ದೇಶ
Adani Row: ಅದಾನಿ ಪ್ರಕರಣದ ಕುರಿತು ಮೌನ ಮುರಿದ ಅಮಿತ್ ಶಾ, ತನಿಖೆ ಬಗ್ಗೆ ಹೇಳಿದ್ದೇನು?
Adani Row: ಗೌತಮ್ ಅದಾನಿ-ಹಿಂಡನ್‌ಬರ್ಗ್ ವರದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮೌನ ಮುರಿದಿದ್ದಾರೆ. ಯಾರೇ ತಪ್ಪು ಮಾಡಿದ್ದರೂ, ಅವರಿಗೆ ಶಿಕ್ಷೆಯಾಗಲಿದೆ ಎಂದು ಹೇಳಿದ್ದಾರೆ.
ನವದೆಹಲಿ: ದೇಶಾದ್ಯಂತ ಸುದ್ದಿಯಾಗಿರುವ, ಸಂಸತ್ತಿನಲ್ಲಿ ಭಾರಿ ಗಲಾಟೆಗೆ ಕಾರಣವಾಗಿರುವ, ಷೇರು ಮಾರುಕಟ್ಟೆಯ ಕುಸಿತಕ್ಕೂ ಕಾರಣವಾದ ಗೌತಮ್ ಅದಾನಿ-ಹಿಂಡನ್‌ಬರ್ಗ್ ವರದಿ (Adani Row) ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯಿಸಿದ್ದಾರೆ. “ದೇಶದಲ್ಲಿ ಯಾರೇ ತಪ್ಪೆಸಗಿದ್ದರೂ, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆ” ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ನಡೆದ ಇಂಡಿಯಾ ಟುಡೇ ಕಾನ್‌ಕ್ಲೇವ್‌ನಲ್ಲಿ ಭಾಗವಹಿಸಿದ ಅವರು, ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದರು. “ದೇಶದಲ್ಲಿ ಯಾರು ತಪ್ಪು ಮಾಡಿದ್ದರೂ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆ. ಎಲ್ಲರೂ ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇಡಬೇಕು. ಕಾನೂನಿನ ಕಣ್ಣಿನಿಂದ ಯಾರೂ ತಪ್ಪಿಸಿಕೊಳ್ಳಲು ಆಗುವುದಿಲ್ಲ” ಎಂದು ತಿಳಿಸಿದರು.
“ಅದಾನಿ ಪ್ರಕರಣದ ಕುರಿತು ಸೆಬಿ ತನಿಖೆ ನಡೆಸುತ್ತಿದೆ. ತನಿಖೆಗೆ ಸುಪ್ರೀಂ ಕೋರ್ಟ್ ಇಬ್ಬರು ಸದಸ್ಯರ ಸಮಿತಿ ರಚಿಸಿದ್ದಾರೆ. ಯಾರು ಬೇಕಾದರೂ ಅದಾನಿ ವಿರುದ್ಧ ಸಾಕ್ಷ್ಯಗಳನ್ನು ಕೋರ್ಟ್‌ಗೆ ಒದಗಿಸಬಹುದು. ಪ್ರಕರಣದ ಕುರಿತು ಈಗಾಗಲೇ ತನಿಖೆ ನಡೆಸಲಾಗುತ್ತಿದೆ ಎಂಬುದಾಗಿ ಸೆಬಿಯು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ. ಪ್ರಕರಣದಲ್ಲಿ ಪ್ರತಿಪಕ್ಷಗಳ ಆರೋಪ ಹುರುಳಿಲ್ಲದ್ದು” ಎಂದು ಸ್ಪಷ್ಟಪಡಿಸಿದರು.
ತನಿಖಾ ಸಂಸ್ಥೆಗಳ ದುರ್ಬಳಕೆ ಆರೋಪದ ಬಗ್ಗೆ ಪ್ರತಿಕ್ರಿಯೆ
ಕೇಂದ್ರ ಸರ್ಕಾರವು ಪ್ರತಿಪಕ್ಷಗಳನ್ನು ಹಣಿಯಲು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ಆರೋಪದ ಕುರಿತು ಕೂಡ ಅಮಿತ್ ಶಾ ಪ್ರತಿಕ್ರಿಯಿಸಿದರು. “ಕೇಂದ್ರೀಯ ತನಿಖಾ ಸಂಸ್ಥೆ (CBI) ಹಾಗೂ ಜಾರಿ ನಿರ್ದೇಶನಾಲಯವು (ED) ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿವೆ. ಯಾರ ವಿರುದ್ಧ ಆರೋಪಗಳು ಇವೆಯೋ, ಅವರ ವಿರುದ್ಧ ತನಿಖೆ ನಡೆಸಲಾಗುತ್ತಿದೆ. ಇಷ್ಟೆಲ್ಲ ಆರೋಪ ಮಾಡುವ ಪ್ರತಿಪಕ್ಷಗಳು ಈ ಕುರಿತು ಕೋರ್ಟ್‌ಗೆ ಅರ್ಜಿಯನ್ನೇಕೆ ಸಲ್ಲಿಸುತ್ತಿಲ್ಲ? ಪ್ರತಿಪಕ್ಷಗಳು ಕೂಡ ಉತ್ತಮ ವಕೀಲರನ್ನೇ ಹೊಂದಿವೆಯಲ್ಲ” ಎಂದು ಕುಟುಕಿದರು.
