Site icon Vistara News

Anant Ambani Video: ಮಹಾರಾಷ್ಟ್ರ ಸಿಎಂ ಹೆಗಲ ಮೇಲೆ ಕೈ ಹಾಕಿದ ಅಂಬಾನಿ ಮಗ! ನೀವೇನಂತೀರಿ?

Anant Ambani

ಮಹಾರಾಷ್ಟ್ರ (maharastra) ಮುಖ್ಯಮಂತ್ರಿ (Chief Minister) ಏಕನಾಥ್‌ ಶಿಂಧೆ ಅವರಿಗೆ ಮದುವೆ ಆಮಂತ್ರಣ ನೀಡಲು ಹೋದ ರಿಲಯನ್ಸ್ ಇಂಡಸ್ಟ್ರೀಸ್ (Reliance Industries) ಅಧ್ಯಕ್ಷ ಮುಕೇಶ್ ಅಂಬಾನಿ (mukesh ambani) ಅವರ ಮಗ ಅನಂತ್ ಅಂಬಾನಿ (Anant Ambani Video), ಸೀದಾ ಮುಖ್ಯಮಂತ್ರಿಯ ಹೆಗಲ ಮೇಲೆಯೇ ಕೈ ಹಾಕಿ ಫೋಟೋಗೆ ಪೋಸ್ ನೀಡಿದ್ದು ಸಾಮಾಜಿಕ ಜಾಲತಾಣದಲ್ಲಿ ಈಗ ಭಾರಿ ಚರ್ಚೆಗೆ ಕಾರಣವಾಗಿದೆ. ಎಷ್ಟೇ ಶ್ರೀಮಂತಿಕೆ ಇದ್ದರೇನು? ಕಾಮನ್‌ಸೆನ್ಸ್‌ ಇಲ್ಲದಿದ್ದರೆ ಎಲ್ಲವೂ ವ್ಯರ್ಥ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಮುಕೇಶ್ ಅಂಬಾನಿ, ಅವರ ಮಗ ಅನಂತ್ ಅಂಬಾನಿ ಮತ್ತು ಸೊಸೆ ರಾಧಿಕಾ ಮರ್ಚೆಂಟ್ (Radhika Merchant) ಅವರು ಬುಧವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಮತ್ತು ಅವರ ಕುಟುಂಬವನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಜುಲೈ 12ರಂದು ನಡೆಯಲಿರುವ ತಮ್ಮ ಮಗ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹದ ಆಮಂತ್ರಣವನ್ನು ನೀಡಿದರು.

ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಬೆಳಗ್ಗೆ ಹಂಚಿಕೊಂಡಿರುವ ಈ ವಿಡಿಯೋ ಭಾರೀ ವೈರಲ್ ಆಗಿದ್ದು, ಸಾವಿರಾರು ಮಂದಿ ವೀಕ್ಷಿಸಿದ್ದಾರೆ. ವಿಡಿಯೋದಲ್ಲಿ ಅಂಬಾನಿ ಪುತ್ರ ಅನಂತ್ ಅಂಬಾನಿ ಮುಖ್ಯಮಂತ್ರಿ ಶಿಂಧೆ ಅವರ ಹೆಗಲಿಗೆ ಕೈ ಹಾಕಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ. ಎಷ್ಟೇ ದೊಡ್ಡ ವ್ಯಕ್ತಿಯಾದರೂ ಮುಖ್ಯಮಂತ್ರಿಯ ಹೆಗಲಿಗೆ ಕೈ ಹಾಕಿ ಫೋಟೋ ಗೆ ಪೋಸ್ ನೀಡಿರುವುದು ಸರಿಯೇ ಎನ್ನುವ ಪ್ರಶ್ನೆ ಎದ್ದಿದ್ದು ನೆಟ್ಟಿಗರು ಸಾಕಷ್ಟು ರೀತಿಯಲ್ಲಿ ಕಾಮೆಂಟ್‌ಗಳನ್ನು ಮಾಡಿದ್ದಾರೆ.

