Amarnath Yatra: ವ್ಯಾಪಕ ಬಿಗಿ ಭದ್ರತೆಯೊಂದಿಗೆ ಈ ಬಾರಿಯ ಅಮರನಾಥ ಯಾತ್ರೆ ಆರಂಭ; ಪವಿತ್ರ ಗುಹೆಯತ್ತ ಹೊರಟ ಮೊದಲ ತಂಡ - Vistara News

ದೇಶ

Amarnath Yatra: ವ್ಯಾಪಕ ಬಿಗಿ ಭದ್ರತೆಯೊಂದಿಗೆ ಈ ಬಾರಿಯ ಅಮರನಾಥ ಯಾತ್ರೆ ಆರಂಭ; ಪವಿತ್ರ ಗುಹೆಯತ್ತ ಹೊರಟ ಮೊದಲ ತಂಡ

Amarnath Yatra: ಪವಿತ್ರ ಅಮರನಾಥ ಯಾತ್ರೆ 2024 ಆರಂಭವಾಗಿದೆ. ಪವಿತ್ರ ಗುಹೆಯ ದರ್ಶನಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಗಂಡರ್ಬಾಲ್ ಜಿಲ್ಲೆಯ ಬಾಲ್ಟಾಲ್ ಬೇಸ್ ಕ್ಯಾಂಪ್‌ನಿಂದ ಯಾತ್ರಾರ್ಥಿಗಳ ಮೊದಲ ತಂಡ ಹೊರಟಿದೆ. ಶಂಖದ ನಾದ ಮತ್ತು “ಬುಮ್ ಬುಮ್ ಭೋಲೆ”, “ಜೈ ಬಾಬಾ ಬುರ್ಫಾನಿ” ಹಾಗೂ “ಹರ್ ಹರ್ ಮಹಾದೇವ್” ಘೋಷಣೆಗಳ ನಡುವೆ, ಯಾತ್ರಾರ್ಥಿಗಳ ಮೊದಲ ತಂಡವು ಶಿಬಿರದಿಂದ ಸಮುದ್ರ ಮಟ್ಟದಿಂದ 12,756 ಅಡಿ ಎತ್ತರದಲ್ಲಿರುವ ಪವಿತ್ರ ದೇವಾಲಯದತ್ತ ಹೆಜ್ಜೆ ಹಾಕಿದೆ.

VISTARANEWS.COM


on

Amarnath Yatra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶ್ರೀನಗರ: ಪವಿತ್ರ ಅಮರನಾಥ ಯಾತ್ರೆ(Amarnath Yatra)ಗೆ ಇಂದು (ಜೂನ್‌ 29) ಚಾಲನೆ ಸಿಕ್ಕಿದೆ. ಪವಿತ್ರ ಗುಹೆಯ ದರ್ಶನಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಗಂಡರ್ಬಾಲ್ ಜಿಲ್ಲೆಯ ಬಾಲ್ಟಾಲ್ ಬೇಸ್ ಕ್ಯಾಂಪ್‌ನಿಂದ ಯಾತ್ರಾರ್ಥಿಗಳ ಮೊದಲ ತಂಡ ಹೊರಟಿದೆ. ಶಂಖದ ನಾದ ಮತ್ತು “ಬುಮ್ ಬುಮ್ ಭೋಲೆ”, “ಜೈ ಬಾಬಾ ಬುರ್ಫಾನಿ” ಹಾಗೂ “ಹರ್ ಹರ್ ಮಹಾದೇವ್” ಘೋಷಣೆಗಳ ನಡುವೆ, ಯಾತ್ರಾರ್ಥಿಗಳ ಮೊದಲ ತಂಡವು ಶಿಬಿರದಿಂದ ಸಮುದ್ರ ಮಟ್ಟದಿಂದ 12,756 ಅಡಿ ಎತ್ತರದಲ್ಲಿರುವ ಪವಿತ್ರ ದೇವಾಲಯದತ್ತ ಹೆಜ್ಜೆ ಹಾಕಿದೆ.

4,603 ಯಾತ್ರಾರ್ಥಿಗಳ ತಂಡ

4,603 ಯಾತ್ರಾರ್ಥಿಗಳನ್ನು ಒಳಗೊಂಡ ಮೊದಲ ಬ್ಯಾಚ್ ಶುಕ್ರವಾರ ಬಿಗಿ ಭದ್ರತೆಗಳ ನಡುವೆ ಕಾಶ್ಮೀರ ಕಣಿವೆಯನ್ನು ತಲುಪಿತ್ತು. ಈ ವರ್ಷದ 52 ದಿನಗಳ ಸುದೀರ್ಘ ತೀರ್ಥಯಾತ್ರೆ ಆಗಸ್ಟ್ 19ರಂದು ಕೊನೆಗೊಳ್ಳಲಿದೆ. ಅಮರನಾಥ ಯಾತ್ರೆಗೆ ಆನ್‌ಲೈನ್‌ ನೋಂದಣಿ ಏಪ್ರಿಲ್ 15ರಂದು ಶ್ರೀ ಅಮರನಾಥ ದೇವಾಲಯ ಮಂಡಳಿಯ (SASB) ವೆಬ್‌ಸೈಟ್‌ ಮತ್ತು ಪೋರ್ಟಲ್‌ನಲ್ಲಿ ಪ್ರಾರಂಭವಾಗಿದ್ದು, ಅಭೂತಪೂರ್ವ ಪ್ರತಿಕ್ರಿಯೆ ಲಭಿಸಿದೆ.

