:  Ayushman Bharat Yojana: ಆಪತ್ಕಾಲದಲ್ಲಿ ಆಯುಷ್ಮಾನ್‌ ಭಾರತ್‌ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?


ಇದು ಜಾರಿಯಾಗಿದ್ದು ಯಾವಾಗ?

ಆಯುಷ್ಮಾನ್ ಭಾರತ್ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು 2018ರಲ್ಲಿ ಘೋಷಿಸಿದರು. ಇದು ಎರಡು ಮುಖ್ಯ ಸ್ತಂಭಗಳನ್ನು ಹೊಂದಿದೆ.

1. ಆಯುಷ್ಮಾನ್ ಭಾರತ್ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳು (AB-HWCs)
ಆಯುಷ್ಮಾನ್ ಭಾರತ್ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳು ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಜನರ ಮನೆಗಳಿಗೆ ಹತ್ತಿರ ತರುವ ಗುರಿಯನ್ನು ಹೊಂದಿವೆ.

2. ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (PM-JAY)
ಇದು ಆರೋಗ್ಯ ವಿಮಾ ಯೋಜನೆಯಾಗಿದ್ದು, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ವರ್ಷಕ್ಕೆ 5 ಲಕ್ಷ ರೂ. ವರೆಗೆ ನಗದು ರಹಿತ ಮತ್ತು ಕೈಗೆಟುಕುವ ವೈದ್ಯಕೀಯ ರಕ್ಷಣೆಯನ್ನು ನೀಡುವ ಉದ್ದೇಶ ಹೊಂದಿದೆ.


ಆಯುಷ್ಮಾನ್ ಭಾರತ್ ದಿವಸ್‌ನ ಮಹತ್ವ

ಆಯುಷ್ಮಾನ್ ಭಾರತ್ ದಿವಸ್ ಹಲವಾರು ಉದ್ದೇಶಗಳನ್ನು ಹೊಂದಿದೆ. ಅವುಗಳಲ್ಲಿ ಮುಖ್ಯವಾಗಿ:
1. ಆಯುಷ್ಮಾನ್ ಭಾರತ್ ಯೋಜನೆಯ ಗುರಿ ಮತ್ತು ಅದರ ಪ್ರಯೋಜನಗಳ ಬಗ್ಗೆ ಜನರಿಗೆ ತಿಳಿಸಲು ಆಯುಷ್ಮಾನ್ ಭಾರತ್ ದಿವಸ್ ಅನ್ನು ಆಚರಿಸಲಾಗುತ್ತದೆ.
2. ಆಯುಷ್ಮಾನ್ ಭಾರತ್ ಯೋಜನೆಯು ಭಾರತ ಸರ್ಕಾರವು ಮಾಡಿದ ದೊಡ್ಡ ಆರೋಗ್ಯ ಯೋಜನೆಯಾಗಿದೆ. ಈ ಯೋಜನೆಯು ಭಾರತದಲ್ಲಿ 10 ಕೋಟಿಗೂ ಹೆಚ್ಚು ಬಡ ಮತ್ತು ದುರ್ಬಲ ಕುಟುಂಬಗಳಿಗೆ ಆರ್ಥಿಕ ರಕ್ಷಣೆ ನೀಡುವ ಗುರಿಯನ್ನು ಹೊಂದಿದೆ.
3. ಅರ್ಹ ಕುಟುಂಬಗಳು ದೇಶಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ವರ್ಷಕ್ಕೆ 5 ಲಕ್ಷ ರೂ.ವರೆಗೆ ವೈದ್ಯಕೀಯ ಸೇವೆಗಳನ್ನು ಪಡೆಯಬಹುದು.
4. ಸರ್ಕಾರವು ಆಯುಷ್ಮಾನ್ ಮಿತ್ರ ಎಂಬ ಹೊಸ ಉದ್ಯೋಗವನ್ನು ಆರೋಗ್ಯ ಕ್ಷೇತ್ರದಲ್ಲಿ ಸೃಷ್ಟಿಸಿದೆ. ಇದಕ್ಕಾಗಿ ಸಾಕಷ್ಟು ಯುವಕರನ್ನು ನೇಮಿಸಿಕೊಳ್ಳಲಾಗಿದೆ.
5. ಆಯುಷ್ಮಾನ್ ಭಾರತ್ ಯೋಜನೆಯಡಿ ಯುವಜನರಿಗೆ ಉದ್ಯೋಗ ನೀಡಲು ಆಯುಷ್ಮಾನ್ ಮಿತ್ರರನ್ನು ಆಸ್ಪತ್ರೆಗಳು ನೇಮಿಸಿಕೊಂಡಿವೆ.
6. ಆಯುಷ್ಮಾನ್ ಭಾರತ್ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಉತ್ತಮ ಆರೋಗ್ಯ ವಿಮಾ ಯೋಜನೆಯ ಅಗತ್ಯವಿದೆ.

Continue Reading

ಅಂಕಣ

ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

ರಾಜಮಾರ್ಗ ಅಂಕಣ: ಕುರುಡರಾಗಿ ಹುಟ್ಟಿದ ಕಾರಣಕ್ಕೆ ನೋವು, ತಿರಸ್ಕಾರ ಅನುಭವಿಸುತ್ತಿದ್ದ ಶ್ರೀಕಾಂತ್‌ ಬೊಳ್ಳಾ ಹಿಡಿದ ಛಲದ ಹಾದಿ ಇಂದು ಅವರನ್ನು ದೊಡ್ಡ ಕಂಪನಿಗಳ ಮಾಲಿಕರಾಗುವತ್ತ, ನೂರಾರು ದಿವ್ಯಾಂಗರಿಗೆ ಕೆಲಸ ನೀಡುವವರೆಗೆ ಮುನ್ನಡೆಸಿದೆ. ನಾವೆಲ್ಲರೂ ಓದಿ ರೋಮಾಂಚಿತರಾಗಬಹುದಾದ ಸ್ಫೂರ್ತಿ ಕಥೆಯಿದು.