ಅನಂತ್ ಅಂಬಾನಿ ಮುಂಬಯಿನಲ್ಲಿ ರಾಧಿಕಾ ಅವರೊಂದಿಗಿನ ಮದುವೆಗೆ ವೈಯಕ್ತಿಕವಾಗಿ ಆಹ್ವಾನಿಸಲು ಅಜಯ್ ದೇವಗನ್ ಮತ್ತು ಕಾಜೋಲ್ ಅವರ ಮನೆಗೆ ಸೋಮವಾರ ಭೇಟಿ ನೀಡಿದರು. ರಿಲಯನ್ಸ್ ಫೌಂಡೇಶನ್‌ನ ಅಧ್ಯಕ್ಷೆ ಮತ್ತು ಸಂಸ್ಥಾಪಕಿ ನೀತಾ ಅಂಬಾನಿ ಅವರು ಸೋಮವಾರ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ತೆರಳಿ ದೇವರಿಗೆ ಮದುವೆಯ ಆಮಂತ್ರಣ ನೀಡಿದರು.

ದೇವರ ದರ್ಶನದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಈಗಷ್ಟೇ ಬಾಬಾ ಭೋಲೆನಾಥ್ ಅವರ ದರ್ಶನ ಪಡೆದಿದ್ದೇನೆ. ಹಿಂದೂ ಸಂಪ್ರದಾಯದ ಪ್ರಕಾರ ನಾವು ಮೊದಲು ಭಗವಂತನ ಆಶೀರ್ವಾದವನ್ನು ಪಡೆಯುತ್ತೇವೆ. ನಾನು ಬಾಬಾಗೆ ಮದುವೆಯ ಆಮಂತ್ರಣವನ್ನು ನೀಡಿದ್ದೇನೆ. ನನಗೆ ತುಂಬಾ ಸಂತೋಷವಾಗಿದೆ. 10 ವರ್ಷಗಳ ಅನಂತರ ಇಲ್ಲಿಗೆ ಬಂದಿದ್ದೇನೆ. ಅಭಿವೃದ್ಧಿ ಮತ್ತು ಕಾಶಿ ವಿಶ್ವನಾಥ ಕಾರಿಡಾರ್, ನಮೋ ಘಾಟ್, ಸೌರಶಕ್ತಿ ಸ್ಥಾವರಗಳು ಮತ್ತು ಸ್ವಚ್ಛತೆಯನ್ನು ನೋಡಲು ನನಗೆ ಸಂತೋಷವಾಗಿದೆ. ಬದಲಾವಣೆಯನ್ನು ನೋಡಲು ನನಗೆ ತುಂಬಾ ಸಂತೋಷವಾಗಿದೆ ಎಂದು ಹೇಳಿದ್ದರು.

10 ವರ್ಷಗಳ ಹಿಂದೆ ಕಾಶಿ ವಿಶ್ವನಾಥ ದೇವಸ್ಥಾನದ ದರ್ಶನಕ್ಕೆ ಬಂದಿದ್ದೆ. ಇಲ್ಲಿನ ಕುಶಲಕರ್ಮಿಗಳೊಂದಿಗೆ ನನಗೆ ವಿಶೇಷ ಬಾಂಧವ್ಯವಿದೆ. ನಾನು ಅವರನ್ನು ಭೇಟಿ ಮಾಡಲು ಹೋಗುತ್ತಿದ್ದೇನೆ. ರಿಲಯನ್ಸ್ ಫೌಂಡೇಶನ್ ಮತ್ತು ಸ್ವದೇಶ್ ಮಾಧ್ಯಮದ ಮೂಲಕ ನಾವು ಅವರಿಗೆ ಜಾಗತಿಕ ಮನ್ನಣೆ ಮತ್ತು ಗೌರವವನ್ನು ನೀಡಲು ಬಯಸುತ್ತೇವೆ ಎಂದು ಅವರು ಹೇಳಿದರು.