ಬಿಗಿ ಭದ್ರತೆ

ಸುಗಮ ಯಾತ್ರೆಯನ್ನು ಖಚಿತಪಡಿಸಿಕೊಳ್ಳಲು ಮೂರು ಹಂತದ ಭದ್ರತೆ ಒದಗಿಸಲಾಗಿದೆ. ಚೆಕ್ ಪಾಯಿಂಟ್‌ ಸ್ಥಾಪನೆ ಸೇರಿದಂತೆ ಸಮಗ್ರ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ. ವರದಿಗಳ ಪ್ರಕಾರ ಈ ವರ್ಷದ ಯಾತ್ರೆಗೆ 3.50 ಲಕ್ಷಕ್ಕೂ ಹೆಚ್ಚು ಜನರು ನೋಂದಾಯಿಸಿಕೊಂಡಿದ್ದಾರೆ. ದೇವಾಲಯಕ್ಕೆ ತೆರಳುವ ಎರಡು ಮಾರ್ಗಗಳಲ್ಲಿ 125 ಅಡುಗೆಮನೆಗಳನ್ನು ಸ್ಥಾಪಿಸಲಾಗಿದೆ ಮತ್ತು 6,000ಕ್ಕೂ ಹೆಚ್ಚು ಸ್ವಯಂಸೇವಕರನ್ನು ನಿಯೋಜಿಸಲಾಗಿದೆ.

ಪ್ರತಿವರ್ಷ ಅಮರನಾಥ ಯಾತ್ರೆಯು ಲಕ್ಷಾಂತರ ಭಕ್ತರು ದೇಶದ ವಿವಿಧ ಭಾಗಗಳಿಂದ ಆಗಮಿಸುತ್ತಾರೆ. ಜುಲೈ-ಆಗಸ್ಟ್‌ (ಹಿಂದೂ ಕ್ಯಾಲೆಂಡರ್‌ನಲ್ಲಿ ಶ್ರಾವಣ ಮಾಸ)ನಲ್ಲಿ ಈ ಯಾತ್ರೆ ನಡೆಯುತ್ತದೆ. ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಿಂದ 141 ಕಿ.ಮೀ. ದೂರದಲ್ಲಿರುವ ಅಮರನಾಥ ಪವಿತ್ರ ಗುಹೆಯು ಲಡಾರ್ ಕಣಿವೆಯಲ್ಲಿದೆ. ಇದು ಹಿಮನದಿಗಳು ಮತ್ತು ಹಿಮದಿಂದ ಆವೃತವಾದ ಪರ್ವತಗಳಿಂದ ಕೂಡಿದೆ. ಹಿಮಾಲಯದ ಅಮರನಾಥ ಯಾತ್ರೆ ಬಹಳ ಹಳೆಯದು ಮತ್ತು ಪವಿತ್ರವಾದದ್ದು. ಇಲ್ಲಿ ಸುಮಾರು 5,000 ವರ್ಷಗಳಷ್ಟು ಹಳೆಯದಾದ ಶಿವಲಿಂಗವಿದೆ. 

ಉಗ್ರ ಕರಿನೆರಳು

ಈ ಬಾರಿ ಅಮರನಾಥ ಯಾತ್ರೆ ಗುರಿಯಾಗಿಸಿ ವಿಧ್ವಂಸಕ ಕೃತ್ಯ ಎಸಗಲು ಪಾಕಿಸ್ತಾನ ಭಾರೀ ಸಂಚು ರೂಪಿಸಿರುವುದು ಬಯಲಾಗಿದೆ. ಲಷ್ಕರ್‌ ಉಗ್ರ ಸಂಘಟನೆ(Lashkar Terrorists) ಮುಖ್ಯಸ್ಥ ಅಬ್ದುಲ್‌ ರೆಹಮಾನ್‌ ಮಕ್ಕಿ ಲಾಹೋರ್‌ ಮತ್ತು ಬಹವಾಲ್‌ಪುರದಲ್ಲಿ ಅತಿ ದೊಡ್ಡ ಪ್ರಮಾಣದಲ್ಲಿ ಶಸ್ತ್ರಾಸ್ತ್ರಗಳನ್ನು ಹಂಚುವ ಬಗ್ಗೆ ಮಹತ್ವ ಸಭೆ ನಡೆಸಿದ್ದಾನೆ. ಅಮರನಾಥ್‌ ಯಾತ್ರೆ ಸಂದರ್ಭದಲ್ಲಿ ವಿವಿಧ ಪ್ರದೇಶಗಳಲ್ಲಿ ದಾಳಿ ನಡೆಸಲು ಜಮ್ಮು ಮತ್ತು ಕಾಶ್ಮೀರಕ್ಕೆ ಅಮೆರಿಕ ನಿರ್ಮಿತ ಶಸ್ತ್ರಾಸ್ತಗಳನ್ನು ಪೂರೈಕೆ ಮಾಡುವುದೇ ಈ ಸಭೆಯ ಪ್ರಮುಖ ಉದ್ದೇಶವಾಗಿತ್ತು ಎಂದು ತಿಳಿದು ಬಂದಿದ್ದು, ಈ ನಿಟ್ಟಿನಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.

ದಾಳಿಗಳನ್ನು ಮತ್ತು ಕದನ ವಿರಾಮ ಉಲ್ಲಂಘನೆಗಳನ್ನು ತಡೆಯಲು ಭಾರತದ ಸರ್ಕಾರವು ಮುಂದಾಗಿದೆ ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: Amarnath Yatra: ಆಗಸ್ಟ್‌ನಲ್ಲಿ ಪಾಕ್‌ ನಡೆಸುತ್ತಾ ಡೆಡ್ಲಿ ಅಟ್ಯಾಕ್‌? ಎರಡೆರಡು ಉಗ್ರ ಸಂಘಟನೆಗಳಿಂದ ದೊಡ್ಡ ಪ್ಲ್ಯಾನ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral News: ನೀರ ಬಿಟ್ಟು ರಸ್ತೆಗೆ ಬಂದ ಮೊಸಳೆಗೆ ಇಲ್ಲೇನು ಕೆಲಸ? ಅಪರೂಪದ Video ಇಲ್ಲಿದೆ ನೋಡಿ

Viral News: ಮೊಸಳೆ ಯಾರಿಗೆ ಗೊತ್ತಿಲ್ಲ ಹೇಳಿ? ಚೂಪಾದ ಉಗುರು, ಹಲ್ಲು, ದೈತ್ಯ ದೇಹ ನೋಡಿದರೆ ಸಾಕು ಹಲವರು ಬೆಚ್ಚಿ ಬೀಳುತ್ತಾರೆ. ಅಂತಹ ಪ್ರಾಣಿ ಧುತ್ತನೆ ಕಣ್ಣೆದುರು ಬಂದರೆ ಹೇಗಾಗಬೇಡ? ಅದರಲ್ಲಿಯೂ ನೀರಿನಲ್ಲಿ ಇರುವ ಪ್ರಾಣಿ ರಸ್ತೆಗೆ ಬಂದರೆ ಓಡಾಡುವವರು ಬೆಚ್ಚಿ ಬೀಳದೆ ಇರುತ್ತಾರಾ? ಹೌದು ಇಂತಹದ್ದೊಂದು ಅಚ್ಚರಿಯ ಘಟನೆ ನಡೆದಿದೆ. ಈ ಅಪರೂಪದ ವಿಡಿಯೊ ಇಲ್ಲಿದೆ ನೋಡಿ.