ಮೋದಿ ಹ್ಯಾಟ್ರಿಕ್ ಖಚಿತ ಎಂದ ಶಾ
ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವುದು ಖಚಿತ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದರು. “ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜಮ್ಮು-ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಲಾಗಿದೆ. ಈಶಾನ್ಯ ರಾಜ್ಯಗಳಲ್ಲಿ ಹಿಂಸಾಚಾರವನ್ನು ನಿಗ್ರಹಿಸಲಾಗಿದೆ. ನಕ್ಸಲರನ್ನು ಮಟ್ಟಹಾಕಲಾಗುತ್ತಿದೆ. ಕೆಣಕಿದ ಪಾಕಿಸ್ತಾನಕ್ಕೆ ಸರ್ಜಿಕಲ್ ಸ್ಟ್ರೈಕ್, ಬಾಲಾಕೋಟ್ ದಾಳಿ ಮೂಲಕ ತಿರುಗೇಟು ನೀಡಲಾಗಿದೆ. ಹಾಗಾಗಿ, ಈಗಲೂ ಜನ ಮೋದಿ ಅವರ ಮೇಲೆ ಅಪಾರ ವಿಶ್ವಾಸ ಇಟ್ಟಿದ್ದಾರೆ. ನಾನು ದೇಶದ ಪ್ರತಿಯೊಂದು ಭಾಗಕ್ಕೂ ತೆರಳಿದ್ದೇನೆ. ಅಲ್ಲೆಲ್ಲ, ಜನ ಮೋದಿ ಅವರನ್ನೇ ಬೆಂಬಲಿಸುತ್ತಿದ್ದಾರೆ. ಹಾಗಾಗಿ, ಮುಂದಿನ ಚುನಾವಣೆಯಲ್ಲೂ ಎನ್‌ಡಿಎ ಗೆಲುವು ನಿಶ್ಚಿತ” ಎಂದು ಹೇಳಿದರು.
ಇದನ್ನೂ ಓದಿ: Parliament Budget session: ರಾಹುಲ್, ಅದಾನಿ ಗಲಾಟೆ, ಸಂಸತ್ ಕಲಾಪ ಮತ್ತೆ ಮುಂದೂಡಿಕೆ
ದೇಶ
Supreme Court: ನೇಣಿಗೇರಿಸುವುದು ಕ್ರೂರತನವೇ? ಈ ಬಗ್ಗೆ ಚರ್ಚಿಸಿ ಎಂದು ಕೇಂದ್ರಕ್ಕೆ ಸೂಚಿಸಿದ ಸುಪ್ರೀಂ ಕೋರ್ಟ್
Supreme Court: ಮರಣದಂಡನೆಗೆ ಶಿಕ್ಷೆಗೆ ಗುರಿಯಾದ ಅಪರಾಧಿಯನ್ನು ನೇಣಿಗೇರಿಸುವುದು(Hanging) ಕ್ರೂರತನವೇ? ಈ ಬಗ್ಗೆ ಚರ್ಚೆ ನಡೆಸುವಂತೆ ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ. ಕಡಿಮೆ ನೋವಿನ ಮೂಲಕ ಮರಣದಂಡನೆ ಜಾರಿ ಮಾಡುವ ಪರ್ಯಾಯ ಮಾರ್ಗ ಶೋಧಕ್ಕೂ ಸೂಚಿಸಿದೆ.
ನವದೆಹಲಿ: ನೇಣಿಗೇರಿಸುವ ಮೂಲಕ ಮರಣದಂಡನೆಯನ್ನು(Hanging) ಜಾರಿಗೊಳಿಸುವುದಕ್ಕಿಂತಲೂ ಕಡಿಮೆ ನೋವು ಆಗುವ ಮೂಲಕ ಮರಣದಂಡನೆಯನ್ನು ಜಾರಿ ಮಾಡುವ ಪರ್ಯಾಯ ಮಾರ್ಗವನ್ನು ಶೋಧಿಸಬಹುದೇ ಎಂದು ಸುಪ್ರೀಂ ಕೋರ್ಟ್ (Supreme Court) ಕೇಂದ್ರ ಸರ್ಕಾರಕ್ಕೆ ಕೇಳಿದೆ. ಈ ಬಗ್ಗೆ ಚರ್ಚೆ ಮಾಡುವಂತೆ ದೇಶದ ಅತ್ಯುನ್ನತ ನ್ಯಾಯಾಲಯವು ಸೂಚಿಸಿದೆ.
ನೇಣು ಹಾಕುವುದಕ್ಕಿಂತ ಕಡಿಮೆ ನೋವಿನ ವಿಧಾನವಿದೆಯೇ ಎಂದು ಪರಿಶೀಲಿಸಲು ಚರ್ಚೆಯನ್ನು ಪ್ರಾರಂಭಿಸಲು ಮತ್ತು ಮಾಹಿತಿಯನ್ನು ಸಂಗ್ರಹಿಸಲು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ನೇಣು ಹಾಕುವ ಮೂಲಕ ಉಂಟಾಗುವ ಪರಿಣಾಮಗಳ ಕುರಿತಾದ ಅಧ್ಯಯನ ಮಾಹಿತಿಯೊಂದಿಗೆ ಬನ್ನಿ ಎಂದು ಕೇಂದ್ರ ಸರ್ಕಾರ ಅಟಾರ್ನಿ ಜನರಲ್ ಅವರಿಗೆ ಆರ್ ವೆಂಕಟರಮಣಿ ಅವರಿಗೆ ಕೋರಿದೆ.