VISTARANEWS.COM


on

rajamarga column srikant bolla
Koo

ಕಣ್ಣಿಲ್ಲ ಎಂಬ ಕಾರಣಕ್ಕೆ ಐಐಟಿ ರಿಜೆಕ್ಟ್ ಆಗಿದ್ದ ಯುವಕನು ಕೋಟಿ ಕೋಟಿ ಸಂಪಾದನೆ ಮಾಡಿದ್ದು ಹೇಗೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಮೂರು ವರ್ಷಗಳ ಹಿಂದೆ ಇವರನ್ನು ಬೆಂಗಳೂರಿನ ಒಂದು ಬಿಸಿನೆಸ್ ಸಮ್ಮೇಳನದ ವೇದಿಕೆಯಲ್ಲಿ ಭೇಟಿಯಾಗಿದ್ದೆ. ಅವರ ಹೋರಾಟದ ಕಥೆಯನ್ನು ಅವರ ಮಾತಲ್ಲೇ ಕೇಳಿ ರೋಮಾಂಚನವಾಗಿತ್ತು.

ಶ್ರೀಕಾಂತ್ ಬೊಳ್ಳ ಅವರ ಹೋರಾಟದ ಅದ್ಭುತವಾದ ಕಥೆಯನ್ನು ಅವರದ್ದೇ ಮಾತುಗಳಲ್ಲಿ ಕೇಳೋಣ.

ನಾನು ಹುಟ್ಟಿದ್ದು ಆಂಧ್ರಪ್ರದೇಶದ ಮಚಲಿ ಪಟ್ಟಣದ ಒಂದು ಪುಟ್ಟ ಗ್ರಾಮದಲ್ಲಿ (1992). ನನ್ನ ಹುಟ್ಟು ಕುರುಡುತನ ನನ್ನ ಕೃಷಿಕ ಕುಟುಂಬಕ್ಕೆ ದೊಡ್ಡ ಸವಾಲು ಆಗಿತ್ತು. ನಮ್ಮ ಕುಟುಂಬದ ವಾರ್ಷಿಕ ಆದಾಯ 20,000 ರೂಪಾಯಿಗಿಂತ ಕಡಮೆ ಇದ್ದ ಕಾಲ ಅದು!

ಅಪಮಾನ, ತಿರಸ್ಕಾರ ಮತ್ತು ತಾರತಮ್ಯ

ನಾನು ಕುರುಡ ಎಂಬ ಕಾರಣಕ್ಕೆ ತಿರಸ್ಕಾರ, ಅಪಮಾನ ತುಂಬಾ ನೋವು ಕೊಡುತ್ತಿತ್ತು. ತರಗತಿಯಲ್ಲಿ ಕೊನೆಯ ಬೆಂಚು ಖಾಯಂ. ಆಟಕ್ಕೆ ಅವಕಾಶವನ್ನೇ ಕೊಡುತ್ತಿರಲಿಲ್ಲ. ಇದರಿಂದ ಅಪ್ಪ ನೊಂದುಕೊಂಡು ನನ್ನನ್ನು ಹೈದರಾಬಾದ್ ನಗರದ ವಿಶೇಷ ಮಕ್ಕಳ ಶಾಲೆಗೆ ಸೇರಿಸಿದರು. ಅಲ್ಲಿ ನನ್ನ ಜೀವನದ ಹಲವು ಟರ್ನಿಂಗ್ ಪಾಯಿಂಟಗಳು ಆರಂಭ! ಕಲಿಕೆಯಲ್ಲಿ ನಾನು ನನ್ನ ತರಗತಿಗೆ ಪ್ರಥಮ ಬರಲು ಆರಂಭಿಸಿದೆ. ಕುರುಡು ಮಕ್ಕಳ ಕ್ರಿಕೆಟ್ ತಂಡದಲ್ಲಿ ನಾನು ರಾಷ್ಟ್ರೀಯ ತಂಡದಲ್ಲಿ ಆಡಿದೆ.

ಅಬ್ದುಲ್ ಕಲಾಂ ಭೇಟಿ ಮಿಂಚು ಹರಿಸಿತು

ನಾನು ಪ್ರೌಢಶಾಲೆಯಲ್ಲಿ ಓದುವಾಗ ನಮ್ಮ ಶಾಲೆಗೊಮ್ಮೆ ಅಬ್ದುಲ್ ಕಲಾಂ ಭೇಟಿ ನೀಡಿದರು. ಅವರ ಮಾತುಗಳಿಂದ ನಾನು ಪ್ರಭಾವಿತನಾದೆ. ಅವರ ‘ಲೀಡ್ ಇಂಡಿಯಾ 2020’ ಎಂಬ ವಿದ್ಯಾರ್ಥಿ ಅಭಿಯಾನಕ್ಕೆ ನಾನು ಸದಸ್ಯತನ ಪಡೆದೆ. ನನಗೆ ಎಸೆಸೆಲ್ಸಿ ಪರೀಕ್ಷೆಯಲ್ಲಿ 90% ಅಂಕಗಳು ಬಂದವು. ವಿಜ್ಞಾನದಲ್ಲಿ ಪಿಯುಸಿ ಮಾಡಬೇಕೆಂದು ನನ್ನ ಆಸೆ. ಆದರೆ ನಾನು ಕುರುಡ ಎಂಬ ಕಾರಣಕ್ಕೆ ನನಗೆ ಯಾವುದೇ ಕಾಲೇಜಿನಲ್ಲಿ ವಿಜ್ಞಾನದ ಸೀಟ್ ಸಿಗಲಿಲ್ಲ.

