Site icon Vistara News

Amit Shah: ತೆಲಂಗಾಣದಲ್ಲಿ ಗೃಹಸಚಿವ ಅಮಿತ್ ಶಾ ವಿರುದ್ಧ FIR ದಾಖಲು

Amit Shah

Amit Shah directs to implement area domination, zero terror plans in Jammu Kashmir after terrorist attacks

ತೆಲಂಗಾಣ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ(Code of Conduct) ಆರೋಪದಲ್ಲಿ ಕೇಂದ್ರ ಸಚಿವ ಅಮಿತ್‌ ಶಾ(Amit Shah) ವಿರುದ್ಧ ತೆಲಂಗಾಣದಲ್ಲಿ ಕೇಸ್‌ ದಾಖಲಾಗಿದೆ. ಮುಖ್ಯ ಚುನಾವಣಾಧಿಕಾರಿಗೆ(EC) ತೆಲಂಗಾಣ ಪ್ರದೇಶ ಕಾಂಗ್ರೆಸ್‌ ಸಮಿತಿ(TPCC) ಉಪಾಧ್ಯಕ್ಷ ನಿರಂಜನ್‌ ರೆಡ್ಡಿ (Niranjan Reddy) ಅಮಿತ್‌ ಶಾ ವಿರುದ್ಧ ದೂರು ದಾಖಲಿಸಿದ್ದರು. ಮೇ 1ರಂದು ಅಮಿತ್‌ ಶಾ ಚುನಾವಣಾ ಪ್ರಚಾರ ಕಾರ್ಯಕ್ರಮದ ವೇದಿಕೆಯಲ್ಲಿ, ಕೆಲವು ಮಕ್ಕಳು ಕಾಣಿಸಿಕೊಂಡಿದ್ದರು. ಅಲ್ಲದೇ ರ್ಯಾಲಿಯಲ್ಲಿ ಮಗುವೊಂದು ಬಿಜೆಪಿಯ ಲೋಗೋವನ್ನು ಕೈಯಲ್ಲಿ ಹಿಡಿದಿತ್ತು. ಆ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಆಗಿದೆ ಎಂದು ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.

ಇ-ಮೇಲ್‌ ಮೂಲಕ ರೆಡ್ಡಿ ತೆಲಂಗಾಣ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದು, ಚುನಾವಣಾ ಪ್ರಚಾರ ಕಾರ್ಯದಲ್ಲಿ , ರ್ಯಾಲಿಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳಬಾರದು ಎಂದು ಖಡಕ್‌ ಸೂಚನೆ ನೀಡಿದೆ. ಇದೀಗ ಸ್ವತಃ ಕೇಂದ್ರ ಗೃಹ ಸಚಿವರೇ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಕ್ಕಳನ್ನು ಬಳಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ನಿತಂಜನ್‌ ರೆಡ್ಡಿಯವರ ದೂರನ್ನು ಚುನಾವಣಾಧಿಕಾರಿ ಹೈದರಾಬಾದ್‌ ಪೊಲೀಸರು ರವಾನಿಸಿದ್ದು, ಪೊಲೀಸರು ಅಮಿತ್‌ ಶಾ ವಿರುದ್ಧ ಎಫ್‌ ಐಆರ್‌ ದಾಖಲಿಸಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಿರಿಯ ನಾಯಕ ಟಿ. ಯಮುನಾ ಸಿಂಗ್‌, ಶಾಸಕ ರಾಜಾ ಸಿಂಗ್‌ ಸೇರಿದಂತೆ ಹಲವರ ವಿರುದ್ಧ ದೂರು ದಾಖಲಾಗಿದೆ. ಸೆಕ್ಷನ್‌ 188 (ಸರ್ಕಾರಿ ಅಧಿಕಾರಿಗಳ ಆದೇಶ ಉಲ್ಲಂಘನೆ)ಯಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಮತ್ತೊಂದೆಡೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಕಲಿ ವಿಡಿಯೊಗೆ ಸಂಬಂಧಿಸಿದಂತೆ ತೆಲಂಗಾಣ ಪೊಲೀಸರು ಗುರುವಾರ ರಾಜ್ಯ ಕಾಂಗ್ರೆಸ್ ಐಟಿ ಸೆಲ್‌ (Congress IT Cell)ನ ಐವರು ಸದಸ್ಯರನ್ನು ಬಂಧಿಸಿದ್ದಾರೆ. ಸದ್ಯ ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರ ತಂಡವೂ ಈ ತೆಲಂಗಾಣದಲ್ಲಿದೆ. ಈ ಹಿಂದೆ ಅಮಿತ್ ಶಾ ಅವರ ಭಾಷಣದ ನಕಲಿ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮ ಪ್ಲಾಟ್​ಫಾರ್ಮ್​​ಗಳಲ್ಲಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸೋಮವಾರ ತೆಲಂಗಾಣ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ರೇವಂತ್ ರೆಡ್ಡಿ ಅವರಿಗೆ ಸಮನ್ಸ್ ನೀಡಿದ್ದರು.

ಇದನ್ನೂ ಓದಿ:Viral Video: ರೆಸ್ಟೋರೆಂಟ್‌ನಲ್ಲಿ ಪತ್ನಿಯನ್ನು ಹೊಡೆದು ಕೊಂದ ಮಾಜಿ ಸಚಿವ; ಶಾಕಿಂಗ್‌ ವಿಡಿಯೋ ಎಲ್ಲೆಡೆ ವೈರಲ್‌

ರೇವಂತ್ ರೆಡ್ಡಿ ಪರ ವಕೀಲರು ಬುಧವಾರ ದೆಹಲಿ ಪೊಲೀಸರ ಮುಂದೆ ಹಾಜರಾಗಿ, ಅಮಿತ್ ಶಾ ಅವರ ಭಾಷಣದ ನಕಲಿ ವಿಡಿಯೊ ರಚಿಸುವಲ್ಲಿ ಅಥವಾ ಪೋಸ್ಟ್ ಮಾಡುವುದರ ಹಿಂದೆ ರೇವಂತ್ ರೆಡ್ಡಿ ಅವರ ಯಾವುದೇ ಪಾತ್ರವಿಲ್ಲ ಎಂದು ಹೇಳಿದ್ದರು. ವಿಡಿಯೊವನ್ನು ಹಂಚಿಕೊಂಡ ಆರೋಪದ ಮೇಲೆ ವಿವಿಧ ವಿರೋಧ ಪಕ್ಷಗಳ ಇನ್ನೂ ಐದು ಮಂದಿಗೂ ನೋಟಿಸ್ ನೀಡಲಾಗಿದೆ. ರೇವಂತ್ ರೆಡ್ಡಿ ಮತ್ತು ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ)ಯ ನಾಲ್ವರು ಸದಸ್ಯರಾದ ಶಿವಕುಮಾರ್ ಅಂಬಾಲಾ, ಅಸ್ಮಾ ತಸ್ಲೀಮ್, ಸತೀಶ್ ಮನ್ನೆ ಮತ್ತು ನವೀನ್ ಪೆಟ್ಟೆಮ್ ಅವರಿಗೆ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 91 ಮತ್ತು 160ರ ಅಡಿಯಲ್ಲಿ ಸಮನ್ಸ್ ನೀಡಲಾಗಿದೆ.

Exit mobile version