ಮರಣದಂಡನೆಗೆ ಗುರಿಯಾದ ಅಪರಾಧಿಗಳಿಗೆ ನೋವು ರಹಿತವಾಗಿ ಶಿಕ್ಷೆಯನ್ನು ಜಾರಿಗೊಳಿಸುವ ಕುರಿತು ದಾಖಲಾಗಿರುವ ಪಿಐಎಲ್‌ಗಳ ವಿಚಾರಣೆಯನ್ನು ನ್ಯಾಯಾಲಯವು ಕೈಗೆತ್ತಿಕೊಂಡಿದೆ. ನೇಣು ಹಾಕುವ ಬದಲು ಗುಂಡು ಹಾರಿಸುವುದು, ಮಾರಣಾಂತಿಕ ಚುಚ್ಚುಮದ್ದು ನೀಡುವುದು ಅಥವಾ ವಿದ್ಯುತ್ ಕುರ್ಚಿ ಮೂಲಕ ಸಾಯಿಸುವುದು ಸೇರಿದಂತೆ ಇತರ ಕ್ರಮಗಳನ್ನು ಅರ್ಜಿಯಲ್ಲಿ ಮಾಹಿತಿ ನೀಡಲಾಗಿದೆ. ಕುತ್ತಿಗೆಗೆ ನೇಣು ಹಾಕಿ ಮರಣದಂಡನೆಯನ್ನು ಜಾರಿಗೊಳಿಸುವ ಪ್ರಕ್ರಿಯೆ ಅತ್ಯಂತ ಕ್ರೂರವಾಗಿದೆ ಎಂದು, ಕಾನೂನು ಆಯೋಗದ ವರದಿಯನ್ನು ಓದಿ ವಕೀಲ ರಿಷಿ ಮಲ್ಹೋತ್ರಾ ಅವರು ಕೋರ್ಟ್‌ಗೆ ತಿಳಿಸಿದರು.
ಹೌದು, ಇದೊಂದು ಚರ್ಚಾ ವಿಷಯವಾಗಿದೆ. ಈ ಕುರಿತು ನಮಗೆ ಕೆಲವು ವೈಜ್ಞಾನಿಕ ದತ್ತಾಂಶಗಳು ನಮ್ಮ ಬಳಿ ಇಲ್ಲ. ನೋವಿಗೆ ಕಾರಣವಾಗುವ ಕೆಲವು ಅಧ್ಯಯನಗಳನ್ನು ನಮಗೆ ಕೊಡಿ. ನಾವು ಒಂದು ಸಮಿತಿಯನ್ನು ರಚಿಸಬಹುದು, ಈ ಕುರಿತು ಮುಂದಿನ ವಿಚಾಣೆಯಲ್ಲಿ ಚರ್ಚಿಸಬಹುದು ಎಂದು ಸಿಜೆಐ ಡಿ ವೈ ಚಂದ್ರಚೂಡ್ ಹೇಳಿದರು. ಅಲ್ಲದೇ, ಮುಂದಿನ ವಿಚಾರಣೆಯನ್ನು ಮೇ 2ಕ್ಕೆ ನಿಗದಿ ಮಾಡಿದ್ದಾರೆ.
ವಿಚಾರಣೆಯ ಸಂದರ್ಭದಲ್ಲಿ ಜಸ್ಟೀಸ್ ಪಿ ಎಸ್ ನರಸಿಂಹ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಇಂದಿಗೂ ಸಾವಿನಲ್ಲಿ ಘನತೆ ಇರಬೇಕೆಂಬ ಪ್ರಶ್ನೆ ಚರ್ಚೆಯಾಗುತ್ತಲೇ ಇದೆ. ಅದು ಕಡಿಮೆ ನೋವಿನಿಂದ ಕೂಡಿರಬೇಕು. ಸದ್ಯದ ಪರಿಸ್ಥಿತಿಯ ನೇಣು ಹಾಕುವುದು ತೃಪ್ತಿಕರ ಸಾಧನವಾಗಿದೆ. ಹಾಗಾದಲ್ಲಿ, ಇಂಜೆಕ್ಷನ್ ಕೊಟ್ಟು ಸಾಯಿಸುವುದು ಪರಿಗಣಿಸಬಹುದೇ ಎಂದು ಜಸ್ಟೀಸ್ ಹೇಳಿದರು.
ಚುಚ್ಚುಮದ್ದು ಮೂಲಕ ಮರಣ ದಂಡನೆ ಶಿಕ್ಷೆಯ ಜಾರಿ ಮಾಡುವುದು ನೋವಿನಿಂದ ಕೊಡಿದೆ. ಶೂಟ್ ಮಾಡುವ ಮೂಲಕ ಶಿಕ್ಷೆ ಜಾರಿ ಮಾಡುವುದು ಮಿಲಿಟರಿ ಆಡಳಿತಗಳ ನೆಚ್ಚಿನ ಟೈಮ್‌ಪಾಸ್ ಆಗಿತ್ತು. ಇದು ಮಾನವ ಹಕ್ಕುಗಳ ಸಂಪೂರ್ಣ ಉಲ್ಲಂಘನೆಯಾಗಿದೆ ಎಂದು ಸಿಜೆಐ ಚಂದ್ರಚೂಡ್ ಅವರು ಹೇಳಿದರು.