ನನಗೆ ಅಬ್ದುಲ್ ಕಲಾಂ ಅವರ ಮಾತುಗಳು ನೆನಪಾದವು – ಹಕ್ಕಿ ಹಾರುವುದು ರೆಕ್ಕೆಗಳ ಬಲದಿಂದಲ್ಲ. ಅದು ಹಾರುವುದು ಭರವಸೆಗಳ ಬಲದಿಂದ!

ಸರಕಾರದ ವಿರುದ್ಧ ಬೀದಿಗೆ ಇಳಿದು ಹೋರಾಟ.

ನಾನು ಹೈದರಾಬಾದ್ ಸರಕಾರದ ವಿರುದ್ಧ ರಸ್ತೆಗಿಳಿದು ಪ್ರತಿಭಟನೆಯನ್ನು ಮಾಡಿದೆ. ಆರು ತಿಂಗಳ ನಂತರ ನನಗೆ ವಿಜ್ಞಾನದ ಸೀಟ್ ದೊರೆಯಿತು. ಸತತವಾಗಿ ಕಷ್ಟ ಪಟ್ಟೆ. ಬ್ರೈಲ್ ಲಿಪಿಯಲ್ಲಿ ಪರೀಕ್ಷೆಯನ್ನು ಬರೆದು ದ್ವಿತೀಯ ಪಿಯುಸಿಯಲ್ಲಿ ನನಗೆ 98% ಅಂಕಗಳು ಬಂದವು!

ಐಐಟಿ ಸಂಸ್ಥೆಗಳು ಬಾಗಿಲು ತೆರೆಯಲಿಲ್ಲ

ನನಗೆ ಐಐಟಿಯಲ್ಲಿ BE ಮಾಡುವ ಆಸೆ. ಆದರೆ ಭಾರತದ ಯಾವುದೇ ಐಐಟಿ ಕಾಲೇಜುಗಳು ನನಗೆ ಕುರುಡ ಎಂಬ ಕಾರಣಕ್ಕೆ ಎಂಟ್ರೆನ್ಸ್ ಪರೀಕ್ಷೆಗೂ ಅವಕಾಶ ನೀಡಲಿಲ್ಲ. ನಾನು ಕೈಚೆಲ್ಲಲಿಲ್ಲ. ಅಮೆರಿಕಾದ ನಾಲ್ಕು ಪ್ರಸಿದ್ಧವಾದ ಯೂನಿವರ್ಸಿಟಿಗಳ ಬಾಗಿಲು ಬಡಿದೆ. ಎಲ್ಲವೂ ಆಹ್ವಾನ ನೀಡಿದವು.

ನಾನು ಮಸ್ಸಾಚುಸೆಟ್ಸ್ ವಿವಿ ಆರಿಸಿಕೊಂಡೆ. ಅಮೆರಿಕಾದ ವಿವಿಯಲ್ಲಿ BE ಪ್ರವೇಶ ಪಡೆದ ಜಗತ್ತಿನ ಮೊದಲ ಕುರುಡ ವಿದ್ಯಾರ್ಥಿ ನಾನಾಗಿದ್ದೆ! ನನಗೆ ಇಷ್ಟವಾದ BE ಕೋರ್ಸನ್ನು ಮುಗಿಸಿದೆ. ಅಲ್ಲಿ ಈಜು ಮತ್ತು ಡೈವಿಂಗಲ್ಲಿ ವಿವಿ ದಾಖಲೆ ಕೂಡ ಮಾಡಿದ್ದೆ. ಅಮೆರಿಕಾದ ಕೆಲವು ಕಾರ್ಪೊರೇಟ್ ಕಂಪೆನಿಗಳು ನನಗೆ ಉದ್ಯೋಗ ನೀಡಲು ಮುಂದೆ ಬಂದವು.

ಆದರೆ ನನ್ನ ಕನಸುಗಳು ಭಾರತದಲ್ಲಿ ಇದ್ದವು!

2011ರಲ್ಲಿ ಭಾರತಕ್ಕೆ ಬಂದು ಮತ್ತೆ ಅಬ್ದುಲ್ ಕಲಾಂ ಅವರನ್ನು ಭೇಟಿ ಮಾಡಿದೆ. ಅವರ ಸಲಹೆಯಂತೆ ಬಹು ವಿಕಲತೆಯ ಮಕ್ಕಳಿಗಾಗಿ “ಸಮನ್ವೈ ಸೆಂಟರ್” ಎಂಬ ಸೇವಾ ಸಂಸ್ಥೆ ಆರಂಭಿಸಿದೆ. ಬ್ರೈಲ್ ಪ್ರಿಂಟಿಂಗ್ ಪ್ರೆಸ್ ತೆರೆದೆ. 3000 ಅಶಕ್ತ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ನೆರವಿಗೆ ನಿಂತೆ. ಅಷ್ಟಕ್ಕೇ ಸುಮ್ಮನಾಗಲಿಲ್ಲ.

