Site icon Vistara News

Amethi Unrest: ಕಾಂಗ್ರೆಸ್‌ ಕಚೇರಿ ಮೇಲೆ ಕಿಡಿಗೇಡಿಗಳಿಂದ ಅಟ್ಯಾಕ್‌; ಬಿಜೆಪಿಯ ದುಷ್ಕೃತ್ಯ ಎಂದು ಆರೋಪ

amethi unrest

ಅಮೇಥಿ: ಉತ್ತರಪ್ರದೇಶ ಅಮೇಥಿ(Amethi Unrest)ಯಲ್ಲಿ ಕಾಂಗ್ರೆಸ್‌ ಕಚೇರಿ(Congress Office)ಯ ಎದುರು ನಿಲ್ಲಿಸಿದ್ದ ಕಾರುಗಳನ್ನು ಕಿಡಿಗೇಡಿಗಳು ಭಾನುವಾರ ತಡರಾತ್ರಿ ಧ್ವಂಸಗೊಳಿಸಿದ್ದಾರೆ. ಇದು ಬಿಜೆಪಿ ಕಾರ್ಯಕರ್ತರ(BJP workers) ದುಷ್ಕೃತ್ಯ ಎಂದು ಕಾಂಗ್ರೆಸ್‌ ಆರೋಪಿಸಿದೆ. ಬಿಜೆಪಿ ಕಾರ್ಯಕರ್ತರ ಪುಂಡಾಟಿಕೆ ಮತ್ತೆ ಮುಂದುವರೆದಿದ್ದು, ದಾಳಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಎಕ್ಸ್‌ನಲ್ಲಿ ಟ್ವೀಟ್‌ ಮಾಡಿ ಮಾಡಿದೆ. ಈ ಬಗ್ಗೆ ಕಾಂಗ್ರೆಸ್‌ ವಕ್ತಾರೆ ಸುಪ್ರಿಯಾ ಶ್ರೀನಾಥ್‌(Supriya Shrinathe) ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿ ಪುಂಡಾಟ ಮೆರೆಯುತ್ತಿದ್ದರೂ ಪೊಲೀಸರು ಮೌನವಹಿಸಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ಉತ್ತರಪ್ರದೇಶದ ಅಮೇಥಿಯಲ್ಲಿ ಸ್ಮೃತಿ ಇರಾನಿ ಮತ್ತಿ ಬಿಜೆಪಿ ಕಾರ್ಯಕರ್ತರು ಭಯಬಿದ್ದಿದ್ದಾರೆ. ಸೋಲಿನ ಭೀತಿಗೊಳಗಾಗಿರುವ ಬಿಜೆಪಿ ಪುಂಡಾಟಕ್ಕೆ ಮುಂದಾಗಿದೆ. ಅಮೇಥಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಸಾಮಾನ್ಯ ಜನರ ಮೇಲೆ ಬಿಜೆಪಿ ಗೂಂಡಾಗಳು ಕೋಲು ದೊಣ್ಣೆಗಳಿಂದ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಿಜೆಪಿ ಈ ಬಾರಿ ಚುನಾವಣೆಯಲ್ಲಿ ಹೀನಾಯವಾಗಿ ಸೋಲುತ್ತದೆ ಎಂಬುದನ್ನು ಈ ಘಟನೆ ತೋರಿಸುತ್ತದೆ. ಇಷ್ಟು ದೊಡ್ಡ ಘಟನೆ ನಡೆಯುತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ. ಬಿಜೆಪಿಗರೇ ಬದಲಾವಣೆ ಗಾಳಿ ಬೀಸುತ್ತಿದೆ. ವಾಹನಗಳನ್ನು ಧ್ವಂಸಗೊಳಿಸುವುದೊಂದೇ ಸಮಸ್ಯೆಗ ಪರಿಹಾರ ಅಲ್ಲ ಎಂದು ಅವರು ಟಾಂಗ್‌ ಕೊಟ್ಟಿದ್ದಾರೆ. ಘಟನೆ ಕುರಿತು ಪೊಲೀಸರು ಪ್ರತಿಕ್ರಿಯಿಸಿದ್ದು, ಘಟನೆ ಕುರಿತು ಗೌರಿಗಂಜ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Boat Capsizes: ಜಲಾವೃತ ಸೇತುವೆಗೆ ದೋಣಿ ಡಿಕ್ಕಿ; ಶಾಕಿಂಗ್‌ ವಿಡಿಯೋ ವೈರಲ್‌

ಅಮೇಥಿ ಕ್ಷೇತ್ರದಲ್ಲಿ ಸೋನಿಯಾ ಗಾಂಧಿ ಆಪ್ತ ಕಿಶೋರಿ ಲಾಲ್‌ ಶರ್ಮಾ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿದೆ. ಮೊದಲಿಗೆ ಪ್ರಿಯಾಂಕಾ ಗಾಂಧಿ ವಾಧ್ರಾ ಹಾಗೂ ಅಮೇಥಿಯಿಂದ ರಾಹುಲ್‌ ಗಾಂಧಿ ಕಣಕ್ಕಿಳಿಯುತ್ತಾರೆ ಎಂಬ ವಿಚಾರ ಬಹಳ ಚರ್ಚೆಯಾಗಿತ್ತು. ಅಮೇಥಿಯಲ್ಲಿ 2004, 2009, 2014ರವರೆಗೆ ರಾಹುಲ್‌ ಗಾಂಧಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರೆ 2019ರಲ್ಲಿ ಬಿಜೆಪಿ ಸ್ಮೃತಿ ಇರಾನಿ ವಿರುದ್ಧ ಸೋಲನ್ನು ಅನುಭವಿಸಿದ್ದರು. ಈ ಬಾರಿ ಗಾಂಧಿ ಕುಟುಂಬದ ಆಪ್ತ ಕಿಶೋರಿ ಲಾಲ್‌ ಅವರನ್ನು ಅಮೇಥಿಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಕಣಕ್ಕಿಳಿಸಿ ಪಕ್ಷ ಅದೃಷ್ಟ ಪರೀಕ್ಷೆಗೆ ಮುಂದಾಗಿದೆ.

Exit mobile version