ಕರ್ನಾಟಕ
Nitin Gadkari: ಗಡ್ಕರಿಗೆ ಬೆದರಿಕೆ ಕರೆ ಮಾಡಿದ್ದು ಮಂಗಳೂರು ಮಹಿಳೆಯ ಮೊಬೈಲ್‌ನಿಂದ, ಏನಿದು ಕೇಸ್?
Nitin Gadkari: ಕಳೆದ ಜನವರಿಯಲ್ಲಿ ಬೆಳಗಾವಿಯ ಹಿಂಡಲಗಾ ಜೈಲಿನಿಂದ ಜಯೇಶ್ ಕಾಂತಾ ಎಂಬಾತನ ಹೆಸರಿನಲ್ಲಿ ನಾಗಪುರದ ಕಚೇರಿಗೆ ಬೆದರಿಕೆ ಕರೆ ಮಾಡಲಾಗಿತ್ತು. ಇದೀಗ ಅದೇ ಜಯೇಶ್ ಹೆಸರಿನಲ್ಲಿ ಹಿಂಡಲಗಾ ಜೈಲಿನಿಂದಲೇ ಕರೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರು: ಕೇಂದ್ರ ರಸ್ತೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಅವರಿಗೆ ಮತ್ತೆ ಬೆದರಿಕೆ ಕರೆಗಳು ಬಂದಿದ್ದು, ಇದರ ಹಿನ್ನೆಲೆಯಲ್ಲಿ ಸಚಿವರ ಕಚೇರಿ ಹಾಗೂ ನಿವಾಸಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಬೆಳಗಾವಿಯ ಹಿಂಡಲಗಾ ಜೈಲಿನಿಂದಲೇ ಜಯೇಶ್ ಪೂಜಾರಿ ಎಂಬಾತನೇ ಮತ್ತೆ ಬೆದರಿಕೆ ಕರೆ ಮಾಡಿದ್ದಾನೆ ಎಂಬುದಾಗಿ ನಾಗ್ಪುರ ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ಮಂಗಳೂರಿನ ಮಹಿಳೆಯ ಮೊಬೈಲ್‌ನಿಂದ ಬೆದರಿಕೆ ಕರೆ ಮಾಡಿದ್ದಾನೆ ಎಂದು ಮಹತ್ವದ ಅಂಶ ಬಹಿರಂಗಪಡಿಸಿದ್ದಾರೆ.
“ನಿತಿನ್ ಗಡ್ಕರಿ ಅವರ ಕಚೇರಿಗೆ ಕರೆಗಳನ್ನು ಮಾಡಿದ ವ್ಯಕ್ತಿಯು ಜಯೇಶ್ ಪೂಜಾರಿ ಎಂಬುದಾಗಿ ತಿಳಿಸಿದ್ದಾನೆ. ಕರೆ ಮಾಡಿದ ನಂಬರ್‌ಅನ್ನು ಆಧರಿಸಿ ತನಿಖೆ ನಡೆಸಲಾಗಿದ್ದು, ಆ ಮಹಿಳೆಯು ಮಂಗಳೂರಿನವರು ಎಂಬುದಾಗಿ ಗೊತ್ತಾಗಿದೆ. ನಾವು ಕೂಡ ಆ ಮಹಿಳೆಯನ್ನು ಸಂಪರ್ಕಿಸಿದ್ದು, ಮಂಗಳೂರಿನಲ್ಲಿ ಇವೆಂಟ್ ಮ್ಯಾನೇಜ್‌ಮೆಂಟ್ ಕೆಲಸ ಮಾಡಿಕೊಂಡಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ. ಮಹಿಳೆಯ ಫ್ರೆಂಡ್ ಅಥವಾ ಜಯೇಶ್ ಪೂಜಾರಿಯಿಂದ ಕರೆ ಬಂದಿರುವ ಆಯಾಮದಲ್ಲಿಯೂ ತನಿಖೆ ನಡೆಸಲಾಗುತ್ತಿದೆ” ಎಂದು ನಾಗ್ಪುರ ಡಿಸಿಪಿ ರಾಹುಲ್ ಮಂದಾನೆ ಮಾಹಿತಿ ನೀಡಿದ್ದಾರೆ.
ನಾಗ್ಪುರ ಪೊಲೀಸರು ನೀಡಿದ ಮಾಹಿತಿ
ನಿತಿನ್ ಗಡ್ಕರಿ ಕಚೇರಿಗೆಕರೆ ಮಾಡಿ 10 ಕೋಟಿ ರೂಪಾಯಿ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು. ಜನವರಿಯಲ್ಲಿ ಕರೆ ಮಾಡಿದ್ದಾಗ 100 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಎಂಬುದಾಗಿ ತಿಳಿದುಬಂದಿದೆ. ಅಲ್ಲದೆ, ಜನವರಿಯಲ್ಲಿ ಕರೆ ಮಾಡಿದ್ದಾತ, ತಾನು ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸಹಚರ ಎಂಬುದಾಗಿ ಹೇಳಿದ್ದ. ಆಗಲೂ, ಗಡ್ಕರಿ ನಿವಾಸ ಹಾಗೂ ಕಚೇರಿಗೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.