VISTARANEWS.COM


on

Viral News
Koo

ಮುಂಬೈ: ಮೊಸಳೆ (Crocodile) ಜಲಚರ. ಸಾಮಾನ್ಯವಾಗಿ ನದಿಯಲ್ಲಿ, ದೊಡ್ಡ ದೊಡ್ಡ ಸರೋವರಗಳಲ್ಲಿ, ಸಮುದ್ರದಲ್ಲಿ ವಾಸಿಸುತ್ತವೆ. ಅಪರೂಪಕ್ಕೆ ದಡಕ್ಕೆ ಬಂದು ಸ್ವಲ್ಪ ಹೊತ್ತು ವಿಶ್ರಾಂತಿ ಪಡೆದು, ಮೈ ಬೆಚ್ಚಗೆ ಮಾಡಿಕೊಂಡು ಮತ್ತೆ ನೀರೊಳಗೆ ತೆರಳುತ್ತವೆ. ಇದೆಲ್ಲರಿಗೂ ಗೊತ್ತಿರುವ ವಿಷಯ. ಇದರಲ್ಲೇನು ವಿಶೇಷ ಎಂದು ನೀವು ಪ್ರಶ್ನಿಸಬಹುದು. ಇಲ್ಲಿದೆ ಟ್ವಿಸ್ಟ್‌. ನೀರಲ್ಲಿ ಇರುವ ಮೊಸಳೆ ನಗರಕ್ಕೆ ಅದರಲ್ಲಿಯೂ ಜನ ನಿಬಿಡ ರಸ್ತೆಗೆ ಬಂದರೆ ಹೇಗಾಗಬಹುದು? ಇದೆಲ್ಲ ಕಲ್ಪನೆ, ಸಿನಿಮಾದಲ್ಲಿ ನಡೆಯಬಹುದು ಎಂದುಕೊಂಡರೆ ನಿಮ್ಮ ಊಹೆ ತಪ್ಪು. ಹಾಗಾದರೆ ನಿಜವಾಗಿಯೂ ರಸ್ತೆಗೆ ಮೊಸಳೆ ಬಂದಿತ್ತೆ? ಎಲ್ಲಿ? ಯಾಕೆ? ಮುಂತಾದ ನಿಮ್ಮ ಪ್ರಶ್ನೆಗೆ ಈ ವೈರಲ್‌ ವಿಡಿಯೊದಲ್ಲಿ ಇದೆ ಉತ್ತರ (Viral News).

ಮಹಾರಾಷ್ಟ್ರದಲ್ಲಿ ಜೋರಾಗಿ ಮಳೆ ಸುರಿಯುತ್ತಿದೆ. ಈ ಮಳೆಗೆ ಬೇಗ ಬೇಗ ಮನೆ ಸೇರಿಕೊಂಡು ಬಿಡಬೇಕು ಎಂದು ಧಾವಂತದಲ್ಲಿ ಸಾಗುತ್ತಿದ್ದ ರತ್ನಗಿರಿ ಜಿಲ್ಲೆಯ ಜನರಿಗೆ ಕನಸಿನಲ್ಲಿಯೂ ಊಹಿಸದ ಅಚ್ಚರಿ ರಸ್ತೆ ಮಧ್ಯೆ ಎದುರಾಗಿತ್ತು. ತಮ್ಮ ಪಾಡಿಗೆ ತಾವು ಸಾಗುತ್ತಿದ್ದ ವಾಹನ ಚಾಲಕರು ಒಂದು ಕ್ಷಣ ದಂಗಾಗಿ ನಿಂತು ಅಪರೂಪದ ಅತಿಥಿಯನ್ನು ದಿಟ್ಟಿಸಿ ನೋಡತೊಡಗಿದರು. ಹೌದು, ಭಾರಿ ಮಳೆಯಿಂದಾಗಿ ಬೃಹತ್‌ ಗಾತ್ರದ ಮೊಸಳೆಯೊಂದು ನೀರಿನಲ್ಲಿ ಕೊಚ್ಚಿಕೊಂಡು ಬಂದಿತ್ತು. ಎತ್ತ ಹೋಗಬೇಕು ಎನ್ನುವುದು ತಿಳಿಯದೆ ಅದು ಜನ ನಿಬಿಡ ರಸ್ತೆಯಲ್ಲಿ ಹೆಜ್ಜೆ ಹಾಕುತ್ತಿರುವ ದೃಶ್ಯ ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.

ವಿಡಿಯೊದಲ್ಲಿ ಏನಿದೆ?

ರತ್ನಗಿರಿ ಜಿಲ್ಲೆಯ ಚಿಪ್ಲುನ್‌ ಎಂಬಲ್ಲಿ ಈ ಅಪರೂಪದ ದೃಶ್ಯ ಸೆರೆಯಾಗಿದೆ. ಚಿಪ್ಲುನ್‌ನಲ್ಲಿ ಹರಿಯುವ ಶಿವ ನದಿ ಅನೇಕ ಮೊಸಳೆಗಳಿಗೆ ಆಶ್ರಯತಾಣ. ಇಲ್ಲಿ ಜೋರಾಗಿ ಸುರಿದ ಮಳೆಗೆ ಬೃಹತ್‌ ಗಾತ್ರದ ಮೊಸಳೆಯೊಂದು ನೀರಿನಲ್ಲಿ ಕೊಚ್ಚಿಕೊಂಡು ಬಂದಿದೆ. ಅದು ರಸ್ತೆಯಲ್ಲಿ ಸಂಚರಿಸುವುದನ್ನು ಕಾರಿನಲ್ಲಿದ್ದ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ವಾಹನಗಳ ಬೆಳಕಿನಲ್ಲಿ ಮೊಸಳೆ ರಸ್ತೆಯಲ್ಲಿ ರಾಜಾರೋಷವಾಗಿ ಅಡ್ಡಾಡುತ್ತಿರುವುದು ಸ್ಪಷ್ಟವಾಗಿ ಕಂಡು ಬರುತ್ತಿದೆ.