ಆರಂಭ ಆಯಿತು ಅವರದ್ದೇ ಕಂಪೆನಿ

2011ರಲ್ಲಿ ‘ BOLLANT INDUSTRY’ ಎಂಬ ಸಣ್ಣ ಉದ್ಯಮವನ್ನು ಆರಂಭಿಸಿದೆ. ನಗರಪಾಲಿಕೆಯ ತ್ಯಾಜ್ಯ ವಸ್ತುಗಳಿಂದ ಮತ್ತು ಆಡಕೆಯಿಂದ ಕ್ರಾಫ್ಟ್ ಪೇಪರ್ ತಯಾರಿಸುವ ಕಂಪೆನಿ ಅದು. ಹಣ ಮಾಡುವುದು ನನ್ನ ಉದ್ದೇಶ ಆಗಿರಲಿಲ್ಲ. ನನ್ನ ಕಂಪೆನಿಯಲ್ಲಿ ಕುರುಡರಿಗೆ ಮತ್ತು ವಿಕಲಚೇತನರಿಗೆ ಉದ್ಯೋಗ ನೀಡಿದೆ. ರತನ್ ಟಾಟಾ ಅವರು ನನ್ನ ಕಂಪೆನಿಯಲ್ಲಿ ಹೂಡಿಕೆ ಮಾಡಲು ಮುಂದೆ ಬಂದರು. ನನ್ನ ಐಕಾನ್ ಎಪಿಜೆ ಅಬ್ದುಲ್ ಕಲಾಂ ಅವರು ಬಂದು ದೀಪ ಹಚ್ಚಿದರು. ಮುಂದೆ ಆ ಕಂಪೆನಿಯು ಪ್ರತೀ ತಿಂಗಳು 20% ಪ್ರಗತಿ ದಾಖಲಿಸುತ್ತಾ ಬಂದಿತು.

ದಿವ್ಯಾಂಗರಿಗೆ ಉದ್ಯೋಗ ನೀಡಿದರು

ಇಂದು ನನ್ನ ಕಂಪೆನಿಗೆ ನಾಲ್ಕು ರಾಜ್ಯಗಳಲ್ಲಿ 20 ಶಾಖೆಗಳು ಇವೆ. 100 ಕೋಟಿ ರೂಪಾಯಿ ವಾರ್ಷಿಕ ಟರ್ನ್ ಓವರ್ ಇದೆ! ನೂರಕ್ಕೆ ನೂರು ಸೌರಶಕ್ತಿ ಆಧಾರಿತವಾಗಿದೆ ಮತ್ತು ಪರಿಸರಸ್ನೇಹಿ ಆಗಿದೆ. ಅಶಕ್ತ ದಿವ್ಯಾಂಗರಿಗೆ ಸ್ವಾವಲಂಬಿ ಬದುಕಿನ ಅವಕಾಶವನ್ನು ನೀಡಿದ ಖುಷಿ ಇದೆ. ಭಾರತದ ಸಮಸ್ಯೆಗಳಾದ ಬಡತನ, ನಿರಕ್ಷರತೆ, ನಿರುದ್ಯೋಗಗಳ ನಿವಾರಣೆಗೆ ನಮ್ಮಿಂದಾದಷ್ಟು ಪ್ರಯತ್ನ ಪ್ರತಿಯೊಬ್ಬರೂ ಮಾಡಬೇಕು. ‘ಪಂಚೀ ಉಡತೀ ಹೈ ಪಂಖೋ ಕೀ ತಾಕತ್ ಸೆ ನಹೀಂ. ಹೌಸಲೆ ಸೇ!’ ಎಂಬ ಅಬ್ದುಲ್ ಕಲಾಂ ಅವರ ಮಾತಿನೊಂದಿಗೆ ಅವರು ತನ್ನ ಮಾತು ನಿಲ್ಲಿಸಿದರು. ಅವರ ಆಳವಾದ ಕಣ್ಣುಗಳಲ್ಲಿ ಗೆದ್ದ ಖುಷಿ ಇತ್ತು.

ಭರತ ವಾಕ್ಯ

ಅಂದ ಹಾಗೆ ಶ್ರೀಕಾಂತ್ ಅವರಿಗೆ ಫೋರ್ಬ್ಸ್ ಮಾಗಜ್ಹಿನ್ 2017ರಲ್ಲಿ ನಡೆಸಿದ ಏಷಿಯಾದ 30 ಅತ್ಯಂತ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನವನ್ನು ದೊರೆತಿದೆ. ‘NDTV ಇಂಡಿಯನ್ ಆಫ್ ದಿ ಇಯರ್’ ಪ್ರಶಸ್ತಿ, ‘ಪ್ರೈಡ್ ಆಫ್ ತೆಲಂಗಾಣ’ ಪ್ರಶಸ್ತಿ, ‘ಟಿವಿ 9 ನವನಕ್ಷತ್ರ’ ಪ್ರಶಸ್ತಿ……. ಮೊದಲಾದ ನೂರಾರು ಪ್ರಶಸ್ತಿಗಳು ಅವರಿಗೆ ದೊರೆತಿವೆ. ಶ್ರೀಕಾಂತ್ ಬೊಳ್ಳ ಅವರ ಬದುಕು ಸಾವಿರಾರು ಯುವಕ ಯುವತಿಯರಿಗೆ ಸ್ಫೂರ್ತಿ ನೀಡಿದೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

Continue Reading

ದೇಶ

Labour Day 2024: ಕಾರ್ಮಿಕರು ಕೇಂದ್ರ ಸರ್ಕಾರದ ಇ-ಶ್ರಮ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

ಇ-ಶ್ರಮ ಕಾರ್ಡ್ ಮೂಲಕ ಅವರಿಗೆ (Labour Day 2024) ಸರ್ಕಾರಗಳ ಕಲ್ಯಾಣ ಯೋಜನೆಗಳನ್ನು ತಲುಪಿಸಿ, ಸಾಮಾಜಿಕ ಭದ್ರತೆ ಕಲ್ಪಿಸಲಾಗುತ್ತಿದೆ. 2021ರಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಕೇಂದ್ರ ಸರ್ಕಾರ ಇ-ಶ್ರಮ ಯೋಜನೆ ಮೂಲಕ ದೇಶದ ಸುಮಾರು 38 ಕೋಟಿ ಅಸಂಘಟಿತ ಕಾರ್ಮಿಕರಿಗೆ ನೆರವಾಗುವ ಗುರಿ ಹೊಂದಿದೆ. ರಾಜ್ಯದಲ್ಲೂ ಇ-ಶ್ರಮ ಕಾರ್ಡ್ ವಿತರಿಸಲಾಗುತ್ತಿದೆ. ಕಾರ್ಮಿಕ ದಿನಾಚರಣೆ (ಮೇ 1) ಹಿನ್ನೆಲೆಯಲ್ಲಿ ಈ ಯೋಜನೆಯ ವಿವರ ಇಲ್ಲಿ ನೀಡಲಾಗಿದೆ.