ಜನವರಿಯಲ್ಲೂ ಜಯೇಶ್ ಪೂಜಾರಿ ಹೆಸರಲ್ಲಿ ಕರೆ
ಕಳೆದ ಜನವರಿ 14ರಂದು ನಾಗ್ಪುರದಲ್ಲಿರುವ ನಿತಿನ್ ಗಡ್ಕರಿ ಅವರ ಕಚೇರಿಗೆ ರಾತ್ರಿ 11.25, 11.32 ಮತ್ತು 12.32ಕ್ಕೆ ಕರೆ ಮಾಡಿ ಬೆದರಿಕೆ ಹಾಕಲಾಗಿತ್ತು. ಇದು ಹಿಂಡಲಗಾ ಜೈಲಿನಿಂದ ಬಂದ ಕರೆ ಇದೆಂದು ಪ್ರಾಥಮಿಕ ತನಿಖೆಯಲ್ಲೇ ಬಯಲಾಗಿತ್ತು. ಆವತ್ತು ಕರೆ ಮಾಡಿದವನು ಜೈಲಿನಲ್ಲಿರುವ ಹಿಂಡಲಗಾ ಜೈಲಿನಲ್ಲಿರುವ ಕೈದಿಯಾಗಿರುವ ಗ್ಯಾಂಗ್ ಸ್ಟರ್ ಜಯೇಶ್ ಕಾಂತಾ ಅಲಿಯಾಸ್ ಜಯೇಶ್ ಪೂಜಾರಿ ಎಂದು ಪತ್ತೆ ಹಚ್ಚಲಾಗಿತ್ತು. ಆವತ್ತು ಜಯೇಶ್ ಪೂಜಾರಿಯ ಕೋಣೆಯನ್ನು ಶೋಧಿಸಿದಾಗ ಒಂದು ಡೈರಿ ಪತ್ತೆಯಾಗಿತ್ತು.
ಜಯೇಶ್ ಕಾಂತಾನನ್ನು ಆವತ್ತು ನಾಗಪುರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ಮರಳಿ ಹಿಂಡಲಗಾ ಜೈಲಿಗೆ ಕಳುಹಿಸಿದ್ದರು. ಈಗ ಆತ ಮತ್ತೆ ಕರೆ ಮಾಡಿದ್ದಾನೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಪದೇಪದೆ ಗಡ್ಕರಿ ಅವರಿಗೆ ಕರೆ ಮಾಡುವ ಉದ್ದೇಶದ ಬಗ್ಗೆಯೂ ತನಿಖೆ ಆಗಬೇಕಾಗಿದೆ. ಮಹಾರಾಷ್ಟ್ರ ಎಟಿಎಸ್ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.
ಇದನ್ನೂ ಓದಿ: Nitin Gadkari : ಕೇಂದ್ರ ಸಚಿವ ನಿತಿನ್ ಗಡ್ಕರಿ ಕಚೇರಿಗೆ ಮತ್ತೆ ಜೀವ ಬೆದರಿಕೆ ಕರೆ; ಏನಾಗುತ್ತಿದೆ ಹಿಂಡಲಗಾ ಜೈಲಿನಲ್ಲಿ?
ದೇಶ
ಪಾಟ್ನಾ ರೈಲ್ವೆ ಸ್ಟೇಶನ್ನಲ್ಲಿ ಅಶ್ಲೀಲ ವಿಡಿಯೊ ಪ್ರಸಾರ ಆಗಿದ್ದಕ್ಕೆ ಫುಲ್ ಖುಷಿಯಾದ ಪೋರ್ನ್ ಸ್ಟಾರ್; ಅದು ನಂದೇ ಎಂದ ಕೇಂದ್ರಾ ಲಸ್ಟ್
ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೊ ಬ್ಲರ್ ರೂಪದಲ್ಲಿ ಹರಿದಾಡುತ್ತಿದೆ. ಕೆಲವು ವಿಡಿಯೊಗಳು ಸಂಪೂರ್ಣ ಬ್ಲರ್ ಆಗಿದ್ದರೆ, ಮತ್ತೆ ಕೆಲವು ಅರ್ಧಂಬರ್ಧ ಬ್ಲರ್ ಆಗಿದೆ.