ರತ್ನಗಿರಿ ಮೊಸಳೆಗಳಿಗೆ ಪ್ರಸಿದ್ಧ

ಭಾರತದ ಮೂರು ಮೊಸಳೆ ಪ್ರಭೇದಗಳಲ್ಲಿ ಒಂದಾದ ಮಗ್ಗರ್ ಮೊಸಳೆಗಳಿಗೆ ರತ್ನಗಿರಿ ಬಹಳ ಪ್ರಸಿದ್ಧ. ರತ್ನಗಿರಿ ಜಿಲ್ಲೆಯ ಚಿಪ್ಲುನ್ ಮತ್ತು ಇತರ ಸ್ಥಳಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಇದರಿಂದ ನದಿಗಳ ನೀರಿನ ಮಟ್ಟ ದಿನ ಕಳೆದಂತೆ ಹೆಚ್ಚಾಗುತ್ತಿದೆ. ಜುಲೈ 2ರ ತನಕ ಧಾರಾಕಾರ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Viral News: 10 ಅಡಿಯ ದೈತ್ಯ ಮೊಸಳೆಯಿಂದ ಕಬ್ಬಿಣದ ಗೇಟು ಹಾರಲು ಯತ್ನ; ಮೈ ಜುಮ್ಮೆನ್ನಿಸುವ ವಿಡಿಯೊ ಇಲ್ಲಿದೆ

ಸದ್ಯ ವಿಡಿಯೊ ನೋಡಿದರ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ. ಮೊಸಳೆ ನೆಲದ ಮೇಲೆ ಇಷ್ಟು ಸರಾಗವಾಗಿ ನಡೆಯುತ್ತದೆ ಎನ್ನುವುದು ಗೊತ್ತೆ ಇರಲಿಲ್ಲ ಎಂದು ಅನೇಕರು ಕಮೆಂಟ್‌ ಮಾಡಿದ್ದಾರೆ. ಕಣ್ಣನ್ನು ನಂಬಲೇ ಸಾಧ್ಯವಾಗುತ್ತಿಲ್ಲ ಎಂದು ಇನ್ನೂ ಹಲವರು ಉದ್ಘರಿಸಿದ್ದಾರೆ. ಇನ್ನು ಈ ಕಣ್ಣಲ್ಲಿ ಏನೇನು ನೋಡಬೇಕೋ ಎಂದು ಕೆಲವರು ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ. ನೀರು ಬಿಟ್ಟು ರಸ್ತೆಯಲ್ಲಿ ಮೊಸಳೆಗೆ ಏನು ಕೆಲಸ? ಎಂದು ನೆಟ್ಟಿಗರು ಕಾಲೆಳೆದಿದ್ದಾರೆ.

Continue Reading

ವಾಣಿಜ್ಯ

LPG Price Cut: ಎಲ್‌ಪಿಜಿ ಗ್ರಾಹಕರಿಗೆ ಗುಡ್‌ನ್ಯೂಸ್‌; ಕಮರ್ಷಿಯಲ್ ಅಡುಗೆ ಅನಿಲ ದರ 30 ರೂ. ಇಳಿಕೆ

LPG Price Cut: ಜುಲೈ 1ರಿಂದ ಜಾರಿಗೆ ಬರುವಂತೆ ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ತೂಕದ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆಯನ್ನು 30 ರೂ. ಕಡಿಮೆ ಮಾಡಿವೆ. ಇದರೊಂದಿಗೆ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಬೆಂಗಳೂರಿನಲ್ಲಿ 30 ರೂ. ಕಡಿತಗೊಂಡು 1,726 ರೂ.ಗೆ ತಲುಪಿದೆ.

VISTARANEWS.COM


on

LPG Price Cut
Koo

ನವದೆಹಲಿ: ಜುಲೈ 1ರಿಂದ ಜಾರಿಗೆ ಬರುವಂತೆ ತೈಲ ಮಾರುಕಟ್ಟೆ ಕಂಪನಿಗಳು (OMCs) 19 ಕೆಜಿ ತೂಕದ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆಯನ್ನು 30 ರೂ. ಕಡಿಮೆ ಮಾಡಿವೆ (LPG Price Cut). ಇದರೊಂದಿಗೆ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಬೆಂಗಳೂರಿನಲ್ಲಿ 30 ರೂ. ಕಡಿತಗೊಂಡು 1,726 ರೂ.ಗೆ ತಲುಪಿದೆ.

ಇನ್ನು ದೆಹಲಿಯಲ್ಲಿ ಪರಿಷ್ಕೃತ ದರ 1,646 ರೂ. ಆಗಿದೆ. ಹಿಂದೆ 1,676 ರೂ. ಆಗಿತ್ತು. ಮುಂಬೈಯಲ್ಲಿಯೂ 30 ರೂ. ಇಳಿಕೆಯಾಗಿದ್ದು ಹೊಸ ಬೆಲೆಯನ್ನು 1,598 ರೂ.ಗೆ ನಿಗದಿಪಡಿಸಲಾಗಿದೆ. ಕೋಲ್ಕತ್ತಾದಲ್ಲಿ ದರ ಪರಿಷ್ಕರಣೆಯ ಬಳಿಕ 1,756 ರೂ. ಇದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಪ್ರತಿ ತಿಂಗಳ 1ನೇ ತಾರೀಕಿನಂದು ಅಡುಗೆ ಅನಿಲ ಬೆಲೆಗಳನ್ನು ಪರಿಷ್ಕರಿಸುತ್ತವೆ. ಈ ರೀತಿಯ ಏರಿಳಿತಗಳು ಸಾಮಾನ್ಯವಾಗಿ ಇಂಧನ ವೆಚ್ಚಗಳು ಮತ್ತು ಮಾರುಕಟ್ಟೆ ಡೈನಾಮಿಕ್ಸ್ ಬದಲಾವಣೆಗಳಿಂದ ಪ್ರಭಾವಿತವಾಗಿರುತ್ತವೆ.