VISTARANEWS.COM


on

Labour Day 2024
Koo

ಅಸಂಘಟಿತ ವಲಯ(Unorganised sectors)ದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ನೀಡುವ (Labour Day 2024) ಸಲುವಾಗಿ ಕೇಂದ್ರ ಸರ್ಕಾರ ಇ-ಶ್ರಮ (e-Shram) ಯೋಜನೆ ಜಾರಿಗೆ ತಂದಿದೆ. ಇ-ಶ್ರಮ ಕಾರ್ಡ್ ಮೂಲಕ ಅವರಿಗೆ ಸರ್ಕಾರಗಳ ಕಲ್ಯಾಣ ಯೋಜನೆಗಳನ್ನು ತಲುಪಿಸಿ, ಸಾಮಾಜಿಕ ಭದ್ರತೆ ಕಲ್ಪಿಸಲಾಗುತ್ತಿದೆ. 2021ರಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಕೇಂದ್ರ ಸರ್ಕಾರ ಇ-ಶ್ರಮ ಯೋಜನೆ ಮೂಲಕ ದೇಶದ ಸುಮಾರು 38 ಕೋಟಿ ಅಸಂಘಟಿತ ಕಾರ್ಮಿಕರಿಗೆ ನೆರವಾಗುವ ಗುರಿ ಹೊಂದಿದೆ. ರಾಜ್ಯದಲ್ಲೂ ಇ-ಶ್ರಮ ಕಾರ್ಡ್ ವಿತರಿಸಲಾಗುತ್ತಿದೆ. ಹಾಗಾದರೆ ಇ-ಶ್ರಮ ಕಾರ್ಡ್‌ ಎಂದರೇನು? ಹೆಸರು ನೋಂದಾಯಿಸುವುದು ಹೇಗೆ? ಯಾರೆಲ್ಲ ಅರ್ಹರು? ಮುಂತಾದ ವಿವರ ಇಲ್ಲಿದೆ.

ಏನಿದು ಇ-ಶ್ರಮ ಕಾರ್ಡ್‌?

ಅಸಂಘಟಿತ ವಲಯದ ಕಾರ್ಮಿಕರ ಸಮಗ್ರ ರಾಷ್ಟೀಯ ದತ್ತಾಂಶವೇ ಈ ಇ-ಶ್ರಮ ಕಾರ್ಡ್. ಅಂದರೆ ಅಸಂಘಟಿತ ವಲಯದ ಕಾರ್ಮಿಕರಿಗೆ ವಿವಿಧ ಪ್ರಯೋಜನಗಳನ್ನು ಒದಗಿಸಲು ಕೇಂದ್ರ ಸರ್ಕಾರ ಪ್ರಾರಂಭಿಸಿದ ಡಿಜಿಟಲ್ ವೇದಿಕೆ ಇದಾಗಿದೆ. ಇದು ವಿಶಿಷ್ಟ 12-ಅಂಕಿಯ ಗುರುತಿನ ಸಂಖ್ಯೆಯನ್ನು ಒಳಗೊಂಡಿದೆ. ಇದರಲ್ಲಿ ಹೆಸರು, ವಯಸ್ಸು, ಲಿಂಗ, ಉದ್ಯೋಗ ಮತ್ತು ಕೆಲಸಗಾರನ ಕುರಿತು ಇತರ ಅಗತ್ಯ ಮಾಹಿತಿ ಇರುತ್ತದೆ.

ಯಾರೆಲ್ಲ ಅರ್ಹರು?

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರು, ಕೃಷಿ ಕಾರ್ಮಿಕರು, ಮೀನುಗಾರರು, ಆಶಾ ಕಾರ್ಯಕರ್ತೆಯರು, ಮನೆಗೆಲಸ ಕಾರ್ಮಿಕರು, ಚಾಲಕರು, ಟೈಲರ್‌ಗಳು, ಬೀದಿಬದಿ ವ್ಯಾಪಾರಿಗಳು, ಪತ್ರಿಕೆ ಮಾರಾಟಗಾರರು, ಇಟ್ಟಿಗೆ ಗೂಡು ಕೆಲಸಗಾರರು, ವಲಸೆ ಕಾರ್ಮಿಕರು ಸೇರಿದಂತೆ ಕೇಂದ್ರ ಸರ್ಕಾರ ಗುರುತಿಸಿರುವ ಸುಮಾರು 379 ವರ್ಗಗಳ ಕಾರ್ಮಿಕರು ತಮ್ಮ ಹೆಸರನ್ನು ಇದರಲ್ಲಿ ನೋಂದಾಯಿಸಬಹುದು. ಜತೆಗೆ ಪಟ್ಟಿಯಲ್ಲಿ ಸೇರಿರದ ಅಸಂಘಟಿತ ಕಾರ್ಮಿಕರು ʼಇತರೆ ವರ್ಗʼಗಳಡಿ ನೋಂದಾಯಿಸಬಹುದು. 16ರಿಂದ 59 ವಯೋಮಾನದವರು, ಆದಾಯ ತೆರಿಗೆ ಪಾವತಿಸದವರು, ಭವಿಷ್ಯನಿಧಿ ಹಾಗೂ ಇಎಸ್​ಐ ಫಲಾನುಭವಿಯಾಗಿರದವರು ಇದಕ್ಕೆ ಅರ್ಹರು.

ಪ್ರಯೋಜನಗಳೇನು?