ಬಿಹಾರದ ಪಾಟ್ನಾ ರೈಲ್ವೆ ಸ್ಟೇಶನ್ನ (Patna Railway Junction)10ನೇ ಪ್ಲಾಟ್ಫಾರ್ಮ್ನಲ್ಲಿ ಭಾನುವಾರ ಬೆಳಗ್ಗೆ 9.30ರ ಹೊತ್ತಿಗೆ, ಮೂರು ನಿಮಿಷಗಳ ಕಾಲ ಅಶ್ಲೀಲ ಚಿತ್ರ ಪ್ರದರ್ಶನವಾಗಿತ್ತು. ಅಲ್ಲಿದ್ದ ನೂರಾರು ಪ್ರಯಾಣಿಕರು ಮುಜುಗರಗೊಂಡಿದ್ದರೆ, ಕೆಲವರು ಅದನ್ನು ವಿಡಿಯೊ ಮಾಡಿ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಮಾಡಿದ್ದರು. ಅದರ ಬೆನ್ನಲ್ಲೇ ಈ ಟಿವಿ ಪರದೆ ಮೇಲೆ ಜಾಹೀರಾತು ಪ್ರಸಾರ ಮಾಡಲು ಗುತ್ತಿಗೆ ತೆಗೆದುಕೊಂಡಿದ್ದ ದತ್ತಾ ಸ್ಟುಡಿಯೊ ಕಂಪನಿ ಪ್ರೈವೇಟ್ ಲಿಮಿಟೆಡ್ ವಿರುದ್ಧ ರೈಲ್ವೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಆ ಏಜೆನ್ಸಿಯನ್ನು ಬ್ಲ್ಯಾಕ್ ಲಿಸ್ಟ್ಗೆ ಹಾಕಲಾಗಿದೆ. ಇಷ್ಟೆಲ್ಲದರ ಮಧ್ಯೆ ಈ ಅಶ್ಲೀಲ ವಿಡಿಯೊ ಪ್ರಸಾರವಾದ ಬಗ್ಗೆ ಅಮೆರಿಕದ ಪೋರ್ನ್ಸ್ಟಾರ್ ಕೇಂದ್ರಾ ಲಸ್ಟ್ ಅವರು ಖುಷಿ ವ್ಯಕ್ತಪಡಿಸಿದ್ದಾರೆ. ಇದು ನನ್ನದೇ ವಿಡಿಯೊ ಇರಬಹುದು ಎನ್ನಿಸುತ್ತದೆ ಎಂದಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೊ ಬ್ಲರ್ ರೂಪದಲ್ಲಿ ಹರಿದಾಡುತ್ತಿದೆ. ಕೆಲವು ವಿಡಿಯೊಗಳು ಸಂಪೂರ್ಣ ಬ್ಲರ್ ಆಗಿದ್ದರೆ, ಮತ್ತೆ ಕೆಲವು ಅರ್ಧಂಬರ್ಧ ಮಸುಬಾಗಿವೆ. ಅದರ ಮಧ್ಯೆ ಕೇಂದ್ರಾ ಲಸ್ಟ್ ಅವರು ತಮ್ಮ ಒಂದು ಮಾದಕ ಫೋಟೋವನ್ನು ಪೋಸ್ಟ್ ಮಾಡಿಕೊಂಡು, ಇಂಡಿಯಾ ಎಂದು ಬರೆದುಕೊಂಡಿದ್ದಾರೆ. ಅದರ ಮುಂದೆ ಭಾರತದ ಧ್ವಜದ ಇಮೋಜಿ ಹಾಕಿದ್ದಾರೆ. ಬಿಹಾರ ರೈಲ್ವೆ ಸ್ಟೇಶನ್ ಎಂದು ಹ್ಯಾಷ್ಟ್ಯಾಗ್ (#BiharRailwayStation) ಹಾಕಿದ್ದಾರೆ.
ಅವರ ಈ ಟ್ವೀಟ್ಗೆ ನೆಟ್ಟಿಗರೊಬ್ಬರು ಕಮೆಂಟ್ ಮಾಡಿ ‘ಇದು ನಿಮ್ಮ ವಿಡಿಯೊವಾ? ನಿಮಗೆ ಗೊತ್ತಾ?’ ಎಂದು ಪ್ರಶ್ನಿಸಿದ್ದಾರೆ. ಅದಕ್ಕೆ ಉತ್ತರಿಸಿದ ಕೇಂದ್ರಾ ಲಸ್ಟ್ ‘ನಾನೂ ಹಾಗಂದುಕೊಂಡಿದ್ದೇನೆ’ ಎಂದು ಹೇಳಿದ್ದಾರೆ. ಇನ್ನುಳಿದಂತೆ ಹಲವು ನೆಟ್ಟಿಗರು ಕೇಂದ್ರಾ ಅವರ ಟ್ವೀಟ್ಗೆ ಕಮೆಂಟ್ ಮಾಡುತ್ತಿದ್ದಾರೆ. ಇನ್ನೊಬ್ಬರಂತೂ ಪಕ್ಕಾ ಇದು ನಿಮ್ಮ ವಿಡಿಯೊವೇ. ಭಾರತದಲ್ಲಿ ಇನ್ಮುಂದೆ ನಿಮ್ಮ ಪೋರ್ನ್ ವಿಡಿಯೊಗಳು ಸಖತ್ ಫೇಮಸ್ ಆಗಲಿವೆ ಎಂದಿದ್ದಾರೆ.
ದೇಶ
Amritpal Singh: 80 ಸಾವಿರ ಪೊಲೀಸರು ಏನು ಮಾಡುತ್ತಿದ್ದಾರೆ? ಪಂಜಾಬ್ ಸರ್ಕಾರಕ್ಕೆ ಹೈಕೋರ್ಟ್ ತರಾಟೆ
Amritpal Singh: ಕಳೆದ ಶನಿವಾರದಿಂದಲೂ ಅಮೃತ್‌ಪಾಲ್ ಸಿಂಗ್ ಬಂಧನಕ್ಕೆ ಕಾರ್ಯಾಚರಣೆ ನಡೆಸುತ್ತಿದ್ದರೂ, ಇದುವರೆಗೆ ಏಕೆ ಬಂಧಿಸಲು ಸಾಧ್ಯವಾಗಿಲ್ಲ? ಇದು ಸಂಪೂರ್ಣ ಗುಪ್ತಚರ ವೈಫಲ್ಯ ಎಂಬುದಾಗಿ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಚಂಡೀಗಢ: ಖಲಿಸ್ತಾನಿಗಳ ಪರ ನಾಯಕ, ಪಂಜಾಬ್‌ನಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿರುವ ಅಮೃತ್‌ಪಾಲ್ ಸಿಂಗ್ (Amritpal Singh) ಬಂಧನಕ್ಕಾಗಿ ಕಾರ್ಯಾಚರಣೆಯು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಆತನನ್ನು ಬಂಧಿಸಲು ರಾಜ್ಯದ ಪೊಲೀಸರು ಹರಸಾಹಸಪಡುತ್ತಿದ್ದರೂ ಇದುವರೆಗೆ ಬಂಧನ ಸಾಧ್ಯವಾಗಿಲ್ಲ. ಆತನ ಆಪ್ತರ ಬಂಧನ, ಕಾರು ವಶ, ಶಸ್ತ್ರಾಸ್ತ್ರಗಳ ಜಪ್ತಿ ಮಾತ್ರ ಸಾಧ್ಯವಾಗಿದೆ. ಇನ್ನು ಬಂಧನ ಕಾರ್ಯಾಚರಣೆ ಕುರಿತು ಪಂಜಾಬ್ ಹಾಗೂ ಹರಿಯಾಣ ಹೈಕೋರ್ಟ್ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, “ಪಂಜಾಬ್‌ನ 80 ಸಾವಿರ ಪೊಲೀಸರು ಏನು ಮಾಡುತ್ತಿದ್ದಾರೆ” ಎಂದು ಪ್ರಶ್ನಿಸಿದೆ.