ವಾಣಿಜ್ಯ ಎಲ್‌ಪಿಜಿ ಬೆಲೆಗಳ ಕಡಿತವು ಈ ಸಿಲಿಂಡರ್‌ಗಳನ್ನೇ ಅವಲಂಬಿಸಿರುವ ವ್ಯವಹಾರಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡುತ್ತದೆ ಎಂದು ವಿಶ್ಲೇಷಿಸಲಾಗುತ್ತಿದೆ. ಜಾಗತಿಕ ತೈಲ ಮಾರುಕಟ್ಟೆಯ ಪ್ರವೃತ್ತಿಗಳನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುವುದಾಗಿ ಮತ್ತು ದೇಶಾದ್ಯಂತದ ಗ್ರಾಹಕರಿಗೆ ನ್ಯಾಯಯುತ ಬೆಲೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಹೊಂದಾಣಿಕೆಗಳನ್ನು ಮಾಡುವುದಾಗಿ ಒಎಂಸಿಗಳು ಭರವಸೆ ನೀಡಿವೆ.

ಸತತ ಇಳಿಕೆ

ಕಳೆದ ಕೆಲವು ತಿಂಗಳಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಕಡಿತಗೊಳಿಸಲಾಗುತ್ತಿದೆ. ಜೂನ್‌ 1ರಂದು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ 69.50 ರೂ. ಕಡಿಮೆ ಆಗಿತ್ತು. ಮೇ 1ರಂದು ದರ ಪರಿಷ್ಕರಿಸಿ 19 ರೂ. ಇಳಿಕೆ ಮಾಡಲಾಗಿತ್ತು. ಏಪ್ರಿಲ್‌ನಲ್ಲಿಯೂ 19 ಕೆಜಿಯ ಸಿಲಿಂಡರ್‌ ಬೆಲೆಯನ್ನು 30.50 ರೂ. ಇಳಿಸಲಾಗಿತ್ತು. ತೈಲ ಮಾರುಕಟ್ಟೆ ಕಂಪನಿಗಳು ಹಿಂದಿನ ಘೋಷಣೆಯನ್ನು ಮಾರ್ಚ್ 1ರಂದು ಮಾಡಿದ್ದು, ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಸಿಲಿಂಡರ್‌ಗಳ ದರಗಳನ್ನು ಹೆಚ್ಚಿಸಿದ್ದವು. ಆ ಸಮಯದಲ್ಲಿ, OMCಗಳು ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್ (LPG) ಗ್ಯಾಸ್ ಸಿಲಿಂಡರ್ ಬೆಲೆಗಳಲ್ಲಿ 19 ಕೆಜಿ ವಾಣಿಜ್ಯ LPG ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳನ್ನು 25 ರೂ. ಹೆಚ್ಚಿಸಿದ್ದವು.

ಗೃಹಬಳಕೆಯ ಸಿಲಿಂಡರ್‌ ಬೆಲೆ ಯಥಾಸ್ಥಿತಿ

ಈ ಮಧ್ಯೆ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಯಾವುದೇ ಇಳಿಕೆ ಅಥವಾ ಏರಿಕೆ ಆಗಿಲ್ಲ. ಬೆಂಗಳೂರಿನಲ್ಲಿ ಗೃಹಬಳಕೆಯ ಸಿಲಿಂಡರ್‌ ಬೆಲೆ 805.50 ರೂ. ಇದೆ. ಇನ್ನು ದೆಹಲಿಯಲ್ಲಿ 803 ರೂ., ಕೋಲ್ಕತ್ತಾದಲ್ಲಿ 829 ರೂ., ಮುಂಬೈನಲ್ಲಿ 802.50 ರೂ., ಚೆನ್ನೈನಲ್ಲಿ 818.50 ರೂ. ಇದೆ. ವಿಶೇಷವೆಂದರೆ ಕಳೆದ ವರ್ಷ ಜೂನ್‌ನಲ್ಲಿ ದೆಹಲಿಯಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 1,103 ರೂ. ಇತ್ತು. ಆಗಸ್ಟ್‌ನಲ್ಲಿ ತೈಲ ಕಂಪನಿಗಳು 200 ರೂ.ಗಳ ಕಡಿತವನ್ನು ಘೋಷಿಸಿ 903 ರೂ.ಗೆ ಇಳಿಸಿದವು. ಬಳಿಕ 2024ರ ಮಾರ್ಚ್‌ನಲ್ಲಿ ಬೆಲೆಯನ್ನು ಮತ್ತೂ 100 ರೂ. ಕಡಿತಗೊಳಿಸಲಾಯಿತು.

ಇದನ್ನೂ ಓದಿ: Mohan Bhagwat: ಮುಕೇಶ್‌ ಅಂಬಾನಿ ನಿವಾಸಕ್ಕೆ ಆಗಮಿಸಿದ ಮೋಹನ್‌ ಭಾಗವತ್‌; ಕೈ ಮುಗಿದು ಸ್ವಾಗತಿಸಿದ ನೀತಾ ಅಂಬಾನಿ

Continue Reading

ದೇಶ

Water Tank Collapsed: ಭೀಕರ ದುರಂತ; ಇಬ್ಬರು ಸ್ಥಳದಲ್ಲೇ ಸಾವು-12ಮಂದಿಗೆ ಗಂಭೀರ ಗಾಯ

Water Tank Collapsed: ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. 12 ಮಂದಿಯನ್ನು ಅವಶೇಷದಡಿಯಿಂದ ಹೊರಗೆಳೆದಿದ್ದು, ಅವರ ಸ್ಥಿತಿ ಬಹಳ ಗಂಭೀರವಾಗಿದೆ. ಸ್ಥಳದಲ್ಲಿ ಅಗ್ನಿ ಶಾಮಕ ದಳ, ಪೊಲೀಸರು, ಕಂದಾಯ ಇಲಾಖೆ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