ಜುಲೈ 12ರಂದು ಮದುವೆ

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮತ್ತು ಎಂಡಿ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ಕೈಗಾರಿಕೋದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಜುಲೈ 12 ರಂದು ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ವಿವಾಹವಾಗಲಿದ್ದಾರೆ. ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ಇದರ ವಿವರವನ್ನು ಬಹಿರಂಗಪಡಿಸುವ ಸಾಂಪ್ರದಾಯಿಕ ಕೆಂಪು ಮತ್ತು ಚಿನ್ನದ ಬಣ್ಣದ ಕಾರ್ಡ್ ಅನ್ನು ಆಹ್ವಾನ ಪತ್ರಿಕೆ ಒಳಗೊಂಡಿದೆ ಎನ್ನಲಾಗಿದೆ.

ಮುಖ್ಯ ವಿವಾಹ ಸಮಾರಂಭಗಳು ಜುಲೈ 12ರಂದು ಪ್ರಾರಂಭವಾಗುತ್ತವೆ. ಜುಲೈ 13ರಂದು ಶುಭ ಆಶೀರ್ವಾದ್ ದಿನವಾಗಿರುತ್ತದೆ. ಜುಲೈ 14 ರಂದು ಮಂಗಲ್ ಉತ್ಸವ ಅಥವಾ ಮದುವೆಯ ಆರತಕ್ಷತೆ ನಡೆಯಲಿದೆ. ಪ್ರತಿ ಕಾರ್ಯಕ್ರಮಕ್ಕೂ ಡ್ರೆಸ್ ಕೋಡ್ ಇರಲಿದೆ. ಈ ಎಲ್ಲಾ ಕಾರ್ಯಗಳು ಬಿಕೆಸಿಯಲ್ಲಿರುವ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ನಡೆಯಲಿದೆ.

ಇದನ್ನೂ ಓದಿ: Anant Ambani: ಅನಂತ್ ಅಂಬಾನಿ ಕೊಟ್ಟ ಪ್ರೇಮ ಪತ್ರ ಪ್ರಿಂಟ್ ಆಗಿದ್ದ ಗೌನ್‌ನಲ್ಲಿ ಮಿಂಚಿದ ರಾಧಿಕಾ ಮರ್ಚಂಟ್‌!

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ 2022ರಲ್ಲಿ ಕುಟುಂಬ ಸದಸ್ಯರು ಮತ್ತು ಸ್ನೇಹಿತರ ಸಮ್ಮುಖದಲ್ಲಿ ರಾಜಸ್ಥಾನದ ರಾಜಸಮಂದ್‌ನ ನಾಥದ್ವಾರ ಪಟ್ಟಣದ ಶ್ರೀನಾಥ್‌ಜಿ ದೇವಸ್ಥಾನದಲ್ಲಿ ಸಾಂಪ್ರದಾಯಿಕ ‘ರೋಕಾ’ ಸಮಾರಂಭದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು.

ಫೆಬ್ರವರಿಯಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹಪೂರ್ವ ಆಚರಣೆಗಳ ಭಾಗವಾಗಿ, ಅಂಬಾನಿ ಕುಟುಂಬವು ಗುಜರಾತ್‌ನ ಜಾಮ್‌ನಗರದಲ್ಲಿರುವ ವಿಸ್ತಾರವಾದ ದೇವಾಲಯದ ಸಂಕೀರ್ಣದಲ್ಲಿ 14 ಹೊಸ ದೇವಾಲಯಗಳನ್ನು ನಿರ್ಮಿಸಲು ಅನುಕೂಲ ಮಾಡಿಕೊಟ್ಟಿತು. ಮಾರ್ಚ್ 1ರಿಂದ 3ರವರೆಗೆ ಜಾಮ್‌ನಗರ ನಗರದಲ್ಲಿ ಮೂರು ದಿನಗಳ ಪೂರ್ವ ವಿವಾಹ ಸಮಾರಂಭವನ್ನು ಆಯೋಜಿಸಲಾಗಿತ್ತು.

Exit mobile version