ಅಮೃತ್‌ಪಾಲ್ ಸಿಂಗ್‌ನನ್ನು ಕಾನೂನುಬಾಹಿರವಾಗಿ ಬಂಧಿಸಲಾಗಿದೆ. ಆತನನ್ನು ಬಿಡುಗಡೆ ಮಾಡಬೇಕು ಎಂಬುದಾಗಿ ವಾರಿಸ್ ದೇ ಪಂಜಾಬ್ ಮುಖ್ಯಸ್ಥನ ಕಾನೂನು ಸಲಹೆಗಾರ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಸಲ್ಲಿಸಿದ್ದಾರೆ. ಇದೇ ಪ್ರಕರಣದ ಅರ್ಜಿಯ ವಿಚಾರಣೆ ವೇಳೆ, ರಾಜ್ಯ ಸರ್ಕಾರದ ವಿರುದ್ಧ ನ್ಯಾಯಮೂರ್ತಿ ಎನ್.ಎಸ್.ಶೇಖಾವತ್ ನೇತೃತ್ವದ ನ್ಯಾಯಪೀಠವು ಅಸಮಾಧಾನ ವ್ಯಕ್ತಪಡಿಸಿದೆ. ಇದು ಸಂಪೂರ್ಣ ಗುಪ್ತಚರ ವೈಫಲ್ಯ ಎಂದು ಜರಿದಿದೆ.
ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್ ವಿನೋದ್ ಘಾಯ್ ಅವರು ರಾಜ್ಯ ಸರ್ಕಾರದ ಕ್ರಮಗಳ ಕುರಿತು ಹೈಕೋರ್ಟ್‌ಗೆ ಮಾಹಿತಿ ನೀಡಿದರು. “ಅಮೃತ್‌ಪಾಲ್ ಸಿಂಗ್‌ನನ್ನು ಬಂಧಿಸಿಲ್ಲ. ಆತ ಪೊಲೀಸ್ ಕಸ್ಟಡಿಯಲ್ಲಿ ಇಲ್ಲ. ಇದುವರೆಗೆ ಆತನ 120 ಆಪ್ತರನ್ನು ಬಂಧಿಸಲಾಗಿದೆ. ಅವನ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧನಕ್ಕೆ ಕಾರ್ಯಾಚರಣೆ ಮುಂದುವರಿದಿದೆ. ಆದಾಗ್ಯೂ, ಕೋರ್ಟ್‌ನಲ್ಲಿ ಮುಕ್ತವಾಗಿ ಒಂದಷ್ಟು ಅಂಶಗಳನ್ನು ಬಹಿರಂಗಪಡಿಸಲು ಆಗುವುದಿಲ್ಲ” ಎಂದರು.
ಆಗ ನ್ಯಾಯಾಲಯವು, “ಅಮೃತ್‌ಪಾಲ್ ಸಿಂಗ್ ವಿರುದ್ಧ 5-6 ಎಫ್‌ಐಆರ್ ದಾಖಲಾಗಿದೆ ಎಂದು ಹೇಳುತ್ತಿದ್ದೀರಿ. ಆತನ ವಿರುದ್ಧ 5-6 ಕ್ರಿಮಿನಲ್ ಕೇಸ್ ದಾಖಲಿಸಿದ್ದೀರಿ. ಜಿ-20 ಸಭೆಯ ಹಿನ್ನೆಲೆಯಲ್ಲಿ ಅಷ್ಟೊಂದು ಬಿಗಿ ಭದ್ರತೆ ಇದ್ದರೂ ಅಮೃತ್‌ಪಾಲ್ ಸಿಂಗ್ ಪರಾರಿಯಾಗಲು ಹೇಗೆ ಸಾಧ್ಯ? ಇದುವರೆಗೆ ಅಮೃತ್‌ಪಾಲ್ ಹೊರತಾಗಿ ಆತನ 120 ಆಪ್ತರನ್ನು ಬಂಧಿಸಿದ್ದೀರಿ. ಅಷ್ಟಕ್ಕೂ ರಾಜ್ಯದಲ್ಲಿರುವ 80 ಸಾವಿರ ಪೊಲೀಸರು ಏನು ಮಾಡುತ್ತಿದ್ದಾರೆ” ಎಂದು ಪ್ರಶ್ನಿಸಿತು. ಆದಾಗ್ಯೂ, ರಾಜ್ಯ ಸರ್ಕಾರದ ಹಿತಕ್ಕೆ ಧಕ್ಕೆ ತರುವವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ಹೇಳಿದ್ದಾರೆ.