  • ನೋಂದಾಯಿಸಿಕೊಂಡ ಕಾರ್ಮಿಕರು ಭಾಗಶಃ ಅಂಗವೈಕಲ್ಯಕ್ಕೆ ಒಳಗಾದರೆ 1 ಲಕ್ಷ ರೂ.ಗಿಂತ ಪರಿಹಾರ ಲಭ್ಯ.
    ಆಕಸ್ಮಿಕವಾಗಿ ಮೃತಪಟ್ಟರೆ 2 ಲಕ್ಷ ರೂ. ಪರಿಹಾರ ಲಭ್ಯ.
  • ಇ-ಶ್ರಮ ಪೋರ್ಟಲ್‌ನಲ್ಲಿ ನೋಂದಾಯಿಸಿದರೆ ಸಾಮಾಜಿಕ ಭದ್ರತಾ ಯೋಜನೆಯ ಲಾಭ ದೊರೆಯುತ್ತದೆ.
    ಪಿಂಚಣಿ ವ್ಯವಸ್ಥೆಯೂ ಲಭ್ಯವಿದ್ದು, ತಿಂಗಳಿಗೆ 3,000 ರೂ. ಸಿಗುತ್ತದೆ.

ಆನ್‌ಲೈನ್‌ ಮೂಲಕ ಮಾಡುವ ವಿಧಾನ

  • ಅಧಿಕೃತ ವೆಬ್‌ಸೈಟ್‌ https://register.eshram.gov.in/#/user/selfಗೆ ಭೇಟಿ ನೀಡಿ.
  • ಮುಖಪುಟದ ವಿವರಗಳನ್ನು ಪರಿಶೀಲಿಸಿ ಮತ್ತು ಸ್ವಯಂ ನೋಂದಣಿ (Self Registration) ಆಯ್ಕೆ ಕ್ಲಿಕ್‌ ಮಾಡಿ.
  • ಆಧಾರ್‌ ಲಿಂಕ್‌ ಮಾಡಲಾದ ಮೊಬೈಲ್‌ ಸಂಖ್ಯೆ ನಮೂದಿಸಿ.
  • ಕ್ಯಾಪ್ಚಾ ಕೋಡ್‌ ನಮೂದಿಸಿ.
  • ಇಪಿಎಫ್‌ಒ ಮತ್ತು ಇಎಸ್ಐಸಿ ಹೌದು ಅಥವಾ ಇಲ್ಲ ಆಯ್ಕೆಯನ್ನು ಆರಿಸಿ.
  • Send OTP ಬಟನ್‌ ಮೇಲೆ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಫಾರಂ ತೆರೆದು ಅಗತ್ಯ ವಿವರಗಳನ್ನು ನೀಡಿ ಭರ್ತಿ ಮಾಡಿ.
  • ಕೇಳಿರುವ ಎಲ್ಲ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • Submit ಬಟನ್‌ ಕ್ಲಿಕ್‌ ಮಾಡಿ. ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಆಫ್‌ಲೈನ್‌ನಲ್ಲಿ ನೋಂದಣಿ ಮಾಡುವ ವಿಧಾನ

ಹತ್ತಿರದ ಸಾಮಾನ್ಯ ಸೇವಾ ಕೇಂದ್ರ (CSC)ಕ್ಕೆ ಭೇಟಿ ನೀಡಿ ಹೆಸರು ನೋಂದಾಯಿಸಿಕೊಳ್ಳಬಹುದು. ಯಶಸ್ವಿ ನೋಂದಣಿಯ ಬಳಿಕ ಫಲಾನುಭವಿಗೆ ಸ್ಥಳದಲ್ಲಿಯೇ ಗುರುತಿನ ಚೀಟಿ ವಿತರಿಸಲಾಗುತ್ತದೆ. ಗಮನಿಸಿ ನೋಂದಣಿಗೆ ಹೆಸರು, ವಿಳಾಸ ಪುರಾವೆ, ವೃತ್ತಿ, ಶೈಕ್ಷಣಿಕ ಮಾಹಿತಿ, ಕುಟುಂಬದ ವಿವರ, ಆಧಾರ್‌ ಕಾರ್ಡ್‌, ವಿದ್ಯುತ್‌ ಬಿಲ್‌, ಜನನ ಪ್ರಮಾಣ ಪತ್ರ, ಪಡಿತರ ಚೀಟಿ, ಬ್ಯಾಂಕ್‌ ಪಾಸ್‌ಬುಕ್‌ ಮಾಹಿತಿ, ಆಧಾರ್‌ ಕಾರ್ಡ್‌ನೊಂದಿಗೆ ಲಿಂಕ್‌ ಮಾಡಿದ ಮೊಬೈಲ್‌ ಸಂಖ್ಯೆ ಇದ್ಯಾದಿ ದಾಖಲೆ ಒದಗಿಸಬೇಕಾಗುತ್ತದೆ.

ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌-14434ಕ್ಕೆ ಕರೆ ಮಾಡಿ. ಇಮೇಲ್‌ ಐಡಿ- eshramcare-mole@gov.in ಸಂಪರ್ಕಿಸಿ.

ಇದನ್ನೂ ಓದಿ: Job Alert: ಎನ್‌ಬಿಸಿಸಿಯಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

Continue Reading

ದೇಶ

Justin Trudeau: ಕೆನಡಾ ಪ್ರಧಾನಿ ಕಾರ್ಯಕ್ರಮದಲ್ಲಿ ಖಲಿಸ್ತಾನ ಪರ ಘೋಷಣೆ; ಭಾರತ ಸಮನ್ಸ್!

