ನವದೆಹಲಿ: ಗೋದ್ರಾ ಹತ್ಯಾಕಾಂಡಕ್ಕೆ ನರೇಂದ್ರ ಮೋದಿ (Narendra Modi) ಅವರೇ ಕಾರಣ ಎಂಬುದಾಗಿ ಬಿಂಬಿಸಿರುವ ಬಿಬಿಸಿ ಡಾಕ್ಯುಮೆಂಟರಿ (BBC Documentary) ಕುರಿತು ಭಾರತದಲ್ಲಿ ಚರ್ಚೆಗಳು ನಡೆಯುತ್ತಿರುವ, ಜಾಗತಿಕವಾಗಿ ಸುದ್ದಿಯಾಗಿರುವ ಬೆನ್ನಲ್ಲೇ, “ಭಾರತದಲ್ಲಿ ಜನರ ಮನಸ್ಸುಗಳನ್ನು ಒಡೆಯಲು ಯತ್ನಿಸಲಾಗುತ್ತಿದೆ” ಎಂದು ನರೇಂದ್ರ ಮೋದಿ ಹೇಳಿದ್ದಾರೆ.
ನ್ಯಾಷನಲ್ ಕೆಡೆಟ್ ಕಾರ್ಪ್ಸ್ (NCC) 75ನೇ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಭಾರತವನ್ನು ಇಬ್ಭಾಗ ಮಾಡಲು ಕೆಲವು ದುಷ್ಟಶಕ್ತಿಗಳು ಯತ್ನಿಸುತ್ತಿವೆ. ಮಕ್ಕಳ ಮನಸ್ಸಿನಲ್ಲಿ ಒಡಕು ಮೂಡಿಸಲು ಪ್ರಯತ್ನ ನಡೆಯುತ್ತಿದೆ. ಆದರೆ, ಇಂತಹ ಯಾವುದೇ ಪ್ರಯತ್ನಗಳು ಫಲ ಕೊಡುವುದಿಲ್ಲ. ಭಾರತದ ಒಗ್ಗಟ್ಟನ್ನು ಮುರಿಯಲು ಯಾರಿಂದಲೂ ಸಾಧ್ಯವಿಲ್ಲ” ಎಂದಿದ್ದಾರೆ.
“ಭಾರತವು ಹಿರಿಮೆಯನ್ನು ಸಾಧಿಸುವತ್ತ ಸಾಗುತ್ತಿದೆ. ವೈವಿಧ್ಯತೆಯ ಮಧ್ಯೆಯೂ ಭಾರತೀಯರು ಒಗ್ಗಟ್ಟಾಗಿದ್ದೇವೆ. ಇದೇ ನಮ್ಮ ಸಾಮರ್ಥ್ಯವಾಗಿದೆ. ಹಾಗಾಗಿ, ನಮ್ಮನ್ನು ವಿಭಜಿಸಲು ಯಾರಿಂದಲೂ ಸಾಧ್ಯವಿಲ್ಲ. ದೇಶದ ಒಗ್ಗಟ್ಟು ಹೀಗೆಯೇ ಮುಂದುವರಿಯುತ್ತದೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ: BBC Documentary: ಸಾಕ್ಷ್ಯಚಿತ್ರದ ವಿಚಾರದಲ್ಲಿ ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ ಸಿದ್ದರಾಮಯ್ಯ !