ʼವಾರಿಸ್ ಪಂಜಾಬ್ ದೇʼ ಸಂಘಟನೆಯ ನಾಯಕನಾಗಿದ್ದ ಅಮೃತ್‌ಪಾಲ್, ಆನಂದ್‌ಪುರ್ ಖಾಲ್ಸಾ ಫೋರ್ಸ್ (AKF) ಎಂಬ ಹೆಸರಿನ ತನ್ನದೇ ಸೈನ್ಯವನ್ನು ಕಟ್ಟಲು ಯತ್ನಿಸಿದ್ದ. ಇದು ಖಲಿಸ್ತಾನಿ ಟೈಗರ್ ಫೋರ್ಸ್ (KTF) ಎಂಬ ಈ ಹಿಂದಿನ ಉಗ್ರ ಸಂಘಟನೆಯ ರೀತಿಯಲ್ಲಿತ್ತು. ಜತೆಗೆ ಒಂದು ಮಾನವ ಬಾಂಬ್ ಸ್ಕ್ವಾಡ್ ಅನ್ನೂ ಸಿದ್ಧಪಡಿಸುತ್ತಿದ್ದ ಎಂದು ತಿಳಿದುಬಂದಿದೆ. ಅಮೃತ್‌ಪಾಲ್ ಸಿಂಗ್ ಮಾದಕದ್ರವ್ಯ ವ್ಯಸನ ತಡೆ ಶಿಬಿರಗಳನ್ನು ಹಾಗೂ ಗುರುದ್ವಾರಗಳನ್ನು ತನ್ನ ಆಯುಧ ಸಂಗ್ರಹಕ್ಕೆ ಬಳಸಿಕೊಳ್ಳುತ್ತಿದ್ದಾನೆ. ಆತ್ಮಹತ್ಯಾ ಬಾಂಬ್ ದಾಳಿಗೆ ಯುವಕರನ್ನು ಸಿದ್ಧಗೊಳಿಸುತ್ತಿದ್ದಾನೆ ಎಂದು ಮಾಹಿತಿಯನ್ನು ಬೇಹುಗಾರಿಕೆ ಸಂಸ್ಥೆಗಳು ನೀಡಿವೆ.
ಇದನ್ನೂ ಓದಿ: Amritpal Singh: ಖಲಿಸ್ತಾನಿ ಉಗ್ರ ಅಮೃತ್‌ಪಾಲ್ ಸಿಂಗ್ ಬಳಿ ಸ್ವಂತ ಮಿಲಿಟರಿ, ಬಾಂಬ್ ಸ್ಕ್ವಾಡ್!
-
ಸುವಚನ14 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಪ್ರಮುಖ ಸುದ್ದಿ20 hours ago
ವಿಸ್ತಾರ ಸಂಪಾದಕೀಯ: ಪಬ್ಲಿಕ್ ಪರೀಕ್ಷೆ ಗೊಂದಲ; ವಿದ್ಯಾರ್ಥಿಗಳು, ಪೋಷಕರ ಮೇಲೆ ಮಾನಸಿಕ ಒತ್ತಡ
-
ಕರ್ನಾಟಕ23 hours ago
Life changing story : ನಿಂದನೆಯೇ ವರವಾಯಿತು, ಹಠ ತೊಟ್ಟು ವಕೀಲನಾಗಿ ಕರಿಕೋಟು ಧರಿಸಿ ವಾದಿಸಿ ಗೆದ್ದ ಯುವಕ!
-
ಆಟೋಮೊಬೈಲ್21 hours ago
Oscar 2023 : ನಾಟು ನಾಟು ಹಾಡಿಗೆ ಡಾನ್ಸ್ಮಾಡಿದ ಟೆಸ್ಲಾ ಕಾರುಗಳು! ಇಲ್ಲಿದೆ ನೋಡಿ ವಿಡಿಯೊ
-
ಕ್ರಿಕೆಟ್5 hours ago
IND VS AUS: ಭಾರತ-ಆಸ್ಟ್ರೇಲಿಯಾ ಅಂತಿಮ ಏಕದಿನ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ
-
ಕರ್ನಾಟಕ9 hours ago
Shivamogga politics : ಯುಗಾದಿ, ರಂಜಾನ್ಗೆ ಶುಭ ಕೋರಿ ಫ್ಲೆಕ್ಸ್ ಹಾಕಿಸಿದ ಆಯನೂರು, ಹರಕು ಬಾಯಿ ಮುಚ್ಚಲಿ ಅಂದಿದ್ದು ಯಾರಿಗೆ?
-
ಧಾರ್ಮಿಕ8 hours ago
Ugadi 2023 : ಜಗದ ಆದಿ ಈ ಯುಗಾದಿ!
-
ಅಂಕಣ9 hours ago
ನನ್ನ ದೇಶ ನನ್ನ ದನಿ ಅಂಕಣ: ಪಂಜಾಬ್ ನಾಶವಾಗುವುದು ಒಳ್ಳೆಯ ಲಕ್ಷಣವಲ್ಲ