Justin Trudeau: ಕೆನಡಾದಲ್ಲಿ ಭಾನುವಾರ ನಡೆದ ಸಿಖ್‌ ಸಮುದಾಯದ ಕಾರ್ಯಕ್ರಮದಲ್ಲಿ ಪ್ರಧಾನಿ ಜಸ್ಟಿನ್‌ ಟ್ರುಡೋ ಮಾತನಾಡುವಾಗ ಖಲಿಸ್ತಾನ ಪರವಾಗಿ ಘೋಷಣೆ ಕೂಗಲಾಗಿದೆ. ಇದನ್ನು ಗಂಭೀರವಾಗಿ ತೆಗೆದುಕೊಂಡಿರುವ ಭಾರತ ಸರ್ಕಾರವು ಕೆನಡಾ ಡೆಪ್ಯುಟಿ ಹೈ ಕಮಿಷನರ್‌ಗೆ ಸಮನ್ಸ್‌ ನೀಡಿದೆ.

VISTARANEWS.COM


on

Justin Trudeau
Koo

ಒಟ್ಟಾವ: ಕೆನಡಾದ ಟೊರೊಂಟೊದಲ್ಲಿ ಭಾನುವಾರ (ಏಪ್ರಿಲ್‌ 28) ಸಿಖ್​ ಸಮುದಾಯದವರು ಆಯೋಜಿಸಿದ್ದ ಖಾಲ್ಸಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಧಾನಿ ಜಸ್ಟಿನ್‌ ಟ್ರುಡೋ (Justin Trudeau) ಅವರು ಭಾಷಣ ಮಾಡುವ ವೇಳೆ ಖಲಿಸ್ತಾನ್‌ ಜಿಂದಾಬಾದ್‌ ಎಂಬ ಘೋಷಣೆ (Pro Khalistan Slogan) ಕೂಗಿರುವುದಕ್ಕೆ ಭಾರತ (India Canada Row) ಅಸಮಾಧಾನ ವ್ಯಕ್ತಪಡಿಸಿದೆ. ಅಷ್ಟೇ ಅಲ್ಲ, ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾದ ಡೆಪ್ಯುಟಿ ಹೈ ಕಮಿಷನರ್‌ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಸಮನ್ಸ್‌ ಜಾರಿ ಮಾಡಿದೆ.

“ಜಸ್ಟಿನ್‌ ಟ್ರುಡೋ ಅವರು ಭಾಗವಹಿಸಿದ ಕಾರ್ಯಕ್ರಮದಲ್ಲಿ ಖಲಿಸ್ತಾನ ಪರ ಘೋಷಣೆ ಕೂಗಿರುವುದು ಆತಂಕಕಾರಿಯಾಗಿದೆ. ಇದರ ಕುರಿತು ಭಾರತ ಕಳವಳ ವ್ಯಕ್ತಪಡಿಸುತ್ತದೆ. ಪ್ರಧಾನಿ ಕಾರ್ಯಕ್ರಮದಲ್ಲಿಯೇ ಇಂತಹ ಅಪಸವ್ಯಗಳು ನಡೆದಿರುವುದು ನಿಜಕ್ಕೂ ಗಂಭೀರ ಪ್ರಕರಣವಾಗಿದೆ. ಇಂತಹ ಪ್ರಕರಣಗಳಿಂದ ಕೆನಡಾದ ರಾಜಕೀಯ ವ್ಯವಸ್ಥೆಯಲ್ಲಿ ಪ್ರತ್ಯೇಕವಾದ, ತೀವ್ರವಾದ ಹಾಗೂ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದಂತಾಗುತ್ತದೆ” ಎಂದು ಸಮನ್ಸ್‌ನಲ್ಲಿ ಭಾರತ ಅಸಮಾಧಾನ ವ್ಯಕ್ತಪಡಿಸಿದೆ.

“ಖಲಿಸ್ತಾನ ಪರ ಘೋಷಣೆಗಳನ್ನು ಕೂಗುವುದು ಭಾರತ ಹಾಗೂ ಕೆನಡಾ ಸಂಬಂಧದ ಮೇಲೆ ಪರಿಣಾಮ ಬೀರುವ ಜತೆಗೆ ಕೆನಡಾದಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದಂತಾಗುತ್ತದೆ. ಕೆನಡಾದಲ್ಲಿ ಹಿಂಸಾತ್ಮಕ ವಾತಾವರಣ ನಿರ್ಮಿಸಲು ಪ್ರೋತ್ಸಾಹ ಕೊಟ್ಟಂತಾಗುತ್ತದೆ” ಎಂದು ಭಾರತ ಆಕ್ರೋಶ ವ್ಯಕ್ತಪಡಿಸಿದೆ. ಇದಕ್ಕೂ ಮೊದಲು, ಜಸ್ಟಿನ್‌ ಟ್ರುಡೋ ಅವರು ಜಿ-20 ಶೃಂಗಸಭೆಯ ಹಿನ್ನೆಲೆಯಲ್ಲಿ ಭಾರತಕ್ಕೆ ಬಂದಾಗ, “ಕೆನಡಾದಲ್ಲಿ ಖಲಿಸ್ತಾನಿಗಳನ್ನು ನಿಗ್ರಹಿಸಿ” ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮನವಿ ಮಾಡಿದ್ದರು. ಇದರಿಂದಾಗಿ ಕೆನಡಾ ಮುನಿಸಿಕೊಂಡಿದ್ದು, ಎರಡೂ ದೇಶಗಳ ಮಧ್ಯೆ ಬಿಕ್ಕಟ್ಟು ಸೃಷ್ಟಿಯಾಗಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ್ದ ಜಸ್ಟಿನ್‌ ಟ್ರುಡೋ, ಕೆನಡಾ ದೇಶಾದ್ಯಂತ ಸಿಖ್ ಪರಂಪರೆಯ ಸುಮಾರು 800,000 ಕೆನಡಿಯನ್ನರಿಗೆ, ನಿಮ್ಮ ಹಕ್ಕುಗಳು ಮತ್ತು ನಿಮ್ಮ ಸ್ವಾತಂತ್ರ್ಯಗಳನ್ನು ರಕ್ಷಿಸಲು ನಾವು ಯಾವಾಗಲೂ ಇರುತ್ತೇವೆ. ದ್ವೇಷ ಮತ್ತು ತಾರತಮ್ಯದ ವಿರುದ್ಧ ನಿಮ್ಮ ಸಮುದಾಯವನ್ನು ನಾವು ಯಾವಾಗಲೂ ರಕ್ಷಿಸುತ್ತೇವೆ ಎಂದು ಟ್ರುಡೊ ಹೇಳಿದರು. ಸಮುದಾಯ ಕೇಂದ್ರಗಳು ಮತ್ತು ಗುರುದ್ವಾರಗಳಂತಹ ಪೂಜಾ ಸ್ಥಳಗಳಿಗೆ ಹೆಚ್ಚಿನ ಭದ್ರತೆಯನ್ನು ನೀಡಲಾಗುತ್ತದೆ. ಭದ್ರತೆ ಮತ್ತು ಮೂಲಸೌಕರ್ಯಗಳನ್ನು ಸುಧಾರಿಸುತ್ತೇವೆ ಎಂದು ಕೆನಡಾದ ಪ್ರಧಾನಿ ಉಲ್ಲೇಖಿಸಿದರು.