VISTARANEWS.COM


on

Water tank Collapsed
Koo

ಮಥುರಾ: ಉತ್ತರಪ್ರದೇಶದ ಮಥುರಾ(Mathura)ದಲ್ಲಿ ವಾಟರ್‌ ಟ್ಯಾಂಕ್‌ ಕುಸಿದು(Water Tank Collapsed) ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 12ಕ್ಕೂ ಅಧಿಕ ಜನರಿಗೆ ಗಂಭೀರವಾಗಿ ಗಾಯಗಳಾಗಿವೆ. ಅವಶೇಷದಡಿಯಲ್ಲಿ ಅನೇಕ ಮನೆಗಳು ಸಿಲುಕಿಕೊಂಡಿವೆ. ಯುಪಿ ಆವಾಸ್‌ ವಿಕಾಸ್‌ ಪರಿಷತ್‌ ಅಭಿವೃದ್ಧಿಪಡಿಸಿರುವ ಕೃಷ್ಣ ವಿಹಾರ್‌ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಹತ್ತಿರ ಮನೆಗಳಿಗೆ ಭೀಕರ ಹಾನಿಯಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. 12 ಮಂದಿಯನ್ನು ಅವಶೇಷದಡಿಯಿಂದ ಹೊರಗೆಳೆದಿದ್ದು, ಅವರ ಸ್ಥಿತಿ ಬಹಳ ಗಂಭೀರವಾಗಿದೆ. ಸ್ಥಳದಲ್ಲಿ ಅಗ್ನಿ ಶಾಮಕ ದಳ, ಪೊಲೀಸರು, ಕಂದಾಯ ಇಲಾಖೆ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ

ಬರೋಬ್ಬರಿ 2.5 ಲಕ್ಷ ಲೀಟರ್‌ ನೀರಿನ ಟ್ಯಾಂಕ್‌ ಕುಸಿದು ಬಿದ್ದಿದ್ದು, ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಭೀತಿ ಇದೆ. NDRF ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರಂಭದಲ್ಲಿ ಅವಶೇಷದಡಿಯಲ್ಲಿ ಸಿಲುಕಿದ್ದ ನಾಲ್ವರನ್ನು ಹೊರತೆಗೆಯಲಾಗಿತ್ತು. ಬಳಿಕ ಈ ಸಂಖ್ಯೆ 12ಕ್ಕೆ ಏರಿಕೆ ಆಗಿತ್ತು. ಆ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಶೈಲೇಂದ್ರ ಸಿಂಗ್‌ ಹೇಳಿದ್ದಾರೆ.

ಜಿಲ್ಲಾ ಮ್ಯಾಜಿಸ್ಟ್ರೇಟ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶೈಲೇಶ್ ಕುಮಾರ್ ಪಾಂಡೆ ಸೇರಿದಂತೆ ಜಿಲ್ಲೆಯ ಎಲ್ಲಾ ಉನ್ನತ ಅಧಿಕಾರಿಗಳು ಸ್ಥಳದಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಆಹಾರ ಮತ್ತು ವಸತಿ ಸೌಲಭ್ಯ ಕಲ್ಪಿಸಲು ಕಂದಾಯ ಇಲಾಖೆ ಶ್ರಮಿಸುತ್ತಿದೆ.

ಎರಡೂ ವರ್ಷಗಳ ಹಿಂದೆ ನಿರ್ಮಾಣ

2021ರಲ್ಲಿ ಈ ಟ್ಯಾಂಕ್‌ನ ಕಾಮಗಾರಿ ಪೂರ್ಣಗೊಂಡಿತ್ತು ಎಂದು ತಿಳಿಸಿದ ಜಿಲ್ಲಾಧಿಕಾರಿಗಳು, ಗಂಗಾಜಲ ಕುಡಿಯುವ ನೀರಿನ ಯೋಜನೆಯಡಿ 6 ಕೋಟಿ ರೂ. ವೆಚ್ಚದಲ್ಲಿ ಜಲ ನಿಗಮದಿಂದ ಟ್ಯಾಂಕ್‌ ನಿರ್ಮಿಸಲಾಗಿದೆ ಎಂದು ತಿಳಿಸಿದರು. ಕೇವಲ ಮೂರು ವರ್ಷಗಳಲ್ಲಿ ಕಟ್ಟಡ ಕುಸಿತದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದರು. ಇನ್ನು ಘಟನಾ ಸ್ಥಳಕ್ಕೆ ಭಾರತೀಯ ಸೇನೆಯ ತಂಡ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ: Birla Opus: ಬಿರ್ಲಾ ಪೇಂಟ್ ಜಾಹೀರಾತು ನಿಮಗೂ ಇಷ್ಟ ಆಗಿರಬೇಕಲ್ಲವೇ? ಇದರ ಸಂದೇಶ ಏನು? ಹಿನ್ನೆಲೆ ಏನು? ಕುತೂಹಲಕರ ಮಾಹಿತಿ

Continue Reading

ದೇಶ

New Criminal Law: ಹೊಸ ಕ್ರಿಮಿನಲ್‌ ಕಾನೂನಿನಂತೆ ಬೀದಿ ವ್ಯಾಪಾರಿ ವಿರುದ್ಧ ಮೊದಲ ಎಫ್‌ಐಆರ್‌ ದಾಖಲು

New Criminal Law: ಬ್ರಿಟಿಷ್​ ವಸಾಹತು ಕಾಲದ ಕ್ರಿಮಿನಲ್‌ ಕಾನೂನುಗಳಿಗೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದ್ದು, ಇಂದು ಜಾರಿಗೆ ಬಂದಿದ್ದು, ಹೊಸದಿಲ್ಲಿಯ ರೈಲ್ವೆ ನಿಲ್ದಾಣದ ಬಳಿ ರಸ್ತೆಯ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ ಬೀದಿ ವ್ಯಾಪಾರಿಯ ವಿರುದ್ಧ ಮೊದಲ ಎಫ್ಐಆರ್ ದಾಖಲಿಸಲಾಗಿದೆ. ಹೊಸ ಕ್ರಿಮಿನಲ್ ಕೋಡ್‌ನ ಸೆಕ್ಷನ್ 285ರ ಅಡಿಯಲ್ಲಿ ಈ ಎಫ್ಐಆರ್ ದಾಖಲಿಸಲಾಗಿದೆ.