ನಿಮ್ಮ ಧರ್ಮವನ್ನು ಮುಕ್ತವಾಗಿ ಮತ್ತು ಬೆದರಿಕೆಯಿಲ್ಲದೆ ಆಚರಿಸುವ ನಿಮ್ಮ ಹಕ್ಕು ಕೆನಡಾದಲ್ಲಿ ಖಾತ್ರಿಯಿದೆ. ನಿಮ್ಮ ಮೂಲಭೂತ ಹಕ್ಕುಗಳನ್ನು ನಾವು ರಕ್ಷಿಸುತ್ತೇವೆ. ನಾವು ನಿಮ್ಮೊಂದಿಗೆ ನಿಲ್ಲುತ್ತೇವೆ. ಹ್ಯಾಪಿ ಬೈಸಾಖಿ! ವಹೇಗುರು ಜಿ ಕಾ ಖಾಲ್ಸಾ ವಹೇಗುರು ಜಿ ಕಿ ಫತೇಹ್” ಎಂದು ಟ್ರುಡೋ ಹೇಳಿದ್ದಾರೆ.

ಇದನ್ನೂ ಓದಿ: Student Death: ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿಯ ಗುಂಡಿಕ್ಕಿ ಹತ್ಯೆ

Continue Reading
Advertisement
Ayushman Bharat Diwas
ಆರೋಗ್ಯ11 mins ago

Ayushman Bharat Diwas: ಇಂದು ಆಯುಷ್ಮಾನ್ ಭಾರತ್ ದಿನ; ಏನಿದರ ಮಹತ್ವ?

Onion Benefits
ಆರೋಗ್ಯ19 mins ago

Onion Benefits: ಬೇಸಿಗೆಯಲ್ಲಿ ಆಗಾಗ ಹಸಿ ಈರುಳ್ಳಿ ತಿನ್ನಲೇಬೇಕು ಯಾಕೆ ಗೊತ್ತೆ?

rajamarga column srikant bolla
ಅಂಕಣ23 mins ago

ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

Karnataka weather
ಕರ್ನಾಟಕ49 mins ago

Karnataka Weather: ಮನೆಯಿಂದ ಹೊರ ಹೋಗುವ ಮುನ್ನ ಎಚ್ಚರ; ಮೇ 3ರವರೆಗೆ ಹೆಚ್ಚಿರಲಿದೆ ಶಾಖದ ಅಲೆಗಳ ತೀವ್ರತೆ!

Vistara Editorial
ಸಂಪಾದಕೀಯ1 hour ago

ವಿಸ್ತಾರ ಸಂಪಾದಕೀಯ: ಸ್ತ್ರೀಯರ ಘನತೆಗೆ ಹಾನಿ ಎಸಗಿದವರಿಗೆ ಕಠಿಣ ಶಿಕ್ಷೆಯಾಗಲಿ

Labour Day 2024
ದೇಶ1 hour ago

Labour Day 2024: ಕಾರ್ಮಿಕರು ಕೇಂದ್ರ ಸರ್ಕಾರದ ಇ-ಶ್ರಮ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

Paneer test
ಆರೋಗ್ಯ1 hour ago

Paneer Test: ನಾವು ತಿನ್ನುವ ಪನೀರ್‌ ಶುದ್ಧವಾದದ್ದೋ, ಕಲಬೆರಕೆಯದ್ದೋ ಪರೀಕ್ಷೆ ಮಾಡೋದು ಹೇಗೆ?

dina bhavishya read your daily horoscope predictions for April 30 2024
ಭವಿಷ್ಯ2 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

Pakistan Inflation
ವಿದೇಶ7 hours ago

Pakistan Inflation: ಪಾಕಿಸ್ತಾನ ಮತ್ತಷ್ಟು ದಿವಾಳಿ; ಲೀಟರ್‌ ಪೆಟ್ರೋಲ್‌ಗೆ 290 ರೂ., ಕೆ.ಜಿ ಹಿಟ್ಟಿಗೆ 800 ರೂ.

Honnavar News
ಉತ್ತರ ಕನ್ನಡ7 hours ago

Honnavar News: ಮಕ್ಕಳಿಗೆ ಉತ್ತಮ ಶಿಕ್ಷಣದ ಜತೆಗೆ ಸಂಸ್ಕಾರವೂ ಬೇಕು: ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ2 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 202418 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202420 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