VISTARANEWS.COM


on

New Criminal Law
Koo

ನವದೆಹಲಿ: ಬ್ರಿಟಿಷ್​ ವಸಾಹತು ಕಾಲದ ಕ್ರಿಮಿನಲ್‌ ಕಾನೂನುಗಳಿಗೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದ್ದು, ಇಂದು ಜಾರಿಗೆ ಬಂದಿದೆ (New Criminal Law). ಹೊಸ ಕಾನೂನಿನ ಪ್ರಕಾರ ಹೊಸದಿಲ್ಲಿಯ ರೈಲ್ವೆ ನಿಲ್ದಾಣದ ಬಳಿ ರಸ್ತೆಯ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ ಬೀದಿ ವ್ಯಾಪಾರಿಯ ವಿರುದ್ಧ ಮೊದಲ ಎಫ್ಐಆರ್ ದಾಖಲಿಸಲಾಗಿದೆ.

ಹೊಸ ಕ್ರಿಮಿನಲ್ ಕೋಡ್‌ನ ಸೆಕ್ಷನ್ 285ರ ಅಡಿಯಲ್ಲಿ ಈ ಎಫ್ಐಆರ್ ದಾಖಲಿಸಲಾಗಿದೆ. ಈ ಕಾನೂನಿನ ಪ್ರಕಾರ ಯಾವುದೇ ಸಾರ್ವಜನಿಕ ರಸ್ತೆಗೆ ಅಡ್ಡಿಪಡಿಸಿದರೆ ಅಥವಾ ಸಾರ್ವಜನಿಕ ಮಾರ್ಗದಲ್ಲಿ ಸಂಚರಿಸುವ ಯಾವುದೇ ವ್ಯಕ್ತಿಗೆ ಅಪಾಯ ಅಥವಾ ಗಾಯವನ್ನು ಉಂಟು ಮಾಡಿದರೆ 5 ಸಾವಿರ ರೂಪಾಯಿವರೆಗೆ ದಂಡ ವಿಧಿಸಬಹುದಾಗಿದೆ.

ಭಾನುವಾರ ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ರಸ್ತೆಯಲ್ಲಿ ನೀರಿನ ಬಾಟಲಿಗಳು ಮತ್ತು ಗುಟ್ಕಾ ಮಾರಾಟ ಮಾಡುವ ಬೀದಿ ವ್ಯಾಪಾರಿಯನ್ನು ಗುರುತಿಸಿದ ನಂತರ ಎಫ್ಐಆರ್ ದಾಖಲಿಸಲಾಗಿದೆ. ಬೀದಿ ವ್ಯಾಪಾರಿಯ ತಾತ್ಕಾಲಿಕ ಅಂಗಡಿಯು ರಸ್ತೆಗೆ ಅಡ್ಡವಾಗಿ ನಿಂತಿತ್ತು. ಅದನ್ನು ಸ್ಥಳಾಂತರಿಸಲು ಪೊಲೀಸ್‌ ಸಿಬ್ಬಂದಿ ಕೇಳಿಕೊಂಡರೂ ಒಪ್ಪದೇ ಇದ್ದಾಗ ಎಫ್ಐಆರ್ ದಾಖಲಿಸಲಾಗಿದೆ.

ಎಫ್‌ಐಆರ್‌ನಲ್ಲಿ ಏನಿದೆ?

ಬೀದಿ ಬದಿ ವ್ಯಾಪಾರಿ ಭಾನುವಾರ ರಾತ್ರಿ ನವದೆಹಲಿ ರೈಲ್ವೆ ನಿಲ್ದಾಣದ ಬಳಿಯ ಪಾದಚಾರಿ ಮೇಲ್ಸೇತುವೆಯ ಕೆಳಗೆ ತನ್ನ ಅಂಗಡಿಯನ್ನು ನಿಲ್ಲಿಸಿದ್ದ ಎಂದು ಹೇಳಲಾಗಿದೆ. “ಆ ವ್ಯಾಪಾರಿಯು ಬೀದಿಯಲ್ಲಿ ನೀರಿನ ಬಾಟಲಿ, ಬೀಡಿ ಮತ್ತು ಸಿಗರೇಟುಗಳನ್ನು ಮಾರಾಟ ಮಾಡುತ್ತಿದ್ದ. ಸಾರ್ವಜನಿಕರ ಸುಗಮ ಸಂಚಾರಕ್ಕೆ ಆತನ ಅಂಗಡಿ ಅಡ್ಡಿಯಾಗುತ್ತಿತ್ತು. ರಸ್ತೆಯಿಂದ ಅಂಗಡಿಯನ್ನು ತೆರವುಗೊಳಿಸುವಂತೆ ಸಬ್ ಇನ್ಸ್‌ಪೆಕ್ಟರ್ ಆ ವ್ಯಾಪಾರಿ ಬಳಿ ಹಲವು ಬಾರಿ ಮನವಿ ಮಾಡಿದರು. ಆದರೆ ಆತ ಅದಕ್ಕೆ ಒಪ್ಪಲಿಲ್ಲ” ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ. ವ್ಯಾಪಾರಿಯನ್ನು ಬಿಹಾರದ ಪಾಟ್ನಾ ಮೂಲದ ಪಂಕಜ್ ಕುಮಾರ್ ಎಂದು ಗುರುತಿಸಲಾಗಿದೆ.

ಏನಿದು ಹೊಸ ಕಾನೂನು?

ಐಪಿಸಿಯನ್ನು ಭಾರತೀಯ ನ್ಯಾಯ ಸಂಹಿತೆ-2023, ಸಿಆರ್‌ಪಿಸಿಯನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಯನ್ನು ಭಾರತೀಯ ಸಾಕ್ಷ್ಯ ವಿಧೇಯಕ-2023 ಎಂಬುದಾಗಿ ಮಾರ್ಪಡಿಸಲಾಗಿದೆ. ಮೂರು ಕ್ರಿಮಿನಲ್ ಕಾನೂನುಗಳನ್ನು ಕಳೆದ ವರ್ಷ ಡಿಸೆಂಬರ್‌ನಲ್ಲಿ ಸಂಸತ್ತು ಅಂಗೀಕರಿಸಿತ್ತು. ಅದೇ ತಿಂಗಳು ರಾಷ್ಟ್ರಪತಿಗಳ ಒಪ್ಪಿಗೆ ಪಡೆಯಿತು. ಆದರೆ ಅವು ಜಾರಿಗೆ ಬಂದಿರಲಿಲ್ಲ. ಈ ವರ್ಷ ಫೆಬ್ರವರಿ 25ರಂದು ಮೂರು ಕಾನೂನುಗಳು ಜುಲೈ 1ರಂದು ಜಾರಿಗೆ ಬರುತ್ತವೆ ಎಂದು ಸರ್ಕಾರವು ಅಧಿಸೂಚನೆಯನ್ನು ಹೊರಡಿಸಿತ್ತು.

ಭಾರತೀಯ ನ್ಯಾಯ ಸಂಹಿತಾ (Indian Code), ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (Indian Civil Protection Code) ಮತ್ತು ಭಾರತೀಯ ಸಾಕ್ಷಿ ಕಾಯಿದೆಯು (Indian Evidence Act) ಇವೇ ಆ ಮೂರು ಹೊಸ ಕಾನೂನುಗಳು. ಬ್ರಿಟಿಷರ ಕಾಲದ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು 1872ರ ಭಾರತೀಯ ಸಾಕ್ಷಿ ಕಾಯಿದೆಗೆ ತಿದ್ದುಪಡಿ ಮಾಡಿ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯಿದೆ ಎಂದು ಬದಲಿಸಲಾಗಿದೆ

Continue Reading
Advertisement
Viral News
ವೈರಲ್ ನ್ಯೂಸ್30 seconds ago

Viral News: ನೀರ ಬಿಟ್ಟು ರಸ್ತೆಗೆ ಬಂದ ಮೊಸಳೆಗೆ ಇಲ್ಲೇನು ಕೆಲಸ? ಅಪರೂಪದ Video ಇಲ್ಲಿದೆ ನೋಡಿ

Dinesh Karthik
ಕ್ರಿಕೆಟ್3 mins ago

Dinesh Karthik : ಆರ್​​ಸಿಬಿ ಬ್ಯಾಟಿಂಗ್ ಕೋಚ್​, ಮಾರ್ಗದರ್ಶಕರಾಗಿ ದಿನೇಶ್​ ಕಾರ್ತಿಕ್ ನೇಮಕ

Actor Darshan Family Jail Entry Police personnel taken in a private car
ಸ್ಯಾಂಡಲ್ ವುಡ್6 mins ago

Actor Darshan: ದರ್ಶನ್ ಕುಟುಂಬ ಜೈಲಿಗೆ ಎಂಟ್ರಿ; ಖಾಸಗಿ ಕಾರಿನಲ್ಲಿ ಕರೆದೊಯ್ದ ಪೊಲೀಸ್ ಸಿಬ್ಬಂದಿ

Dengue fever rises across the state including Bengaluru BBMP Commissioner also get fever
ಪ್ರಮುಖ ಸುದ್ದಿ13 mins ago

Dengue Fever: ರಾಜಧಾನಿಯಲ್ಲಿ ಡೆಂಗ್ಯು ಜ್ವರಕ್ಕೆ ಒಂದು ಬಲಿ, ರಾಜ್ಯದಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆ

Gold Rate Today
ಕರ್ನಾಟಕ13 mins ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ದರ ಹೇಗಿದೆ?

Jasprit Bumrah
ಕ್ರೀಡೆ23 mins ago

Jasprit Bumrah : ಜಸ್​ಪ್ರಿತ್ ಬುಮ್ರಾ ವೈಟ್ ಬಾಲ್ ಕ್ರಿಕೆಟ್​​ನ ಅತ್ಯುತ್ತಮ ಬೌಲರ್​ ಎಂದು ಹೊಗಳಿದ ಮೈಕಲ್ ವಾನ್

assault case
ಚಿತ್ರದುರ್ಗ25 mins ago

Assault Case : ಕಚೇರಿಗೆ ನುಗ್ಗಿ ದರದರನೆ ಎಳೆದು ಪಿಡಿಓ ಥಳಿಸಿದ ಪುಂಡರ ಗ್ಯಾಂಗ್‌!

Actor Darshan is like my son says hamsalekha
ಸ್ಯಾಂಡಲ್ ವುಡ್46 mins ago

Actor Darshan: ದರ್ಶನ್ ನನ್ನ ಮಗು, ಆತ ಕೊಟ್ಟ ಕೊಡುಗೆ ಕಡೆ ನೋಡೋಣ ಎಂದ ಹಂಸಲೇಖ!

Rohit Sharma
ಪ್ರಮುಖ ಸುದ್ದಿ1 hour ago

Rohit Sharma: ನನಗೆ ಟಿ20ಗೆ ನಿವೃತ್ತಿ ಘೋಷಿಸಲು ಮನಸ್ಸು ಇರಲಿಲ್ಲ; ಆಘಾತಕಾರಿ ಹೇಳಿಕೆ ನೀಡಿದ ರೋಹಿತ್​ ಶರ್ಮಾ

LPG Price Cut
ವಾಣಿಜ್ಯ1 hour ago

LPG Price Cut: ಎಲ್‌ಪಿಜಿ ಗ್ರಾಹಕರಿಗೆ ಗುಡ್‌ನ್ಯೂಸ್‌; ಕಮರ್ಷಿಯಲ್ ಅಡುಗೆ ಅನಿಲ ದರ 30 ರೂ. ಇಳಿಕೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ17 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು23 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